ಅಪರಾಧ
ಹಾಸನ : ತಾಯಿ ಮಕ್ಕಳ ನಿಗೂಢ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ – ಹೊಸ ವರ್ಷ ಆಚರಣೆಗೆಂದು ಕರೆಸಿಕೊಂಡಿದ ಇನಿಯನೇ ಹಂತಕ – ಗ್ಯಾಸ್ ಲೀಕ್ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದರೂ ಸಿಕ್ಕಿ ಹಾಕಿಕೊಂಡ
ಹಾಸನ, ಜ.07: ಹಾಸನದ ಬಾಡಿಗೆ ಮನೆಯೊಂದರಲ್ಲಿ ವಾರದ ಹಿಂದೆ ನಡೆದಿದ್ದ ತಾಯಿ ಮತ್ತು ಮಕ್ಕಳಿಬ್ಬರ (Mother and children murder) ನಿಗೂಢ ಸಾವಿನ ರಹಸ್ಯವನ್ನು (Mysterious Death) ಬೇದಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಆತ್ಮಹತ್ಯೆಯೋ ಕೊಲೆಯೋ ಎಂಬ ಅನುಮಾನ ಮೂಡಿಸಿದ್ದ ಈ ಮೂವರ ಸಾವಿನ ಪ್ರಕರಣದ ಹಿಂದಿನ ರೂವಾರಿ ಮಹಿಳೆಯ ಆಪ್ತ ಸ್ನೇಹಿತ (Close Friend) ಎಂಬ ವಿಚಾರವು ತನಿಖೆ ನಡೆಸುತ್ತಿರುವ ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ವಿಜಯಪುರ ಮೂಲದ ನಿಂಗಪ್ಪ ಕಾಗವಾಡ ಹಂತಕ. ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ತೀರ್ಥಪ್ರಸಾದ್ ರವರ ಪತ್ನಿ ಶಿವಮ್ಮ ಹಾಗೂ ಅವರಿಬ್ಬರ ಮಕ್ಕಳು ಪವನ್(10) ಹಾಗೂ ಸಿಂಚನಾ(8)ಕೊಲೆಯಾದವರು. ಪತಿ ಇಲ್ಲದ ವೇಳೆ ಗೆಳೆಯ ನಿಂಗಪ್ಪನನ್ನು ಶಿವಮ್ಮ ಮನೆಗೆ ಕರೆಸಿಕೊಂಡಿದ್ದಾಳೆ. ಈ ವೇಳೆ ಅವರಿಬ್ಬರ ಮಧ್ಯೆ ನಡೆದ ಜಗಳ ಮೂವರ ಹತ್ಯೆಯಲ್ಲಿ ಪರ್ಯಾಯವಸನವಾಗಿದೆ.
ಏನಿದು ಪ್ರಕರಣ ?
ಜ.01ರಂದು ಹಾಸನ ಹೊರವಲಯದ ದಾಸರಕೊಪ್ಪಲಿನ ಮನೆಯೊಂದರಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಿಗೂಡ ರೀತಿಯಲ್ಲಿ ಮೃತಪಟ್ಟಿದ್ದರು. ಬೇಕರಿ ಕೆಲಸಕ್ಕೆ ತುಮಕೂರಿಗೆ ಹೋಗಿದ್ದ ಪತಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸಂಜೆ ವೇಳೆ ಗಂಡ ಮನೆಗೆ ಬಂದಿದ್ದು ಈ ವೇಳೆ ಎಷ್ಟು ಬಾಗಿಲು ಬಡಿದರೂ ಮನೆಯ ಬಾಗಿಲು ತೆರೆದಿರಲಿಲ್ಲ. ಪತ್ನಿಯ ಫೋನ್ ಕೂಡ ಸ್ವಿಚ್ಚ್ ಆಫ್ ಆಗಿತ್ತು. ಹೀಗಾಗಿ ರಾತ್ರಿಯಿಡಿ ಮನೆ ಬಾಗಿಲಲ್ಲಿ ಮಲಗಿದ್ದ ಪತಿ ಬೆಳಿಗ್ಗೆ ಬೇರೆ ಕೀ ಮಾಡಿಸಿ ಬಾಗಿಲು ತೆರೆದಾಗ ಮೂವರು ಮೃತಪಟ್ಟಿರುವುದು ಕಂಡು ಬಂದಿತ್ತು. ಅಲ್ಲದೇ ಮನೆಯ ಗ್ಯಾಸ್ ಪೈಪ್ ಕೂಡ ಲಿಕೇಜ್ ಆಗಿತ್ತು. ಹೀಗಾಗಿ ಶಿವಮ್ಮ ಅವರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕೆ ವ್ಯಕ್ತವಾಗಿತ್ತು.

