ಬಿಗ್ ನ್ಯೂಸ್
Arun Kumar Puthila | ರಾಜ್ಯ ಬಿಜೆಪಿ ಅಭಿಪ್ರಾಯ ಸಂಗ್ರಹದಲ್ಲಿ ಪುತ್ತೂರಿನ ವಿಷಯ ಗಂಭೀರ ಚರ್ಚೆ : ಹಿಂದೂತ್ವ ಬಿಟ್ಟು ಚುನಾವಣೆಗೆ ಹೋಗಲು ಸಾಧ್ಯವಿಲ್ಲ – ಪುತ್ತಿಲ ನಮ್ಮವರೇ ಎಂದ ಕೆಲ ನಾಯಕರು : ಕಟೀಲ್ ಗೈರು..!
ಬೆಂಗಳೂರು, ಜ.11: ಲೋಕಸಭೆ ಚುನಾವಣೆಗೆ (Lok Sabha Elections 2024) ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ (BJP) ನಾಯಕರು ಬೆಂಗಳೂರು ನಗರದ ಯಲಹಂಕದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಆದರೆ, ಸಭೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಬಂಡಾಯದ ಸ್ಪರ್ಧೆಯಿಂದ ಬಿಜೆಪಿ ಹೊಡೆತ ತಿಂದ ಬಗ್ಗೆ ಹೆಚ್ಚು ಚರ್ಚೆಯಾಗಿದೆ. ಇಂತಹ ತಪ್ಪು ನಿರ್ಧಾರ ಕೈಗೊಳ್ಳದಂತೆ ಮುಖಂಡರು ಎಚ್ಚರಿಕೆಯ ಸಲಹೆಯನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭಿಪ್ರಾಯ ಸಂಗ್ರಹದ ವೇಳೆ ವಿಧಾನಸಭಾ ಚುನಾವಣೆಯಲ್ಲಿನ ಪುತ್ತೂರು ಕ್ಷೇತ್ರದಲ್ಲಿ ಪಕ್ಷದ ಸೋಲಿನ ಬಗ್ಗೆಯೇ ಹೆಚ್ಚು ಚರ್ಚೆ ನಡೆಯಿತು. ಸುಳ್ಯದಿಂದ ಅಭ್ಯರ್ಥಿ ಕರೆದುಕೊಂಡು ಬಂದು ಪುತ್ತೂರಿನಲ್ಲಿ ಟಿಕೆಟ್ ಕೊಟ್ಟಿದ್ದು ಸೋಲಿಗೆ ಕಾರಣವಾಗಿದೆ. ಆ ರೀತಿ ಮಾಡಬಾರದಿತ್ತು. ಪಕ್ಷೇತರ ಅಭ್ಯರ್ಥಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಕೂಡಾ ನಮ್ಮವರೇ. ಲೋಕಸಭಾ ಚುನಾವಣೆಗೆ ಎಲ್ಲರೂ ಒಟ್ಟಿಗೆ ಹೋಗುವ ಕೆಲಸ ಆಗಬೇಕು ಎಂದು ಮುಖಂಡರು ಸಲಹೆ ನೀಡಿದ್ದಾರೆ.
ಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಗೈರಾಗಿದ್ದಾರೆ. ಜಿಲ್ಲೆಯಲ್ಲಿ ಕಟೀಲ್ ಅವರಿಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರೇ ಹೇಳುತ್ತಿದ್ದಾರೆ. ಕಟೀಲ್ ಕೆಲಸದ ಬಗ್ಗೆಯೂ ಟೀಕಿಸುತ್ತಿದ್ದಾರೆ. ಈ ನಡುವೆ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿ ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ನಡೆಸಿ ಸೋಲುಂಡಿರುವ ಹಿಂದೂ ಯುವ ನಾಯಕ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಮಾತ್ರವಲ್ಲದೆ ಜಿಲ್ಲಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಇವರಿಗೆ ಟಿಕೆಟ್ ನೀಡಬೇಕು ಎಂದು ಒಂದು ವರ್ಗ ಒತ್ತಾಯಿಸುತ್ತಾ ಬರುತ್ತಿದೆ.
ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಆಯ್ಕೆ ವೇಳೆ ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನ ಮಾಡುವುದು ಸೂಕ್ತ. ಹಿಂದುತ್ವದ ಮೇಲೆಯೂ ಚುನಾವಣೆಗೆ ಹೋಗಬೇಕಾಗುತ್ತದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರದ ಮುಖಂಡರು ಎರಡು ರೀತಿಯ ಅಭಿಪ್ರಾಯ ವ್ಯಕ್ತವಾಗಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಅಭ್ಯರ್ಥಿಯಾದರೆ ಬಿಜೆಪಿ ಗೆಲುವಿಗೆ ಕಷ್ಟವಾಗಬಹುದು. ನಾವು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಅಲ್ಲದೆ, ಅಭ್ಯರ್ಥಿ ಆಯ್ಕೆ ಮಾಡುವಾಗ ನೋಡಿ, ಯೋಚಿಸಿ ತೀರ್ಮಾನ ಮಾಡಿ ಎಂದು ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಲಹೆ ನೀಡಿದ್ದಾರೆ.
ಅನಂತ ಕುಮಾರ್ ಹೆಗಡೆ ಪರ ಬ್ಯಾಟಿಂಗ್ :
ಹಿಂದುತ್ವದ ಆಧಾರದಲ್ಲೇ ಚುನಾವಣೆ ಎದುರಿಸಬೇಕು ಎಂದು ಹೇಳುವ ಮೂಲಕ ಉತ್ತರ ಕನ್ನಡ ಬಿಜೆಪಿಯ ಒಂದು ಗುಂಪು ಪರೋಕ್ಷವಾಗಿ ಸಂಸದ ಅನಂತ ಕುಮಾರ್ ಹೆಗಡೆ ಪರ ಬ್ಯಾಟಿಂಗ್ ಮಾಡಿದೆ. ಅಲ್ಲದೆ, ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಸಮರ್ಪಕ ಜಾರಿಯಾಗಿಲ್ಲ. ಜನರು ಹಿಂದುತ್ವ ಮಾತ್ರ ಅಲ್ಲ, ಅಭಿವೃದ್ಧಿಯನ್ನೂ ಕೇಳುತ್ತಾರೆ ಎಂದು ಕೆಲವು ಮುಖಂಡರು ಹೇಳಿದ್ದಾರೆ.
ಸ್ಥಳೀಯ
Dharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ
ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿದರು.
ಉಜಿರೆ: ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿ, ಜೀರ್ಣೋದ್ಧಾರ ಕಾರ್ಯವು ಸುಸೂತ್ರವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಹಾವೀರ ಅಜ್ರಿ ಉಪಸ್ಥಿತರಿದ್ದರು.
ಅಂತರ ರಾಜ್ಯ
WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.
ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್‌ಮೆಂಟ್‌ಗಳು ಅಥವಾ URL ಲಿಂಕ್‌ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.
ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WhatsApp ವೆಬ್‌ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್‌ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್‌ನಿಂದ ಲಾಗ್‌ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.
WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.
CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್‌ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್‌ಗಳು, ಮಾಧ್ಯಮ ಹಾಗೂ ಇತರ ಫೈಲ್‌ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್‌ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.
CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್‌ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.
CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.
ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.
CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್‌ಮೆಂಟ್‌ಗಳನ್ನು ಸಾಮಾನ್ಯ ಫೈಲ್‌ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್‌ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.
ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್‌ಗಳು ಮತ್ತು ಅಟ್ಯಾಚ್‌ಮೆಂಟ್‌ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಬಿಗ್ ನ್ಯೂಸ್
Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
-
ನಿಧನ ವಾರ್ತೆ23 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ23 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ23 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ22 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ16 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಸ್ಥಳೀಯ23 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಅಂತರ ರಾಜ್ಯ23 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ22 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















