ಪುತ್ತೂರು
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ : ಮಾಜಿ ಶಾಸಕರಿಗೆ ಸವಾಲು ಹಾಕಿದ ಶಾಸಕ ಅಶೋಕ್ ರೈ
ಪುತ್ತೂರು:೪೦ % ಆಸೆಯಿಂದ ಅನುದಾನ ಇಲ್ಲದಿದ್ದರೂ ಸಿಕ್ಕ ಸಿಕ್ಕಲ್ಲಿ ರಸ್ತೆ ಅಭಿವೃದ್ದಿ ಮಾಡುವುದಾಗಿ ಹೇಳಿ ತೆಂಗಿನ ಕಾಯಿ ಒಡೆದಿದ್ದಾರೆ, ತೆಂಗಿನ ಕಾಯಿ ಒಡೆದ ಮಾತ್ರಕ್ಕೆ ಅಥವಾ ಪತ್ರ ಬರೆದ ಮಾತ್ರ ರಸ್ತೆ ಅಭಿವೃದ್ದಿಯಾಗುವುದಿಲ್ಲ, ಹಿಂದಿನ ಶಾಸಕರು ತೆಂಗಿನ ಒಡೆದ ಕೇವಲ ಮೂರು ರಸ್ತೆಯನ್ನು ಬಿಟ್ಟು ಕೊಡ್ತೇನೆ ಅದನ್ನು ಅವರೇ ಅಭಿವೃದ್ದಿ ಮಾಡಿ ತೋರಿಸಲಿ ಎಂದು ಶಾಸಕರಾದ ಅಶೋಕ್ ಕುಮಾರ್ ರೈ ಬಿಜೆಪಿಗರಿಗೆ ಸವಾಲು ಹಾಕಿದ್ದಾರೆ.
ಬೆಟ್ಟಂಪಾಡಿ ಗ್ರಾಮದ ಬೇಂಗತ್ತಡ್ಕ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಈಗ ನಡೆಯುತ್ತಿರುವ ಕಾಮಗಾರಿಗೆ ಮಾಜಿ ಶಾಸಕರು ಅನುದಾನ ತಂದಿದ್ದಾರೆ ಎಂದು ಮಾಧ್ಯಮದ ಮುಂದೆ ಹೇಳುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ತೆಂಗಿನ ಕಾಯಿ ಒಡೆದು ಜನರನ್ನು ಮೋಸ ಮಾಡಿ ವೋಟು ಗಿಟ್ಟಿಸಲು ಯತ್ನ ಮಾಡಿದ್ದರು ಈಗ ಅವರ ವಿಚಾರ ಎಲ್ಲರಿಗೂ ಗೊತ್ತಾಗಿದೆ. ನಾವು ಅನುದಾನ ಬಂದ ಬಳಿಕ ತೆಂಗಿನ ಕಾಯಿ ಒಡೆಯುತ್ತೇವೆ, ಗುದ್ದಲಿಪೂಜೆಯನ್ನು ಮಾಡುತ್ತಿದ್ದೇವೆ. ಈಗಾಗಲೇ ಬೆಟ್ಟಂಪಾಡಿ ಗ್ರಾಮದಲ್ಲಿ ಅನೇಕ ರಸ್ತೆಗಳಿಗೆ ಅನುದಾನ ಬಿಡುಗಡೆಯಾಗಿದೆ, ಮುಂದಿನ ೧೫ ಕಾಮಗಾರಿಗೆ ಅನುದಾನ ಬಿಡುಗಡೆಯಾಗಲಿದೆ ಆ ಬಳಿಕ ತೆಂಗಿನ ಕಾಯಿ ಒಡೆಯುತ್ತೇವೆ ಎಂದು ಶಾಸಕರು ಹೇಳಿದರು.
