Connect with us

ವೈರಲ್‌ ನ್ಯೂಸ್‌

Maruti Suzuki EVX | ಮಾರುತಿ ಎಲೆಕ್ಟ್ರಿಕ್ ಕಾರು ಶೀಘ್ರ ಮಾರುಕಟ್ಟೆಗೆ : ಇದರ ಮೈಲೇಜ್ ಕೇಳಿದರೆ ಅಚ್ಚರಿ..!

Published

on



Ad Widget

Ad Widget

Ad Widget

Ad Widget

ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆಯನ್ನು ಹೆಚ್ಚಾಗುತ್ತಿದೆ. ಪ್ರಪಂಚದ ಇತರ ಅಂತರರಾಷ್ಟ್ರೀಯ ಮಾರುಕಟ್ಟೆಗಳ ರೀತಿಯಲ್ಲೇ ಭಾರತದಲ್ಲೂ ಐಷಾರಾಮಿ ಕಾರು ಬ್ರಾಂಡ್‌ಗಳು ತಮ್ಮ ತಮ್ಮ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುತ್ತಿವೆ. ಸದ್ಯ ಭಾರತೀಯ ಮಾರುಕಟ್ಟೆಯ ಎಲೆಕ್ಟ್ರಿಕ್ ವಿಭಾಗದಲ್ಲಿ ಟಾಟಾ ಮೋಟಾರ್ಸ್ ಕಂಪನಿ ಪಾರುಪತ್ಯ ಸಾಧಿಸುತ್ತಿದೆ.

Ad Widget

Ad Widget

Ad Widget

Ad Widget

ಜನಪ್ರಿಯ ಮತ್ತು ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (MSIL) ಭಾರತೀಯ ವಾಹನ ಮಾರುಕಟ್ಟೆಯಲ್ಲಿ ಮಾರಾಟದಲ್ಲಿ ಪಾರುಪತ್ಯ ಸಾಧಿಸಿದೆ. ಇದೀಗ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲೂ ಕಾಲಿಡಲು ಸಜ್ಜಾಗುತ್ತಿದೆ. ಮಾರುತಿ ಸುಜುಕಿ ತನ್ನ ಮೊದಲ ಎಲೆಕ್ಟ್ರಿಕ್ ಕಾರನ್ನು ಗುಜರಾತ್ ಆಟೋ ಎಕ್ಸ್‌ಪೋದಲ್ಲಿ eVX ಕಾನ್ಸೆಪ್ಟ್ ಅನ್ನು ಪ್ರದರ್ಶಿಸಿತು.

Ad Widget

Ad Widget

Ad Widget alt="Ad Widget"/>

Ad Widget

ಸುಜುಕಿ ಮೋಟಾರ್ ಕಾರ್ಪೊರೇಶನ್ 2023ರ ಟೋಕಿಯೋ ಮೋಟಾರ್ ಶೋನಲ್ಲಿ ಈ eVX ಕಾನ್ಸೆಪ್ಟ್ ಮಾದರಿಯ ಹತ್ತಿರದ ಉತ್ಪಾದನಾ ಆವೃತ್ತಿಯನ್ನು ಪ್ರದರ್ಶಿಸಲು ಘೋಷಿಸಿದೆ. ಇದರ ಜೊತೆಗೆ, ಹೊಸ ಜನರೇಷನ್ ಸುಜುಕಿ ಸ್ವಿಫ್ಟ್ ಕಾರನ್ನು ಈವೆಂಟ್‌ನಲ್ಲಿ ಅನಾವರಣಗೊಳಿಸಲಾಗುತ್ತದೆ. ಈ ಮಾರುತಿ ಸುಜುಕಿ EVX (Maruti Suzuki EVX) ಕಾನ್ಸೆಪ್ಟ್ ಮಾದರಿಯ ಒಳಭಾಗವನ್ನು ಬಹಿರಂಗಪಡಿಸಲಿಲ್ಲ. ಈ ಸುಜುಕಿ ಎಲೆಕ್ಟ್ರಿಕ್ ಎಸ್‌ಯುವಿಯ ಭವಿಷ್ಯದ ಒಳಾಂಗಣದ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಇದು ಉತ್ಪಾದನೆಯ ಮಾದರಿಗೆ ಹತ್ತಿರವಾಗಿವೆ.

