ದಕ್ಷಿಣ ಕನ್ನಡ
ಪುತ್ತೂರು : ನೀರಿನ ತೊಟ್ಟಿಯಲ್ಲಿ ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ರವರ ಪತ್ನಿಯ ಮೃತದೇಹ ಪತ್ತೆ
ಪುತ್ತೂರು: ಮಹಿಳೆಯೊಬ್ಬರ ಮೃತದೇಹ ಅವರದೇ ತೋಟದ ನೀರಿನ ತೊಟ್ಟಿಯಲ್ಲಿ ಪತ್ತೆಯಾದ ಘಟನೆ ಜ 17 ರಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ರವರ ಪತ್ನಿ ಶುಭಲಕ್ಷ್ಮೀ ಮೃತಪಟ್ಟವರು.
ಮನೆಯ ಬಳಿಯ ಗುಡ್ಡದ ಮೇಲೆ ಟಾರ್ಪಾಲು ಹಾಕಿ ನಿರ್ಮಿಸಿದ ನೀರಿನ ತೊಟ್ಟಿಯಲ್ಲಿ ವರ ಮೃತದೇಹ ಪತ್ತೆಯಾಗಿದೆ. ಈ ವೇಳೆ ಅವರ ಪತಿ ಪ್ರಕಾಶ್ ರೈಯವರು ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಆದರೇ ಈ ಸಾವಿನ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ಅನುಮಾನ ಕಾರಣವಾಗಿದೆ.

ಶುಭಲಕ್ಷ್ಮೀಯವರು ಕಾಲು ಜಾರಿ ಬಿದ್ದರೇ ಅಥಾವ ಅವರ ಸಾವಿನ ಹಿಂದೆ ಬೇರೆ ಏನಾದರೂ ಕಾರಣಗಳಿರಬಹುದೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದು , ಮರಣೋತ್ತಾರ ಪರೀಕ್ಷೆಗಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆ ತರುವ ಸಾಧ್ಯತೆಯಿದೆ. ಮೃತರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
Uncategorized6 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized5 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized7 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized3 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized6 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized5 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |




















