ಬಿಗ್ ನ್ಯೂಸ್
ಮಂಗಳೂರು : ಮೊಬೈಲ್ ಕದ್ದಿದ್ದನೆಂದು ಮೀನುಗಾರನನ್ನು ತಲೆಕೆಳಗಾಗಿಸಿ ನೇತು ಹಾಕಿ ಹಲ್ಲೆ ನಡೆಸಿದ ಪ್ರಕರಣ – ಆರು ಆರೋಪಿಗಳ ಬಂಧನ
ಮಂಗಳೂರು : ಡಿ 22 :
ಮಂಗಳೂರಿನ ದಕ್ಕೆಯಲ್ಲಿ ಮೀನುಗಾರನೊಬ್ಬನನ್ನು ಹಗ್ಗದಿಂದ ತಲೆಕೆಳಗಾಗಿ ನೇತಾಡಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಆರು ಜನ ಆರೋಪಿಗಳನ್ನು ಡಿ .22 ರಂದು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ದಕ್ಕೆಯಲ್ಲಿ ಬೋಟ್ ವೊಂದರಲ್ಲಿ ಮೀನುಗಾರಿಕೆ ಕಾರ್ಮಿಕನಾಗಿ ದುಡಿಯುತ್ತಿರುವ ಆಂದ್ರಪ್ರದೇಶದ ಪ್ರಕಾಶಂ ಜಿಲ್ಲೆಯ, ಕಾಟಮಾರಿ ಪಾಲೇಮ್ ನಿವಾಸಿ ವೈಲ ಶೀನು ( 32) ಹಲ್ಲೆಗೆ ಒಳಗಾದ ವ್ಯಕ್ತಿ . ಡಿ. 15 ರಂದು ಈತನನ್ನು ಅಪಹರಿಸಿ ಹಲ್ಲೆ ಕೃತ್ಯ ನಡೆಸಲಾಗಿತ್ತು.
ಆಂದ್ರಪ್ರದೇಶದ ಕರಪಿಂಗಾರ ರವಿ, ಕೊಂಡೂರು ಪೊಲಯ್ಯ, ಅವುಲ
ರಾಜಕುಮಾರ್, ಕಾಟಿಂಗರಿ ಮನೋಹರ್, ವುಟುಕುರಿ ಜಾಲಯ ಹಾಗೂ ಪಲಯ ಕಾವೇರಿ
ಗೋವಿಂದಯ್ಯ ರವರು ಬಂಧಿತ ಆರೋಪಿಗಳು. ಈ ಎಲ್ಲ ಆರೋಪಿಗಳು ಮಂಗಳೂರಿನ ದಕ್ಕೆಯಲ್ಲಿ ಮೀನುಗಾರಿಕಾ ಬೋಟ್ ನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ.
ಡಿ. 14 ರಂದು ರಾತ್ರಿ ಸಂತೃಸ್ತ ವೈಲಾ ಶೀನು ಮಂಗಳೂರು ದಕ್ಕೆಯಲ್ಲಿ ನಿಲ್ಲಿಸಿದ “OOHN
SHAILESH 2″ ಎಂಬ ಬೋಟಿಗೆ ಹೋಗಿ ವಾಪಾಸು ತಾನು ಕೆಲಸ ಮಾಡುವ ಬೋಟಿನಲ್ಲಿ ಬಂದು
ಮಲಗಿರುತ್ತಾನೆ.
