ದಕ್ಷಿಣ ಕನ್ನಡ
ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶ್ರೀರಾಮೋತ್ಸವ- ‘ಪಂಪಾರಾಮ ಸ್ಮರಣೆ’
ರಾಮಾಯಣದಲ್ಲಿ ಚಾರಿತ್ರಿಕ, ಸಾಂಸ್ಕೃತಿಕ ಹಾಗೂ ಪೌರಾಣಿಕ ಮಹತ್ವವಿದೆ: ಡಾ. ಶ್ರೀಧರ್ ಹೆಚ್ ಜಿ
ಪುತ್ತೂರು,ಜ.18: ಪ್ರಪಂಚದ ಶ್ರೇಷ್ಠ ನಾಲ್ಕು ಮಹಾಕಾವ್ಯಗಳಲ್ಲಿ ರಾಮಾಯಣವೂ ಒಂದು. ಹಾಗಾಗಿ ರಾಮ ರಾಜ್ಯದ ಪರಿಕಲ್ಪನೆ ಪುರುಷೋತ್ತಮ ಬಾಲಕನಾಗಿರುವಾಗಲೇ ಆರಂಭವಾಗಿರುತ್ತದೆ. ಅದಕ್ಕೆ ಪೂರಕವಾಗಿ ಸಾಕೇತ ಅಯೋಧ್ಯೆ ಎಂಬುದಾಗಿ ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಿದೆ. ಈ ನಿಟ್ಟಿನಲ್ಲಿ ರಾಮಾಯಣವನ್ನು ಓದಿದರೆ ಭಾರತೀಯ ಸಂಸ್ಕೃತಿಯ ಇತಿಹಾಸ ಓದಿದಂತೆ. ಅಷ್ಟೇ ಅಲ್ಲದೆ ಇದರಲ್ಲಿ ಚಾರಿತ್ರಿಕ, ಸಾಂಸ್ಕೃತಿಕ ಹಾಗೂ ಪೌರಾಣಿಕ ಮಹತ್ವವಿದೆ ಎಂದು ಕಾಲೇಜಿನ ಪರಿಕ್ಷಾಂಗ ಕುಲಸಚಿವ ಹಾಗೂ ಸ್ನಾತಕೋತ್ತರ ಅಧ್ಯಯನ ವಿಭಾಗದ ನಿರ್ದೇಶಕ ಡಾ. ಶ್ರೀಧರ್ ಹೆಚ್ ಜಿ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ನಡೆದ ಪಂಪಾರಾಮ ಸ್ಮರಣೆಯಲ್ಲಿ ‘ರಾಮರಾಜ್ಯದ ಪರಿಕಲ್ಪನೆ’ ಎಂಬ ವಿಷಯದ ಕುರಿತು ಪ್ರಸ್ತಾಪಿಸಿ ಮಾತನಾಡಿದರು.