ಆದರೇ ಕ್ರೈಮ್ ಸೀನ್ ಗಮನಿಸಿದ ಪೊಲೀಸರಿಗೆ ಬೇರೆಯೇ ಅನುಮಾನ ಮೂಡಿತ್ತು. ಹೀಗಾಗಿ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ನಿಂಗಪ್ಪ ಕಾಗವಾಡನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ನಡೆಸಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಶಿವಮ್ಮನನ್ನು ಹಣಕ್ಕಾಗಿ ಪೀಡಿಸಿದ್ದು ಆಕೆ ನೀಡಲು ನಿರಾಕರಿಸಿದ್ದಾಳೆ . ಕ್ರೋಧಗೊಂಡ ಆರೋಪಿ ಶಿವಮ್ಮ ಮತ್ತು ಮಕ್ಕಳನ್ನು ಹತ್ಯೆ ಮಾಡಿದ್ದ. ಬಳಿಕ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸಾವನ್ನಪ್ಪಿರುವುದಾಗಿ ಬಿಂಬಿಸಲು ಅಡುಗೆ ಸಿಲಿಂಡರ್ ಪೈಪ್ ತೆಗೆದಿದ್ದಾನೆ. ಕೊನೆಗೆ ಶಿವಮ್ಮನ ಕೊರಳಲ್ಲಿದ್ದ ತಾಳಿ ಹಾಗೂ ಮೊಬೈಲ್ ಹಿಡಿದುಕೊಂಡು ಪರಾರಿಯಾಗಿದ್ದ
ಮೃತ ಶಿವಮ್ಮ ಹಾಗೂ ಪತಿ ತೀರ್ಥಪ್ರಸಾದ್ ಅವರು ಬಿಜಾಪುರದಲ್ಲಿ ಬೇಕರಿ ಇಟ್ಟಿದ್ದರು. ಆಗ ಪರಿಚಯವಾದವನೇ ಆರೋಪಿ ನಿಂಗಪ್ಪ ಕಾಗಾವಾಡ. ಪತಿಗೆ ಆತನನ್ನು ಕಾರು ಚಾಲಕ ಎಂದೆ ಮಹಿಳೆ ನಂಬಿಸಿದ್ದಳು. ಕೆಲ ಸಮಯದ ತೀರ್ಥ ನಡೆಸುತ್ತಿದ್ದ ಬೇಕರಿ ಲಾಸ್ ಆಗಿದೆ. ಹೀಗಾಗಿ ಆತ ತುಮಕೂರಿನ ಬೇಕರಿಯೊಂದಕ್ಕೆ ಕೆಲಕ್ಕೆ ಸೇರಿದ್ದ. ಪತ್ನಿ ಮಕ್ಕಳು ಸಮೇತ ಹಾಸನ ದಾಸರಕೊಪ್ಪದಲ್ಲಿ ಬಾಡಿಗೆ ಮನೆಯಲ್ಲಿದ್ದರು. ಕೆಲಸಕ್ಕೆ ತುಮಕೂರಿಗೆ ಹೋಗುತ್ತಿದ್ದ ಪತಿ ಬರುತ್ತಿದ್ದುದ್ದು ತಿಂಗಳಿಗೊಮ್ಮೆ. ಇತ್ತ ತಿಂಗಳಗಟ್ಟಲೇ ಮನೆಯಿಂದ ಪತಿ ದೂರವಿದ್ದರಿಂದ ಶಿವಮ್ಮ ಪ್ರಿಯಕರನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಳು.

ಹೊಸ ವರ್ಷ ಆಚರಣೆಗೆ ಬಂದಿದ್ದ
ಗಂಡ ಬೇಕರಿ ಕೆಲಸಕ್ಕೆ ತುಮಕೂರಿನ ಬೇಕರಿಗೆ ಹೋಗಿದ್ದರಿಂದ ಹೊಸ ವರ್ಷಾಚರಣೆಗೆ ಶಿವಮ್ಮ ತನ್ನ ಸ್ನೇಹಿತನನ್ನು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ ಮೃತ ಶಿವಮ್ಮ ಹಾಗೂ ಆರೋಪಿ ನಡುವೆ ಹಣಕ್ಕೆ ಜಗಳವಾಗಿದ್ದು ಅದು ಮೂವರ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ಕೊಲೆಯ ಹಿಂದಿನ ರಹಸ್ಯ ಬಯಲಾಗಿದೆ. ಗಂಡನಿಲ್ಲದ ವೇಳೆ ಮನೆಗೆ ಬಂದಿದ್ದ ಸ್ನೇಹಿತನೇ ಕೊಲೆ ಮಾಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ರೀಲ್ಸ್ ಸುಂದರಿ ಗೆಳತಿಯನ್ನೇ ಕೊಲೆಗೈದು ತಲೆ ಮರಿಸಿಕೊಂಡಿದ್ದ ಗೆಳೆಯ ಈಗ ಜೈಲು ಸೇರಿದ್ದಾನೆ.
ಅಪರಾಧ
Mangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು, ನ.20: ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗುರುವಾರ ಸಂಜೆ ನಡೆದ ಘಟನೆಯಲ್ಲಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಂಬಂಧಿಕರು ಎನ್ನಲಾದ ಕೆಲವರು ಕಾಲೇಜು ಆವರಣದಲ್ಲೇ ಬಲವಂತವಾಗಿ ಕಾರಿಗೆ ಹತ್ತಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಹಲವು ಯುವಕರು ಸೇರಿಕೊಂಡು ವಿದ್ಯಾರ್ಥಿನಿಯನ್ನು ಎಳೆದು ಕಾರಿನಲ್ಲಿ ಕರೆದೊಯ್ಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ವಯಸ್ಕರಾದ ಬಳಿಕ ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಜೀವನ ನಡೆಸುವ ಹಕ್ಕಿದೆ. ವಿದ್ಯಾರ್ಥಿನಿಯೂ ತನ್ನ ಇಚ್ಛೆಯಂತೆ ಬದುಕಲು ಸ್ವತಂತ್ರಳಾಗಿದ್ದಾಳೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬಸ್ಥರು ಸೇರಿದಂತೆ ಯಾರೇ ಬಲವಂತವಾಗಿ ಕರೆದೊಯ್ದಿದ್ದರೂ ಅದು ಕಾನೂನುಬಾಹಿರವಾಗಿದ್ದು, ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅಪರಾಧ
FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್
ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.
ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.
ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
-
ಬಿಗ್ ನ್ಯೂಸ್22 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ7 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ5 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ5 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ6 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ5 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಸಿನೆಮಾ5 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಆರೋಗ್ಯ5 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















