Connect with us

ರಾಜಕೀಯ

Rama Mandira: ರಾಮ ಭಕ್ತರ ಭಾವನೆಗಳನ್ನು ಗೌರವಿಸುತ್ತಾ  ಅಯೋಧ್ಯಾ ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗದಿರಲು ಕಾಂಗ್ರೆಸ್‌ ತೀರ್ಮಾನ -ಅದು ಬಿಜೆಪಿ RSS ಕಾರ್ಯಕ್ರಮ :  ಜೈರಾಮ್ ರಮೇಶ್

Published

on

Ad Widget

Ad Widget

Ad Widget

Ad Widget

ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ಭವ್ಯ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಾಗೋದಿಲ್ಲ ಎಂದು ಕಾಂಗ್ರೆಸ್ ಪಕ್ಷ ಅಧಿಕೃತ ಪ್ರಕಟಣೆ ಹೊರಡಿಸಿದೆ. ಜನವರಿ 22 ರಂದು ಮಧ್ಯಾಹ್ನ 12 ಗಂಟೆಗೆ ಅಯೋಧ್ಯಾ ಶ್ರೀರಾಮ ಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ.  ಇದರಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ.

Ad Widget

Ad Widget

Ad Widget

Ad Widget

ಅಯೋಧ್ಯಾ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಲೋಕಸಭಾ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಅಧಿಕೃತವಾಗಿ ಆಹ್ವಾನ ಪತ್ರ ನೀಡಿತ್ತು. ಆದರೆ, ಮೂವರೂ ಕೂಡಾ ಈ ಆಹ್ವಾನವನ್ನು ತಿರಸ್ಕರಿಸಿದ್ದು, ಅಯೋಧ್ಯೆಗೆ ಬರೋದಿಲ್ಲ ಎಂದಿದ್ದಾರೆ.

Ad Widget

Ad Widget alt="Ad Widget"/>

Ad Widget

ಇದೊಂದು ಆರ್‌ಎಸ್‌ಎಸ್ ಹಾಗೂ ಬಿಜೆಪಿಯ ಕಾರ್ಯಕ್ರಮವಾಗಿದ್ದು, ಹೀಗಾಗಿ ಇವರು ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Ad Widget <> Ad Widget

‘ರಾಮನನ್ನು ದೇಶದ ಕೋಟ್ಯಂತರ ಮಂದಿ ಪೂಜಿಸುತ್ತಾರೆ. ಧರ್ಮ ಎನ್ನುವುದು ವೈಯಕ್ತಿಕ ವಿಷಯ. ಆದರೆ ಅಯೋಧ್ಯೆಯ ದೇವಸ್ಥಾನವನ್ನು ಬಿಜೆಪಿ ಹಾಗೂ ಆರ್‌ಎಸ್‌ಎಸ್ ರಾಜಕೀಯ ವಿಷಯವನ್ನಾಗಿ ಮಾಡಿಕೊಂಡಿದೆ. ಚುನಾವಣಾ ಲಾಭಕ್ಕಾಗಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಾಯಕರು ಅಪೂರ್ಣಗೊಂಡಿರುವ ದೇಗುಲವನ್ನು ಉದ್ಘಾಟಿಸುತ್ತಿದ್ದಾರೆ. ಕೊಟ್ಯಂತರ ರಾಮ ಭಕ್ತರ ಭಾವನೆಗಳನ್ನು ಗೌರವಿಸುತ್ತಾ 2019ರಲ್ಲಿ ರಾಮಮಂದಿರ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ಕಾಂಗ್ರೆಸ್ ಬದ್ಧವಿದೆ. ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕ್ರಮದ ಆಹ್ವಾನವನ್ನು ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ಅಧೀರ್ ರಂಜನ್ ಚೌಧರಿ ಅವರು ಗೌರವಪೂರ್ವಕವಾಗಿ ತಿರಸ್ಕರಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

 ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷ ಭಾಗಿ ಆಗುತ್ತೋ? ಇಲ್ಲವೋ? ಅನ್ನೋದು ಭಾರೀ ಕುತೂಹಲ ಕೆರಳಿಸಿತ್ತು. ಕಾಂಗ್ರೆಸ್ ಪಕ್ಷ ಹಾಗೂ ಸಂಸತ್‌ನಲ್ಲಿ ಪ್ರಮುಖ ಹುದ್ದೆಗಳಲ್ಲಿ ಇದ್ದ ನಾಯಕರಿಗೆ ಟ್ರಸ್ಟ್‌ನಿಂದ ಆಹ್ವಾನ ಹೋಗಿತ್ತು. ಪಕ್ಷದಲ್ಲಿ ಮುಖ್ಯಸ್ಥರ ಹುದ್ದೆಯಲ್ಲಿ ಇಲ್ಲದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಟ್ರಸ್ಟ್‌ ಅಧಿಕೃತ ಆಹ್ವಾನ ನೀಡಲಿರಲಿಲ್ಲ. ಸೋನಿಯಾ ಗಾಂಧಿ ಅವರು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಉತ್ಸುಕರಾಗಿದ್ಧಾರೆ ಎಂದೇ ಹೇಳಲಾಗಿತ್ತು.

Ad Widget

Ad Widget

ಆದರೆ, ಅಲ್ಪಸಂಖ್ಯಾತ ಮತ ಬ್ಯಾಂಕ್ ಸೇರಿದಂತೆ ಹಲವು ಕಾರಣಗಳಿಂದಾಗಿ ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿ ಕೂಟದ ಅಂಗ ಪಕ್ಷಗಳು ಕಾದು ನೋಡುವ ತಂತ್ರಕ್ಕೆ ಮುಂದಾಗಿವೆ ಅನ್ನೋ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡಿತ್ತು. ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಜರಾಗುವ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದ್ದವು. ಇದೀಗ ಕಾಂಗ್ರೆಸ್ ತಾನು ಭಾಗಿಯಾಗಲ್ಲ ಅಂತಾ ಅಧಿಕೃತ ಪ್ರಕಟಣೆ ಹೊರಡಿಸಿದೆ.

Ad Widget
Click to comment

Leave a Reply

ಅಂತರ ರಾಜ್ಯ

Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ

Published

on

Ad Widget

Ad Widget

Ad Widget

Ad Widget

ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.

Ad Widget
Continue Reading

ರಾಜಕೀಯ

Rural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Ad Widget

Ad Widget alt="Ad Widget"/>

Ad Widget

ಹಲವು ವರ್ಷಗಳಿಂದ ಬಾಕಿ ಉಳಿದಿರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಪ್ರಕ್ರಿಯೆಗೆ ಇದರಿಂದ ಮತ್ತಷ್ಟು ವೇಗ ಸಿಕ್ಕಿದೆ. ಈ ಹಿಂದೆ ಅಕ್ಟೋಬರ್‌ನಲ್ಲಿ ಸರ್ಕಾರ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ 2,900ಕ್ಕೂ ಅಧಿಕ ಆಕ್ಷೇಪಣೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಇತ್ಯರ್ಥಪಡಿಸಿದ ಬಳಿಕ ಇದೀಗ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ.

Ad Widget

Ad Widget <> Ad Widget

ಮುಂದಿನ ಹಂತದಲ್ಲಿ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಬಳಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ಚುನಾವಣೆಗೆ ಅಗತ್ಯವಾದ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಡಿಸೆಂಬರ್ ಮಧ್ಯಭಾಗದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. 2027ರ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಇನ್ನೊಂದೆಡೆ, ಈ ಬಾರಿಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ರಾಜ್ಯ ಸಚಿವ ಸಂಪುಟ ಈಗಾಗಲೇ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಮುಂಬರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮತಪತ್ರಗಳ ಮೂಲಕ ನಡೆಯುವ ಸಾಧ್ಯತೆಯಿದೆ.

Ad Widget
Continue Reading

ಅಂತರ ರಾಜ್ಯ

Trisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!