ಮರುದಿನ ಡಿ. 15 ರಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ “JOHN SHAILESH 2” ಬೋಟಿನಲ್ಲಿ ಕೆಲಸ
ಮಾಡುತ್ತಿರುವ ಈ ಪ್ರಕರಣದ ಆರೋಪಿಗಳಾಗಿರುವ ಆಂದ್ರಪ್ರದೇಶದ ಕರಪಿಂಗಾರ ರವಿ, ಕೊಂಡೂರು ಪೊಲಯ್ಯ, ಅವುಲ
ರಾಜಕುಮಾರ್, ಕಾಟಿಂಗರಿ ಮನೋಹರ್, ವುಟುಕುರಿ ಜಾಲಯ ಹಾಗೂ ಪಲಯ ಕಾವೇರಿ
ಗೋವಿಂದಯ್ಯ ರವರು ವ್ಯಲ ಶೀನು ರವರಲ್ಲಿಗೆ ಬಂದು, “ನಿನ್ನೆ ರಾತ್ರಿ ಬೋಟಿಗೆ ಬಂದವನು
ಮೊಬೈಲ್ ಕಳ್ಳತನ ಮಾಡಿದ್ದೀಯಾ ಎಂದು ಆರೋಪಿಸಿ ವೈಲ ಶೀನು
ನನ್ನು ಅಪಹರಿಸಿದ್ದಾರೆ.
ನಂತರ ಶೀನು ಅವರನ್ನು “JOHN SHAILESH 2” ಬೋಟಿಗೆ ಕರೆದು ಕೊಂಡು ಹೋಗಿದ್ದಾರೆ. ಬಳಿಕ ಆರೋಪಿಗಳು ಸೇರಿಕೊಂಡು
ವೈಲ ಶಿನು ರವರ ಕೈ ಕಾಲುಗಳನ್ನು ಹಿಡಿದು, ಬೊಬ್ಬೆ ಹಾಕದಂತೆ ಬಾಯಿ ಮುಚ್ಚಿ, ಎರಡೂ
ಕಾಲುಗಳನ್ನು ಜೋಡಿಸಿ ಹಗ್ಗದಿಂದ ಕಟ್ಟಿ, ಬಳಿಕ ಕಾಲಿಗೆ ಕಟ್ಟಿದ ಹಗ್ಗವನ್ನು ಬೋಟ್ ನ
ಆರಿಯ ಕೂಕೈಗೆ ಸಿಕ್ಕಿಸಿ ತಲೆ ಕೆಳಗಡೆ ಮಾಡಿ ನೇತು ಹಾಕಿದ್ದಾರೆ.

ನಂತರ ನೇತಾಡುತ್ತಿದ್ದ ವೈಲ ಶೀನು ಅವರ ಕೈಗಳಿಗೆ
ಮರದ ರೀಪಿನಿಂದ ಹಾಗೂ ಕಬ್ಬಿಣದ ಸರಳಪಳಿಯಿಂದ ಹಲ್ಲೆ ನಡೆಸಿ ಕೊಲೆ ನಡೆಸಲು
ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ
ಆರೋಪಿಗಳು ವೈಲು ಶೀನುವಿನ ಕಾಲುಗಳನ್ನು ಕಟ್ಟಿ ಸಮುದ್ರಕ್ಕೆ
ಬಿಸಾಡಿ ಕೊಲೆ ನಡೆಸುವ ಬಗ್ಗೆ ಮಾತುಕತೆ ನಡೆಸುತ್ತಿದ್ದ ವೇಳೆ ಸಾರ್ವಜನಿಕರು ಬಂದು ವೈಲು
ಶೀನುವನ್ನು ರಕ್ಷಿಸಿರುತ್ತಾರೆ.
ನಿನ್ನೆಯಿಂದ ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಳಿಕ ಡಿ. 21 ರಂದು ರಾತ್ರಿ ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ
ಆರೋಪಿಗಳ ವಿರುದ್ಧ ಅಪಹರಣ ಹಾಗೂ ಕೊಲೆಯತ್ನ ಪ್ರಕರಣ ದಾಖಲಾಗಿರುತ್ತದೆ.