Ad Widget

Ad Widget <> Ad Widget

ಈ ಹೊಸ EVX ಕಾನ್ಸೆಪ್ಟ್ ಮಾದರಿಯು ಎಲೆಕ್ಟ್ರಾನಿಕ್-ಕಂಟ್ರೋಲ್ 4×4 ತಂತ್ರಜ್ಞಾನಗಳೊಂದಿಗೆ ಬರಲಿದೆ ಎಂದು ಸುಜುಕಿ ದೃಢಪಡಿಸಿದೆ. ಅನುಪಾತದಲ್ಲಿ, ಹೊಸ ಸುಜುಕಿ EVX ಉದ್ದ 4300mm, ಅಗಲ 1800mm ಮತ್ತು ಎತ್ತರ 1600mm ಆಗಿದೆ. ಈ ಎಲೆಕ್ಟ್ರಿಕ್ ಕಾರು ಸಿಂಗಲ್ ಚಾರ್ಜ್‌ನಲ್ಲಿ 500 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಹೊಸ ಸುಜುಕಿ EVX ಕೆಲವು ವಿನ್ಯಾಸ ಬದಲಾವಣೆಗಳನ್ನು ಹೊಂದಿದೆ ಎಂದು ಹೊಸ ಚಿತ್ರಗಳು ತೋರಿಸುತ್ತವೆ.



Ad Widget

ಇದು ಹೊಸದಾಗಿ ವಿನ್ಯಾಸಗೊಳಿಸಿದ ಎಲ್ಇಡಿ ಲ್ಯಾಂಪ್ ಗಳೊಂದಿಗೆ ಬರುತ್ತದೆ. ಕೆಳಗಿನ ಬಂಪರ್ ಅನ್ನು ಸಹ ನವೀಕರಿಸಲಾಗಿದೆ. ಆದರೆ ಇದು ಕಾನ್ಸೆಪ್ಟ್ ಮಾದರಿಯಂತಹ ಫಾಗ್ ಲ್ಯಾಂಪ್ ಗಳು ಮತ್ತು ಕೆಳಗಿನ ಭಾಗದಲ್ಲಿ ಸಿಲ್ವಾರ್ ಟ್ರಿಟ್ ಮೆಂಟ್ ಅನ್ನು ಹೊಂದಿದೆ. ಈ ಮಾದರಿಯ ಪ್ರೊಡಕ್ಷನ್-ಸ್ಪೆಕ್ ಔಟ್ ರಿಯರ್ ವ್ಯೂ ಮಿರರ್‌ಗಳನ್ನು ಸ್ಲಿಮ್ ಎಲ್ಇಡಿ ಲೈಟ್ ಗಳೊಂದಿಗೆ ಪಡೆಯುತ್ತದೆ. ಮುಂಭಾಗದಲ್ಲಿ ಸುಜುಕಿ ಲೋಗೋ ಮೊದಲಿಗಿಂತ ಸ್ವಲ್ಪ ಎತ್ತರದಲ್ಲಿದೆ.

Ad Widget

Ad Widget

ಹಿಂದಿನ ಪ್ರೊಫೈಲ್ ಕಾನ್ಸೆಪ್ಟ್ ಮಾದರಿಗೆ ಹೋಲುತ್ತದೆ. ಇದು ಈಗ ಉತ್ಪಾದನೆಗೆ ಸಿದ್ಧವಾದ ಟೈಲ್-ಲೈಟ್‌ಗಳನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಕಾರಿಗೆ ಸಂಪರ್ಕಿತ ಲೈಟ್ ಬಾರ್ ಅನ್ನು ಹೊಂದಿತ್ತು. ಅದು ಹೊಸ ಚಿತ್ರಗಳಲ್ಲಿ ಕಾಣೆಯಾಗಿದೆ. ಇದು ಸುಜುಕಿ ಲೋಗೋವನ್ನು ಅಳವಡಿಸುವ ಡಾರ್ಕ್ ಕ್ರೋಮ್ ಬಾರ್ ಅನ್ನು ಹೊಂದಿದೆ. ಇದು ರೂಫ್-ಇಂಟಿಗ್ರೇಟೆಡ್ ಸ್ಪಾಯ್ಲರ್ ಮತ್ತು ಡ್ಯುಯಲ್-ಟೋನ್ ಲೋವರ್ ಬಂಪರ್ ಅನ್ನು ಉಳಿಸಿಕೊಂಡಿದೆ.

