ದಕ್ಷಿಣ ಕನ್ನಡ
Akasha bhavana Sharan : ನಟೋರಿಯಸ್ ರೌಡಿ ಮೇಲೆ ಫೈರ್ ಮಾಡಿದ ಮಂಗಳೂರು ಪೊಲೀಸರು
ಮಂಗಳೂರು: ಮಂಗಳೂರು ಪೊಲೀಸರಿಗೆ ಮೋಸ್ಟ್ ವಾಂಟೆಡ್ ಆಗಿರವ ನಟೋರಿಯಸ್ ರೌಡಿ ಆಕಾಶಭವನ ಶರಣ್ ನ ಕಾಲಿಗೆ ಫೈರಿಂಗ್ ಮಾಡಿ ಮಂಗಳವಾರ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಆತ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಮೇಲೆ ಫೈರಿಂಗ್ ಮಾಡಿದ್ದಾರೆ. ಪ್ರಸ್ತುತ ಆತನನ್ನು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಟೋರಿಯಸ್ ರೌಡಿ ಆಕಾಶಭವನ್ ಶರಣ್ ಮೇಲೆ ದ.ಕ ಹಾಗೂ ಮತ್ತು ಉಡುಪಿ ಜಿಲ್ಲೆಯಲ್ಲಿ ಕೊಲೆ, ಕೊಲೆಯತ್ನ, ರೇಪ್, ಹಫ್ತಾ ಸೇರಿದಂತೆ 21 ಕೇಸುಗಳಿವೆ. 2020 ರ ಅಕ್ಟೋಬರ್ 20ರಂದು ಸುರೇಂದ್ರ ಬಂಟ್ವಾಳ್ ಎನ್ನುವ ಫೈನಾನ್ಸರನ್ನು ಜೈಲಿನಲ್ಲಿದ್ದುಕೊಂಡೇ ತನ್ನ ಸಹಚರರಿಂದ ಕೊಲ್ಲಿಸಿದ್ದ.
ಆನಂತರ, 2022ರ ಕೊನೆಯಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿದ್ದ ಶರಣ್, 2023ರ ಜನವರಿ 14ರಂದು ಸುರತ್ಕಲ್ ಬಳಿ ಹಣಕ್ಕಾಗಿ ಸ್ಕೂಟರ್ ಅಡ್ಡಗಟ್ಟಿ ಸುಲಿಗೆಗೆ ಯತ್ನಿಸಿ ಅರೆಸ್ಟ್ ಆಗಿದ್ದ.
ನಾಲ್ಕು ತಿಂಗಳ ನಂತರ ಮತ್ತೆ ಜೈಲಿನಿಂದ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದ. ಸುಳ್ಯದ ರಾಮಕೃಷ್ಣ ಎಂಬವರ ಕೊಲೆ ಪ್ರಕರಣದಲ್ಲಿ ಈತನಿಗೆ ಶಿಕ್ಷೆ ಘೋಷಣೆಯಾಗಿದೆ. ಶಿಕ್ಷೆ ಘೋಷಣೆಯಾದ ಬಳಿಕ ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ. ಎರಡು ದಿನಗಳ ಹಿಂದೆ ಖಚಿತ ಮಾಹಿತಿಯ ಮೇರೆಗೆ ಇವನ ಕಾರನ್ನು ಅಡ್ಡಗಟ್ಟಿದ್ದ ಪೊಲೀಸರ ಮೇಲೆಯೇ ಕಾರು ಹಾಯಿಸಿದ್ದ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಅಪರಾಧ
Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.
ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.
ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
-
ಮಂಗಳೂರು18 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized15 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized13 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ17 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ19 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ23 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಬಿಗ್ ನ್ಯೂಸ್18 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















