ಆರೋಗ್ಯ
Health Tips : ಚಳಿಗಾಲದಲ್ಲಿ ಒಡೆದ ತುಟಿ ಸಮಸ್ಯೆಗೆ ಈ ಟಿಪ್ಸ್ ಅನ್ನು ಟ್ರೈ ಮಾಡಿ….
ಚಳಿಗಾಲದಲ್ಲಿ ತುಟಿ ಒಣಗುವುದು ಮತ್ತು ತುಟಿ ಒಡೆಯುವುದು ಸಾಮಾನ್ಯ , ಆದರೆ ಇದನ್ನು ತಪ್ಪಿಸಲು ಈ ಟಿಪ್ಸ್ ಅನ್ನು ಒಮ್ಮೆ ಟ್ರೈ ಮಾಡಿ
ಚಳಿಗಾಲದಲ್ಲಿ ಒಣ ಒಡೆದ ತುಟಿಗಳನ್ನು ಗುಣಪಡಿಸುವಲ್ಲಿ ಅದ್ಭುತವಾಗಿ ಕೆಲಸ ಮಾಡುವ ಕೆಲವು ಸರಳ ಅಡುಗೆ ಪದಾರ್ಥಗಳು ಇಲ್ಲಿವೆ.
*ತೆಂಗಿನ ಎಣ್ಣೆ:
ತೆಂಗಿನ ಎಣ್ಣೆಯು ಅದರ ಆರ್ಧ್ರಕ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದನ್ನು ಹಚ್ಚುವುದು ಅಥವಾ ನಿಮ್ಮ ಆಹಾರದಲ್ಲಿ ತೆಂಗಿನ ಎಣ್ಣೆಯನ್ನು ಸೇರಿಸುವುದು ಆಂತರಿಕ ಜಲಸಂಚಯನವನ್ನು ಒದಗಿಸುತ್ತದೆ ಮತ್ತು ನೈಸರ್ಗಿಕವಾಗಿ ಚರ್ಮ ಮತ್ತು ಒಡೆದ ತುಟಿಗಳ ಶುಷ್ಕತೆಯನ್ನು ಗುಣಪಡಿಸಲು ಸಹಾಯ ಮಾಡುತ್ತದೆ.
*ಬಾದಾಮಿ ಎಣ್ಣೆ:
ನಿಮ್ಮ ಒಣ ತುಟಿಗಳ ಮೇಲೆ ಬಾದಾಮಿ ಎಣ್ಣೆಯ ಕೆಲವು ಹನಿಗಳನ್ನು ಮೃದುವಾಗಿ ಮಸಾಜ್ ಮಾಡಿ. ಅದನ್ನು 15ರಿಂದ 20 ನಿಮಿಷಗಳ ಕಾಲ ಬಿಡಿ, ನಂತರ ಮೃದುವಾದ ಬಟ್ಟೆಯಿಂದ ಒರೆಸಿ. ಮೃದುವಾದ ಮತ್ತು ಹೈಡ್ರೀಕರಿಸಿದ ತುಟಿಗಳಿಗಾಗಿ ಪ್ರತಿದಿನ ಈ ಪರಿಹಾರವನ್ನು ಪುನರಾವರ್ತಿಸಿ.
*ರೋಸ್ ವಾಟರ್ ಮತ್ತು ಐಸ್:
ರೋಸ್ ವಾಟರ್ ಅನ್ನು ಐಸ್ ಜೊತೆ ಮಿಶ್ರಣ ಮಾಡಿ ನಂತರ ಈ ಜ್ಯೂಸ್ ಅನ್ನು ನಿಮ್ಮ ಬಿರುಕು ಬಿಟ್ಟ ತುಟಿಗೆ ಹಚ್ಚಿಕೊಳ್ಳಿ
*ಬೆಣ್ಣೆ:
ಮಲಗುವ ಮುನ್ನ ನಿಮ್ಮ ಒಡೆದ ತುಟಿಗಳ ಮೇಲೆ ಸ್ವಲ್ಪ ಪ್ರಮಾಣದ ಬೆಣ್ಣೆ ಅಥವಾ ಹಾಲಿನ ಕೆನೆಯನ್ನು ಹಚ್ಚುವುದು. ತುಟಿ ಒಡೆಯುವುದನ್ನು ತಡೆಯಲು ಸಹಾಯ ಮಾಡುತ್ತದೆ
*ನೀರು ಭರಿತ ಹಣ್ಣುಗಳು ಮತ್ತು ತರಕಾರಿಗಳು
ಸೌತೆಕಾಯಿ, ಸೆಲರಿ, ಕಿತ್ತಳೆ ಮತ್ತು ಸ್ಟ್ರಾಬೆರಿಗಳಂತಹ ಹೆಚ್ಚಿನ ನೀರಿನ ಅಂಶವಿರುವ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿ. ಈ ಹಣ್ಣುಗಳು, ತರಕಾರಿಗಳು ಮತ್ತು ಬೆರ್ರಿಗಳನ್ನು ಆಹಾರದಲ್ಲಿ ಸೇರಿಸುವುದರಿಂದ ದೇಹವನ್ನು ಹೈಡ್ರೀಕರಿಸುತ್ತದೆ ಮತ್ತು ಒಣ ತುಟಿಗಳನ್ನು ತಡೆಯಬಹುದು.
*ಆವಕಾಡೊ
ಆವಕಾಡೊ ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿದೆ ಮತ್ತು ಚರ್ಮದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಎ, ಸಿ ಮತ್ತು ಇ ನಂತಹ ವಿಟಮಿನ್ಗಳನ್ನು ಹೊಂದಿರುತ್ತದೆ. ಆವಕಾಡೊಗಳನ್ನು ಸೇವಿಸುವುದು ನಿಮ್ಮ ತುಟಿಗಳನ್ನು ತೇವವಾಗಿರಿಸಲು ಮತ್ತು ಶುಷ್ಕತೆಯನ್ನು ತಡೆಯಲು ಸಹಾಯಮಾಡುತ್ತದೆ.
*ಜೇನುತುಪ್ಪ
ಜೇನುತುಪ್ಪವು ತೇವಾಂಶವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ತುಟಿಗಳ ಮೇಲೆ ಜೇನುತುಪ್ಪವನ್ನು ಹಚ್ಚುವುದರಿಂದ ಹಿತವಾಗಬಹುದು ಮತ್ತು ಅದನ್ನು ಮಿತವಾಗಿ ಸೇವಿಸುವುದರಿಂದ ಒಟ್ಟಾರೆ ಚರ್ಮದ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ
*ವಿಟಮಿನ್ ಇ ಭರಿತ ಆಹಾರಗಳು
ವಿಟಮಿನ್ ಇ ಚರ್ಮದ ಆರೋಗ್ಯಕ್ಕೆ ಮುಖ್ಯವಾಗಿದೆ ಮತ್ತು ಬಾದಾಮಿ, ಸೂರ್ಯಕಾಂತಿ ಬೀಜಗಳು, ಪಾಲಕ್ ಮತ್ತು ಕೋಸುಗಡ್ಡೆಯಂತಹ ಆಹಾರಗಳಲ್ಲಿ ಕಂಡುಬರುತ್ತದೆ. ನಿಮ್ಮ ಆಹಾರದಲ್ಲಿ ಈ ಆಹಾರಗಳನ್ನು ಸೇರಿಸುವುದು ಆರೋಗ್ಯಕರ ತುಟಿಗಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಅಪರಾಧ21 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್18 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ18 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು19 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ14 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ19 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು20 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ19 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