ಹೊರಭಾಗಕ್ಕಿಂತ ಭಿನ್ನವಾಗಿ, ಮಾರುತಿ ಸುಜುಕಿ EVX ಮಾದರಿಯ ಒಳಭಾಗವು ಫ್ಯೂಚರಿಸ್ಟಿಕ್ ಆಗಿ ಕಾಣುತ್ತದೆ ಮತ್ತು ಉತ್ಪಾದನಾ ಮಾದರಿಗೆ ದಾರಿ ಮಾಡಿಕೊಡುವುದಿಲ್ಲ. ಇದು ಡ್ಯುಯಲ್-ಟೋನ್ ಇಂಟೀರಿಯರ್‌ನೊಂದಿಗೆ ಬರುತ್ತದೆ ಮತ್ತು ಹೆಚ್ಚಿನ ಡ್ಯಾಶ್‌ಬೋರ್ಡ್ ಅನ್ನು ಬೀಜ್ ಸ್ಕೀಮ್‌ನಲ್ಲಿ ಪೂರ್ಣಗೊಳಿಸಲಾಗಿದೆ. ಡ್ಯಾಶ್‌ಬೋರ್ಡ್ ಸುತ್ತಲೂ ಫಿಸಿಕಲ್ ಬಟನ್‌ಗಳಿಲ್ಲ. ಇದು ಲಂಬವಾಗಿ ಜೋಡಿಸಲಾದ ಏರ್-ಕಾನ್ ವೆಂಟ್‌ಗಳನ್ನು ಹೊಂದಿದೆ. ಆದರೆ ಎರಡು-ಸ್ಪೋಕ್ ಸ್ಟೀರಿಂಗ್ ವೀಲ್ ಅನ್ನು ಹೊಂದಿದೆ.

ಈ ಕಾರಿನ ಸ್ಟೀಯರಿಂಗ್ ವ್ಹೀಲ್ ಹಿಂದೆ ಬೃಹತ್ ಟಚ್‌ಸ್ಕ್ರೀನ್ ಅನ್ನು ಇರಿಸಲಾಗಿದೆ, ಇದು ಇನ್ಫೋಟೈನ್‌ಮೆಂಟ್ ಮತ್ತುಇನ್ಸ್ ಟ್ರೂಮೆಂಟ್ ಆಗಿ ಕಾರ್ಯಗಳನ್ನು ನೀಡುತ್ತದೆ. ಸೆಂಟ್ರಲ್ ಕನ್ಸೋಲ್ ಪ್ರೀಮಿಯಂ ಮತ್ತು ಫ್ಯೂಚರಿಸ್ಟಿಕ್ ಆಗಿ ಕಾಣುತ್ತದೆ, ಮತ್ತು ಅದನ್ನು ಉತ್ಪಾದನಾ ಮಾದರಿಗೆ ತರುವುದಿಲ್ಲ. ಗೇರ್ ಬಾಕ್ಸ್ ಸೆಲೆಕ್ಟರ್ ನೆಕ್ಸಾನ್ EV MAX ನಿಂದ ಸ್ಫೂರ್ತಿ ಪಡೆದಿದೆ. ಈ ಎಲೆಕ್ಟ್ರಿಕ್ ಎಸ್‌ಯುವಿಯು ಸ್ಪೋರ್ಟಿ ಬಕೆಟ್ ಸೀಟ್‌ಗಳನ್ನು ಡ್ಯುಯಲ್-ಟೋನ್ ಕಪ್ಪು ಮತ್ತು ಬೀಜ್‌ನಲ್ಲಿ ಪೂರ್ಣಗೊಳಿಸಿದೆ.

