ಉಡುಪಿ
Kateel yakshgana Mela ಮಕರ ಸಂಕ್ರಾತಿಯ ಬಳಿಕ ಕಟೀಲಿನ 6 ಯಕ್ಷಗಾನ ಮೇಳಗಳ ಕಾಲಮಿತಿ ತೆರವು – ರಾತ್ರಿ ಪೂರ್ತಿ ಪ್ರದರ್ಶನಗೊಳ್ಳಲಿದೆ ಆಟ – ಆಡಳಿತ ಮಂಡಳಿಯ ಈ ತೀರ್ಮಾನಕ್ಕೆ ಕಾರಣವೇನು ಗೊತ್ತೆ ?
ಮಂಗಳೂರು: ಜಿಲ್ಲಾಡಳಿತದ ನಿರ್ದೇಶನದಿಂದಾಗಿ ಕಳೆದೊಂದು ವರ್ಷದಿಂದ ಕಾಲ ಮಿತಿ ಪ್ರದರ್ಶನ ನೀಡುತ್ತಿದ್ದ ತೆಂಕುತಿಟ್ಟಿನ ಪ್ರಸಿದ್ದ ಯಕ್ಷ ಗಾನ ಮೇಳ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳು ಮುಂದಿನ ದಿನಗಳಲ್ಲಿ ಈ ಹಿಂದಿನಂತೆ ರಾತ್ರಿಯಿಂದ ಮುಂಜಾನೆವರೆಗೆ ಪ್ರದರ್ಶಿಸಲಿದೆ. ಈ ಮೂಲಕ ಯಕ್ಷಗಾನದ ಗತ ಕಾಲದ ವೈಭವ ಮರಳಿ ಕಾಣಿಸಲಿದೆ.
ಯಕ್ಷಗಾನ ಮೊದಲಿನಿಂದಲೂ ರಾತ್ರಿಯಿಂದ ನಸುಕಿನ ವೇಳೆಯವರೆಗೆ ನಡೆಯುತ್ತಿದ್ದ ಕಲಾ ಪ್ರಕಾರ . ಆದರೇ ಬಳಿಕದ ದಿನಗಳಲ್ಲಿ ಕೆಲವು ಪ್ರಸಿದ್ದ ಮೇಳಗಳು ಇದನ್ನು ಕಾಲಮಿತಿಗೆ ಒಳಪಡಿಸಿದವು. ಆದರೇ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಮಾತ್ರ ಕಾಲಮಿತಿಗೆ ಒಳಪಡದೆ ರಾತ್ರಿ ಪೂರ್ತಿ ಪ್ರದರ್ಶನ ನೀಡುತ್ತಿದ್ದವು. ಆದರೇ ಜಿಲ್ಲಾಡಳಿತ ಶಬ್ದಮಾಲಿನ್ಯ ನಿಯಂತ್ರಣ ನಿಯಮಗಳ ಪ್ರಕಾರ ರಾತ್ರಿ 12.30ರ ಬಳಿಕ ಹೆಚ್ಚು ಶಬ್ಧ ಕಾರ್ಯಕ್ರಮಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಇದು ಯಕ್ಷಗಾನ ಪ್ರದರ್ಶನದ ಮೇಲೂ ಪರಿಣಾಮ ಬೀರಿತು.
ಈ ಬಗ್ಗೆ ಕಟೀಲು ದೇವಸ್ಥಾನದ ಭಕ್ತರೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯವು ಇತ್ತೀಚೆಗೆ ರಾತ್ರಿಯಿಡಿ ಯಕ್ಷಗಾನ ಪ್ರದರ್ಶನಕ್ಕೆ ಪೂರಕವಾಗಿ ತೀರ್ಪು ನೀಡಿದ ಹಿನ್ನಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಈ ನಿರ್ಧಾರವನ್ನು ಕೈಗೊಂಡಿದೆ. ಮಕರ ಸಂಕ್ರಾಂತಿಯ (ಜ.14) ಬಳಿಕ ಹರಕೆಯ ಯಕ್ಷಗಾನವನ್ನು ರಾತ್ರಿ ಪೂರ್ತಿ ಷರತ್ತುಬದ್ಧವಾಗಿ ಪ್ರದರ್ಶನಕ್ಕೆ ಕ್ರಮಕೈಗೊಳ್ಳುವಂತೆ ಮೇಳಗಳ ವ್ಯವಸ್ಥಾಪಕರಿಗೆ ಆಡಳಿತ ಸಮಿತಿಯು ನಿರ್ದೇಶನ ನೀಡಿದೆ.
ನಿರ್ಬಂಧ
ಯಕ್ಷಗಾನ ಪ್ರದರ್ಶನದ ಅವಧಿಯನ್ನು ಸಂಜೆ 5 ರಿಂದ ಮಧ್ಯರಾತ್ರಿ 12.30ಕ್ಕೆ ಸೀಮಿತಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ 2022ರ ನವೆಂಬರ್ 15ರಂದು ಆದೇಶ ಮಾಡಿದ್ದರು. ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಧ್ವನಿಯು ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳ ನಿಗದಿತ ಮಿತಿಗಿಂತ ಹೆಚ್ಚು ಇರುತ್ತದೆ ಎಂಬ ಕಾರಣಕ್ಕೆ ಆಗಿನ ಜಿಲ್ಲಾಧಿಕಾರಿ ರಾತ್ರಿ 12.30ರ ಬಳಿಕ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ವಿಧಿಸಿದ್ದರು.
