Connect with us

ರಾಷ್ಟ್ರೀಯ

Suchana Seth Arrest : ಗೋವಾದಲ್ಲಿ 4 ವರ್ಷದ ಮಗನ ಕೊಂದು ಮೃತದೇಹವನ್ನು ಕಾರಿನಲ್ಲಿ ಸಾಗಿಸುತ್ತಿದ್ದ AI ಸ್ಟಾರ್ಟ್ ಅಪ್ ಸಿಇಓ ಕರ್ನಾಟಕದಲ್ಲಿ ಬಂಧನ – ಈಕೆ ಪೊಲೀಸರ ಕೈಗೆ ಸಿಕ್ಕಿ ಬಿದ್ದದ್ದೇ ರಣ ರೋಚಕ

Published

on



Ad Widget

Ad Widget

Ad Widget

Ad Widget

ಗೋವಾದ ಹೋಟೆಲ್ವೊಂದರಲ್ಲಿ ಮಗುವನ್ನು ಕೊಂದು (Murder) ಶವವನ್ನು ಸೂಟ್ ಕೇಸ್ ನಲ್ಲಿ ಬಚ್ಚಿಟ್ಟು ಕಾರಿನಲ್ಲಿ ಸಾಗಿಸಿದ ಆರೋಪದಲ್ಲಿ ಮಹಿಳಾ ಉದ್ಯಮಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. 39ರ ಹರೆಯದ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ (Suchana Seth) ಬಂಧಿತೆ. ಈಕೆ ಕೃತಕ ಬುದ್ದಿಮತ್ತೆ ಸ್ಟಾರ್ಟ್ ಅಪ್ ಕಂಪನಿ ಮೈಂಡ್ ಫುಲ್ ಎಐ ಲ್ಯಾಬ್ಸ್ ಸಂಸ್ಥೆಯ ಸಹ ಸಂಸ್ಥಾಪಕಿ. ಈಕೆಯನ್ನು ಬಾಲಕನ ಶವದ ಜತೆಗೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ

Ad Widget

Ad Widget

Ad Widget

Ad Widget


ಸುಚನಾ ಸೇಥ್ ಇತ್ತೀಚೆಗೆ ಗೋವಾಗೆ ಪ್ರವಾಸಕ್ಕೆ ಹೋಗಿದ್ದು, ಅಲ್ಲಿಂದ ವಾಪಸ್ ಬರುವಾಗ ಮಗನ ಮೃತ ದೇಹದ ಜೊತೆಗೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಕಳೆದ ಶನಿವಾರ ಜನವರಿ 6 ರಂದು ಉತ್ತರ ಗೋವಾದ ಕಾಂಡೋಲಿಮ್ನಲ್ಲಿ ಇರುವ ಸೋಲ್ ಬನ್ಯಾನ್ ಗ್ರಾಂಡೆ ಹೋಟೆಲ್ ಗೆ ಸುಚನಾ ಸೇಥ್ 4 ವರ್ಷದ ಮಗನ ಜತೆ ಆಗಮಿಸಿ ಕೊಠಡಿ ಪಡೆದುಕೊಂಡಿದ್ದರು.

Ad Widget

Ad Widget

Ad Widget alt="Ad Widget"/>

Ad Widget


ಆದರೇ ಸೋಮವಾರ ರೂಂನಿಂದ ಚೆಕ್ ಔಟ್ ಆಗುವಾಗ ಮಾತ್ರ ಅವರೊಬ್ಬರೇ ಇದ್ದದನ್ನು ಗಮನಿಸಿದ ಹೊಟೇಲ್ ಸಿಬ್ಬಂದಿಗೆ ಅನುಮಾನ ಮೂಡಿದೆ. ಚೆಕ್ ಔಟ್ ಆದ ಆಕೆ ಹೋಟೆಲ್ ಸಿಬ್ಬಂದಿ ಬಳಿ ಬೆಂಗಳೂರಿಗೆ ತೆರಳಲು ಟ್ಯಾಕ್ಸಿ ಬುಕ್ ಮಾಡಲು ಹೇಳಿದರು. ಸಾಮಾನ್ಯವಾಗಿ ಗ್ರಾಹಕರು ಗೋವಾ ಏರ್ಪೋರ್ಟ್ಗೆ ತೆರಳಲು ಟ್ಯಾಕ್ಸಿ ಬುಕ್ ಮಾಡಲು ಹೇಳುತ್ತಾರೆ. ಆದರೆ, ಸುಚನಾ ಸೇಥ್ ವಿಮಾನದ ಮೂಲಕ ಪ್ರಯಾಣಿಸದೇ ನೇರವಾಗಿ ಬೆಂಗಳೂರಿಗೆ ಟ್ಯಾಕ್ಸಿಯಲ್ಲೇ ತೆರಳೋದಾಗಿ ಹೇಳಿದ್ದು ಹಾಗೂ ಜತೆಗಿದ್ದ ಮಗ ಇಲ್ಲದಿರುವುದು ಸಿಬ್ಬಂದಿಗಳ ಮನಸ್ಸಿನಲ್ಲಿ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