ಚೆಲ್ಯಡ್ಕ ಸೇತುವೆ ಯಾರ ಕಣ್ಣಿಗೂ ಬೀಳಲಿಲ್ವ ..? ಚೆಲ್ಯಡ್ಕದಲ್ಲಿ ಇರುವ ಸೇತುವೆ ಕಳೆದ ೪೦ ವರ್ಷಗಳಿಂದ ಪ್ರತೀ ಮಳೆಗಾಲದಲ್ಲಿ ಮುಳುಗುತ್ತಿದೆ. ಈ ಸೇತುವೆಗೆ ಮೂರು ಕೋಟಿ ಅನುದಾನ ನೀಡುತ್ತಿದ್ದೇನೆ. ಚೆಲ್ಯಡ್ಕ ಮುಳುಗು ಸೇತುವೆಗೆ ಮುಕ್ತಿ ನೀಡುತ್ತೇನೆ. ಈ ಸೇತುವೆಗೆ ಯಾಕೆ ಇಷ್ಟು ವರ್ಷ ಮುಕ್ತಿ ನೀಡಿಲ್ಲ? ಮಾಜಿ ಶಾಸಕರಿಗೆ ಈ ಸೇತುವೆಯ ವಿಚಾರ ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದರು.
5 ವರ್ಷದ ಬಜೆಟ್‌ನಲ್ಲಿ ಬಂದ ಅನುದಾನವನ್ನು ಬಹಿರಂಗ ಮಾಡಲಿ : ಕಳೆದ ೫ ವರ್ಷದಲ್ಲಿ ದ ಕ ಜಿಲ್ಲೆಗೆ ಬಂದ ಅನುದಾನವನ್ನು ಬಿಜೆಪಿಯವರು ಬಹಿರಂಗ ಪಡಿಸಲಿ. ಅಭಿವೃದ್ದಿಗೆ ಬಜೆಟ್‌ನಲ್ಲಿ ನಯಾ ಪೈಸೆ ಮೀಸಲಿಡಲು ತಾಕತ್ತಿಲ್ಲದ ಇವರು ಈಗಿನ ಸರಕಾರ ಅನುದಾನ ಬಿಡುಗಡೆ ಮಾಡಿದ ಕಾಮಗಾರಿಯನ್ನು ನಾವು ಮಾಡಿದ್ದು ಎಂದು ಹೇಳುತ್ತಿದ್ದಾರೆ. ಸುಳ್ಳು ಹೇಳಿಯೇ ಇಷ್ಟು ವರ್ಷ ಜನರನ್ನು ಮೋಸ ಮಾಡಿದ ಇವರು ಅಧಿಕಾರ ಕಳೆದುಕೊಂಡ ಬಳಿಕವೂ ಜನರನ್ನು ಮೋಸ ಮಾಡುತ್ತಲೇ ಇದ್ದಾರೆ ಪ್ರತೀಯೊಬ್ಬ ನಾಗಕರಿರೂ ಬಿಜೆಪಿ ಸುಳ್ಳುಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಪತ್ರ ಕೊಟ್ಟು ಕೆಲಸ ಮಾಡಿಸಿದ್ದಾರೆ ಹಣ ಕೊಡಲಿಲ್ಲ : ಗುತ್ತಿಗೆದಾರ ನನ್ನಲ್ಲಿ ದಮ್ಮಯ್ಯ ಹಾಕುತ್ತಿದ್ದಾರೆ : ಪುತ್ತೂರಿನ ಹೋಂಡಾ ಶೋರೂಂ ಬಳಿ ಸುಮಾರು 1 ಕೋಟಿ ರೂ ಕಾಮಗಾರಿಯನ್ನು ಮಾಜಿ ಶಾಸಕರು ಮಾಡಿಸಿದ್ದಾರೆ. ಗುತ್ತಿಗೆದಾರನಿಗೆ ಪತ್ರ ಕೊಟ್ಟು ಕೆಲಸ ಮಾಡಿ ಎಂದು ಹೇಳಿದ್ದು ಅವರು ಕೆಲಸ ಮಾಡಿದ್ದಾರೆ. ಕೆಲಸ ಆಗಿದೆ ಗುತ್ತಿಗೆದಾರನಿಗೆ ಹಣ ಬಂದಿಲ್ಲ. ಹಣ ಬಿಡುಗಡೆ ಮಾಡಿಸಿ ಎಂದು ಗುತ್ತಿಗೆದಾರ ಬಂದು ನನ್ನಲ್ಲಿ ದಮ್ಮಯ್ಯ ಹಾಕುತ್ತಿದ್ದಾರೆ ಎಂದು ಶಾಸಕರು ತಿಳಿಸಿದರು.
