Connect with us

ಮಂಗಳೂರು

Mangalore BJP Ticket: ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ಪ್ರವೇಶ – ʼಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆʼ ಎಂದ ಬಿ ನಾಗರಾಜ ಶೆಟ್ಟಿ

Published

on

Ad Widget

Ad Widget

Ad Widget

Ad Widget

ಕೆಲವೇ ತಿಂಗಳುಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಮಂಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ಹಾಲಿ ಸಂಸದರಾದ ನಳಿನ್ ಕುಮಾರ್ ಕಟೀಲು ಬಿಜೆಪಿಯಿಂದ ಟಿಕೆಟ್ ಪಡೆಯಲ್ಲಿರುವ ನೆಚ್ಚಿನ ಅಭ್ಯರ್ಥಿಯಾಗಿದ್ದು, ಆದರೇ ಅವರಿಗೆ ಪಕ್ಷದ ಕಾರ್ಯಕರ್ತರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಮೂರು ಅವಧಿಗೆ ಸಂಸದರಾಗಿರುವ ನಳಿನ್ ಕಾರ್ಯವೈಖರಿ ಕುರಿತಾಗಿ ಕಾರ್ಯಕರ್ತರ ಹಾಗೂ ಜನ ಸಾಮಾನ್ಯರ ಮಧ್ಯೆ ಅಸಮಧಾನವಿರುವುದು ಎದ್ದು ಕಾಣುತ್ತಿದೆ. ಹೀಗಾಗಿ ಅವರಿಗೆ ಮರಳಿ ಬಿಜೆಪಿ ಟಿಕೆಟ್ ನೀಡಬಾರದು ಎಂಬ ಕೂಗು ಒಂದು ವರ್ಗದಿಂದ ಕೇಳಿ ಬರುತ್ತಿದೆ.

Ad Widget

Ad Widget

Ad Widget

Ad Widget

ಆದರೇ ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಪ್ರಥಮ ಭೇಟಿ ನೀಡಿದ ಬಿ ವೈ ವಿಜಯೇಂದ್ರರವರು ಮುಂದಿನ ಬಾರಿಯೂ ನಳಿನ್ ಕುಮಾರ್ ಕಟೀಲ್ ಅವರನ್ನೆ ಗೆಲ್ಲಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದರು. ಇದು ಇತರ ಟಿಕೆಟ್ ಆಕಾಂಕ್ಷಿಗಳಲ್ಲಿ ನಿರಾಶೆ ಮೂಡಿತ್ತು. ಈ ಬಳಿಕ ತನಗೆ ಟಿಕೆಟ್ ಸೇಫ್ ಅಂದುಕೊಂಡಿದ್ದ ನಳಿನ್ ಕ್ಷೇತ್ರದಾದ್ಯಂತ ಬಿರುಸಿನಿಂದ ಓಡಾಟ ನಡೆಸಲು ಆರಂಭಿಸಿದ್ದರು. ಆದರೇ ಇದೇ ವೇಳೆ ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟರವರು ಕ್ಷೇತ್ರದಾದ್ಯಂತ ಪಾದರಸದಂತೆ ಓಡಾಟ ನಡೆಸುತ್ತಾ ಟಿಕೆಟ್ ಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಪ್ರಸ್ತುತ ಬಿಜೆಪಿ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. ಹೀಗಾಗಿ ಈ ಬಾರಿ ಬಿಜೆಪಿ ಟಿಕೆಟ್‌ ಗಾಗಿ ಚೌಟ ಹಾಗೂ ಕಟೀಲ್‌ ಮಧ್ಯ ಪೈಪೋಟಿ ಇರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು .ಏತನ್ಮಧ್ಯೆ ಮತ್ತೊಬ್ಬ ಆಕಾಂಕ್ಷಿಯ ರಂಗ ಪ್ರವೇಶವಾಗಿದೆ.