Ad Widget

Ad Widget <> Ad Widget


ಹೀಗಾಗಿ ತಕ್ಷಣ ಸುಚೇತಾ ಸೇಥ್ ಚೆಕ್ ಔಟ್ ಆದ ಬಳಿಕ ಅವರು ಉಳಿದುಕೊಂಡಿದ್ದ ಅಪಾರ್ಟ್ಮೆಂಟ್ಗೆ ಹೋಟೆಲ್ ಸಿಬ್ಬಂದಿ ತೆರಳಿ ಪರಿಶೀಲಿಸಿದಾಗ ಅಲ್ಲಲ್ಲಿ ರಕ್ತದ ಕಲೆಗಳು ಕಂಡು ಬಂದವು. ಕೂಡಲೇ ಹೋಟೆಲ್ ಸಿಬ್ಬಂದಿ ಪೊಲೀಸರ ಗಮನಕ್ಕೆ ತಂದಿದ್ದಾರೆ.



Ad Widget

ಪೊಲೀಸರು ಸೇಠ್ ಮೊಬೈಲ್ ಗೆ ಕರೆ ಅದು ಸಂಪರ್ಕಕ್ಕೆ ಸಿಕ್ಕಿಲ್ಲ ಹೀಗಾಗಿ, ಟ್ಯಾಕ್ಸಿ ಬುಕ್ ಮಾಡಿದ ಹೋಟೆಲ್ ಸಿಬ್ಬಂದಿ ಬಳಿ ಟ್ಯಾಕ್ಸಿ ಡ್ರೈವರ್ ನಂಬರ್ ಪಡೆದು ಆತನಿಗೆ ಕರೆ ಮಾಡಿದರು. ಆತ ಹೆದ್ದಾರಿಯಲ್ಲಿ ಸುಚನಾ ಸೇಥ್ ಅವರನ್ನು ಬೆಂಗಳೂರಿಗೆ ಕರೆದೊಯ್ಯುತ್ತಿದ್ದ. ಸುಚನಾ ಅವರಿಗೆ ಮೊಬೈಲ್ ಕೊಡಲು ಹೇಳಿ ಆಕೆ ಜೊತೆ ಮಗನ ಬಗ್ಗೆ ವಿಚಾರಿಸಿದ್ದು ಆಗ ಆಕೆ ಸ್ನೇಹಿತನ ಜೊತೆ ಮಗನನ್ನು ಕಳಿಸಿಕೊಟ್ಟಿರುವುದಾಗಿ ತಿಳಿಸಿದ್ದಾರೆ.

Ad Widget

Ad Widget


ಆಕೆ ನೀಡಿದ ಸ್ನೇಹಿತನ ವಿಳಾಸವನ್ನು ಹುಡುಕಿದಾಗ ಅದು ಸುಳ್ಳು ಅಡ್ರೆಸ್ ಅನ್ನೋದು ಪೊಲೀಸರಿಗೆ ಗೊತ್ತಾಗಿದೆ. ಹೀಗಾಗಿ, ಮತ್ತೆ ಟ್ಯಾಕ್ಸಿ ಚಾಲಕನಿಗೆ ಕರೆ ಮಾಡಿದ ಗೋವಾ ಪೊಲೀಸರು ಕೊಂಕಣಿ ಭಾಷೆಯಲ್ಲಿ ಮಾತನಾಡಿ ಕಾರು ಎಲ್ಲಿದೆಯೆಂದು ವಿಚಾರಿಸಿ ಹತ್ತಿರದ ಪೊಲೀಸ್ ಠಾಣೆಗೆ ತೆರಳುವಂತೆ ಸೂಚಿಸಿದ್ದರು.

