ಶಿಕ್ಷಣ
CET Exam | ರಾಜ್ಯದಲ್ಲಿ ಏ.18-19-20 ರಂದು ಸಿಇಟಿ ಪರೀಕ್ಷೆ : ಈ ಬಾರಿ ಹೊಸ ನಿಯಮ – ಬೇಕಾದ ದಾಖಲೆ ಹಾಗೂ ಯಾವಾ ರೀತಿ ರಿಜಿಸ್ಟ್ರೇಷನ್ ಮಾಡಬೇಕು – ತಪ್ಪದೆ ನೋಡಿ ಈ ವಿಡಿಯೋ
ಬೆಂಗಳೂರು: ಏಪ್ರಿಲ್ 20, 21 ಹಾಗೂ 22ಕ್ಕೆ ನಿಗದಿಯಾಗಿದ್ದ ಸಿಇಟಿ ಪರೀಕ್ಷಾ (CET Exam) ದಿನಾಂಕವನ್ನು ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬದಲಾವಣೆ ಮಾಡಿದೆ.ಏಪ್ರಿಲ್ 20ರಿಂದ 22ರ ವರೆಗೆ ನಡೆಯಬೇಕಾಗಿದ್ದ ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19 ಹಾಗೂ 20ಕ್ಕೆ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ವಿಡಿಯೋ ಕೊನೆಯಲ್ಲಿದೆ. ಅದಕ್ಕಿಂತ ಮೊದಲು ನೂತನ ನಿಯಮ ಓದಿ
ಏಪ್ರಿಲ್ 21ರಂದು ಎನ್‌ಡಿಎ (National Defence Academy) ಪರೀಕ್ಷೆ ಇರುವ ಹಿನ್ನೆಲೆ ಸಿಇಟಿ ಪರೀಕ್ಷಾ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದಿನಿಂದ ಸಾಮಾನ್ಯ ಪ್ರವೇಶ ಪರೀಕ್ಷೆ -KCET 2024 ಗೆ ಅರ್ಜಿ ಸ್ವೀಕಾರ ಆರಂಭಿಸಿದೆ. ಫೆಬ್ರುವರಿ 10 ರವರೆಗೆ ಅರ್ಜಿ ಹಾಕಲು, ಫೆಬ್ರುವರಿ 14 ರವರೆಗೆ ಅರ್ಜಿ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದೆ.
ಈ ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆಗಳು ಹಾಗೂ ಇತರೆ ಕೆಲವು ಪ್ರಮುಖ ಮಾರ್ಗಸೂಚಿಗಳನ್ನು ಇಲ್ಲಿ ನೀಡಲಾಗಿದೆ. ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024-25ರಲ್ಲಿ ಪ್ರವೇಶಾತಿ ಬಯಸುವವರಿಗಾಗಿ ಏಪ್ರಿಲ್ 20 ಮತ್ತು 21ರಂದು ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಈ ಹಿಂದೆ ನಿಗದಿ ಮಾಡಲಾಗಿತ್ತು. ಅಲ್ಲದೇ ಆಸಕ್ತ ಅಭ್ಯರ್ಥಿಗಳು ಜನವರಿ 10 ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು ಎಂದು ಕೆಇಎ ಕಾರ್ಯ ನಿರ್ವಾಹಕಿ ಎಸ್ ರಮ್ಯಾ ತಿಳಿಸಿದ್ದರು.
ಕೆಸಿಇಟಿ ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆಗಳು: ದ್ವಿತೀಯ ಪಿಯುಸಿ / 12ನೇ ತರಗತಿ / ತತ್ಸಮಾನ ವಿದ್ಯಾರ್ಹತೆಯನ್ನು ವಿಜ್ಞಾನ ವಿಷಯಗಳಲ್ಲಿ ಓದುತ್ತಿರುವವರು ಅರ್ಜಿ ಸಲ್ಲಿಸಬಹುದು.ಹಿಂದಿನ ವರ್ಷದಲ್ಲಿ ಈ ಪರೀಕ್ಷೆ ಬರೆದು ಪಾಸಾದವರು ಸಹ ಅರ್ಜಿ ಸಲ್ಲಿಸಬಹುದು. ಕೆಇಎ ಪ್ರವೇಶಾತಿ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿ ಮೆಡಿಕಲ್ / ಡೆಂಟಲ್ / ಆಯುರ್ವೇದ / ಯುನಾನಿ / ಹೋಮಿಯೋಪತಿ ಸ್ನಾತಕ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಯಸುವವರು ಇಂಗ್ಲಿಷ್ ಅನ್ನು ಒಂದು ಭಾಷೆಯಾಗಿ ಓದಿರಬೇಕು. ಹಾಗೂ ಭೌತಶಾಸ್ತ್ರ, ಕೆಮಿಸ್ಟ್ರಿ, ಬಯೋಲಜಿ ವಿಷಯಗಳನ್ನು ಓದಿ ಶೇಕಡ. 50 ಅಂಕಗಳೊಂದಿಗೆ ( ಎಸ್‌ಸಿ, ಎಸ್‌ಸಿ, ಇತರೆ ಹಿಂದುಳಿದ ವರ್ಗದವರು ಶೇಕಡ.40 ಅಂಕಗಳೊಂದಿಗೆ) ಪಾಸಾಗಿರಬೇಕು.