ಈ ಎಲೆಕ್ಟ್ರಿಕ್ ಕಾರಿನ ಮುಂಭಾಗ ಮತ್ತು ಹಿಂಭಾಗದ ಸೀಟುಗಳು ಹೊಂದಾಣಿಕೆಯ ಹೆಡ್‌ರೆಸ್ಟ್‌ಗಳೊಂದಿಗೆ ಬರುತ್ತವೆ. ಉತ್ಪಾದನೆಗೆ ಸಿದ್ಧವಾಗಿರುವ ಮಾದರಿಯು ವಿವಿಧ ಆಸನಗಳೊಂದಿಗೆ ಬರಲಿದೆ. ಹೊಸ ಮಾದರಿಯು ADAS ತಂತ್ರಜ್ಞಾನವನ್ನು ಪಡೆಯುವ ನಿರೀಕ್ಷೆಯಿದೆ. ಮಾರುತಿ ಸುಜುಕಿ EVX ಕಾನ್ಸೆಪ್ಟ್ ಮಾದರಿಯು 60kWh ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ. ಇನ್ನು 4×4 ತಂತ್ರಜ್ಞಾನದೊಂದಿಗೆ ನವೀಕರಿಸಿದ ಕಾನ್ಸೆಪ್ಟ್ 500 ಕಿಲೋಮೀಟರ್‌ಗಳಿಗಿಂತ ಹೆಚ್ಚು ರೇಂಜ್ ಅನ್ನು ಹೊಂದಿದೆ ಎಂದು ಹೇಳಲಾಗುತ್ತದೆ.

Ad Widget

ವೈರಲ್‌ ನ್ಯೂಸ್‌

ಸಿಎಂ ಪುಟದಲ್ಲಿ ಮೊಳಗಿದ ಪುತ್ತೂರಿನ ಕಂಠ – ತುಳುನಾಡಿನ ಸಂಸ್ಕೃತಿ – ಭಾಷಾ ಸೊಗಡಿಗೆ ಧ್ವನಿಯಾದ ದಿವ್ಯಶ್ರೀ ರೈ ವಜ್ರದುಂಬಿ

Published

on



Ad Widget

Ad Widget

Ad Widget

Ad Widget

ಪುತ್ತೂರು: ತುಳುವಿಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ದೊರೆತ ಸಂಭ್ರಮದ ನಡುವೆಯೇ, ತುಳುನಾಡಿನ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸೊಬಗನ್ನು ಪರಿಚಯಿಸುವ ವಿಡಿಯೋವೊಂದಕ್ಕೆ ಪುತ್ತೂರಿನ ಕುಂಬ್ರದ ದಿವ್ಯಶ್ರೀ ರೈ ವಜ್ರದುಂಬಿ ಅವರು ನೀಡಿರುವ ಹಿನ್ನಲೆ ಧ್ವನಿ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.

Ad Widget

Ad Widget

Ad Widget

Ad Widget


ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಗುರುತಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ಇನ್‌ಸ್ಟಾಗ್ರಾಂ ಪುಟದಲ್ಲಿ ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಆಚಾರ ವಿಚಾರವನ್ನು ಬಿಂಬಿಸುವ ವಿಡಿಯೋ ಹಂಚಿಕೊಳ್ಳಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಕಂಠಸಿರಿ ಹಿನ್ನಲೆ ಧ್ವನಿಯಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget


ವಿಡಿಯೋದಲ್ಲಿ ತುಳುನಾಡಿನ ಪ್ರಕೃತಿ ಸೌಂದರ್ಯ, ಸಾಹಿತ್ಯ , ಸಂಸ್ಕೃತಿ, ಸಂಪ್ರದಾಯ, ಬದುಕಿನ ವೈವಿಧ್ಯ ಹಾಗೂ ತುಳು ಭಾಷೆಯ ಸೊಗಡನ್ನು ಮನಮುಟ್ಟುವ ರೀತಿಯಲ್ಲಿ ಕಟ್ಟಿಕೊಡಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಧ್ವನಿ ಮತ್ತಷ್ಟು ಜೀವ ತುಂಬಿದೆ. ಮಾತುಗಳನ್ನು ಕೇವಲ ಕೇಳಿಸುವುದಕ್ಕಿಂತ, ಅವುಗಳ ಭಾವವನ್ನು ಕೇಳುಗರ ಮನಸ್ಸಿಗೆ ತಲುಪಿಸುವ ರೀತಿಯ ಅವರ ಧ್ವನಿ ನಿರೂಪಣೆ ವಿಡಿಯೋಗೆ ವಿಶೇಷ ಮೆರುಗು ನೀಡಿದೆ.