ಬಲ್ನಾಡು ದೇವಿ ಗುಡಿ ಅಭಿವೃದ್ದಿಗೆ 10 ಲಕ್ಷ ಕೊಡುವುದಾಗಿ ಹೇಳಿದ್ದರು ಕೊಟ್ಟಿಲ್ಲ, ಕುಂಡಡ್ಕ ದೇವಸ್ಥಾನಕ್ಕೆ 50 ಲಕ್ಷ ಮತ್ತು ಗೆಜ್ಜೆಗಿರಿಗೆ ಅನುದಾನ ಕೊಡುವುದಾಗಿ ಹೇಳಿ ಅಲ್ಲಿನವರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು, ಆದರೆ ಅನುದಾನ ನಯಾ ಪೈಸೆ ಕೊಟ್ಟಿಲ್ಲ. ಅಧಿಕಾರದಲ್ಲಿರುವಾಗ ಕೆಲಸ ಮಾಡದೆ ಈಗ ಕಾಂಗ್ರೆಸ್ ಸರಕಾರ ನೀಡುತ್ತಿರುವ ಅನುದಾನವನ್ನು ನನ್ನ ಕಾಲದಲ್ಲಿ ಆಗಿದ್ದು ಎಂದು ಹೇಳುತ್ತಿರುವುದು ನಾಚಿಕೆಯ ವಿಚಾರವಾಗಿದೆ ಎಂದು ಹೇಳಿದರು.
ಯಾರೇ ಪ್ರೆಸ್ ಮಾಡಿದರೂ ಉತ್ತರ ಕೊಡಲ್ಲ – ಜನರೇ ಮುಂದೆ ಉತ್ತರ ಕೊಡುತ್ತಾರೆ : ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿತ್ಯವೂ ಗುದ್ದಲಿಪೂಜೆ ನಡೆಯುತ್ತಿದೆ. ಇದನ್ನು ಕಂಡು ಸಹಿಸಲಾಗದ ಬಿಜೆಪಿಯವರು ನನ್ನ ನೈತಿಕ ಸ್ಥೈರ್ಯವನ್ನು ಕಸಿಯಲು ಯತ್ನ ಮಾಡುತ್ತಿದ್ದಾರೆ. ಯಾರೇ ಪ್ರೆಸ್ ಮಾಡಿದರೂ ಉತ್ತರ ಕೊಡಲಾರೆ. ಕ್ಷೇತ್ರದ ಜನರೇ ಅವರಿಗೆ ಮುಂದಿನ ದಿನಗಳಲ್ಲಿ ಉತ್ತರ ಕೊಡುತ್ತಾರೆ. ಜಾತಿ, ಧರ್ಮ, ಪಕ್ಷ ಬೇದವಿಲ್ಲದೆ ಅನುದಾನವನ್ನು ಹಂಚಿಕೆ ಮಾಡುತ್ತಿದ್ದೇನೆ, ಪುತ್ತೂರು ಕ್ಷೇತ್ರ ಅಭಿವೃದ್ದಿಯಾಗಬೇಕೆಂಬುದೇ ನನ್ನ ಉದ್ದೇಶವಾಗಿದೆ. ಬಿಜೆಪಿಯವರೇ ಬಂದು ನನ್ನಲ್ಲಿ ಅನುದಾನ ಕೊಡಿ ಎಂದು ಕೇಳುತ್ತಿದ್ದಾರೆ, ಮಾಜಿ ಶಾಸಕರು ಕೆಲಸ ಮಾಡಿಲ್ಲ ಎಂದು ಅವರ ಪಕ್ಷದವರೇ ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ನನಗೆ 40% ಬೇಡ
ಅನುದಾನದಲ್ಲಿ 40% ಕಮಿಷನ್ ನನಗೆ ಬೇಡ. ನಾನು ಆ ಜಾಯಾಮಾನದವನಲ್ಲ. ಕಮಿಷನ್ ಪಡೆದು ಅದರ ಆಸೆಯಿಂದ ಕೆಲವು ಕಡೆಗಳಲ್ಲಿ ಕದ್ದುಮುಚ್ಚಿ ಶಿಲಾನ್ಯಾಸ ಮಾಡಲು ಕೆಲವರು ಬರಬಹುದು, ಉದ್ಘಾಟನೆ ಮಾಡಲೂ ಬರಬಹುದು ಗ್ರಾಮಸ್ಥರು ಎಚ್ಚರವಾಗಿರಬೇಕು ಎಂದು ಶಾಸಕರು ಹೇಳಿದರು. ಯಾರೇ ಏನೇ ಹೇಳುತ್ತಿದ್ದರೂ ಕ್ಷೇತ್ರಕ್ಕೆ ಹಣದ ಹೊಳೆಯನ್ನೇ ತರುತ್ತೇನೆ, ಅಭಿವೃದ್ದಿ ಮಾಡಿಯೇ ಮಾಡುತ್ತೇನೆ, ಭೃಷ್ಟಾಚಾರ ಮುಕ್ತವಾಗಿ ಕ್ಷೇತ್ರವನ್ನು ಬದಲಾಯಿಸಿಯೇ ಬದಲಾಯಿಸುತ್ತೇನೆ ಎಂದು ಹೇಳಿದರು.
