ರಾಷ್ಟ್ರೀಯ
Ayodhye Rama mandira ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಹಿನ್ನಲೆ ಜ 22ರಂದು ದೇಶದಾದ್ಯಂತ ಈ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜನವರಿ 22 ರಂದು ದೇಶದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.
ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ನೇರ ಪ್ರಸಾರದ ದೃಶ್ಯಾವಳಿಗಳನ್ನು ವೀಕ್ಷಿಸಲು ಅನುಕೂಲವಾಗಲಿ ಅನ್ನೋ ಕಾರಣಕ್ಕೆ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ನೂತನ ವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭವನ್ನು ಸೋಮವಾರ ನಿಗದಿಪಡಿಸಲಾಗಿದೆ. ಆ ದಿನ 12 . 20 ಕ್ಕೆ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ.
ಈ ಹಿನ್ನಲೆಯಲ್ಲಿ 2024 ರ ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ರಜೆ ನೀಡಲಾಗಿದೆ” ಎಂದು ಕೇಂದ್ರ ಸರ್ಕಾರದ ಸಚಿವಾಲಯಗಳು / ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ಉತ್ತರ ಪ್ರದೇಶ ರಾಜ್ಯದಲ್ಲಂತೂ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಶ್ರೀರಾಮ ಜನ್ಮ ಭೂಮಿಯಲ್ಲಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ದಿನ ಮುಖ್ಯ ಯಜಮಾನನ ಪಾತ್ರ ವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಚಿತ್ರ ನಟರು, ಕ್ರಿಕೆಟಿಗರು ಸೇರಿದಂತೆ ಸಮಾಜದ ಹಲವು ರಂಗಗಳ ಗಣ್ಯರು ಆಗಮಿಸಲಿದ್ದಾರೆ.
ಕೆಲ ರಾಜ್ಯಗಳ ಶಾಲೆ ಕಾಲೇಜಿಗೆ ಈಗಾಗಲೇ ರಜೆ ಘೋಷಣೆ
ಅಯೋಧ್ಯಾ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ, ಛತ್ತೀಸ್‌ಗಢ, ಗೋವಾ ಹಾಗೂ ಹರ್ಯಾಣ ರಾಜ್ಯಗಳಲ್ಲಿ ಶಾಲೆ, ಕಾಲೇಜುಗಳಿಗೆ ಅಲ್ಲಿನ ರಾಜ್ಯ ಸರ್ಕಾರಗಳು ರಜೆ ಘೋಷಿಸಿವೆ. ಇದೇ ರೀತಿ ಬಿಜೆಪಿ ಆಡಳಿತದ ಇತರ ರಾಜ್ಯಗಳಾದ ಅಸ್ಸಾಂ, ಮಹಾರಾಷ್ಟ್ರ ಹಾಗೂ ಮಧ್ಯ ಪ್ರದೇಶ ರಾಜ್ಯಗಳಲ್ಲೂ ರಜೆ ಘೋಷಣೆ ಆಗುವ ಸಾಧ್ಯತೆ ಇದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
Uncategorized15 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್9 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು13 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized14 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ13 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ14 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ13 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್14 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















