Connect with us

ವರದಿಗಳು

ಆಸ್ಪತ್ರೆ ಬೆಡ್ ಜಾಸ್ತಿ ಮಾಡಿ- ಅಗತ್ಯಬಿದ್ದರೆ ರಾತ್ರಿ ಕರ್ಫ್ಯೂ ಜಾರಿ ಮಾಡಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

Published

on



Ad Widget

Ad Widget

Ad Widget

Ad Widget

ನವದೆಹಲಿ : “ಅಗತ್ಯ ಬಿದ್ದರೆ ರಾತ್ರಿ ಕರ್ಫ್ಯೂ ಜಾರಿ ಮಾಡಿ, ಕೊರೊನಾ ವಾರ್‌ ರೂಮ್‌ ಗಳನ್ನು ಚುರುಕುಗೊಳಿಸಿ, ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳನ್ನು ಸಿದ್ಧಗೊಳಿಸಿ” ಹೀಗೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

Ad Widget

Ad Widget

Ad Widget

Ad Widget

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ರಾಜ್ಯಗಳ ಮುಖ್ಯ ಕಾರ್ಯ  ದರ್ಶಿ ಗಳಿಗೆ ಬರೆದಿರುವ ಪತ್ರದಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. ಜಿಲ್ಲಾ ಮಟ್ಟ, ಸ್ಥಳೀಯ ಮಟ್ಟದಲ್ಲಿ ಕೂಡ ಕಂಟೈನ್‌ಮೆಂಟ್‌ ವಲಯಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಸೂಚಿಸಿದ್ದಾರೆ. ಡೆಲ್ಟಾಗೆ ಹೋಲಿಕೆ ಮಾಡಿದರೆ ಒಮಿಕ್ರಾನ್‌ ಮೂರು ಪಟ್ಟು ಹೆಚ್ಚು ಹರಡುತ್ತದೆ ಎಂದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸದ್ಯಕ್ಕೆ ಬೇಡ: ದೇಶದಲ್ಲಿ ಸದ್ಯಕ್ಕೆ ಮಕ್ಕಳಿಗೆ ಲಸಿಕೆ ಹಾಕುವ ಅಗತ್ಯವಿಲ್ಲ. ಅಂಥ ಪರಿಸ್ಥಿತಿಯೂ ಉಂಟಾಗಿಲ್ಲವೆಂದು ರಾಷ್ಟ್ರೀಯ ತಾಂತ್ರಿಕ ಸಮಿತಿ ಕೇಂದ್ರಕ್ಕೆ ಶಿಫಾರಸು ಮಾಡಿದೆ.

Ad Widget

Ad Widget <> Ad Widget


200ಕ್ಕೂ ಹೆಚ್ಚು ಕೇಸು: ದೇಶದಲ್ಲಿ ಒಟ್ಟು ಒಮಿಕ್ರಾನ್‌ ಕೇಸುಗಳ ಸಂಖ್ಯೆ 200 ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್‌ ಮಾಡಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ 65, ದೆಹಲಿಯಲ್ಲಿ ತಲಾ 54, ಕರ್ನಾಟಕದಲ್ಲಿ 19 ಕೇಸುಗಳು ದೃಢಪಟ್ಟಿವೆ.



Ad Widget
Ad Widget
Click to comment

Leave a Reply

ಅಂತರ ರಾಜ್ಯ

L.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

Published

on



Ad Widget

Ad Widget

Ad Widget

Ad Widget

ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಿಲ್ಲಿಯ ಜಸೋಲಾ ವಿಹಾರ್‌ನಲ್ಲಿರುವ ಆಸ್ಪತ್ರೆಗೆ ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.



Ad Widget

ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ. ಅಡ್ವಾಣಿ ಅವರು 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.

Continue Reading

ಅಂತರ ರಾಜ್ಯ

Supreme Court-ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ..!

Published

on



Ad Widget

Ad Widget

Ad Widget

Ad Widget

ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರತಿಭಟನೆಯಿಂದ ಹಬ್ಬದ ವ್ಯಾಪಾರಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದ ವರ್ತಕರು, ಪ್ರತಿಭಟನೆಗೆ ತಡೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಈ ಮನವಿಯ ವಿಚಾರವಾಗಿ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ವಿವೇಕವನ್ನು ಪ್ರತಿಭಟನಾಕಾರರು ಹೊಂದಿರುತ್ತಾರೆ ಎಂದು ಆಶಿಸಿರುವುದಾಗಿ ತಿಳಿಸಿದೆ.



Ad Widget

ಹಬ್ಬದ ಸಂದರ್ಭದಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕೆಂಬ ವರ್ತಕರ ಆತಂಕದ ನಡುವೆಯೇ, ಪ್ರತಿಭಟನೆಗೆ ಸಂಬಂಧಿಸಿದಂತೆ ತುರ್ತು ನಿರ್ಬಂಧಗಳನ್ನು ವಿಧಿಸಲು ನ್ಯಾಯಾಲಯ ನಿರಾಕರಿಸಿರುವುದು ಗಮನ ಸೆಳೆದಿದೆ.

Continue Reading

ಅಂತರ ರಾಜ್ಯ

Controversial statement-“ಅಮೆರಿಕ–ಪಾಕ್ ಯುದ್ಧ ನಡೆದರೆ ಪಾಕಿಸ್ತಾನದ ಪರ ನಿಲ್ಲುತ್ತೇವೆ” – ರಾಜಸ್ಥಾನ ಬಿಜೆಪಿ ಅಧ್ಯಕ್ಷನಿಂದ ವಿವಾದಾತ್ಮಕ ಹೇಳಿಕೆ..!