Ad Widget

Ad Widget alt="Ad Widget"/>

Ad Widget

ಸಂಚಲನ ಮೂಡಿಸಿದ ಮಾಧ್ಯಮ ಹೇಳಿಕೆ

Ad Widget

Ad Widget <> Ad Widget

ಜಿಲ್ಲೆಯ ಇನ್ನೊಬ್ಬ ಬಂಟ ಮುಖಂಡ ಹಾಗೂ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ಬಿ ನಾಗಾರಾಜ್ ಶೆಟ್ಟಿಯವರು ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ರಾಜ್ಯದ ಪ್ರತಿಷ್ಟಿತ ಮಾದ್ಯಮಕ್ಕೆ ಅವರು ಹೇಳಿಕೆ ನೀಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದು, ತಾನು ಕೂಡ ಸ್ಪರ್ಧಿಸಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ. ಸಂಘ ಪರಿವಾರದ ಹಿರಿಯರು ಹಾಗೂ ಪಕ್ಷದ ಮುಖಂಡರು ಒಪ್ಪಿ ಟಿಕೆಟ್ ನೀಡಿದರೆ ನಾನು ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ನ್ಯೂಸ್‌ 18ರಲ್ಲಿ ಪ್ರಸಾರವಾದ ನಾಗರಾಜ ಶೆಟ್ಟಿ ಹೇಳಿಕೆ : video ಕೃಪೆ : News 18 ಕನ್ನಡ

Ad Widget

Ad Widget

2004ರಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಲ್ಲಡ್ಕ ಪ್ರಭಾಕರ ಭಟ್ ಅವರ ನೀಲಿ ಕಣ್ಣಿನ ಹುಡುಗ ನಾಗರಾಜ ಶೆಟ್ಟಿಯವರು ಬಿ ರಮಾನಾಥ ರೈಯವರನ್ನು ಸೋಲಿಸಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಮೂಲಕ ಜೈಂಟ್‌ ಕಿಲ್ಲರ್‌ ಅಭಿದಾನಕ್ಕೆ ಪಾತ್ರವಾಗಿದ್ದರು. ಹೀಗಾಗಿ ಬಿಜೆಪಿ ಜೆಡಿಎಸ್ ಟ್ವೆಂಟಿ -ಟ್ವೆಂಟಿ ಸರಕಾರದಲ್ಲಿ ಕುಮಾರಸ್ವಾಮಿ ಹಾಗೂ ಭಟ್ ಅವರ ಕೃಪಕಟಾಕ್ಷದಿಂದ ಮೊದಲ ಅವಧಿಯಲ್ಲೆ ಸಚಿವರಾಗಿಯೂ ನೇಮಕಗೊಂಡಿದ್ದರು. ಜೆಡಿಎಸ್ ಹಾಗೂ ಬಿಜೆಪಿ 20 -20 ಸರಕಾರ ರಚನೆಯಲ್ಲಿ ಇವರು ಪ್ರಧಾನ ಸೂತ್ರದಾರನ ಪಾತ್ರ ನಿರ್ವಹಿಸಿದ್ದರು ಎಂಬ ಮಾತುಗಳು ಆಗ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬಂದಿತ್ತು.

ಆದರೇ 2008ರ ಚುನಾವಣೆಯಲ್ಲಿ ರಮಾನಾಥ ರೈ ವಿರುದ್ದ ನಾಗರಾಜ್ ಅವರು ಸೋತರು, ಆದರೇ ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಹಿನ್ನಲೆಯಲ್ಲಿ ಹೊಸತಾಗಿ ಅಸ್ತಿತ್ವಕ್ಕೆ ಬಂದ ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾಗಿಅವರನ್ನು ನೇಮಿಸಲಾಗಿತ್ತು. ಈ ಪ್ರಾಧಿಕಾರವನ್ನು ನಾಗಾರಾಜ್ ಶೆಟ್ಟಿಯವರಿಗೊಸ್ಕರವೆ ಅಸ್ತಿತ್ವಕ್ಕೆ ತರಲಾಗಿತ್ತು ಎಂಬ ಮಾತುಗಳು ಆ ಸಂದರ್ಭದಲ್ಲಿ ಕೇಳಿ ಬಂದಿತ್ತು. ಆದರೇ 2012ರಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಹಾಗು ಬಿಜೆಪಿ ಪ್ರಾಥಮಿಕ ಸದಸ್ಯತನಕ್ಕೆ ರಾಜೀನಾಮೆ ನೀಡಿ ಅವರು ಜೆಡಿಎಸ್ ಸೇರಿದ್ದರು.

