Connect with us

ಬಿಗ್ ನ್ಯೂಸ್

‘ಇಂಥವರಿಗೆ ಲೋಕಸಭಾ ಟಿಕೇಟ್ ನೀಡಲಾಗುತ್ತದೆ’ ಎಂಬುದನ್ನು ಖಚಿತಪಡಿಸದ ಬಿಜೆಪಿ..! ಪಕ್ಷದ ವಿರುದ್ದ ಬಂಡಾಯವೆದ್ದು ಸ್ಪರ್ಧಿಸಿದ್ದ ರೆಬಲ್ ನಾಯಕನ ದಾವಣಗೆರೆ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿ ನಾಯಕರಿಗೆ ಎಚ್ಚರಿಕೆ ರವಾನಿಸಿದ ಕೇಂದ್ರ

Published

on

Ad Widget

Ad Widget

Ad Widget

Ad Widget

ದಾವಣಗೆರೆ: ಲೋಕಸಭೆ ಚುನಾವಣೆಗೆ ನಾಲ್ಕು ತಿಂಗಳಷ್ಟೇ ಉಳಿದಿದ್ದು, ಬಾಗಲಕೋಟೆ ಜಿಲ್ಲಾಧ್ಯಕ್ಷ ಆಯ್ಕೆ ನಂತರ ಸಣ್ಣ ಮಟ್ಟದ ಎಚ್ಚರಿಕೆ ರಾಜ್ಯ ಬಿಜೆಪಿ ನಾಯಕರಿಗೆ ಕೇಂದ್ರ ತಂಡ ರವಾನಿಸಿದೆ. ಹಲವು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರಿಗೆ ಕೈತಪ್ಪಲಿದ್ದು, ಬಿಜೆಪಿ ಅಭ್ಯರ್ಥಿ ಕುರಿತು ಗುಟ್ಟು ಬಿಟ್ಟುಕೊಡುತ್ತಿಲ್ಲ.

Ad Widget

Ad Widget

Ad Widget

Ad Widget

ದಾವಣಗೆರೆಯಲ್ಲಿ ಸತತ ನಾಲ್ಕು ಬಾರಿ ಆಯ್ಕೆಯಾಗಿರುವ ಹಾಲಿ ಸಂಸದ, ಬಿಜೆಪಿಯ ಜಿ.ಎಂ. ಸಿದ್ದೇಶ್ವರ ತಮಗೇ ಮತ್ತೆ ಸ್ಪರ್ಧೆಗೆ ಅವಕಾಶ ದೊರೆಯಬಹುದು ಎಂಬ ಸಂಪೂರ್ಣ ವಿಶ್ವಾಸದಲ್ಲಿದ್ದಾರೆ. “70 ವರ್ಷ ದಾಟಿರುವ ಹಿನ್ನೆಲೆಯಲ್ಲಿ ಒಂದೊಮ್ಮೆ ನನ್ನನ್ನು ಪರಿಗಣಿಸದಿದ್ದರೆ, ಪುತ್ರ ಅನಿತ್‌ಕುಮಾ‌ರ್ ಅಥವಾ ಸೋದರ ಜಿ.ಎಂ. ಲಿಂಗರಾಜ್ ಅವರಿಗಾದರೂ ಟಿಕೆಟ್ ಕೊಡಿ’ ಎಂಬ ಬೇಡಿಕೆ ಇರಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget alt="Ad Widget"/>

Ad Widget

ಸಮೀಕ್ಷೆ ಆಧರಿಸಿ ನಿರ್ಧರಿಸಿ: ‘ಲೋಕಸಭೆ ಚುನಾವಣೆಯ ಟಿಕೆಟ್ ಹಂಚಿಕೆಗೆ ಮುನ್ನ ಕ್ಷೇತ್ರದಾದ್ಯಂತ ಸಮೀಕ್ಷೆ ನಡೆಸಿ, ಯಾರಿಗೆ ಮತದಾರ ಒಲಿಯಬಹುದು ಎಂಬುದನ್ನು ತಿಳಿದು ಟಿಕೆಟ್ ಹಂಚಿಕೆ ಮಾಡಿ’ ಎಂದು ಪ್ರಮುಖ ಆಕಾಂಕ್ಷಿ, ವಿಧಾನಸಭೆ ಚುನಾವಣೆಯಲ್ಲಿ ಹೊನ್ನಾಳಿ ಕ್ಷೇತ್ರದಿಂದ ಪರಾಜಿತರಾಗಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬಹಿರಂಗವಾಗಿ ಮನವಿ ಮಾಡಿದ್ದಾರೆ.