Published

on



Ad Widget

Ad Widget

Ad Widget

Ad Widget

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನೆರೆಯ ರಾಷ್ಟ್ರ ಎಂಬ ಕಾರಣಕ್ಕೆ ಪಾಕಿಸ್ತಾನದ ಪರವಾಗಿ ಭಾರತ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನೆರೆಯ ರಾಷ್ಟ್ರ ಎಂಬ ಕಾರಣಕ್ಕೆ ಪಾಕಿಸ್ತಾನದ ಪರವಾಗಿ ಭಾರತ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮದನ್ ರಾಥೋರ್, “ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಯ ರಾಷ್ಟ್ರವಾಗಿರುವುದರಿಂದ ನಾವು ಅದರ ಪರವಾಗಿ ನಿಲ್ಲುತ್ತೇವೆ. ಆದರೆ, ನಮ್ಮ ಆಂತರಿಕ ವಿಷಯಗಳ ವಿಚಾರದಲ್ಲಿ ಭಾರತದ ಪರವಾಗಿ ನಿಲ್ಲುತ್ತೇವೆ. ಈ ವ್ಯತ್ಯಾಸವನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

Ad Widget

Ad Widget <> Ad Widget

ಕಾಂಗ್ರೆಸ್‌ನಿಂದ ತೀವ್ರ ಖಂಡನೆ
ರಾಥೋರ್ ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್, ಇದನ್ನು ರಾಷ್ಟ್ರವಿರೋಧಿ ಹೇಳಿಕೆ ಎಂದು ಟೀಕಿಸಿದ್ದಾರೆ. ಭಾರತದ ಸೈನಿಕರು ಮತ್ತು ನಾಗರಿಕರ ಸಾವಿಗೆ ಕಾರಣವಾಗುವ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ನಾಯಕನ ಹೇಳಿಕೆಗೆ ಪಕ್ಷದ ವರಿಷ್ಠರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ.



Ad Widget

“ಪಾಕಿಸ್ತಾನದ ಪರವಾಗಿ ನಿಲ್ಲುವುದಾಗಿ ರಾಜಸ್ಥಾನ ಬಿಜೆಪಿ ಅಧ್ಯಕ್ಷರು ಹೇಳಿರುವುದು ಬಿಜೆಪಿಯ ನಿಲುವಿನ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇದೇ ಅಭಿಪ್ರಾಯ ಹೊಂದಿದ್ದಾರೆಯೇ? ಇಲ್ಲದಿದ್ದರೆ, ಈ ಹೇಳಿಕೆ ನೀಡಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಶಮಾ ಮೊಹಮ್ಮದ್ ಆಗ್ರಹಿಸಿದ್ದಾರೆ.

Ad Widget

Ad Widget

ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ಸಂದೀಪ್ ಗುಪ್ತಾ ಕೂಡ ರಾಥೋರ್ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ. ಈ ಹೇಳಿಕೆಯು ಪಾಕಿಸ್ತಾನದ ಬಗ್ಗೆ ಬಿಜೆಪಿಗಿರುವ ಒಲವನ್ನು ಬಹಿರಂಗಪಡಿಸಿದೆ ಎಂದು ಆರೋಪಿಸಿರುವ ಅವರು, ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ–ಪಾಕಿಸ್ತಾನ ಒಂದೇ ಡಿಎನ್‌ಎ: ಎಎಪಿ ಟೀಕೆ
ಈ ವಿವಾದಕ್ಕೆ ಆಮ್ ಆದ್ಮಿ ಪಕ್ಷದ ನಾಯಕರೂ ಧ್ವನಿಗೂಡಿಸಿದ್ದಾರೆ. ದಿಲ್ಲಿ ಎಎಪಿ ಘಟಕದೊಂದಿಗೆ ಗುರುತಿಸಿಕೊಂಡಿರುವ ಯುವ ಘಟಕದ ರಾಜ್ಯಾಧ್ಯಕ್ಷ ರಮೇಶ್ ಮಟಿಯಾಲ ಹಾಗೂ ಎಎಪಿ ನಾಯಕ ವಿನಯ್ ಮಹಾಬಲ್ ಮಿಶ್ರಾ ಅವರು ರಾಥೋರ್ ಅವರ ಭಾಷಣದ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇದೇ ವೇಳೆ, ಬಿಜೆಪಿ ಮತ್ತು ಪಾಕಿಸ್ತಾನದ ನಡುವೆ ಸೈದ್ಧಾಂತಿಕ ಸಾಮ್ಯತೆಯಿದೆ ಎಂದು ಆರೋಪಿಸಿರುವ ಎಎಪಿ ಉತ್ತರ ಪ್ರದೇಶ ಘಟಕದ ಉಪಾಧ್ಯಕ್ಷ ರಾಮ್ ಗುಪ್ತಾ, ರಾಥೋರ್ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.

“ಇನ್ನೂ ಯಾರಿಗಾದರೂ ಅನುಮಾನವಿದೆಯೇ? ಬಿಜೆಪಿ ಮತ್ತು ಪಾಕಿಸ್ತಾನ ಎರಡೂ ಒಂದೇ ಡಿಎನ್‌ಎ ಹೊಂದಿವೆ. ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ನಾವು ಪಾಕಿಸ್ತಾನದ ಪರವಾಗಿ ನಿಲ್ಲುತ್ತೇವೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ಹೇಳಿದ್ದಾರೆ” ಎಂದು ಅವರು ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದಾರೆ.

ರಾಥೋರ್ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತ್ತು ಎಎಪಿ ನಾಯಕರು ಬಿಜೆಪಿಯನ್ನು ಗುರಿಯಾಗಿಸಿಕೊಂಡಿದ್ದು, ಈ ವಿಚಾರ ರಾಜಕೀಯ ವಲಯದಲ್ಲಿ ವಾಗ್ವಾದಕ್ಕೆ ಕಾರಣವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading