ವೈರಲ್ ನ್ಯೂಸ್
ಅಪಹರಿಸಲಾಗಿದೆ ಎನ್ನಲಾದ 15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಸಮುದ್ರದಲ್ಲಿ ಪತ್ತೆ – ಅಪಹರಣಕಾರರು ನಾಪತ್ತೆ
15 ಮಂದಿ ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಇದೀಗ ಹಡಗು ಪತ್ತೆಯಾಗಿದ್ದಾರೆ. ಆದರೆ ಅಪಹರಕಾರರು ನಾಪತ್ತೆಯಾಗಿದ್ದಾರೆ.
ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲೀಲಾ ನಾರ್ಫೋಕ್’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರು ಎನ್ನಲಾಗಿದ್ದು, ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿತ್ತು.
ಅಪಹರಣಕ್ಕೊಳಗಾದ ಹಡಗಿನ ಚಲನವಲನಗಳ ಮೇಲೆ ಜಾಗರೂಕ ನಿಗಾ ಇಡಲು ಭಾರತೀಯ ನೌಕಾಪಡೆಯ ವಿಮಾನಗಳನ್ನು ನಿಯೋಜಿಸಲಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈಯಿಂದ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು ನೌಕಾಪಡೆ ತಿಳಿಸಿತ್ತು
6 ಮಂದಿ ಶಸ್ತ್ರಾಸ್ತ್ರದಾರಿಗಳು ಈ ಹಡಗನ್ನು ಅಪಹರಿಸಿದ್ದಾರೆ. ಇದು ಸೋಮಾಲಿಯದ ಕಡಲುಗಳ್ಳರೇ ಇರಬಹುದು ಎನ್ನಲಾಗಿತ್ತು. ಪತ್ತೆಯಾದ ಸಂದರ್ಭ ಯಾವೂದೇ ಅನ್ಯ ವ್ಯಕ್ತಿ ಅಥವಾ ಅಪಹರಣಕಾರರು ಹಡಗಿನಲ್ಲಿ ಇರಲಿಲ್ಲ ಎಂದು ವರದಿಯಾಗಿದೆ.
ವೈರಲ್ ನ್ಯೂಸ್
ಸಿಎಂ ಪುಟದಲ್ಲಿ ಮೊಳಗಿದ ಪುತ್ತೂರಿನ ಕಂಠ – ತುಳುನಾಡಿನ ಸಂಸ್ಕೃತಿ – ಭಾಷಾ ಸೊಗಡಿಗೆ ಧ್ವನಿಯಾದ ದಿವ್ಯಶ್ರೀ ರೈ ವಜ್ರದುಂಬಿ
ಪುತ್ತೂರು: ತುಳುವಿಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ದೊರೆತ ಸಂಭ್ರಮದ ನಡುವೆಯೇ, ತುಳುನಾಡಿನ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸೊಬಗನ್ನು ಪರಿಚಯಿಸುವ ವಿಡಿಯೋವೊಂದಕ್ಕೆ ಪುತ್ತೂರಿನ ಕುಂಬ್ರದ ದಿವ್ಯಶ್ರೀ ರೈ ವಜ್ರದುಂಬಿ ಅವರು ನೀಡಿರುವ ಹಿನ್ನಲೆ ಧ್ವನಿ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.
ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಗುರುತಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ಇನ್‌ಸ್ಟಾಗ್ರಾಂ ಪುಟದಲ್ಲಿ ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಆಚಾರ ವಿಚಾರವನ್ನು ಬಿಂಬಿಸುವ ವಿಡಿಯೋ ಹಂಚಿಕೊಳ್ಳಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಕಂಠಸಿರಿ ಹಿನ್ನಲೆ ಧ್ವನಿಯಾಗಿತ್ತು.
