ವಿದ್ಯುತ್ ಪರಿವರ್ತಕ ಬಳಿ ಮೃತ ದೇಹ […]" /> ವಿದ್ಯುತ್ ಪರಿವರ್ತಕ ಬಳಿ ಮೃತ ದೇಹ […]"> Electric Shock ಸುಬ್ರಹ್ಮಣ್ಯ : ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿ - Nikhara News | Kannada News Website
Connect with us

ದಕ್ಷಿಣ ಕನ್ನಡ

Electric Shock ಸುಬ್ರಹ್ಮಣ್ಯ : ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿ

Published

on

Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ :  ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿಯಾದ ಘಟನೆ ಜ.5 ರಂದು ಸುಬ್ರಹ್ಮಣ್ಯ ಸಮೀಪದ ಬಳ್ಳದಿಂದ ವರದಿಯಾಗಿದೆ .ಬಳ್ಳ ಗ್ರಾಮದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ಘಟನೆ ಸಂಭವಿಸಿದೆ.

Ad Widget

Ad Widget

Ad Widget

Ad Widget

. ಹಾಸನ ಜಿಲ್ಲೆಯ ಹೊಳೆ ನರಸೀಪುರ ಸಿಗರನಹಳ್ಳಿ ರಘು ಎಸ್.ಆ‌ರ್. (32)ಮೃತ ಪಟ್ಟವರು.ಸುಬ್ರಹ್ಮಣ್ಯ ಮೆಸ್ಕಾಂ ವ್ಯಾಪ್ತಿಯ ಪಂಜ ಸಬ್ ಡಿವಿಷನ್‌ನ ಬಳ್ಪ ಎಂಬಲ್ಲಿ ಅವರು ವಿದ್ಯುತ್‌ ದುರಸ್ಥಿ ನಡೆಸಲು ತೆರಳಿದ ವೇಳೆ ಘಟನೆ ಸಂಭವಿಸಿದೆ.

Ad Widget

Ad Widget alt="Ad Widget"/>

Ad Widget

ವಿದ್ಯುತ್ ಪರಿವರ್ತಕ ಬಳಿ ಮೃತ ದೇಹ ಪತ್ತೆಯಾಗಿದೆ. ಪ್ರಸ್ತುತ ಮಹಜರು ಸಲುವಾಗಿ ಮೃತದೇಹವನ್ನು ಆಸ್ಪತ್ರೆಗೆ ತರಲಾಗಿದೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೋಲಿಸರು ಆಗಮಿಸಿದ್ದು,ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget <> Ad Widget

ರಘುರವರು ತಂದೆ ತಾಯಿ , ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Click to comment

Leave a Reply

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!