Ad Widget

Ad Widget <> Ad Widget


ಮುಖ್ಯಮಂತ್ರಿಗಳ ಅಧಿಕೃತ ಪುಟದಲ್ಲಿ ಪ್ರಸಾರವಾದ ಈ ವಿಡಿಯೋಗೆ ಅಲ್ಪಾವಧಿಯಲ್ಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ ಎರಡು ದಿನಗಳಲ್ಲಿ ಸುಮಾರು 5 ಲಕ್ಷ ವೀಕ್ಷಣೆ ಪಡೆದುಕೊಂಡಿದೆ. ತುಳುವಿನ ಬಗ್ಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಕರಾವಳಿಯ ಜನರ ನಡುವೆ ಈ ವಿಡಿಯೋ ವಿಶೇಷ ಗಮನ ಸೆಳೆದಿದ್ದು, ದಿವ್ಯಶ್ರೀ ಅವರ ಕಂಠಸಿರಿಯೂ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.



Ad Widget


ನಿರೂಪಕಿ ಹಾಗೂ ವಾಯ್ಸ್‌ಓವರ್ ಆರ್ಟಿಸ್ಟ್ ಆಗಿರುವ ದಿವ್ಯಶ್ರೀ, ತಮ್ಮ ಧ್ವನಿಯ ಏರಿಳಿತ, ಉಚ್ಚಾರಣೆಯ ಸ್ಪಷ್ಟತೆ ಹಾಗೂ ಭಾವಪೂರ್ಣ ನಿರೂಪಣೆಯ ಮೂಲಕ ತುಳುನಾಡಿನ ಮಣ್ಣಿನ ಸೊಗಡನ್ನು ಧ್ವನಿಯಲ್ಲೇ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ತುಳು ಭಾಷೆಯ ಬಗ್ಗೆ ಹೆಮ್ಮೆ, ಕರಾವಳಿಯ ಸಂಸ್ಕೃತಿಯ ಬಗ್ಗೆ ಅಭಿಮಾನ ಹಾಗೂ ವಿಡಿಯೋದಲ್ಲಿನ ದೃಶ್ಯಗಳಿಗೆ ಹೊಂದಿಕೊಳ್ಳುವ ಧ್ವನಿ ನಿರೂಪಣೆ ಅವರ ವಾಯ್ಸ್‌ಓವರ್‌ನ ವಿಶೇಷತೆಯಾಗಿದೆ.

Ad Widget

Ad Widget


ಪ್ರಸ್ತುತ ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಶ್ರೀ, ಇದಕ್ಕೂ ಮೊದಲು ಹಲವು ಸುದ್ದಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪತ್ರಿಕೋದ್ಯಮದ ಅನುಭವದ ಜತೆಗೆ ಡಾಕ್ಯುಮೆಂಟರಿ, ವಿಶೇಷ ವರದಿ ಹಾಗೂ ಜಾಹೀರಾತುಗಳಿಗೆ ಧ್ವನಿ ನೀಡಿರುವ ಅವರು ವಾಯ್ಸ್‌ಓವರ್ ಕ್ಷೇತ್ರದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. “ನಿಖರ ನ್ಯೂಸ್”ನ ಹಲವಾರು ವಿಡಿಯೋಗಳಲ್ಲೂ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.


2023ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುವ ದಿವ್ಯಶ್ರೀ, ಅಧ್ಯಯನ ಹಾಗೂ ವೃತ್ತಿ ಎರಡೂ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.


ಅರಿಯಡ್ಕ ಗ್ರಾಮದ ತ್ಯಾಗರಾಜನಗರ ನಿವಾಸಿ ವಿಠಲ ರೈ ಹಾಗೂ ಶಾಲಿನಿ ರೈ ದಂಪತಿಯ ಪುತ್ರಿಯಾಗಿರುವ ದಿವ್ಯಶ್ರೀ ಅವರ ವೃತ್ತಿ ಬದುಕಿನ ಹೆಜ್ಜೆಗಳಿಗೆ ಸಹೋದರಿ ಮಧುಶ್ರೀ ರೈ ಅವರೂ ಪ್ರೋತ್ಸಾಹ ನೀಡುತ್ತಿದ್ದಾರೆ.
ತುಳುವಿಗೆ ಅಧಿಕೃತ ಮಾನ್ಯತೆ ದೊರೆತ ಸಂಭ್ರಮದ ಕ್ಷಣದಲ್ಲಿ, ತುಳುನಾಡಿನ ಕಥೆಯನ್ನು ತಮ್ಮ ಕಂಠದ ಮೂಲಕ ಸಾವಿರಾರು ಜನರಿಗೆ ತಲುಪಿಸಿದ ದಿವ್ಯಶ್ರೀ ರೈ ವಜ್ರದುಂಬಿ ಅವರ ಧ್ವನಿ ಈಗ ಪುತ್ತೂರಿನಿಂದ ತುಳುನಾಡಿನಾಚೆಗೂ ಕೇಳಿಸುತ್ತಿದೆ.

