Connect with us

ಬೆಂಗಳೂರು

ರಾಜ್ಯ ಬಿಜೆಪಿ ಲೋಕಸಭಾ ಚುನಾವಣೆ ಸಿದ್ದತಾ ಸಭೆ : ಮೊದಲ ದಿನವೇ ಹಲವು ಕ್ಷೇತ್ರಗಳ ಸಂಸದರ ಬದಲಾವಣೆಗೆ ಒತ್ತಾಯ: ಇಂದು ಮಂಗಳೂರು, ಉಡುಪಿ ಅಭಿಪ್ರಾಯ ಸಂಗ್ರಹ

Published

on



Ad Widget

Ad Widget

Ad Widget

Ad Widget

ಬೆಂಗಳೂರು: ಲೋಕಸಭಾ ಚುನಾವಣಾ ಸಿದ್ಧತೆಗೆ ಬಿಜೆಪಿಯ ರಾಜ್ಯ ಘಟಕದ ಪ್ರಮುಖರು ಆರಂಭಿಸಿರುವ ಕ್ಲಸ್ಟರ್‌ವಾರು ಸಭೆಯ ಮೊದಲ ದಿನವೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವಂತೆ ಸ್ಥಳೀಯ ನಾಯಕರು ಬೇಡಿಕೆ ಇಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಗರದ ಹೊರ ವಲಯದ ರಮಾಡ ರೆಸಾರ್ಟ್‌ನಲ್ಲಿ ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೆ 13 ಲೋಕಸಭಾ ಕ್ಷೇತ್ರಗಳ ಮುಖಂಡರ ಸಭೆ ನಡೆಯಿತು. ಗುರುವಾರ 15 ಲೋಕಸಭಾ ಕ್ಷೇತ್ರಗಳ ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಇದರಲ್ಲಿ ಮಂಗಳೂರು ಉಡುಪಿಯೂ ಸೇರಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಂಸದ ಡಿ.ವಿ. ಸದಾನಂದ ಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ, ಬಿಜೆಪಿ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಜಿ.ವಿ. ರಾಜೇಶ್, ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾ‌ರ್, ಶಾಸಕರಾದ ಬಸವರಾಜ ಬೊಮ್ಮಾಯಿ, ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿದ್ದರು.

Ad Widget

Ad Widget <> Ad Widget

ಬೀದರ್‌ ಲೋಕಸಭಾ ಕ್ಷೇತ್ರದಿಂದ ಸಭೆ ಆರಂಭಿಸಲಾಯಿತು. ಶಾಸಕರಾದ ಪ್ರಭು ಚವ್ಹಾಣ್ ಮತ್ತು ಶರಣು ಸಲಗರ ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ಆಕ್ಷೇಪ ಎತ್ತಿದರು. ಸಚಿವರು ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಸೋಲಿಸಲು ಪ್ರಯತ್ನಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಬಾರದು ಎಂಬ ಬೇಡಿಕೆ ಮಂಡಿಸಿದರು. ಈ ಸಂದರ್ಭದಲ್ಲಿ ಸಚಿವರ ಬೆಂಬಲಿಗರು ಮತ್ತು ಶಾಸಕರ ಮಧ್ಯೆ ವಾಗ್ವಾದ ನಡೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ



Ad Widget

ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಕೊಪ್ಪಳ, ಬಳ್ಳಾರಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹಾಲಿ ಸಂಸದರ ಬದಲಿಗೆ ಬೇರೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಂತೆ ಒತ್ತಾಯಿಸಿದ್ದಾರೆ. ಬಹುತೇಕ ಎಲ್ಲ ಕ್ಷೇತ್ರಗಳಿಂದಲೂ ಕೆಲವರ ಹೆಸರುಗಳನ್ನು ಸ್ಥಳೀಯ ಮುಖಂಡರು ಪ್ರಸ್ತಾಪಿಸಿದ್ದಾರೆ’ ಎಂದು ಪಕ್ಷದ ಮುಖಂಡರೊಬ್ಬರು ರಾಜ್ಯಮಟ್ಟದ ಮಾಧ್ಯಮವೊಂದಕ್ಕೆ ತಿಳಿಸಿದರು.

Click to comment

Leave a Reply

ರಾಜಕೀಯ

H.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ

Published

on



Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮೊದಲ ಆಡಳಿತಾವಧಿಯಲ್ಲಿ ಕೃಪಾ ಆಳ್ವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು ಎಂದು ಹೇಳಿದರು. ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್‌ನಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಗೃಹ ಸಚಿವರ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಅಧಿಕಾರ ಇದೆ ಎಂಬ ಕಾರಣಕ್ಕೆ ಏನು ಬೇಕಾದರೂ ಮಾಡಬಹುದೇ ಎಂದು ಪ್ರಶ್ನಿಸಿದರು. “ಗೃಹ ಇಲಾಖೆ ನಿಮ್ಮಪ್ಪನದ್ದಾ? ನನ್ನ ಕಾರ್ಯಕರ್ತರನ್ನು ಬಂಧಿಸುತ್ತೀರಾ? ನಾನೇ ನಿಮ್ಮ ಕಚೇರಿಗೆ ಬರುತ್ತೇನೆ. ತಾಕತ್ತಿದ್ದರೆ ನನ್ನನ್ನೇ ಬಂಧಿಸಿ ನೋಡೋಣ” ಎಂದು ಸವಾಲು ಹಾಕಿದರು.