ಬಳಿಕ 2013ರಲ್ಲಿ ಬಿ ಎಸ್ ಯಡಿಯೂರಪ್ಪ ನೇತ್ರತ್ವದಲ್ಲಿ ಮಂಗಳೂರಿನಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಆದರೇ ಬಳಿಕದ ದಿನಗಳಲ್ಲಿ ಅವರು ರಾಜಕೀಯ ನೇಪಥ್ಯಕ್ಕೆ ಸರಿದಿದ್ದರು.

ಆದರೇ ಈಗ ಮತ್ತೆ ರಾಜ್ಯದಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ಆಖೈರುಗೊಂಡಿರುವುದರಿಂದ ಕುಮಾರ ಸ್ವಾಮಿಯವರ ಜತೆಗೆ ತನಗಿರುವ ಮಧುರ ಸಂಬಂಧ ಬಳಸಿ ಮಂಗಳೂರು ಲೋಕಸಭಾ ಟಿಕೆಟ್ ಗಾಗಿ ಬಿಜೆಪಿ ಹೈಕಮಾಂಡ್ ಗೆ ಪ್ರಭಾವ ಬೀರುವ ಕಾರ್ಯ ನಾಗರಾಜ ಶೆಟ್ಟಿ ಮಾಡುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇದೀಗ ನಾಗಾರಜ ಶೆಟ್ಟಿಯವರು ತಾನು ಮಂಗಳೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂಬ ಮಾತನ್ನು ಹೇಳಿದ್ದಾರೆ.

2009ರ ಲೋಕಸಭಾ ಚುನಾವಣೆ ಸಂದರ್ಭ ಮಂಗಳೂರು ಲೋಕಸಭಾ ವ್ಯಾಪ್ತಿಯ ವಿವಿಧ ಮಂಡಲಗಳು ಅಭ್ಯರ್ಥಿಯಾಗಿ ಬೇರೆ ಬೇರೆ ಹೆಸರುಗಳನ್ನು ಸೂಚಿಸಿದ್ದವು. ಪುತ್ತೂರು ಹಾಗೂ ಸುಳ್ಯ ಮಂಡಲಗಳು ಅಂದಿನ ಹಾಲಿ ಸಂಸದ ಡಿವಿ ಸದಾನಂದ ಗೌಡ ರವರ ಹೆಸರು ಸೂಚಿಸಿದ್ದರೇ ಬೆಳ್ತಂಗಡಿ ಮಂಡಲದಿಂದ ಪ್ರತಾಪ್‌ ಸಿಂಹ ನಾಯಕ್‌ ಹೆಸರು ಸೂಚಿಸಲಾಗಿತ್ತು. ಆದರೇ ಜಿಲ್ಲೆಯ ಯಾವುದೇ ಮಂಡಲಗಳು ನಳಿನ್‌ ಹೆಸರು ಸೂಚಿಸಿರಲಿಲ್ಲ. ಆಗ ಕಲ್ಲಡ್ಕ ಪ್ರಭಾಕರ ಭಟ್‌ ಅವರು ನಾಗರಾಜ ಶೆಟ್ಟಿ ಮೂಲಕ ನಳಿನ್‌ ಹೆಸರನ್ನು ಮುನ್ನಲೆಗೆ ತಂದಿದ್ದರು. ಇಂದು ಅದೇ ನಾಗರಾಜ ಶೆಟ್ಟಿಯವರು ನಳಿನ್‌ ಬದಲು ತನ್ನನ್ನು ಅಭ್ಯರ್ಥಿ ಮಾಡುವಂತೆ ಮನವಿ ಮಾಡಿರುವುದು ವಿಶೇಷ.

Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!