ಸುಳ್ಯ
Leopard Sullia : ಅರಂತೋಡಿನ ಒಂದೇ ಮನೆಯ ನಾಲ್ಕು ಸಾಕು ಪ್ರಾಣಿಗಳನ್ನು ಕೊಂದು ಹಾಕಿದ ಚಿರತೆ
ಸುಳ್ಯ: ತೋಟಕ್ಕೆ ಮೇಯಲು ಹೋಗಿದ್ದ ದನದ ಕರು ಸಹಿತ ಒಟ್ಟು ನಾಲ್ಕು ಜಾನುವಾರುಗಳು ಚಿರತೆಗೆ ಬಲಿಯಾದ ಘಟನೆ ಸುಳ್ಯ ತಾಲೊಕಿನ ಅರಂತೋಡು ಗ್ರಾಮದಲ್ಲಿ ನಡೆದಿದೆ . ಇಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಹಾವಳಿ ಇಡುತ್ತಿದ್ದು ಗ್ರಾಮಸ್ಥರು ಭಯದ ನೆರಳಲ್ಲಿ ಬದುಕುತ್ತಿದ್ದಾರೆ.
ಅರಂತೋಡು ಗ್ರಾಮದ ಅಡ್ಕಬಳೆಯ ಲೀಲಾವತಿ ಎಂಬವರ ದನದ ಕರುವನ್ನು ಮೇಯಲು ಬಿಟ್ಟಿದ್ದು, ಸಂಜೆಯಾದರೂ, ಕರು ಬಾರದೇ ಇದ್ದ ಕಾರಣ ಮನೆಯವರು ತೋಟಕ್ಕೆ ಹೋಗಿ ನೋಡಿದ ವೇಳೆ ಕರುವಿನ ಮೃತದೇಹ ಅರ್ಧ ತಿಂದ ರೀತಿಯಲ್ಲಿ ಪತ್ತೆಯಾಗಿದೆ.
ಕಳೆದ ಎರಡು ದಿನಗಳ ಹಿಂದೆ ಇದೇ ಮನೆಯ ಹಟ್ಟಿಯಲ್ಲಿ ಸಾಕುತ್ತಿದ್ದ ಮೂರು ಆಡುಗಳನ್ನು ರಾತ್ರಿ ಸಮಯದಲ್ಲಿ ಚಿರತೆ ಕೊಂದು ಹಾಕಿತ್ತು. ಈ ಪೈಕಿ ಓಮದು ಆಡನ್ನು ತಿಂದು ಹಾಕಿತ್ತು. ಚಿರತೆ ಹಾವಳಿಯಿಂದ, ಸಾರ್ವಜನಿಕರು ಭಯಬೀತರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯವರು ಭೇಟಿ ನೀಡಿರುವುದಾಗಿ ತಿಳಿದುಬಂದಿದೆ.


ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ಸ್ಥಳೀಯ1 hour agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ2 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಶಿಕ್ಷಣ2 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಬಿಗ್ ನ್ಯೂಸ್21 minutes agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!