Ad Widget

Ad Widget <> Ad Widget

‘ಜಿ.ಎಂ. ಸಿದ್ದೇಶ್ವರ ಅವರ ಬದಲಿಗೆ ನನ್ನನ್ನೇ ಪರಿಗಣಿಸಿ’ ಎಂದೂ ವಿಧಾನಸಭೆ ಚುನಾವಣೆಯ ಸೋಲಿನ ಕೆಲವೇ ದಿನಗಳ ನಂತರ ಬೇಡಿಕೆ ಸಲ್ಲಿಸುತ್ತಲೇ ಬಂದಿರುವ ರೇಣುಕಾಚಾರ್ಯ, ಇತ್ತೀಚೆಗೆ ದಾವಣಗೆರೆಯಲ್ಲೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇವರು ಟಿಕೆಟ್‌ ಕೋರಿದ್ದಕ್ಕೆ ತಮ್ಮ ಅಸಮಾಧಾನ ಹೊರಹಾಕಿದ್ದ ಸಿದ್ದೇಶ್ವರ, ‘ಅವರು ಇಲ್ಲಿಗೆ ಬರಲಿ. ನಾನು ಹೊನ್ನಾಳಿಗೆ ಹೋಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಸವಾಲು ಎಸೆದಿದ್ದರು.ಜಗಳೂರಿನ ಮಾಜಿ ಶಾಸಕ ಗುರುಸಿದ್ದನಗೌಡ ಅವರ ಪತ್ರ ಡಾ.ಟಿ.ಜಿ. ರವಿಕುಮಾರ್, ಪಕ್ಷದ ಮುಖಂಡ ಕೆ.ಜಿ. ಕೊಟ್ರೇಶ್ ಮತ್ತಿತರರು ಬಿಜೆಪಿಯ ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

Ad Widget

Ad Widget

‘ಇಂಥವರಿಗೇ ಬಿಜೆಪಿ ಟಿಕೆಟ್ ಸಿಗಲಿದೆ’ ಎಂಬುದನ್ನು ಖಚಿತವಾಗಿ ಹೇಳಲಾಗದು ಎಂಬುದಕ್ಕೆ ಮೂರು ದಿನಗಳ ಹಿಂದಷ್ಟೇ ಪ್ರಕಟವಾದ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ನೇಮಕದಿಂದ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಗಳಲ್ಲಿ ನಿರಾಸೆ ಮೂಡಿಸಿತ್ತು.

2019ರಲ್ಲಿ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದ ಸಂಘ ಪರಿವಾರ ಮೂಲದ ಎನ್.ರಾಜಶೇಖ‌ರ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಿರುವುದು ಲೋಕಸಭೆ ಚುನಾವಣೆಯಯ ಟಿಕೆಟ್ ಆಕಾಂಕ್ಷಿಗಳಲ್ಲೂ ಆಸೆ ಮೂಡಿಸಿದೆ. ‘ಪಕ್ಷ ಯಾರನ್ನಾದರೂ ಪರಿಗಣಿಸಬಹುದು’ ಎಂಬುದೇ ಸ್ಪರ್ಧಾಕಾಂಕ್ಷೆ ಚಿಗುರೊಡೆಯಲು ಪ್ರೇರಣೆ ಆಗಿದೆ.

Ad Widget
Click to comment

Leave a Reply

ಮಂಗಳೂರು

Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ

Published

on

Ad Widget

Ad Widget

Ad Widget

Ad Widget

ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

Ad Widget

Ad Widget <> Ad Widget

ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.

Ad Widget

Ad Widget

ಯೂಟ್ಯೂಬ್‌ನಲ್ಲಿ ಅಧಿಕೃತ ಪತ್ರಕರ್ತರು ಬಹಳ ಕಡಿಮೆ ಇದ್ದಾರೆ. ಕೆಲವರು ಮಾತ್ರ ಹಿರಿಯ ಹಾಗೂ ಪ್ರಬುದ್ಧ ಪತ್ರಕರ್ತರಾಗಿದ್ದಾರೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.