ವಿಡಿಯೋದಲ್ಲಿ ತುಳುನಾಡಿನ ಪ್ರಕೃತಿ ಸೌಂದರ್ಯ, ಸಾಹಿತ್ಯ , ಸಂಸ್ಕೃತಿ, ಸಂಪ್ರದಾಯ, ಬದುಕಿನ ವೈವಿಧ್ಯ ಹಾಗೂ ತುಳು ಭಾಷೆಯ ಸೊಗಡನ್ನು ಮನಮುಟ್ಟುವ ರೀತಿಯಲ್ಲಿ ಕಟ್ಟಿಕೊಡಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಧ್ವನಿ ಮತ್ತಷ್ಟು ಜೀವ ತುಂಬಿದೆ. ಮಾತುಗಳನ್ನು ಕೇವಲ ಕೇಳಿಸುವುದಕ್ಕಿಂತ, ಅವುಗಳ ಭಾವವನ್ನು ಕೇಳುಗರ ಮನಸ್ಸಿಗೆ ತಲುಪಿಸುವ ರೀತಿಯ ಅವರ ಧ್ವನಿ ನಿರೂಪಣೆ ವಿಡಿಯೋಗೆ ವಿಶೇಷ ಮೆರುಗು ನೀಡಿದೆ.
ಮುಖ್ಯಮಂತ್ರಿಗಳ ಅಧಿಕೃತ ಪುಟದಲ್ಲಿ ಪ್ರಸಾರವಾದ ಈ ವಿಡಿಯೋಗೆ ಅಲ್ಪಾವಧಿಯಲ್ಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ ಎರಡು ದಿನಗಳಲ್ಲಿ ಸುಮಾರು 5 ಲಕ್ಷ ವೀಕ್ಷಣೆ ಪಡೆದುಕೊಂಡಿದೆ. ತುಳುವಿನ ಬಗ್ಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಕರಾವಳಿಯ ಜನರ ನಡುವೆ ಈ ವಿಡಿಯೋ ವಿಶೇಷ ಗಮನ ಸೆಳೆದಿದ್ದು, ದಿವ್ಯಶ್ರೀ ಅವರ ಕಂಠಸಿರಿಯೂ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.
ನಿರೂಪಕಿ ಹಾಗೂ ವಾಯ್ಸ್‌ಓವರ್ ಆರ್ಟಿಸ್ಟ್ ಆಗಿರುವ ದಿವ್ಯಶ್ರೀ, ತಮ್ಮ ಧ್ವನಿಯ ಏರಿಳಿತ, ಉಚ್ಚಾರಣೆಯ ಸ್ಪಷ್ಟತೆ ಹಾಗೂ ಭಾವಪೂರ್ಣ ನಿರೂಪಣೆಯ ಮೂಲಕ ತುಳುನಾಡಿನ ಮಣ್ಣಿನ ಸೊಗಡನ್ನು ಧ್ವನಿಯಲ್ಲೇ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ತುಳು ಭಾಷೆಯ ಬಗ್ಗೆ ಹೆಮ್ಮೆ, ಕರಾವಳಿಯ ಸಂಸ್ಕೃತಿಯ ಬಗ್ಗೆ ಅಭಿಮಾನ ಹಾಗೂ ವಿಡಿಯೋದಲ್ಲಿನ ದೃಶ್ಯಗಳಿಗೆ ಹೊಂದಿಕೊಳ್ಳುವ ಧ್ವನಿ ನಿರೂಪಣೆ ಅವರ ವಾಯ್ಸ್‌ಓವರ್‌ನ ವಿಶೇಷತೆಯಾಗಿದೆ.
ಪ್ರಸ್ತುತ ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಶ್ರೀ, ಇದಕ್ಕೂ ಮೊದಲು ಹಲವು ಸುದ್ದಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪತ್ರಿಕೋದ್ಯಮದ ಅನುಭವದ ಜತೆಗೆ ಡಾಕ್ಯುಮೆಂಟರಿ, ವಿಶೇಷ ವರದಿ ಹಾಗೂ ಜಾಹೀರಾತುಗಳಿಗೆ ಧ್ವನಿ ನೀಡಿರುವ ಅವರು ವಾಯ್ಸ್‌ಓವರ್ ಕ್ಷೇತ್ರದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. “ನಿಖರ ನ್ಯೂಸ್”ನ ಹಲವಾರು ವಿಡಿಯೋಗಳಲ್ಲೂ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.