Ad Widget
Continue Reading

ಅಂತರ ರಾಜ್ಯ

Punjab-ಪಂಜಾಬ್ ವಿವಾಹದಲ್ಲಿ ವಧುವಿನ ಮೇಲೆ 8 ಕೋಟಿ ರೂ. ನೋಟುಗಳ ಮಳೆ: ಹಬ್ಬಿದ್ದ ವದಂತಿಗೆ ಬಿತ್ತು ಬ್ರೇಕ್; ಅಸಲಿ ಮೊತ್ತ ಎಷ್ಟು ಗೊತ್ತೇ?

Published

on



Ad Widget

Ad Widget

Ad Widget

Ad Widget

ಪಂಜಾಬ್‌ನ ತರಣ್ ತರಣ್‌ನಲ್ಲಿ ಇತ್ತೀಚೆಗೆ ನಡೆದ ಅದ್ಧೂರಿ ವಿವಾಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮದುವೆಯ ಸಂಭ್ರಮದಲ್ಲಿ ವರ ಮತ್ತು ವಧುವಿನ ಮೇಲೆ ಬರೋಬ್ಬರಿ 8 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸುರಿಮಳೆಗೈಯಲಾಗಿದೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹರಡಿತ್ತು.

Ad Widget

Ad Widget

Ad Widget

Ad Widget

ಅಮೃತಸರ, ಫೆ.19: ಪಂಜಾಬ್‌ನ ತರಣ್ ತರಣ್‌ನಲ್ಲಿ ಇತ್ತೀಚೆಗೆ ನಡೆದ ಅದ್ಧೂರಿ ವಿವಾಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮದುವೆಯ ಸಂಭ್ರಮದಲ್ಲಿ ವರ ಮತ್ತು ವಧುವಿನ ಮೇಲೆ ಬರೋಬ್ಬರಿ 8 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸುರಿಮಳೆಗೈಯಲಾಗಿದೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹರಡಿತ್ತು.

Ad Widget

Ad Widget

Ad Widget alt="Ad Widget"/>

Ad Widget

ಘಟನೆಯ ಹಿನ್ನೆಲೆ:
ರಾಜಮನೆತನದ ಶೈಲಿಯಲ್ಲಿ ನಡೆದ ಈ ವಿವಾಹದಲ್ಲಿ, ಸಂಭ್ರಮಾಚರಣೆಯ ಭಾಗವಾಗಿ ನೋಟುಗಳನ್ನು ಗಾಳಿಯಲ್ಲಿ ತೂರಿ ಸುರಿಮಳೆಗೈಯಲಾಗಿತ್ತು. ಅತಿಥಿಗಳು ಈ ದೃಶ್ಯವನ್ನು ಕಂಡು ಆಶ್ಚರ್ಯಚಕಿತರಾಗಿದ್ದರು. ಈ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದಂತೆ, ಕೆಲವರು ಇದನ್ನು ಶ್ರೀಮಂತಿಕೆಯ ಪ್ರದರ್ಶನ ಎಂದು ಟೀಕಿಸಿದರೆ, ಇನ್ನು ಕೆಲವರು ಇದು ಅಲ್ಲಿನ ಸಂಪ್ರದಾಯ ಎಂದು ಅಭಿಪ್ರಾಯಪಟ್ಟಿದ್ದರು. ಕೋಟ್ಯಂತರ ರೂಪಾಯಿ ಹಣವನ್ನು ಹೀಗೆ ಪೋಲು ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ಆರಂಭವಾಗಿದ್ದವು.