Ad Widget
Continue Reading

ಸ್ಥಳೀಯ

Valaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್‌ನಿಂದ ‘ಡಬಲ್ ಟೋಲ್’ ಆತಂಕ..!

Published

on

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.

Ad Widget

Ad Widget alt="Ad Widget"/>

Ad Widget

ಬಿ.ಸಿ.ರೋಡ್‌ನಿಂದ ಪೆರಿಯಶಾಂತಿವರೆಗಿನ ಸುಮಾರು 46 ಕಿ.ಮೀ. ಹೆದ್ದಾರಿ ಕಾಮಗಾರಿಯಲ್ಲಿ ಈಗಾಗಲೇ ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ನಡುವೆ ಇದೀಗ ಟೋಲ್ ಪ್ಲಾಜಾ ನಿರ್ಮಾಣಗೊಂಡಿದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾ ನಿರ್ಮಾಣದ ಗುತ್ತಿಗೆ ಪಡೆದಿದ್ದ ಕೆಎನ್‌ಆರ್ ಕನ್ಸ್ಟ್ರಕ್ಷನ್ ಸಂಸ್ಥೆಯು ಕಾಮಗಾರಿ ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿದೆ. ಇತ್ತ ಶುಲ್ಕ ಸಂಗ್ರಹ ನಿರ್ವಹಣೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು, ಮಂಗಳೂರಿನ ‘ಕೋರಲ್’ ಸಂಸ್ಥೆಯು ಗುತ್ತಿಗೆಯನ್ನು ಪಡೆದುಕೊಂಡಿದೆ.

8 ಲೇನ್‌ಗಳಲ್ಲಿ ಸಂಚಾರ ವ್ಯವಸ್ಥೆ
ಚತುಷ್ಪಥ ಹೆದ್ದಾರಿಯಲ್ಲಿ ಒಟ್ಟು 8 ಲೇನ್‌ಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎರಡೂ ಬದಿಗಳಲ್ಲಿ ತಲಾ ನಾಲ್ಕು ಲೇನ್‌ಗಳಿದ್ದು, ಅವುಗಳಲ್ಲಿ 6 ಲೇನ್‌ಗಳು ಡೆಡಿಕೇಟೆಡ್ ಲೇನ್‌ಗಳಾಗಿರಲಿವೆ. ಈ ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿರಲಿದೆ.

Ad Widget

Ad Widget

ಉಳಿದ ಎರಡು ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಮೂಲಕ ಪಾವತಿಗೆ ಅವಕಾಶವಿದ್ದರೂ, ನಗದು ಪಾವತಿಗೆ ಅವಕಾಶ ಇರುವುದಿಲ್ಲ. ಬದಲಾಗಿ ಯುಪಿಐ ಅಥವಾ ಸ್ಕ್ಯಾನ್ ಮೂಲಕ ಡಿಜಿಟಲ್ ಪಾವತಿ ಮಾಡಬೇಕಾಗುತ್ತದೆ. ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸುಗಮ ಸಂಚಾರಕ್ಕಾಗಿ ಎರಡೂ ಬದಿಗಳಲ್ಲಿ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಟೋಲ್ ಶುಲ್ಕ ವಸೂಲಾತಿ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಯಾಗಿರುವ ವಾಹನಗಳಿಗೆ ಶೇ.50ರಷ್ಟು ಶುಲ್ಕ ವಿನಾಯಿತಿ ನಿಗದಿಪಡಿಸಲಾಗಿದೆ ಎಂದು ಮಂಗಳೂರಿನ ಕೋರಲ್ ಸಂಸ್ಥೆಯ ಆಡಳಿತ ಪಾಲುದಾರ ಯಜೇಶ್ ತಿಳಿಸಿದ್ದಾರೆ.