ನೀಟ್ 2024 ಪರೀಕ್ಷೆ ಬರೆದವರು ಫಲಿತಾಂಶ ಮಾಹಿತಿಯನ್ನು ನಂತರದಲ್ಲಿ ಕೆಇಎ ವೆಬ್‌ಸೈಟ್‌ನಲ್ಲಿ ಫಿಲ್ ಮಾಡಬೇಕು. ಈ ಕೋರ್ಸ್‌ಗಳ ಆಕಾಂಕ್ಷಿ ಅಭ್ಯರ್ಥಿಗಳು ಸಹ ಈಗಲೇ ಅರ್ಜಿ ಸಲ್ಲಿಸಬೇಕು.
ಕೆಇಎ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿ 2024-25 ನೇ ಸಾಲಿನಲ್ಲಿ ಯಾವ ಪದವಿ ಕೋರ್ಸ್‌ಗೆ ಪ್ರವೇಶ ಪಡೆಯಲು, ಯಾವ ವಿಷಯಗಳಿಗೆ ಕರ್ನಾಟಕ ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕೆಳಗಿನಂತೆ ತಿಳಿಸಲಾಗಿದೆ :
ಇಂಜಿನಿಯರಿಂಗ್ ಮತ್ತು ಟೆಕ್ನಿಕಲ್ ಕೋರ್ಸ್‌ಗಳು PCMಫಾರ್ಮ್ ಸೈನ್ಸ್ ಕೋರ್ಸ್‌ಗಳು( ಬಿಎಸ್ಸಿ ಕೃಷಿ, ರೇಷ್ಮೆ ಕೃಷಿ, ತೋಟಗಾರಿಕೆ ಕೋರ್ಸ್‌ಗಳು – PCMB
ಪಶುವೈದ್ಯಕೀಯ ವಿಜ್ಞಾನ, ಪಶು ಸಂಗೋಪನೆ, ಪ್ರಕೃತಿ ಚಿಕಿತ್ಸೆ, ಯೋಗ ಮತ್ತು ಬಿಎಸ್ಸಿ (ನರ್ಸಿಂಗ್) – PCB
ಬಿ.ಫಾರ್ಮಾ, ದ್ವಿತೀಯ ವರ್ಷದ ಬಿ ಫಾರ್ಮಾ, ಫಾರ್ಮಾ ಡಿ – PCM or PCB
ಮೆಡಿಕಲ್ / ಡೆಂಟಲ್ / ಆಯುಷ್ ಕೋರ್ಸ್‌ಗಳು – ಯುಜಿ NEET
ಆರ್ಕಿಟೆಕ್ಚರ್ ಕೋರ್ಸ್- NATA
ಬಿಪಿಟಿ, ಬಿಎಸ್ಸಿ, ಅಲೈಡ್ ಹೆಲ್ತ್ ಸೈನ್ಸ್, ಬಿಪಿಒ ಕೋರ್ಸ್‌ಗಳು ಸಿಇಟಿಗೆ ರಿಜಿಸ್ಟ್ರೇಷನ್ ಪಡೆಯಬೇಕು. ಆದರೆ ಪ್ರವೇಶ ಪರೀಕ್ಷೆ ಬರೆಯುವ ಅಗತ್ಯ ಇಲ್ಲ. ಪಿಯು ಅಂಕಗಳ ಆಧಾರದಲ್ಲಿ ಕೌನ್ಸಿಲಿಂಗ್ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ದ್ವಿತೀಯ ಪಿಯುಸಿ ಅಂಕಪಟ್ಟಿ ( ಹಿಂದಿನ ವರ್ಷದ ವಿದ್ಯಾರ್ಥಿಗಳಾಗಿದ್ದಲ್ಲಿ) ಪ್ರಸ್ತುತ ದ್ವಿತೀಯ ಪಿಯು ಓದುತ್ತಿರುವವರಿಗೆ ಪಿಯು ಅಂಕಪಟ್ಟಿ ಕಡ್ಡಾಯವಲ್ಲ.
* ಎಲ್ಲ ಮೀಸಲಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆಗಳನ್ನು ಸಿದ್ಧತೆ ಮಾಡಿಕೊಳ್ಳಬೇಕು.