ನಿನ್ನೆ ತಡ ರಾತ್ರಿ ಕಾರ್ಯಚರಣೆ ನಡೆಸಿದ
ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸರು ಮಂಗಳೂರು ದಕ್ಕೆ ಬಳಿಯಿಂದ
ಆರೋಪಿಗಳನ್ನು ಬಂಧಿಸಿವ ಕೃತ್ಯಕ್ಕೆ ಬಳಸಿದ ಮರದ ರೀಪು, ಕಬ್ಬಿಣದ ಸರಪಳಿ, ಹಗ್ಯ
ಹಾಗೂ ಮೊಬೈಲ್ ಹ್ಯಾಂಡ್ ಸೆಟ್ಟನ್ನು ವಶಕ್ಕೆ ಪಡೆದಿದ್ದಾರೆ.
ಅಂತರ ರಾಜ್ಯ
L.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ದಿಲ್ಲಿಯ ಜಸೋಲಾ ವಿಹಾರ್ನಲ್ಲಿರುವ ಆಸ್ಪತ್ರೆಗೆ ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ. ಅಡ್ವಾಣಿ ಅವರು 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.
ಮಂಗಳೂರು
MRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳ ಪೈಕಿ ಒಬ್ಬರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಅ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಎಂಆರ್ಪಿಎಲ್ನ ಫೇಸ್-3ರ ಸಿಎಚ್ಟಿಯು (Coker Hydro Treating Unit) ಪ್ಲಾಂಟ್ನಲ್ಲಿ ಕಳೆದ ಸೆಪ್ಟೆಂಬರ್ 30ರಂದು ಭಾರೀ ಸ್ಫೋಟ ಸಂಭವಿಸಿತ್ತು. ಅಂದು ಸಂಭವಿಸಿದ ದುರಂತದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು.
ಅದೇ ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯು (ICU) ಘಟಕದಲ್ಲಿ ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರ ದೇಹವನ್ನು ಇಂದು ಸಂಜೆಯ ವೇಳೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ (Post-mortem) ನಡೆಸಲಾಗುವುದು. ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳೀಯ
Kumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಚಾರಣಕ್ಕೆ ಆಗಮಿಸುವವರು ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಚಾರಣದ ವೇಳೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ.
ಚಾರಣಿಗರು ನಿಗದಿತ ಸಮಯಕ್ಕೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದಲ್ಲಿರುವ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಪ್ರಕೃತಿಯ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಚಾರಣದ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.
ಇನ್ನೊಂದೆಡೆ, ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ಮೂಲಕ ಕುಮಾರ ಪರ್ವತ ಚಾರಣ ಆರಂಭಿಸಲು ಈವರೆಗೆ ದಿನಾಂಕ ನಿಗದಿಯಾಗಿಲ್ಲ.
-
ನಿಧನ ವಾರ್ತೆ15 hours agoPuttur-ಮುಕ್ರಂಪಾಡಿಯಲ್ಲಿ ಸ್ಕೂಟರ್–ರಿಕ್ಷಾ ಡಿಕ್ಕಿ: ಪುತ್ತೂರು ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು
-
ಸ್ಥಳೀಯ15 hours agoKumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
-
ಅಪರಾಧ15 hours agoHigh Court-ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಸೇರಿ 8 ಆರೋಪಿಗಳ ಜಾಮೀನಿಗೆ ಹೈಕೋರ್ಟ್ ತಡೆ
-
ಮೈಸೂರು9 hours agoMysuru-ಮೈಸೂರು ದಸರಾ ವೇಳೆ 10 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ
-
ಮಂಗಳೂರು9 hours agoMRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
-
ಅಪರಾಧ8 hours agoPuttur-ಪುತ್ತೂರು: ಮಹಿಳೆಯ ಮೇಲೆ ಹಲ್ಲೆ, ಮಾನಭಂಗ ಪ್ರಕರಣ; ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
-
ಅಪರಾಧ9 hours agoMangalore:-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ
-
ಅಪರಾಧ7 hours agoUppinangadi-ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ ನಗದು, ಮೊಬೈಲ್ ದರೋಡೆ; ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು


