ಉತ್ತಮ ನಾಯಕ ಸಿಕ್ಕಿದ್ದಾರೆ: ಎಂ ಬಿ ವಿಶ್ವನಾಥ ರೈ
ಪುತ್ತೂರು ಶಾಸಕರು ಓರ್ವ ಉತ್ತಮ ನಾಯಕರು. ಏಳು ತಿಂಗಳಲ್ಲಿ ಕ್ಷೇತ್ರದಲ್ಲಿ ಸಆಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಜನರ ನಿರೀಕ್ಷೆಗೂ ಮೀರಿ ಕೆಲಸಗಳು ನಡೆದಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಹೇಳಿದರು.
ಬಿಜೆಪಿಯಿಂದ ಕೋಮು ರಾಜಕೀಯ
ಕಾಂಗ್ರೆಸ್ ಮುಖಂಡ ಆಲಿಕುಂಞಿ ಕೊರಿಂಗಿಲ ಮಾತನಾಡಿ ಬೇಂಗತ್ತಡ್ಕ ರಸ್ತೆಗೆ ೫ ಲಕ್ಷ ಅನುದಾನವನ್ನು ಮಾಜಿ ಶಾಸಕರಾದ ಸಂಜೀವ ಮಠಂದೂರು ಇಟ್ಟಿದ್ದರು. ಆದರೆ ಈ ರಸ್ತೆಯಲ್ಲಿ ಅಲ್ಪಸಂಖ್ಯಾತರು ತೆರಳುತ್ತಾರೆ ಎಂದು ಕೊಟ್ಟ ಅನುದಾನವನ್ನು ವಾಪಸ್ ಪಡೆದುಕೊಂಡರು. ನಿಮಗೆ ರಸ್ತೆ ಬೇಕದರೆ ಬಿಜೆಪಿ ಅಧ್ಯಕ್ಷರಲ್ಲಿ ಮಾತನಾಡಿ ಎಂದು ಹೇಳಿದರು. ನಾವು ಮಾತನಾಡಲು ಹೋಗಿಲ್ಲ, ಆದರೆ ಶಾಸಕ ಅಶೋಕ್ ರೈ ಅಭಿವೃದ್ದಿಯಲ್ಲಿ ರಾಜಕೀಯ ಮಾಡಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣಪ್ರಸಾದ್ ಆಳ್ವ,ಮಹಮ್ಮದ್ ಕೊರಿಂಗಿಲ,ಗ್ರಾಪಂ ಸದಸ್ಯ ಮಹಾಲಿಂಗ ನಾಯ್ಕ ಸೇರಿದಂತೆ ಗ್ರಾಮಸ್ಥರು ಉಪಸ್ತಿತರಿದ್ದರು. ಬೆಟ್ಟಂಪಾಡಿ ಕಾಂಗ್ರೆಸ್ ವಲಯಾಧ್ಯಕ್ಷ ನವೀನ್ ರೈ ಚೆಲ್ಯಡ್ಕ ಸ್ವಾಗತಿಸಿ ವಂದಿಸಿದರು. ಗುತ್ತಿಗೆದಾರ ರಾಕೇಶ್ ರೈ ಕುದ್ಕಾಡಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಣ
Ambika-ಅಂಬಿಕಾ ಪ.ಪೂ.ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ; ಉದ್ದೇಶ ಸ್ಪಷ್ಟತೆ ಇರುವವರಿಗೆ ಯಾವುದೇ ಅಡೆತಡೆಗಳಿಲ್ಲ: ಪಿ. ಪ್ರದೀಪ್ ಕುಮಾರ್
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ ಕಾರ್ಯಕ್ರಮವನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಉದ್ಘಾಟಿಸಿ ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಮಾತನಾಡಿದರು.

ಪುತ್ತೂರು: ಪ್ರತಿಭೆಯಿಲ್ಲದ ವ್ಯಕ್ತಿಯಿಲ್ಲ. ಆದರೆ ನಮ್ಮೊಳಗಿರುವ ಪ್ರತಿಭೆಗಳನ್ನು ಗುರುತಿಸುವುದು, ಬೆಳೆಸುವುದು ಹಾಗೂ ಆ ಪ್ರತಿಭೆಯನ್ನು ಸತ್ಕಾರ್ಯಗಳಿಗಾಗಿ ಬಳಸುವುದು ಅತ್ಯಂತ ಮುಖ್ಯ. ಸಮರ್ಪಿತ ಹಾಗೂ ಉದ್ದೇಶಸ್ಪಷ್ಟತೆ ಹೊಂದಿರುವ ವ್ಯಕ್ತಿಯ ಬೆಳವಣಿಗೆಗೆ ಯಾವುದೇ ಅಡೆತಡೆಗಳಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ ಕಾರ್ಯಕ್ರಮವನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಉದ್ಘಾಟಿಸಿ ಶನಿವಾರ ಮಾತನಾಡಿದರು.

ಈ ದೇಶದ ದೊಡ್ಡ ದೊಡ್ಡ ವಿಜ್ಞಾನಿಗಳು, ವೈದ್ಯರು, ಇಂಜಿನಿಯರ್‌ಗಳು, ದೊಡ್ಡ ದೊಡ್ಡ ಸಾಧಕರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶಗಳಿಂದ ಬಂದವರೇ ಆಗಿದ್ದಾರೆ. ಹಾಗಾಗಿ ಗ್ರಾಮೀಣ ಭಾಗದಲ್ಲಿ ಅವಕಾಶಗಳು ಕಡಿಮೆ ಎಂಬ ಭಾವನೆಯನ್ನು ಇಟ್ಟುಕೊಳ್ಳಬೇಕಿಲ್ಲ. ನಾವು ಎಲ್ಲಿಂದ ಬಂದಿದ್ದೇವೆ, ಯಾವ ಹಿನ್ನೆಲೆಯಿಂದ ಬಂದಿದ್ದೇವೆ ಎಂಬುದು ಮುಖ್ಯವಲ್ಲ. ಸಾಧನೆಯೆಡೆಗೆ ಮುಖ ಮಾಡಿ ನಿರಂತರ ಕಾರ್ಯಪ್ರವೃತ್ತರಾದರೆ ಅಂದುಕೊಡ ಗಮ್ಯವನ್ನು ತಲಪುವುದಕ್ಕೆ ಸಾಧ್ಯವಿದೆ ಎಂದರು.
ಕನಸು ಕಾಣುವುದಕ್ಕೆ ಎಲ್ಲರಿಗೂ ಸಾಧ್ಯವಿದೆ. ಆದರೆ ಕಂಡ ಕನಸುಗಳನ್ನು ನನಸು ಮಾಡುವುದಕ್ಕೆ ಶಿಸ್ತು, ಪ್ರಾಮಾಣಿಕತೆ, ನಿರಂತರ ಪ್ರಯತ್ನ ಹಾಗೂ ಎದುರಾಗುವ ಅಡೆತಡೆಗಳನ್ನು ಮೀರಿ ಮುನ್ನಡೆಯುವ ಸಾಮರ್ಥ್ಯಗಳಿರಬೇಕು. ಆಕಾಂಕ್ಷೆ ಹಾಗೂ ಸಾಧನೆಗಳ ಮಧ್ಯೆ ಬಹುದೊಡ್ಡ ಅಂತರವಿದೆ. ಆ ಅಂತರದ ನಡುವಣ ಸೇತುವೆಯಲ್ಲಿ ನಡೆಯಲು ಕಠಿಣ ಪರಿಶ್ರಮವೊಂದೇ ದಾರಿ. ಯಶಸ್ಸಿಗೆ ಯಾವುದೇ ಅಡ್ಡದಾರಿಗಳಿಲ್ಲ. ನಮ್ಮ ವ್ಯಕ್ತಿತ್ವವನ್ನು ತಂತ್ರಜ್ಞಾನ ರೂಪಿಸಲಾರದು, ಸ್ವತಃ ನಾವೇ ರೂಪಿಸಿಕೊಳ್ಳಬೇಕು ಎಂದು ನುಡಿದರು.

ಮತ್ತೋರ್ವ ಅತಿಥಿ, ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಹಾಗೂ ಬೆಂಗಳೂರಿನ ಭಾರತ್ ಇಲೆಕ್ಟಾçನಿಕ್ಸ್ನ ಡೆಪ್ಯೂಟಿ ಇಂಜಿನಿಯರ್ ಅನುಜ್ಞಾ ಪಳ್ಳತ್ತಡ್ಕ ಮಾತನಾಡಿ ನಾವು ಉಸಿರಾಡುವ ಗಾಳಿ, ತಿನ್ನುವ ಆಹಾರ ಈ ದೇಶದ್ದು. ಹಾಗಾಗಿ ಈ ದೇಶದ ಸೇವೆಯನ್ನು ಮಾಡಿ ನಮ್ಮ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು. ನಮ್ಮ ಬದುಕಿನಲ್ಲಿ ಒಂದು ಸರಿಯಾದ ಉದ್ದೇಶವನ್ನಿಟ್ಟುಕೊಂಡು ಮುಂದುವರೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ನಮ್ಮ ಹಿರಿಯರ ಪರಿಶ್ರಮದ ಫಲವಾಗಿ ನಮ್ಮ ಭಾರತೀಯ ಕಲೆ, ಸಂಸ್ಕೃತಿಗಳು ಬೆಳೆದು ಬಂದಿವೆ. ಅವುಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಅಂಬಿಕಾ ಸಂಸ್ಥೆಗಳು ಸದಾ ತೊಡಗಿಕೊಂಡಿವೆ. ದೇಶ ಮೊದಲು ಎಂಬ ಭಾವನೆಯಡಿ ವಿದ್ಯಾರ್ಥಿಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್, ಬಾಲಕೃಷ್ಣ ಬೋರ್ಕರ್, ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆ ಸಂಸ್ಥೆಗಳ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಅವಿನಾಶ ಕೊಡೆಂಕಿರಿ ಹಾಗೂ ತಿಲಕ್ ಬಿ.ಸಿ, ಅಂಬಿಕಾ ನೀಟ್ ಅಕಾಡೆಮಿಯ ಪ್ರಾಚಾರ್ಯ ಕಿಶೋರ್ ಭಟ್, ವಿದ್ಯಾರ್ಥಿ ಸಂಘದ ನಾಯಕರಾದ ಅವನಿ ನಾಯಕ್, ಎಚ್.ವಿ.ಭವಿತ್ ಗೌಡ, ರಿಧಿ ಗೌಡ ಹಾಗೂ ಇಂದಿವರ್ ಪಿ.ಪಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶೈಕ್ಷಣಿಕ ಸಾಧಕರು, ಕ್ರೀಡಾ ಸಾಧಕರು, ವಿದ್ಯಾಭಾರತಿ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ದತ್ತಿನಿಧಿ ಬಹುಮಾನಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿನಿ ಅಮೃತಾ ರಾವ್ ಶಂಖನಾದಗೈದರು. ವಿದ್ಯಾರ್ಥಿನಿ ಶ್ರೀವಿಭಾ ಹಾಗೂ ತಂಡದವರು ಪ್ರಾರ್ಥಿಸಿದರು. ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿ, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್. ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಅವರಿಂದ ವಿಡಿಯೋ ಪ್ರಾತ್ಯಕ್ಷಿಕೆ ಸಹಿತ ವರದಿ ವಾಚನ ನಡೆಯಿತು. ವಿದ್ಯಾರ್ಥಿನಿಯರಾದ ಸೋನಾ ನಾರ್ಕೋಡ್ ಹಾಗೂ ಉರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಆನ್ಯಾ ಹಾಗೂ ಚಿನ್ಮಯೋ ಶೆಟ್ಟಿ ಅತಿಥಿ ಪರಿಚಯ ನಡೆಸಿಕೊಟ್ಟರು.
ಬಿಗ್ ನ್ಯೂಸ್
Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.
ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.
ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.
-
ಅಂತರ ರಾಜ್ಯ19 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು13 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಸುಳ್ಯ16 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಬಿಗ್ ನ್ಯೂಸ್14 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಬಿಗ್ ನ್ಯೂಸ್19 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಅಪರಾಧ16 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಸ್ಥಳೀಯ20 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ16 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್


