* ಕರ್ನಾಟಕದಲ್ಲಿ ಅಧ್ಯಯನ ಮಾಡಿದ ವಿವರಗಳು
* ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ (JPG ಸ್ವರೂಪ -ಗರಿಷ್ಠ 50KB ಗಾತ್ರ)
* ಅಭ್ಯರ್ಥಿಯ ಸಹಿ (JPG ಸ್ವರೂಪ -ಗರಿಷ್ಠ 50KB ಗಾತ್ರ)
* ಎಡಗೈ ಹೆಬ್ಬೆರಳು ಮುದ್ರೆ (JPG ಸ್ವರೂಪ -ಗರಿಷ್ಠ 50KB ಗಾತ್ರ)
ಕೆಸಿಇಟಿ ಪರೀಕ್ಷೆ ಬರೆಯುವವರ ಗಮನಕ್ಕಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಕರ್ನಾಟಕ ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಇವರು ನಿರ್ಧರಿಸುವ ಮೊದಲನೇ ಮತ್ತು ಎರಡನೇ ಪಿಯುಸಿ ಪಠ್ಯಕ್ರಮದ ಆಧಾರಿತವಾಗಿರುತ್ತವೆ.
ಯಾವಾ ರೀತಿ ರಿಜಿಸ್ಟ್ರೇಷನ್ ಮಾಡಬೇಕು ನೋಡಿ:
ಶಿಕ್ಷಣ
Vivekananda-ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.
4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ, ದಿವಿಜ್ಞಾ ಭಾಗವಹಿಸಿರುತ್ತಾರೆ.
4×400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ , ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ, ಧನ್ವಿ ಭಾಗವಹಿಸಿರುತ್ತಾರೆ.
ವೈಯಕ್ತಿಕ ವಿಭಾಗ:
- ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
- ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Philomena-ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ
ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.
ಪುತ್ತೂರು ನ. 24: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಆಯಿಷತ್ ಶಮಾ ಎ, ಸಿಂಚನ ಬಿ ಹಾಗೂ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಅದಿತಿ, ಶ್ರೀದೇವಿ ಎನ್, ಗಣೇಶ್ ಟಿ ಡಬ್ಲ್ಯೂ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳಾದ ರಂಜನ್ ಎಸ್, ರತನ್ ಎನ್ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾದವರು. ಈ ಮೂಲಕ ವಿದ್ಯಾರ್ಥಿಗಳು ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕ ಹೊಂದಲು ಬೇಕಾಗಿರುವ ಅರ್ಹತಾ ಪಡೆದುಕೊಂಡಿದ್ದಾರೆ.
ಈ ವಿದ್ಯಾರ್ಥಿಗಳೊಂದಿಗೆ ಸಹಾಯಕ ಪ್ರಾದ್ಯಾಪಕರುಗಳಾದ ಸಂತೋಷ್ ಶೆಟ್ಟಿ ಅವರು ರಾಜಕೀಯ ಶಾಸ್ತ್ರ, ರಶ್ಮಿ ವಿ, ಶ್ರದ್ಧಾ ಎ ಎಸ್ ಅವರು ಕಂಪ್ಯೂಟರ್ ಸೈನ್ಸ್, ಪೃಥ್ವಿ ಕೆ ಅವರು ಕಾಮರ್ಸ್, ಸುಜಿತ್ ಎಸ್, ಕೃತಿ ಎ ಅವರು ಭೌತಶಾಸ್ತ್ರ ಹಾಗೂ ಅಂಜು ಜೇಮ್ಸ್ ಅವರು ಗಣಿತ ಶಾಸ್ತ್ರ ವಿಷಯದಲ್ಲಿ ಕೆ-ಸೆಟ್ ತೇರ್ಗಡೆಯಾಗಿದ್ದಾರೆ.

ಪ್ರಸ್ತುತ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿಷಯದ ಕುರಿತು ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದಿಂದ ಹಾಗೂ ವಿಷಯವಾರು ಪತ್ರಿಕೆಗಳಿಗೆ ಆಯಾ ವಿಭಾಗಗಳಿಂದ ತರಬೇತಿ ನೀಡಲಾಗಿತ್ತು. ವಿಶಿಷ್ಟ ಸಾಧನೆಗೈದ ಈ ವಿದ್ಯಾರ್ಥಿಗಳನ್ನು ಹಾಗೂ ಪ್ರಾದ್ಯಾಪಕರುಗಳನ್ನು ಸಂಚಾಲಕ ರೆ. ಡಾ. ಜೆ. ಬಿ. ಸಲ್ದಾನ್ಹ, ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಸ್ನಾತಕೋತ್ತರ ವಿಭಾಗ ಸಂಯೋಜಕರುಗಳಾದ ಡಾ. ವಿನಯಚಂದ್ರ, ಡಾ. ವಿಪಿನ್ ನಾಯ್ಕ್, ಪ್ರತೀಕ್ಷಾ ಅಭಿನಂದಿಸಿದ್ದಾರೆ.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್‌ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.
ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.
ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.
-
ಶಿಕ್ಷಣ21 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು21 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್23 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು22 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ4 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಅಪರಾಧ21 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ20 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ; ಪೇಟೆಯಲ್ಲಿ ಆಮಂತ್ರಣ ವಿತರಣೆ