Published

on

Ad Widget

Ad Widget

Ad Widget

Ad Widget

ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.

Ad Widget

Ad Widget

Ad Widget

Ad Widget

ಚೆನ್ನೈ: ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.

Ad Widget

Ad Widget alt="Ad Widget"/>

Ad Widget

ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಅವರ ಆಪ್ತ ಸ್ನೇಹಿತೆ ಎಂದೇ ಗುರುತಿಸಿಕೊಂಡಿರುವ ತ್ರಿಷಾ ಕೂಡ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ನಿರೀಕ್ಷೆಯೊಂದಿಗೆ ಅಭಿಮಾನಿಗಳ ಗುಂಪೊಂದು ‘ಇಳಯ ಪುರಟ್ಟಿ ತಲೈವಿ ತ್ರಿಷಾ’ ಹೆಸರಿನಲ್ಲಿ ಹೊಸ ವೇದಿಕೆಯನ್ನು ಆರಂಭಿಸಿದೆ.

Ad Widget

Ad Widget <> Ad Widget

ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ತ್ರಿಷಾ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ನಡೆಸುವುದಾಗಿ ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ತ್ರಿಷಾ ಕೂಡ ರಾಜಕೀಯ ಪಯಣ ಆರಂಭಿಸಿದರೆ ತಮಿಳುನಾಡಿನ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

ಜಯಲಲಿತಾ ಹಾದಿಯಲ್ಲಿ ತ್ರಿಷಾ?
ಅಭಿಮಾನಿಗಳು ತ್ರಿಷಾ ಅವರಿಗೆ ‘ಇಳಯ ಪುರಟ್ಟಿ ತಲೈವಿ’ (ಯುವ ಕ್ರಾಂತಿಕಾರಿ ನಾಯಕಿ) ಎಂಬ ಬಿರುದನ್ನೂ ನೀಡಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕಿ ದಿವಂಗತ ಜೆ. ಜಯಲಲಿತಾ ಅವರನ್ನು ‘ಪುರಟ್ಟಿ ತಲೈವಿ’ (ಕ್ರಾಂತಿಕಾರಿ ನಾಯಕಿ) ಎಂದು ಕರೆಯಲಾಗುತ್ತಿತ್ತು. ಇದೇ ಹಿನ್ನೆಲೆಯಲ್ಲಿ ತ್ರಿಷಾ ಅವರಿಗೂ ಅಂತಹದ್ದೇ ಬಿರುದು ನೀಡಿ, ಜಯಲಲಿತಾ ಅವರ ಉತ್ತರಾಧಿಕಾರಿ ಎಂಬಂತೆ ಬಿಂಬಿಸಲಾಗುತ್ತಿದೆ.

Ad Widget

Ad Widget

ಜಯಲಲಿತಾ ಅವರ ವ್ಯಕ್ತಿತ್ವ ಮತ್ತು ಆಡಳಿತ ಶೈಲಿಯನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳು, ತಮಿಳುನಾಡಿಗೆ ಅವರಂತಹ ನಾಯಕಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಪ್ರತಿಯೊಂದು ಬೆಳವಣಿಗೆಯ ಬಗ್ಗೆಯೂ ಜಯಲಲಿತಾ ಮಾಹಿತಿ ಹೊಂದಿದ್ದರು. ಸರಕಾರಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ನಿರಂತರ ನಿಗಾ ಇರಿಸುತ್ತಿದ್ದರು ಎಂದು ಸಂಘಟನೆಯ ಪ್ರಕಟಣೆಯಲ್ಲಿ ಹೇಳಲಾಗಿದೆ.

ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಜಯಲಲಿತಾ ಅವರ ಆಡಳಿತ ಶೈಲಿಯನ್ನು ಉಲ್ಲೇಖಿಸಿರುವ ಅಭಿಮಾನಿಗಳು, ತ್ರಿಷಾ ಅವರಲ್ಲೂ ಅಂತಹ ನಾಯಕತ್ವದ ಗುಣಗಳಿವೆ ಎಂದು ಪ್ರತಿಪಾದಿಸಿದ್ದಾರೆ.

ವಿಜಯ್-ತ್ರಿಷಾ ಜೋಡಿಯಿಂದ ಹೊಸ ರಾಜಕೀಯ ಅಧ್ಯಾಯ?
ವಿಜಯ್ ನೇತೃತ್ವದ ಟಿವಿಕೆ ಸರಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಅಭಿಮಾನಿಗಳು, ತ್ರಿಷಾ ಕೂಡ ರಾಜಕೀಯ ಪ್ರವೇಶಿಸಿದರೆ ಜಯಲಲಿತಾ ಅವರ ಆಡಳಿತವನ್ನು ಹೋಲುವ ಉತ್ತಮ ಆಡಳಿತವನ್ನು ತಮಿಳುನಾಡಿನಲ್ಲಿ ಕಾಣಬಹುದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ತ್ರಿಷಾ ಅವರ ವ್ಯಕ್ತಿತ್ವ ಜಯಲಲಿತಾ ಅವರನ್ನು ಹೋಲುತ್ತದೆ. ವಿವಿಧ ಸಂದರ್ಭಗಳಲ್ಲಿ ಅವರ ಗುಣಗಳನ್ನು ಗಮನಿಸಿದ್ದೇವೆ. ಅವರ ಆಪ್ತರಿಗೂ ಈ ವಿಚಾರ ತಿಳಿದಿದೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.

ಈ ಅಭಿಯಾನದ ಮೊದಲ ಹೆಜ್ಜೆಯಾಗಿ ‘ಇಳಯ ಪುರಟ್ಟಿ ತಲೈವಿ ತ್ರಿಷಾ ಪೇರವೈ’ ಎಂಬ ಸಂಘಟನೆಯನ್ನು ಆರಂಭಿಸಲಾಗಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿ, ಆ ಮೂಲಕ ತ್ರಿಷಾ ಅವರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸುವುದು ಅಭಿಮಾನಿಗಳ ಉದ್ದೇಶವಾಗಿದೆ.

ಆದರೆ, ತ್ರಿಷಾ ಅವರು ರಾಜಕೀಯ ಪ್ರವೇಶಿಸುವ ಕುರಿತು ಈವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಇದು ಅಭಿಮಾನಿಗಳ ಮಟ್ಟದಲ್ಲಿ ನಡೆಯುತ್ತಿರುವ ಅಭಿಯಾನ ಮತ್ತು ನಿರೀಕ್ಷೆಯಷ್ಟೇ ಆಗಿದೆ.

ಈ ಹಿಂದೆ ಟಿವಿ ಸಂದರ್ಶನವೊಂದರಲ್ಲಿ ತಮಾಷೆಯಾಗಿ ಮುಂದೆ ತಾನು ತಮಿಳುನಾಡಿನ ಮುಖ್ಯಮಂತ್ರಿಯಾಗುವುದಾಗಿ ತ್ರಿಷಾ ಹೇಳಿದ್ದ ವಿಡಿಯೊ ಕೂಡ ವಿಜಯ್ ಮುಖ್ಯಮಂತ್ರಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿತ್ತು.

ಗಮನಾರ್ಹವೆಂದರೆ, ಜಯಲಲಿತಾ ಕೂಡ ಆರಂಭದಲ್ಲಿ ನಟಿಯಾಗಿಯೇ ಜನಪ್ರಿಯತೆ ಗಳಿಸಿದ್ದರು. ಬಳಿಕ 1982ರಲ್ಲಿ ಎಂ.ಜಿ. ರಾಮಚಂದ್ರನ್ ಅವರ ಎಐಎಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶಿಸಿ, 1991ರಲ್ಲಿ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ತ್ರಿಷಾ ಅವರ ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳಲ್ಲಿ ಮೂಡಿರುವ ಕುತೂಹಲ ತಮಿಳುನಾಡಿನ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!