ಬ್ರಹ್ಮರಕೂಟ್ಲು ಟೋಲ್‌ನಿಂದ 38 ಕಿ.ಮೀ. ಅಂತರ..!
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಒಟ್ಟು 7 ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರಿನ ನೆಲಮಂಗಲದಿಂದ ಸಕಲೇಶಪುರದವರೆಗೆ 5 ಟೋಲ್ ಪ್ಲಾಜಾಗಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಮಂಗಳೂರಿನ ಪಂಪ್‌ವೆಲ್ ನಡುವಿನ ಮಾರ್ಗದಲ್ಲಿ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಇದೀಗ ವಳಾಲು ಟೋಲ್ ಸೇರ್ಪಡೆಯಾದರೆ ಈ ಭಾಗದಲ್ಲಿ ಶುಲ್ಕ ಸಂಗ್ರಹಿಸುವ ಟೋಲ್ ಪ್ಲಾಜಾಗಳ ಸಂಖ್ಯೆ ಎರಡಕ್ಕೇರಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳ ಪ್ರಕಾರ ಒಂದು ಟೋಲ್ ಪ್ಲಾಜಾದಿಂದ ಮತ್ತೊಂದು ಟೋಲ್ ಪ್ಲಾಜಾಕ್ಕೆ ಕನಿಷ್ಠ 60 ಕಿ.ಮೀ. ಅಂತರ ಇರಬೇಕಿದೆ. ಆದರೆ, ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಿಂದ ಬಜತ್ತೂರು ವಳಾಲು ಟೋಲ್ ಪ್ಲಾಜಾಕ್ಕೆ ಇರುವ ಅಂತರ ಕೇವಲ 38 ಕಿ.ಮೀ. ಮಾತ್ರ. ಹೀಗಾಗಿ, ವಳಾಲು ಟೋಲ್‌ನಲ್ಲಿ ಶುಲ್ಕ ಸಂಗ್ರಹ ಆರಂಭವಾದರೆ ಸ್ಥಳೀಯರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಬೀರ್ ಅಹ್ಮದ್ ನೆಕ್ಕಿಲಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಹೋರಾಟ ತೀವ್ರಗೊಳ್ಳುವ ಸಾಧ್ಯತೆ
ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ಅನಧಿಕೃತವಾಗಿದ್ದು, ನಿಗದಿತ ಅವಧಿ ಮುಗಿದಿದ್ದರೂ ಶುಲ್ಕ ಸಂಗ್ರಹ ಮುಂದುವರಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಟೋಲ್ ಪ್ಲಾಜಾವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಈಗಾಗಲೇ ನಿರಂತರ ಹೋರಾಟ ನಡೆಸುತ್ತಿದ್ದಾರೆ.

ಬ್ರಹ್ಮರಕೂಟ್ಲು ಟೋಲ್ ಪ್ಲಾಜಾವನ್ನು ತೆರವುಗೊಳಿಸದೆ ವಳಾಲು ಟೋಲ್ ಪ್ಲಾಜಾದಲ್ಲಿ ಶುಲ್ಕ ಸಂಗ್ರಹ ಆರಂಭಿಸಿದರೆ ವಾಹನ ಸವಾರರಿಗೆ ಒಂದೇ ಮಾರ್ಗದಲ್ಲಿ ಎರಡು ಬಾರಿ ಟೋಲ್ ಪಾವತಿಸುವ ಪರಿಸ್ಥಿತಿ ಎದುರಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಕೂಟ್ಲು ಟೋಲ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹೋರಾಟಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Ad Widget
Continue Reading

ಬಿಗ್ ನ್ಯೂಸ್

Heavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡ ಗಂಜೂರಿನಲ್ಲಿ ಗರಿಷ್ಠ 54 ಮಿ.ಮೀ. ಮಳೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 51 ಮಿ.ಮೀ. ಹಾಗೂ ಚಿಂತಾಮಣಿ ತಾಲ್ಲೂಕಿನ ಮುಂಗನಹಳ್ಳಿಯಲ್ಲಿ 47.5 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget <> Ad Widget

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬಿಸ್ಕೂರಿನಲ್ಲಿ 47 ಮಿ.ಮೀ., ಹುಲ್ಲೇನಹಳ್ಳಿಯಲ್ಲಿ 46 ಮಿ.ಮೀ. ಹಾಗೂ ಅದರಂಗಿಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಪಶ್ಚಿಮ ಭಾಗದ ಕೋನೇನ ಅಗ್ರಹಾರ ಮತ್ತು ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರದಲ್ಲಿ ತಲಾ 40 ಮಿ.ಮೀ. ಮಳೆ ಸುರಿದಿದೆ.

ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹಾಗೂ ಚಿಂತಾಮಣಿ ತಾಲ್ಲೂಕಿನ ಪೆರಮಂಚನಹಳ್ಳಿಯಲ್ಲಿ ತಲಾ 35.5 ಮಿ.ಮೀ., ಸಂಕಿಘಟ್ಟದಲ್ಲಿ 35 ಮಿ.ಮೀ. ಮಳೆಯಾಗಿದೆ. ಆನೇಕಲ್ ತಾಲ್ಲೂಕಿನ ನೇರಿಗದಲ್ಲಿ 33.5 ಮಿ.ಮೀ., ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ 33 ಮಿ.ಮೀ. ಹಾಗೂ ಚಿಂತಾಮಣಿಯಲ್ಲಿ 32.8 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget

ಬೆಂಗಳೂರು ನಗರದ ದಾಸನಪುರದಲ್ಲಿ 29 ಮಿ.ಮೀ., ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ.ತಿಮ್ಮಸಂದ್ರದಲ್ಲಿ 28.5 ಮಿ.ಮೀ., ಅರಿಕುಂಟೆಯಲ್ಲಿ 27.5 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ 27.25 ಮಿ.ಮೀ. ಮಳೆಯಾಗಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವಿರುಪಸಮುದ್ರದಲ್ಲಿ 26 ಮಿ.ಮೀ. ಹಾಗೂ ಮಧುಗಿರಿ ತಾಲ್ಲೂಕಿನ ಬೇಡತೂರಿನಲ್ಲಿ 25.5 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಮತ್ತು ಚಿಂತಾಮಣಿ ತಾಲ್ಲೂಕಿನ ಮಾಸ್ತೇನಹಳ್ಳಿಯಲ್ಲಿ ತಲಾ 24.5 ಮಿ.ಮೀ. ಮಳೆಯಾಗಿದೆ.

ಇನ್ನು ಚಿಂತಾಮಣಿ ತಾಲ್ಲೂಕಿನ ತಳಗವಾರದಲ್ಲಿ 23.5 ಮಿ.ಮೀ., ಮುರುಗಮಲೆಯಲ್ಲಿ 23.25 ಮಿ.ಮೀ. ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೆಂಕಟಾಪುರದಲ್ಲಿ 23 ಮಿ.ಮೀ. ಮಳೆಯಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಳಗುರುಕೋಟೆ ಹಾಗೂ ಗೌರಿಬಿದನೂರು ತಾಲ್ಲೂಕಿನ ಮೆಲ್ಯಾದಲ್ಲಿ ತಲಾ 22.75 ಮಿ.ಮೀ. ಮಳೆ ಸುರಿದಿದೆ. ಬೆಂಗಳೂರಿನ ಚಿಕ್ಕಬಾಣಾವರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ತಲಾ 22.5 ಮಿ.ಮೀ. ಮಳೆಯಾಗಿದೆ.

ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಮತ್ತು ಶಿಡ್ಲಘಟ್ಟದಲ್ಲಿ ತಲಾ 22 ಮಿ.ಮೀ., ಬೆಂಗಳೂರಿನ ಲಕ್ಕಸಂದ್ರ, ವನ್ನಾರಪೇಟೆ ಹಾಗೂ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದಲ್ಲಿ ತಲಾ 21.5 ಮಿ.ಮೀ. ಮಳೆಯಾಗಿದೆ.

ಆನೇಕಲ್ ತಾಲ್ಲೂಕಿನ ಮುಗಳೂರು ಮತ್ತು ನೆಲಮಂಗಲ ತಾಲ್ಲೂಕಿನ ವಿಶ್ವೇಶ್ವರಪುರದಲ್ಲಿ ತಲಾ 21 ಮಿ.ಮೀ. ಮಳೆಯಾಗಿದ್ದರೆ, ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ 20.75 ಮಿ.ಮೀ. ಮಳೆ ದಾಖಲಾಗಿದೆ.

ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಹಾಗೂ ಚಿಂತಾಮಣಿ ತಾಲ್ಲೂಕಿನ ಬುರುದಗುಂಟೆಯಲ್ಲಿ ತಲಾ 20.5 ಮಿ.ಮೀ., ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಪೈಲಗುರ್ಕಿಯಲ್ಲಿ 20 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಬಾಣವಾಡಿಯಲ್ಲಿ 19.5 ಮಿ.ಮೀ. ಮಳೆಯಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!