2023ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುವ ದಿವ್ಯಶ್ರೀ, ಅಧ್ಯಯನ ಹಾಗೂ ವೃತ್ತಿ ಎರಡೂ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಅರಿಯಡ್ಕ ಗ್ರಾಮದ ತ್ಯಾಗರಾಜನಗರ ನಿವಾಸಿ ವಿಠಲ ರೈ ಹಾಗೂ ಶಾಲಿನಿ ರೈ ದಂಪತಿಯ ಪುತ್ರಿಯಾಗಿರುವ ದಿವ್ಯಶ್ರೀ ಅವರ ವೃತ್ತಿ ಬದುಕಿನ ಹೆಜ್ಜೆಗಳಿಗೆ ಸಹೋದರಿ ಮಧುಶ್ರೀ ರೈ ಅವರೂ ಪ್ರೋತ್ಸಾಹ ನೀಡುತ್ತಿದ್ದಾರೆ.
ತುಳುವಿಗೆ ಅಧಿಕೃತ ಮಾನ್ಯತೆ ದೊರೆತ ಸಂಭ್ರಮದ ಕ್ಷಣದಲ್ಲಿ, ತುಳುನಾಡಿನ ಕಥೆಯನ್ನು ತಮ್ಮ ಕಂಠದ ಮೂಲಕ ಸಾವಿರಾರು ಜನರಿಗೆ ತಲುಪಿಸಿದ ದಿವ್ಯಶ್ರೀ ರೈ ವಜ್ರದುಂಬಿ ಅವರ ಧ್ವನಿ ಈಗ ಪುತ್ತೂರಿನಿಂದ ತುಳುನಾಡಿನಾಚೆಗೂ ಕೇಳಿಸುತ್ತಿದೆ.
ಅಂತರ ರಾಜ್ಯ
Punjab-ಪಂಜಾಬ್ ವಿವಾಹದಲ್ಲಿ ವಧುವಿನ ಮೇಲೆ 8 ಕೋಟಿ ರೂ. ನೋಟುಗಳ ಮಳೆ: ಹಬ್ಬಿದ್ದ ವದಂತಿಗೆ ಬಿತ್ತು ಬ್ರೇಕ್; ಅಸಲಿ ಮೊತ್ತ ಎಷ್ಟು ಗೊತ್ತೇ?
ಪಂಜಾಬ್‌ನ ತರಣ್ ತರಣ್‌ನಲ್ಲಿ ಇತ್ತೀಚೆಗೆ ನಡೆದ ಅದ್ಧೂರಿ ವಿವಾಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮದುವೆಯ ಸಂಭ್ರಮದಲ್ಲಿ ವರ ಮತ್ತು ವಧುವಿನ ಮೇಲೆ ಬರೋಬ್ಬರಿ 8 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸುರಿಮಳೆಗೈಯಲಾಗಿದೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹರಡಿತ್ತು.
ಅಮೃತಸರ, ಫೆ.19: ಪಂಜಾಬ್‌ನ ತರಣ್ ತರಣ್‌ನಲ್ಲಿ ಇತ್ತೀಚೆಗೆ ನಡೆದ ಅದ್ಧೂರಿ ವಿವಾಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮದುವೆಯ ಸಂಭ್ರಮದಲ್ಲಿ ವರ ಮತ್ತು ವಧುವಿನ ಮೇಲೆ ಬರೋಬ್ಬರಿ 8 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸುರಿಮಳೆಗೈಯಲಾಗಿದೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹರಡಿತ್ತು.
ಘಟನೆಯ ಹಿನ್ನೆಲೆ:
ರಾಜಮನೆತನದ ಶೈಲಿಯಲ್ಲಿ ನಡೆದ ಈ ವಿವಾಹದಲ್ಲಿ, ಸಂಭ್ರಮಾಚರಣೆಯ ಭಾಗವಾಗಿ ನೋಟುಗಳನ್ನು ಗಾಳಿಯಲ್ಲಿ ತೂರಿ ಸುರಿಮಳೆಗೈಯಲಾಗಿತ್ತು. ಅತಿಥಿಗಳು ಈ ದೃಶ್ಯವನ್ನು ಕಂಡು ಆಶ್ಚರ್ಯಚಕಿತರಾಗಿದ್ದರು. ಈ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದಂತೆ, ಕೆಲವರು ಇದನ್ನು ಶ್ರೀಮಂತಿಕೆಯ ಪ್ರದರ್ಶನ ಎಂದು ಟೀಕಿಸಿದರೆ, ಇನ್ನು ಕೆಲವರು ಇದು ಅಲ್ಲಿನ ಸಂಪ್ರದಾಯ ಎಂದು ಅಭಿಪ್ರಾಯಪಟ್ಟಿದ್ದರು. ಕೋಟ್ಯಂತರ ರೂಪಾಯಿ ಹಣವನ್ನು ಹೀಗೆ ಪೋಲು ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ಆರಂಭವಾಗಿದ್ದವು.