Ad Widget

ತಮ್ಮ ಮೇಲೆ ಅನುಮಾನ ಬಂದರೆ ಬಂಧಿಸುವುದಾಗಿ ಹೇಳುವವರು, ಮುಖ್ಯಮಂತ್ರಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಬಗ್ಗೆ ಏಕೆ ಅನುಮಾನ ವ್ಯಕ್ತಪಡಿಸಿಲ್ಲ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಯನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.

Ad Widget

Ad Widget

ತಮ್ಮ ಪುತ್ರನ ಪೋಸ್ಟರ್ ಅಂಟಿಸಿದ ಘಟನೆ ಉಲ್ಲೇಖಿಸಿದ ಕುಮಾರಸ್ವಾಮಿ, ಈ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು. ಹೆದರಿಕೆ, ಬೆದರಿಕೆಗಳಿಗೆ ತಾವು ಬಗ್ಗುವುದಿಲ್ಲ. ಬೇಕಾದರೆ ಕಮಿಷನರ್ ಕಚೇರಿಗೆ ಬರುತ್ತೇನೆ, ಬಂಧಿಸಿ ಎಂದು ಸವಾಲು ಹಾಕಿದರು.

ಜೆ.ಪಿ. ನಗರದ ಮನೆಯಲ್ಲಿ ತಾವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಇಟ್ಟುಕೊಂಡಿದ್ದೇವೆಯೇ ಎಂದು ಪ್ರಶ್ನಿಸಿದ ಅವರು, ಅಧಿಕಾರವನ್ನು ನ್ಯಾಯಯುತವಾಗಿ ಬಳಸಬೇಕು ಎಂದರು. ಸ್ಟಿಂಗ್ ಆಪರೇಷನ್ ನಡೆಸಿದವರನ್ನು ಏಕೆ ಬಂಧಿಸಿಲ್ಲ? ಪೊಲೀಸ್ ಅಧಿಕಾರಿಯನ್ನು ಕೊಲೆ ಮಾಡುವುದಾಗಿ ಹೇಳಿದ ವ್ಯಕ್ತಿಯ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಇದೇ ವೇಳೆ, ತಾವು ಬಳಸಿದ ಪದಗಳ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ತಾವು ಈ ಮಟ್ಟದ ಪದಗಳನ್ನು ಬಳಸಿರಲಿಲ್ಲ. ಆದರೆ, ಮತ್ತೊಬ್ಬರು ಬಳಸಿದ ಪದಗಳಿಂದ ಆಕ್ರೋಶಗೊಂಡು ಪ್ರತಿಕ್ರಿಯಿಸಿದ್ದೇನೆ. ಇದಕ್ಕಾಗಿ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

Ad Widget
Continue Reading

ಬಿಗ್ ನ್ಯೂಸ್

Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್

Published

on



Ad Widget

Ad Widget

Ad Widget

Ad Widget

ನಟ ದರ್ಶನ್‌ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ನಟ ದರ್ಶನ್‌ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈಗಾಗಲೇ ಪ್ರಕರಣದ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿರುವ ಅವರು, ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಈ ಬೆಳವಣಿಗೆ ಪ್ರಕರಣದ ಮುಂದಿನ ವಿಚಾರಣೆಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

Ad Widget

Ad Widget <> Ad Widget

ಇನ್ನೊಂದೆಡೆ, ಪ್ರಕರಣದ ಆರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದಿದೆ. ಜಾಮೀನು ಅರ್ಜಿಗಳ ಕುರಿತ ಆದೇಶವನ್ನು ನ್ಯಾಯಾಲಯ ಅಕ್ಟೋಬರ್ 17ಕ್ಕೆ ಕಾಯ್ದಿರಿಸಿದೆ.



Ad Widget

ವಿನಯ್ ಮಾಫಿ ಸಾಕ್ಷಿಯಾಗುವ ಅರ್ಜಿಯನ್ನು ವಾಪಸ್ ಪಡೆದಿರುವುದು ಪ್ರಕರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆದರೆ, ಈ ಬೆಳವಣಿಗೆಯಿಂದ ಪ್ರಕರಣದ ಇತರ ಆರೋಪಿಗಳ ಮೇಲೆ ಯಾವ ರೀತಿಯ ಪರಿಣಾಮ ಉಂಟಾಗಲಿದೆ ಎಂಬುದು ಮುಂದಿನ ಕಾನೂನು ಪ್ರಕ್ರಿಯೆಯಿಂದ ಸ್ಪಷ್ಟವಾಗಬೇಕಿದೆ.

Continue Reading

ರಾಜಕೀಯ

Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ

Published

on



Ad Widget

Ad Widget

Ad Widget

Ad Widget

ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.



Ad Widget

ಇದೀಗ ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading