Connect with us

ರಾಜಕೀಯ

Kar sevak Arrest: 30 ವರ್ಷಗಳ ಹಿಂದಿನ ಪ್ರಕರಣ ಕೆದಕಿ ರಾಮಭಕ್ತನ ಬಂಧನ – ಬಿಜೆಪಿ ಕೆಂಡಮಂಡಲ  : ಇಂದು ರಾಜ್ಯವ್ಯಾಪಿ ಪ್ರತಿಭಟನೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಘೋಷಣೆ

Published

on

Ad Widget

Ad Widget

Ad Widget

Ad Widget

ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಿ ಬುಧವಾರ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರಕಾರ ಎಂದು ದೇಶಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು.

Ad Widget

Ad Widget <> Ad Widget

ರಾಮನ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಕೆತ್ತನೆ ಮಾಡಿದ್ದಾಗಿ ನಿನ್ನೆ ಸಂಭ್ರಮದಿಂದ ಇದ್ದೆವು. ರಾಜ್ಯದ ಪ್ರತಿಯೊಬ್ಬರು ಹೆಮ್ಮೆ ಪಡುವ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರವು, ಹಳೆಯ ಕೇಸನ್ನು ಮತ್ತೆ ಓಪನ್ ಮಾಡಿ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿರುವುದು ಖಂಡನೀಯ. ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ನಾಳೆ ಇಡೀ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮಾತ್ರವಲ್ಲದೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರಕಟಿಸಿದರು.

ಹಿಂದೂ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಹೋರಾಟ ನಡೆಯಲಿದೆ. ಪದೇಪದೇ ಅಲ್ಪಸಂಖ್ಯಾತರನ್ನು ಓಲೈಸುವ ರಾಜ್ಯದ ಕಾಂಗ್ರೆಸ್ ಸರಕಾರ, ಬರಗಾಲದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ಇಡೀ ದೇಶದಲ್ಲಿ ಸಂಭ್ರಮ ಇರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡಿದೆ. ಇದಕ್ಕೆ ತಕ್ಕ ಶಾಸ್ತಿಯನ್ನು ಮತದಾರರು ಮುಂದಿನ ದಿನಗಳಲ್ಲಿ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Ad Widget

Ad Widget

ಅಯೋಧ್ಯೆಯ ಮಂತ್ರಾಕ್ಷತೆಯನ್ನು ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಪ್ರತಿ ಮನೆಗೂ ತಲುಪಿಸುತ್ತಿದ್ದಾರೆ. ಅಲ್ಲಿ ಕೂಡ ಕಾಂಗ್ರೆಸ್ ಸರಕಾರ ಅಡ್ಡಿ ಮಾಡುತ್ತಿದೆ. ಪುಡಾರಿತನ ಮಾಡುತ್ತಿದೆ ಎಂದು ಗೊತ್ತಾಗಿದೆ. ಇದನ್ನೆಲ್ಲ ಗಮನಿಸಿ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.

ದುಸ್ಸಾಹಸಕ್ಕೆ ಕೈಹಾಕಿದ ಸಿಎಂ

ದೇಶವೇ ಸಂಭ್ರಮದಲ್ಲಿ ಇರುವಾಗ ರಾಮಭಕ್ತನನ್ನು ಬಂಧಿಸುವುದಾದರೆ ನಿಮಗೆಷ್ಟು ಧೈರ್ಯ? ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪ ಸೂಚಿಸಿದರು.

ರಾಜ್ಯ ಸರಕಾರಕ್ಕೆ ಆದ್ಯತೆ ಯಾವುದು? ಸಂದರ್ಭ ಮತ್ತು ನಿಮ್ಮ ಉದ್ದೇಶ ಏನು? ತಪ್ಪು ಮಾಡಿದ್ದಾರೆ ಅಥವಾ ಇಲ್ಲವೇ ಎಂದು ನೀವು ತೀರ್ಮಾನ ಮಾಡುವುದಲ್ಲ; 31 ವರ್ಷ ಹಳೆಯ ಕೇಸನ್ನು ಈಗಲೇ ರೀ ಓಪನ್ ಮಾಡಬೇಕಿತ್ತೇ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು. ಗೃಹ ಸಚಿವರಿಗೆ ಹಳೆಯ ಕೇಸುಗಳ ಬಗ್ಗೆ ಬಹಳ ಕಾಳಜಿ ಇದೆ; ತುಂಬ ಸಂತೋಷ. ಆದರೆ, ಮುಂದೆ ನಡೆಯುವ ಘಟನೆಗೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರೇ ಹೊಣೆಗಾರರಾಗುತ್ತಾರೆ ಎಂದು ತಿಳಿಸಿದರು.

ಸಿಎಂ ಕ್ರಮವನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರದ ದಬ್ಬಾಳಿಕೆ ಮತ್ತು ಪ್ರತೀಕಾರ ಮನೋಭಾವವನ್ನು ಖಂಡಿಸಬೇಕಾಗಿದೆ ಎಂದು ಎಚ್ಚರಿಸಿದರು. ಕಾಂಗ್ರೆಸ್ಸಿಗರು ನಾಲಿಗೆ ಮತ್ತು ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಅಯೋಧ್ಯೆ ಎಂಬುದು ಒಂದು ಭಾವನಾತ್ಮಕ ಸಂಬಂಧದ ವಿಚಾರ. ಶ್ರೀರಾಮನ ಜನ್ಮಸ್ಥಳವದು. ಕಾಂಗ್ರೆಸ್ಸಿಗರು ಹುಚ್ಚುಚ್ಚು ಹೇಳಿಕೆಗಳಿಗೆ ನಾವು ಉತ್ತರ ಕೊಡಬೇಕಿಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಹಿಂದೂಗಳು, ಹಿಂದೂ ಕಾರ್ಯಕರ್ತರ ಭಾವನೆಗೆ ಧಕ್ಕೆ ತರುವುದರಲ್ಲಿ ಇವರು ನಿಸ್ಸೀಮರು. ಹಿಂದೂಗಳಿಗೆ ನೋವು ಕೊಡುವುದರಲ್ಲಿ ಕಾಂಗ್ರೆಸ್ಸಿಗರಿಗೆ ಎಲ್ಲಿಲ್ಲದ ಸಂತೋಷ ಎಂದು ಟೀಕಿಸಿದರು.

Ad Widget
Click to comment

Leave a Reply

ರಾಜಕೀಯ

Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್

Published

on

Ad Widget

Ad Widget

Ad Widget

Ad Widget

ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.

ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್‌ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.

Ad Widget

Ad Widget

ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್‌ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.

ಎಫ್‌ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್‌ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget
Continue Reading

ಅಂತರ ರಾಜ್ಯ

Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!

Published

on

Ad Widget

Ad Widget

Ad Widget

Ad Widget

ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.

ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.

Ad Widget

Ad Widget

ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.

ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.

Ad Widget
Continue Reading

ಅಂತರ ರಾಜ್ಯ

Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ

Published

on

Ad Widget

Ad Widget

Ad Widget

Ad Widget

ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!