ಅಸಲಿ ಸತ್ಯ ಬಹಿರಂಗ:
ಆದರೆ, ಈ ಹರಡಿದ್ದ ಸುದ್ದಿಯಲ್ಲಿ ಸತ್ಯಾಂಶವಿಲ್ಲ ಎಂಬುದು ಈಗ ತಿಳಿದುಬಂದಿದೆ. ಮದುವೆಯ ಕಾರ್ಯಕ್ರಮದಲ್ಲಿದ್ದ ಡಿಜೆ ಆಪರೇಟರ್ ಈ ಕುರಿತು ಅಸಲಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ವಾಸ್ತವವಾಗಿ ಅಲ್ಲಿ ಸುರಿಸಿದ್ದು 8 ಕೋಟಿ ರೂಪಾಯಿಗಳನ್ನಲ್ಲ, ಬದಲಿಗೆ ಕೇವಲ 3 ಲಕ್ಷ ರೂಪಾಯಿಗಳನ್ನು ಮಾತ್ರ!
ಹಣದ ರಾಶಿ ದೊಡ್ಡದಾಗಿ ಕಾಣಲು ಕಾರಣವೆಂದರೆ, ಅಲ್ಲಿ ಬಳಸಲಾದ ಬಹುಪಾಲು ನೋಟುಗಳು 10 ರೂಪಾಯಿ ಮುಖಬೆಲೆಯದ್ದಾಗಿದ್ದವು. ಕಡಿಮೆ ಮುಖಬೆಲೆಯ ನೋಟುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ, ನೋಡುವವರಿಗೆ ಅದು ಕೋಟ್ಯಂತರ ರೂಪಾಯಿಯಂತೆ ಭಾಸವಾಗಿತ್ತು. “ಇದು ಕುಟುಂಬದ ಸಂತೋಷವನ್ನು ವ್ಯಕ್ತಪಡಿಸುವ ಒಂದು ವಿಧಾನ ಮತ್ತು ಸ್ಥಳೀಯ ಆಚರಣೆಯ ಭಾಗವಾಗಿದೆ” ಎಂದು ಸ್ಪಷ್ಟಪಡಿಸಲಾಗಿದೆ.
ವೈರಲ್ ನ್ಯೂಸ್
ಚೀನಾದಲ್ಲಿ ಇತಿಹಾಸ ನಿರ್ಮಾಣ : ಗಂಟೆಗೆ 700ಕಿಮೀ ವೇಗದಲ್ಲಿ ಸಂಚರಿಸುವ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ
ಬೀಜಿಂಗ್: ನವೀನ ತಂತ್ರಜ್ಞಾನಗಳಿಂದ ಜಗತ್ತನ್ನು ನಿಬ್ಬೆರಗುಗೊಳಿಸುವ ಚೀನಾ ಇದೀಗ ಮತ್ತೊಂದು ಇತಿಹಾಸ ನಿರ್ಮಿಸಿದೆ. ಗಂಟೆಗೆ 700 ಕಿ.ಮೀ ಸಂಚರಿಸುವ ಸೂಪರ್ ಕಂಡಕ್ಟಿವ್ ಮ್ಯಾಗ್ಲೆವ್ ರೈಲಿನ ಮಾದರಿಯ ಪ್ರಾಯೋಗಿಕ ಪರೀಕ್ಷೆಯನ್ನು ಚೀನಾ ಯಶಸ್ವಿಯಾಗಿ ನಡೆಸಿದೆ. ಈ ವೇಗ ನೂತನ ವಿಶ್ವದಾಖಲೆಯಾಗಿದೆ. ಒಂದು ವೇಳೆ ಈ ರೈಲು ನಿಜರೂಪ ಪಡೆದು ಹಳಿ ಮೇಲೆ ಓಡಿದರೆ ಅದು ವಿಶ್ವದ ಅತ್ಯಂತ ವೇಗದ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಹಾಲಿ ಚೀನಾದಲ್ಲಿ ಇರುವ ಶಾಂಘೈ ಮ್ಲಾಗ್ಲೇವ್ ಗಂಟೆಗೆ 460 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ವಿಶ್ವದ ಅತಿವೇಗದ ರೈಲು ಎಂಬ ಹಿರಿಮೆ ಹೊಂದಿದೆ. ಪರೀಕ್ಷಿಸಿದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾನಿಲಯ
ಚೀನಾದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾನಿಲಯವು 700 ಕಿ.ಮೀ/ ಗಂಟೆಗೆ ಸಂಚರಿಸುವ ರೈಲಿನ ಮಾದರಿಯನ್ನು ಪರೀಕ್ಷಿಸಿದೆ. 400 ಮೀ.ಉದ್ದ ಮ್ಯಾಗ್ಲೆವ್ ಹಳಿಯ ಮೇಲೆ 1000 ಕೆಜಿ ತೂಕದ ರೈಲಿನ ಮಾದರಿಯನ್ನು ಪರೀಕ್ಷಿಸಲಾಗಿದೆ. ಈ ಪರೀಕ್ಷೆ ವೇಳೆ ಗಂಟೆಗೆ 700 ಕಿ.ಮೀ ದೂರ ಸಂಚರಿಸಬೇಕಾದ ವೇಗವನ್ನು ರೈಲು ಕೇವಲ 2 ಸೆಕೆಂಡ್‌ಗಳಲ್ಲೇ ಸಾಧಿಸುವ ಮೂಲಕ, ಯೋಜನೆಯ ಕಾರ್ಯಸಾಧು ಬಗ್ಗೆ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಇದು ಇದುವರೆಗೆ ಪರೀಕ್ಷಿಸಲ್ಪಟ್ಟ ಅತ್ಯಂತ ವೇಗದ ಸೂಪರ್ ಕಂಡಕ್ಟಿಂಗ್ ಮ್ಯಾಗ್ಲೆವ್ ರೈಲಾಗಿದೆ.
ಸಂಶೋಧನಾ ತಂಡವು ಒಂದು ದಶಕದಿಂದ ಈ ಯೋಜನೆಗಾಗಿ ಶ್ರಮಿಸುತ್ತಿತ್ತು
ಸಂಶೋಧನಾ ತಂಡವು ಒಂದು ದಶಕದಿಂದ ಈ ಯೋಜನೆಗಾಗಿ ಶ್ರಮಿಸುತ್ತಿತ್ತು, ಇದೇ ವರ್ಷದ ಜನವರಿಯಲ್ಲಿ ಇದೇ ಹಳಿ ಮೇಲೆ 648 ಕಿ.ಮೀ/ ಗಂಟೆ ಸಂಚಾರದ ಪರೀಕ್ಷೆ ನಡೆಸಿತ್ತು. ಇದೀಗ ಆ ವೇಗ 700 ಕಿ.ಮೀಗೆ ಹೆಚ್ಚಿದೆ. ಮ್ಯಾಗ್ಲೇವ್ ತಂತ್ರಜ್ಞಾನದ ರೈಲುಗಳಿಗೆ ಚಕ್ರ ಇರುವುದಿಲ್ಲ. ಬದಲಾಗಿ ಅವು ಹಳಿ ಮತ್ತು ರೈಲಿನ ನಡುವೆ ಉತ್ಪತ್ತಿಯಾಗುವ ಅಯಂಸ್ಕಾತೀಯ ವಲಯದಲ್ಲಿ ಗಾಳಿಯಲ್ಲೇ ತೇಲಿಕೊಂಡು ಮುಂದೆ ಸಾಗುತ್ತದೆ.
-
Uncategorized18 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized20 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು23 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ22 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ24 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್23 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
Uncategorized6 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಅಂತರ ರಾಜ್ಯ23 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ


