ಭಕ್ತರ ಹೋರಾಟ
ಜಿಲ್ಲಾಡಳಿತದ ಆದೇಶವನ್ನು ಪ್ರಶ್ನಿಸಿ ಕಟೀಲು ದೇವಸ್ಥಾನದ ಭಕ್ತರಲ್ಲಿ ಒಬ್ಬರಾದ ಕೃಷ್ಣಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಕಟೀಲು ಮೇಳಗಳ ಯಕ್ಷಗಾನ ಮೊದಲಿನಂತೆಯೇ ರಾತ್ರಿಯಿಂದ ಬೆಳಗಿನವರೆಗೆ ನಡೆಯಬೇಕು ಎಂದು ಒತ್ತಾಯಿಸಿ ಭಕ್ತರು ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಅಲ್ಲಲ್ಲಿ ಸಭೆ ನಡೆಸಿ ಒತ್ತಾಯಿಸಿದ್ದರು. 2022ರ ನ.6ರಂದು ಬಜಪೆಯ ಶಾರದಾ ಶಕ್ತಿ ಮಂಟಪದಿಂದ ಕಟೀಲು ಕ್ಷೇತ್ರದವರೆಗೆ ‘ಕಟೀಲಮ್ಮನೆಡೆ ಭಕ್ತರ ನಡೆ’ ಪಾದಯಾತ್ರೆ ಹಮ್ಮಿಕೊಂಡು ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದರು. ಬಳಿಕದ ದಿನಗಳಲ್ಲಿ ಈ ಕುರಿತು ಕಾನೂನು ಹೋರಾಟವನ್ನೂ ನಡೆಸಿದ್ದರು.
ನ್ಯಾಯಾಲಯ ಏನೂ ಹೇಳಿತು ?
ಶಬ್ದಮಾಲಿನ್ಯ ನಿಯಂತ್ರಣ ನಿಯಮಗಳ ಪ್ರಕಾರ ವಿಧಿಸಿರುವ ಮಿತಿಗಳನ್ನು ಅನುಸರಿಸಿ ರಾತ್ರಿ ಪೂರ್ತಿ ಯಕ್ಷಗಾನ ಪ್ರದರ್ಶನ ಏರ್ಪಡಿಸುವುದಕ್ಕೆ ಅಭ್ಯಂತರ ಇಲ್ಲ ಎಂದು ಹೆಚ್ಚುವರಿ ಅಡ್ವಕೇಟ್ ಜನರಲ್ ಅವರು ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ಗೆ ತಿಳಿಸಿದ್ದರು. ಈ ನಿಯಮಗಳಿಗೆ ಅನುಸಾರವಾಗಿ ಯಕ್ಷಗಾನ ಪ್ರದರ್ಶಿಸಲು ಕಕ್ಷಿದಾರರು ಬದ್ಧರಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು.
‘ಯಕ್ಷಗಾನ ಪ್ರದರ್ಶನವನ್ನು ಕೋವಿಡ್ಗೆ ಮುನ್ನ ಇದ್ದಂತೆ ರಾತ್ರಿ ಪೂರ್ತಿ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಅನುಮತಿ ನೀಡಬಹುದು. ನಿಯಮ ಉಲ್ಲಂಘನೆ ಆದರೆ ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳಬಹುದು’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಬಿ.ನಾಗಪ್ರಸನ್ನ ಅವರು ತೀರ್ಪು ನೀಡಿದ್ದರು.
*ಕಟೀಲು ಮೇಳಗಳ ಯಕ್ಷಗಾನಗಳು ಹರಕೆಯ ರೂಪದಲ್ಲಿ ನಡೆಯುವಂತಹವು. ಇಲ್ಲಿ ಮನರಂಜನೆಯ ವಿಚಾರ ಗೌಣ. ಯಕ್ಷಗಾನ ಪ್ರದರ್ಶನಕ್ಕೆ ಎಷ್ಟು ಪ್ರೇಕ್ಷಕರು ಇರುತ್ತಾರೆ ಎಂಬುದೂ ಇಲ್ಲಿ ಮುಖ್ಯವಲ್ಲ. ಪರಂಪರಾನುಗತವಾಗಿ ನಡೆದುಕೊಂಡು ಬಂದಂತೆ ಹರಕೆ ಹೊತ್ತ ಭಕ್ತರು ರಾತ್ರಿ ಪೂರ್ತಿ ಯಕ್ಷಗಾನ ನಡೆಸಿ ದೇವಿಯ ಕೃಪೆಗೆ ಪಾತ್ರರಾಗುವುದು ಮುಖ್ಯ. ಭಕ್ತರಿಂದ ಬೇಡಿಕೆ ಬಂದಿದ್ದರಿಂದ ಹಾಗೂ ರಾತ್ರಿಯಿಂದ ಬೆಳಗಿನವರೆಗೆ ಯಕ್ಷಗಾನ ಪ್ರದರ್ಶಿಸಲು ಇದ್ದ ಅಡೆತಡೆಗಳು ನಿವಾರಣೆ ಆಗಿದ್ದರಿಂದ ಮೊದಲಿನಂತೆ ಕಟೀಲಿನ ಆರೂ ಮೇಳಗಳ ಯಕ್ಷಗಾನವನ್ನು ರಾತ್ರಿ ಪೂರ್ತಿ ನಡೆಸಲು ತೀರ್ಮಾನಿಸಿದ್ದೇವೆ’ ಎಂದು ಎಂದು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಹಾಗೂ ಆನುವಂಶಿಕ ಮೊತ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಮಂಗಳೂರು15 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ20 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಬಿಗ್ ನ್ಯೂಸ್22 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ15 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ20 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ21 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ21 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ21 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