ಅಷ್ಟರಲ್ಲಾಗಲೇ ಟ್ಯಾಕ್ಸಿ ಚಿತ್ರದುರ್ಗದ ಬಳಿ ಸಾಗುತ್ತಿತ್ತು. ಆತ ಚಿತ್ರಾದುರ್ಗಾ ಜಿಲ್ಲೆಯ ಠಾಣೆಯೊಂದಕ್ಕೆ ಕಾರನ್ನು ಕರೆದುಕೊಂಢು ಹೋಗಿದ್ದಾನೆ. ಏತನ್ಮಧ್ಯೆ ಚಿತ್ರದುರ್ಗ ಪೊಲೀಸರಿಗೆ ಗೋವಾ ಪೊಲೀಸರು ವಿಷಯ ತಿಳಿಸಿದರು. ಪೊಲೀಸರ ಪರಿಶೀಲನೆ ವೇಳೆ ಮಹಿಳೆಯ ಲಗೇಜ್ ಬ್ಯಾಗ್ ನಲ್ಲಿ 4 ವರ್ಷದ ಬಾಲಕ ಮೃತ ದೇಹ ಪತ್ತೆಯಾಗಿದೆ.

ಮೈಂಡ್ ಫುಲ್ ಎಐ ಲ್ಯಾಬ್’ ನ ಸಹ ಸಂಸ್ಥಾಪಕಿ ಸುಚನಾ ಸೇಥ್ ಓರ್ವ ಯಶಸ್ವಿ ಉದ್ಯಮಿ. 2021ರ ಭಾರತ 100 ಅತ್ಯುತ್ತಮ ಕೃತಕ ಬುದ್ದಿಮತ್ತೆ ತಂತ್ರರಲ್ಲಿ ಇವರೂ ಒಬ್ಬರು. ಹಾವರ್ಡ್ ವಿವಿಯಲ್ಲಿ ವ್ಯಾಸಂಗ ಮಾಡಿದ್ದ ಸುಚನಾ ಸೇಥ್, 12 ವರ್ಷ ಅನುಭವ ಹೊಂದಿರೋದಾಗಿ ತಮ್ಮ ಲಿಂಕ್ಡ್ ಇನ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದೀಗ ತಮ್ಮದೇ ಮಗನ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಇನ್ನಷ್ಟೇ ಬಯಲಾಗಬೇಕಿದೆ.

Ad Widget
Click to comment

Leave a Reply

ಕ್ರೀಡೆ

India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ

Published

on



Ad Widget

Ad Widget

Ad Widget

Ad Widget

ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget

Ad Widget

ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget alt="Ad Widget"/>

Ad Widget

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

Ad Widget

Ad Widget <> Ad Widget

ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.



Ad Widget

ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.

ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.

ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.

ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.

ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.

ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.

Ad Widget
Continue Reading

ರಾಷ್ಟ್ರೀಯ

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ

Published

on



Ad Widget

Ad Widget

Ad Widget

Ad Widget

ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್‌ ಬಹಿರಂಗಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.

Ad Widget

Ad Widget

Ad Widget alt="Ad Widget"/>

Ad Widget

‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Ad Widget

Ad Widget <> Ad Widget

2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾ‌ರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.



Ad Widget

ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Ad Widget

Ad Widget

ಥಾಮ್ಪನ್ ಹಾಗೂ ಜ್ಞಾನೇಶ್ ಕುಮಾರ್ ಇಬ್ಬರೂ ಕೇರಳಂ ಕೇಡರ್‌ನ ಐಎಎಸ್‌ ಅಧಿಕಾರಿಗಳು. ಥಾಮ್ರನ್ 1980ರ ಹಾಗೂ ಕುಮಾರ್ 1988ರ ಬ್ಯಾಚ್‌ನ ಅಧಿಕಾರಿ. ಕೇರಳಂನ ಲೋಕೋಪಯೋಗಿ ಕಾರ್ಯದರ್ಶಿಯಾಗಿಯೂ ಜ್ಞಾನೇಶ್ ಕುಮಾರ್ ಕಾರ್ಯನಿರ್ವಹಿಸಿದ್ದಾರೆ.

Ad Widget
Continue Reading

ರಾಷ್ಟ್ರೀಯ

Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!

Published

on



Ad Widget

Ad Widget

Ad Widget

Ad Widget

ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.

Ad Widget

Ad Widget

Ad Widget

Ad Widget

ನ್ಯೂಯಾರ್ಕ್‌: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.

Ad Widget

Ad Widget <> Ad Widget

ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.



Ad Widget

ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.

Ad Widget

Ad Widget

ಭಾರತ ತನ್ನ ಅಗತ್ಯದ ಸುಮಾರು ಶೇ.88ರಷ್ಟು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಹೀಗಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದರೆ ಅದರ ನೇರ ಪರಿಣಾಮ ಭಾರತದ ಇಂಧನ ಆರ್ಥಿಕತೆ ಹಾಗೂ ಸಾರಿಗೆ ವೆಚ್ಚದ ಮೇಲೂ ಬೀಳುವ ಸಾಧ್ಯತೆ ಇದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading