ರಾಜಕೀಯ
Ananth kumar hegde : ಕೋಮು ಪ್ರಚೋಧನಕಾರಿ ಭಾಷಣ – ಅನಂತ್ ಕುಮಾರ್ ಹೆಗ್ಡೆ ವಿರುದ್ದ ಪ್ರಕರಣ
ಕಾರವಾರ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಸಂಸದ ಅನಂತಕುಮಾರ ಹೆಗಡೆ ವಿರುದ್ದ ಕುಮಟಾ ಠಾಣೆ ಪೊಲೀಸರು ಭಾನುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಹೇಳಿಕೆ ನೀಡುವ ಜತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾತುಗಳನ್ನಾಡಿರುವುದರಿಂದ ಸೆಕ್ಷನ್ 153ಎ, 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸಾ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಂಸದ ಅನಂತಕುಮಾರ್ ಹೆಗಡೆ, ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದರು.
ಇದನ್ನು ಬೇಕಾದರೆ ಬೆದರಿಕೆ ಅಂತ ಬೇಕಾದರೂ ತಿಳಿಯಿರಿ. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ. ಶಿರಸಿ ಸಿಪಿ ಬಜಾರ್ನಲ್ಲಿಯೂ ಮಸೀದಿ ಇದೆ, ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು ಎಂದು ಹೇಳಿದ್ದರು.
ರಾಜಕೀಯ
Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.
ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್‌ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.
ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್‌ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.
ಎಫ್‌ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್‌ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
-
Uncategorized21 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಕ್ರೈಂ8 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ8 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು7 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಬಿಗ್ ನ್ಯೂಸ್8 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ6 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಕ್ರೀಡೆ6 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಸಿನೆಮಾ6 hours agoAakasham Lo Ok Tara-ಬಾಕ್ಸ್ ಆಫೀಸ್ನಲ್ಲಿ ದುಲ್ಕರ್ ಸಲ್ಮಾನ್ ಅಬ್ಬರ: 4 ದಿನಕ್ಕೆ 20 ಕೋಟಿ ರೂ. ಗಳಿಸಿದ ‘ಆಕಾಶಮ್ ಲೋ ಒಕ ತಾರ’