ರಾಮಾಯಣದಲ್ಲಿ ರಾಮನ ನೀತಿಗಳು ಪ್ರತ್ಯೇಕ ವಿದಾನವಾಗಿ ಕಾಣಿಸುತ್ತದೆ. ರಾಮನ ಆದರ್ಶಗಳು, ರಾಮ ಬದುಕಿನಲ್ಲಿ ಹೇಗೆ ನಡೆದುಕೊಂಡ, ಬದುಕಿನಲ್ಲಿ ಎದುರಾದ ಘಟನೆಗಳನ್ನು ನಿಭಾಯಿಸಿದ ಪರಿ ಎಲ್ಲರಿಗೂ ಮಾದರಿ. ಹಾಗಾಗಿ ಭಾರತೀಯರ ಬದುಕು ವ್ಯವಸ್ಥಿತವಾಗಿ ರೂಪುಗೊಳ್ಳುವಲ್ಲಿ, ಒಂದು ಆದರ್ಶದ ಜೀವನ ಪದ್ಧತಿಯನ್ನು ಅಳವಡಿಸಿಕೊಳ್ಳುವಲ್ಲಿ ರಾಮನ ಪಾತ್ರ ಮಹತ್ವವಾದುದು. ಇಂದಿನ ಯುವಕರಿಗೆ ರಾಮನೇ ಆದರ್ಶ. ಸುಖೀ ರಾಜ್ಯ ಹೇಗಿರಬೇಕೆಂದು ತಿಳಿಸಿಕೊಟ್ಟವನೇ ಶ್ರೀರಾಮ. ಅದೇ ರಾಮ ರಾಜ್ಯದ ಪರಿಕಲ್ಪನೆ. ರಾಮನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಹಾಗೂ ರಾಮರಾಜ್ಯ ನಿರ್ಮಾಣದಲ್ಲಿ ವಶಿಷ್ಟ ಮತ್ತು ವಿಶ್ವಾಮಿತ್ರರ ಕೊಡುಗೆ ಗಣನೀಯವಾಗಿದೆ. ಹಾಗಾಗಿ ಒಂದು ಜೀವನ, ಬದುಕು ಹೇಳುವಂತಹದ್ದು ಹೇಗೆ ನಮ್ಮನ್ನು ಬೇರೆ ಬೇರೆ ಕವಲುಗಳಲ್ಲಿ ಕರೆದುಕೊಂಡು ಹೋಗುತ್ತದೆಯೋ ಅದಕ್ಕೆ ನಾವು ಒಗ್ಗಿಕೊಂಡಲ್ಲಿ ನಮ್ಮ ಬದುಕು ಅತ್ಯಂತ ಶ್ರೇಷ್ಠತೆಯನ್ನು ಪಡೆದುಕೊಳ್ಳುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಪ್ರಭು ಶ್ರೀರಾಮನ ಆದರ್ಶಗಳು ಜನರನ್ನು ನೂರಾರು ರೀತಿಯಲ್ಲಿ ಉತ್ತೇಜಿಸುತ್ತದೆ. ಭಾರತ ಶಾಂತಿಸ್ಥಾಪಕ ದೇಶ. ನಮ್ಮ ಚಿಂತನೆ ಮತ್ತು ಧರ್ಮವನ್ನು ಉಳಿಸಿಕೊಳ್ಳಲು ಇರುವ ಮಣ್ಣು ಭಾರತ. ನಮ್ಮ ನಾಗರೀಕತೆ, ಸಂಸ್ಕೃತಿ, ಧರ್ಮ, ಜೀವನ ಮೌಲ್ಯ, ಪೌರುಷ, ಸಾಹಸ ಹಾಗೂ ಸತ್ಯದ ಗುರುತೇ ಶ್ರೀರಾಮ. ಆತನ ವ್ಯಕ್ತಿತ್ವ ಅಂತಹದ್ದು. ಈ ನಿಟ್ಟಿನಲ್ಲಿ ರಾಮನ ಜೀವನದಲ್ಲಿ ಸೀತಾಮಾತೆಯ ಪಾತ್ರ ಮಹತ್ವವಾದುದು. ಹಾಗಾಗಿ ರಾಮ ಮಡದಿಯನ್ನು ಸಹಧರ್ಮಿಣಿ ಎಂದು ಕರೆಯುತ್ತಾನೆ. ಅಂದರೆ ಧರ್ಮವನ್ನು ಹೇಳಿಕೋಡುವವಳು ಎಂದರ್ಥ. ಅದಕ್ಕಾಗಿಯೇ ಭಾರತದಲ್ಲಿ ಸ್ತಿçÃಯರಿಗೆ ಶ್ರೇಷ್ಠವಾದ ಸ್ಥಾನಮಾನವಿರುವುದು ಎಂದು ನುಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ. ಎನ್, ಇದೊಂದು ಅಪೂರ್ವ ಹಾಗೂ ಅವಿಸ್ಮರಣೀಯ ಕಾರ್ಯಕ್ರಮವಾಗಿದ್ದು, ಬಹುಶಃ ಇಲ್ಲಿ ಜನವರಿ 22ರ ವರೆಗೆ ನಡೆಯುತ್ತಿರುವ ಶ್ರೀರಾಮೋತ್ಸವ ಕಾರ್ಯಕ್ರಮ ಒಂದು ಇತಿಹಾಸ ಸೃಷ್ಟಿದೆ ಎಂದರೆ ತಪ್ಪಾಗರಾರದು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹಿಂದೆ ಅದೆಷ್ಟೋ ಕರಸೇವಕರ ಬಲಿದಾನವಿದೆ, ಹೋರಾಟದ ಕಥೆಗಳನ್ನು ಆಲಿಸುವಾಗ ರೋಮಾಂಚನವಾಗುತ್ತದೆ ಹಾಗೂ ಇಂದಿನ ಬೆಳವಣಿಗೆಯನ್ನು ಗಮನಿಸುವಾಗ ಹೆಮ್ಮೆಯೂ ಆಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಶ್ರೀನಿವಾಸ್ ಸಾಮಂತ್, ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್, ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ವಿಶೇಷ ಅಧಿಕಾರಿ ಡಾ. ಶ್ರೀಧರ್ ನಾಯಕ್, ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅಮೃತಾ ಸ್ವಾಗತಿಸಿ, ಪ್ರಜ್ಞಾ ಕೆ ವಂದಿಸಿದರು. ಕಾರ್ಯಕ್ರಮವನ್ನು ತೃತೀಯ ಬಿಕಾಂ ವಿದ್ಯಾರ್ಥಿನಿ ಕಾವ್ಯ ಶ್ರೀ ನಿರೂಪಿಸಿದರು.
ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ಮರ್ಯಾದ ಪುರುಷೋತ್ತಮ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನ ಶುಭ ಸಂದರ್ಭದಲ್ಲಿ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭಾಗವಹಿಸಲಿದ್ದು, ವಿದ್ಯಾರ್ಥಿಗಳು, ಬೋದಕ, ಬೋಧಕೇತರ ವೃಂದ ಹಾಗೂ ಆಡಳಿತ ಮಂಡಳಿಯ ಸದಸ್ಯರು ಆರತಿ ಬೆಳಗಿ ಅವರನ್ನು ಬೀಳ್ಕೊಟ್ಟರು.
ಉದ್ಘಾಟನೆ, ಗೌರವಾರ್ಪಣೆ:
ಶ್ರೀ ರಾಮೋತ್ಸವ ಆರನೇ ದಿನದ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ ಪುಷ್ಪಾ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಕೊನೆಯಲ್ಲಿ ರಾಮ ಭಾವಪೂಜೆಯ ಮೂಲಕ ಕಾರ್ಯಕ್ರಮವು ಸಂಪನ್ನಗೊಂಡಿತು. ಜೊತೆಗೆ ಈ ಸಂದರ್ಭದಲ್ಲಿ ಭೌತಶಾಸ್ತ್ರ ಪ್ರಯೋಗಾಲಯದ ಪರಿಚಾರಕರಾದ ಮಹೇಶ್ ಮತ್ತು ಪ್ರಮೋದ್ ಇವರಿಗೆ ಗೌರವ ಸಮರ್ಪಿಸಲಾಯಿತು.
ಯಕ್ಷ-ಗಾನ-ನಾದ ವೈಭವ:
ಕಾಲೇಜಿನ ಯಕ್ಷಗಾನ-ಯಕ್ಷರಂಜಿನಿ ಸದಸ್ಯರಿಂದ ಯಕ್ಷ-ಗಾನ-ನಾದ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
ರಾಜಕೀಯ
Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ
2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.
ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.
274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ
ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.
‘ಗ್ರಾಮಕ್ಕೊಂದು ಮಾನದಂಡ ಸಲ್ಲ’
ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.
2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.
ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.
‘ರಾಜ್ಯ ಸರಕಾರ ರೈತ ವಿರೋಧಿ’
ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
-
Uncategorized24 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್18 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು21 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ22 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized22 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ23 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ21 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್22 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