Ad Widget

Ad Widget <> Ad Widget

ಅಸಲಿ ಸತ್ಯ ಬಹಿರಂಗ:
ಆದರೆ, ಈ ಹರಡಿದ್ದ ಸುದ್ದಿಯಲ್ಲಿ ಸತ್ಯಾಂಶವಿಲ್ಲ ಎಂಬುದು ಈಗ ತಿಳಿದುಬಂದಿದೆ. ಮದುವೆಯ ಕಾರ್ಯಕ್ರಮದಲ್ಲಿದ್ದ ಡಿಜೆ ಆಪರೇಟರ್ ಈ ಕುರಿತು ಅಸಲಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ವಾಸ್ತವವಾಗಿ ಅಲ್ಲಿ ಸುರಿಸಿದ್ದು 8 ಕೋಟಿ ರೂಪಾಯಿಗಳನ್ನಲ್ಲ, ಬದಲಿಗೆ ಕೇವಲ 3 ಲಕ್ಷ ರೂಪಾಯಿಗಳನ್ನು ಮಾತ್ರ!



Ad Widget

ಹಣದ ರಾಶಿ ದೊಡ್ಡದಾಗಿ ಕಾಣಲು ಕಾರಣವೆಂದರೆ, ಅಲ್ಲಿ ಬಳಸಲಾದ ಬಹುಪಾಲು ನೋಟುಗಳು 10 ರೂಪಾಯಿ ಮುಖಬೆಲೆಯದ್ದಾಗಿದ್ದವು. ಕಡಿಮೆ ಮುಖಬೆಲೆಯ ನೋಟುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ, ನೋಡುವವರಿಗೆ ಅದು ಕೋಟ್ಯಂತರ ರೂಪಾಯಿಯಂತೆ ಭಾಸವಾಗಿತ್ತು. “ಇದು ಕುಟುಂಬದ ಸಂತೋಷವನ್ನು ವ್ಯಕ್ತಪಡಿಸುವ ಒಂದು ವಿಧಾನ ಮತ್ತು ಸ್ಥಳೀಯ ಆಚರಣೆಯ ಭಾಗವಾಗಿದೆ” ಎಂದು ಸ್ಪಷ್ಟಪಡಿಸಲಾಗಿದೆ.

Ad Widget

Ad Widget

ಒಟ್ಟಿನಲ್ಲಿ, 8 ಕೋಟಿ ರೂಪಾಯಿ ಎಂದು ಹಬ್ಬಿದ್ದ ಸುದ್ದಿ ಕೇವಲ ಅತಿಶಯೋಕ್ತಿಯಾಗಿದ್ದು, ಸತ್ಯ ತಿಳಿಯುತ್ತಿದ್ದಂತೆ ವಿವಾದಕ್ಕೆ ತೆರೆ ಬಿದ್ದಿದೆ.

Ad Widget
Continue Reading

ವೈರಲ್‌ ನ್ಯೂಸ್‌

ಚೀನಾದಲ್ಲಿ ಇತಿಹಾಸ ನಿರ್ಮಾಣ : ಗಂಟೆಗೆ 700ಕಿಮೀ ವೇಗದಲ್ಲಿ ಸಂಚರಿಸುವ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

Published

on



Ad Widget

Ad Widget

Ad Widget

Ad Widget

ಬೀಜಿಂಗ್‌: ನವೀನ ತಂತ್ರಜ್ಞಾನಗಳಿಂದ ಜಗತ್ತನ್ನು ನಿಬ್ಬೆರಗುಗೊಳಿಸುವ ಚೀನಾ ಇದೀಗ ಮತ್ತೊಂದು ಇತಿಹಾಸ ನಿರ್ಮಿಸಿದೆ. ಗಂಟೆಗೆ 700 ಕಿ.ಮೀ ಸಂಚರಿಸುವ ಸೂಪರ್‌ ಕಂಡಕ್ಟಿವ್‌ ಮ್ಯಾಗ್ಲೆವ್‌ ರೈಲಿನ ಮಾದರಿಯ ಪ್ರಾಯೋಗಿಕ ಪರೀಕ್ಷೆಯನ್ನು ಚೀನಾ ಯಶಸ್ವಿಯಾಗಿ ನಡೆಸಿದೆ. ಈ ವೇಗ ನೂತನ ವಿಶ್ವದಾಖಲೆಯಾಗಿದೆ. ಒಂದು ವೇಳೆ ಈ ರೈಲು ನಿಜರೂಪ ಪಡೆದು ಹಳಿ ಮೇಲೆ ಓಡಿದರೆ ಅದು ವಿಶ್ವದ ಅತ್ಯಂತ ವೇಗದ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

Ad Widget

Ad Widget

Ad Widget

Ad Widget

ಹಾಲಿ ಚೀನಾದಲ್ಲಿ ಇರುವ ಶಾಂಘೈ ಮ್ಲಾಗ್ಲೇವ್‌ ಗಂಟೆಗೆ 460 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ವಿಶ್ವದ ಅತಿವೇಗದ ರೈಲು ಎಂಬ ಹಿರಿಮೆ ಹೊಂದಿದೆ. ಪರೀಕ್ಷಿಸಿದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾನಿಲಯ
ಚೀನಾದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾನಿಲಯವು 700 ಕಿ.ಮೀ/ ಗಂಟೆಗೆ ಸಂಚರಿಸುವ ರೈಲಿನ ಮಾದರಿಯನ್ನು ಪರೀಕ್ಷಿಸಿದೆ. 400 ಮೀ.ಉದ್ದ ಮ್ಯಾಗ್ಲೆವ್‌ ಹಳಿಯ ಮೇಲೆ 1000 ಕೆಜಿ ತೂಕದ ರೈಲಿನ ಮಾದರಿಯನ್ನು ಪರೀಕ್ಷಿಸಲಾಗಿದೆ. ಈ ಪರೀಕ್ಷೆ ವೇಳೆ ಗಂಟೆಗೆ 700 ಕಿ.ಮೀ ದೂರ ಸಂಚರಿಸಬೇಕಾದ ವೇಗವನ್ನು ರೈಲು ಕೇವಲ 2 ಸೆಕೆಂಡ್‌ಗಳಲ್ಲೇ ಸಾಧಿಸುವ ಮೂಲಕ, ಯೋಜನೆಯ ಕಾರ್ಯಸಾಧು ಬಗ್ಗೆ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಇದು ಇದುವರೆಗೆ ಪರೀಕ್ಷಿಸಲ್ಪಟ್ಟ ಅತ್ಯಂತ ವೇಗದ ಸೂಪರ್‌ ಕಂಡಕ್ಟಿಂಗ್‌ ಮ್ಯಾಗ್ಲೆವ್‌ ರೈಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಂಶೋಧನಾ ತಂಡವು ಒಂದು ದಶಕದಿಂದ ಈ ಯೋಜನೆಗಾಗಿ ಶ್ರಮಿಸುತ್ತಿತ್ತು
ಸಂಶೋಧನಾ ತಂಡವು ಒಂದು ದಶಕದಿಂದ ಈ ಯೋಜನೆಗಾಗಿ ಶ್ರಮಿಸುತ್ತಿತ್ತು, ಇದೇ ವರ್ಷದ ಜನವರಿಯಲ್ಲಿ ಇದೇ ಹಳಿ ಮೇಲೆ 648 ಕಿ.ಮೀ/ ಗಂಟೆ ಸಂಚಾರದ ಪರೀಕ್ಷೆ ನಡೆಸಿತ್ತು. ಇದೀಗ ಆ ವೇಗ 700 ಕಿ.ಮೀಗೆ ಹೆಚ್ಚಿದೆ. ಮ್ಯಾಗ್ಲೇವ್‌ ತಂತ್ರಜ್ಞಾನದ ರೈಲುಗಳಿಗೆ ಚಕ್ರ ಇರುವುದಿಲ್ಲ. ಬದಲಾಗಿ ಅವು ಹಳಿ ಮತ್ತು ರೈಲಿನ ನಡುವೆ ಉತ್ಪತ್ತಿಯಾಗುವ ಅಯಂಸ್ಕಾತೀಯ ವಲಯದಲ್ಲಿ ಗಾಳಿಯಲ್ಲೇ ತೇಲಿಕೊಂಡು ಮುಂದೆ ಸಾಗುತ್ತದೆ.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading