Connect with us

ಮಂಗಳೂರು

Rama Mandira: ಸುಳ್ಯದ ಡಾ. ಕೆ.ಗಣಪತಿ ಭಟ್ ಗೆ ಒಲಿಯಿತು ಅಯೋಧ್ಯೆಯ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯ ಪೌರೋಹಿತ್ಯದ ಅವಕಾಶ

Published

on



Ad Widget

Ad Widget

Ad Widget

Ad Widget

ಸುಳ್ಯ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆಗೆ ತುಳುನಾಡಿನ ಸುಳ್ಯ ತಾಲೂಕಿನ ಸಂಸ್ಕೃತ ವಿದ್ವಾಂಸರಾದ   ಡಾ. ಕೆ.ಗಣಪತಿ ಭಟ್  ಆಯ್ಕೆಯಾಗಿದ್ದಾರೆ. ಇವರು  ತಿರುಪತಿಯ ರಾಷ್ಟ್ರೀಯ ಸಂಸ್ಕ್ರತ ವಿ.ವಿಯ ಪರಮಚಾರ್ಯ ಗುರುಕುಲದ ನಿರ್ದೇಶಕ.

Ad Widget

Ad Widget

Ad Widget

Ad Widget

ಗಣಪತಿ ಭಟ್ ರವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕೆಮನಬಳ್ಳಿಯ ಶಾರದಾ ಮತ್ತು ಗೋಪಾಲಕೃಷ್ಣ ಭಟ್.  ಸದ್ಯ ದೊರಕಿರುವ ಮಾಹಿತಿಯ ಪ್ರಕಾರ ರಾಮಲಲ್ಲಾನ ವಿಗ್ರಹ ಪ್ರತಿಷ್ಠೆಯ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲು ನೇಮಕವಾಗಿರುವ 101 ಮಂದಿ ಪ್ರಧಾನ ಪುರೋಹಿತರಲ್ಲಿ ಡಾ.ಕೆ.ಗಣಪತಿ ಭಟ್ ಒಬ್ಬರು

Ad Widget

Ad Widget

Ad Widget alt="Ad Widget"/>

Ad Widget

ಜ. 22ರಂದು ಅಯೋಧ್ಯೆಯಲ್ಲಿ  ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯ ಐತಿಹಾಸಿಕ ಕಾರ್ಯಕ್ರಮ ನೆರವೇರಲಿದೆ.  ಇದರ  ಧಾರ್ಮಿಕ ವಿಧಿ ವಿಧಾನಗಳು ಜ. 19ರಿಂದ ಆರಂಭಗೊಂಡಿದೆ.  ಕಾಶಿಯ ಖ್ಯಾತ ವಿದ್ವಾಂಸ ಗಣೇಶ್ವರ ಶಾಸ್ತ್ರಿ ದ್ರಾವಿಡ್ ಮತ್ತು ಪೂಜ್ಯ ಲಕ್ಷ್ಮೀಕಾಂತ್ ದೀಕ್ಷಿತ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿವೆ. 

Ad Widget

Ad Widget <> Ad Widget

. ಕಾಶಿಯ ವಿದ್ವಾಂಸರಾದ ಗಣೇಶ್ವರ ಶಾಸ್ತ್ರಿ ಮತ್ತು ಲಕ್ಷ್ಮಿಕಾಂತ್ ದೀಕ್ಷಿತ್ ಅವರು ಡಾ. ಕೆ. ಗಣಪತಿ ಭಟ್ ಅವರ ಹೆಸರನ್ನು ಸೂಚಿಸಿದ್ದಾರೆ. ಡಾ. ಕೆ. ಗಣಪತಿ ಅವರು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಏಕೈಕ ಪುರೋಹಿತರಾಗಿದ್ದಾರೆ.  ಇವರ ನಾಯಕತ್ವದಲ್ಲಿ 40 ಮಂದಿ ಆರ್ಚಕರಿರಲಿದ್ದಾರೆ



Ad Widget

  ಹತ್ತನೇ ತರಗತಿಯ ಬಳಿಕ ಸಂಸ್ಕೃತ ವಿಷಯದಲ್ಲಿ ಆಳವಾಗಿ ಅಧ್ಯಯನದಲ್ಲಿ ತೊಡಗಿಕೊಂಡೆ. ಇದರಿಂದ ಸಂಸ್ಕೃತ ವಿಷಯದಲ್ಲಿ ಅಳವಾಗಿ ಪಾಂಡಿತ್ಯ ಪಡೆಯಲು ಸಾಧ್ಯವಾಯಿತು. ಕಾಶಿಯ ವಿದ್ವಾಂಸರಾದ ಗಣೇಶ್ವರ ಶಾಸ್ತ್ರಿ ಮತ್ತು ಲಕ್ಷ್ಮಿಕಾಂತ್ ದೀಕ್ಷಿತ್‌ರ ಮೂಲಕ ರಾಮ ಜನ್ಮಭೂಮಿಗೆ ಕಾಲಿರಿಸುವ ಅವಕಾಶ ಸಿಕ್ಕಿದ್ದು, ಶ್ರೀರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಧಾರ್ಮಿಕ ವಿಧಿ ನೆರವೇರಿಸಲು ಅವಕಾಶ ಸಿಕ್ಕಿರುವುದು ನನ್ನ ಬದುಕಿನ ಪವಿತ್ರ ಕ್ಷಣ. ಎಂದು ಕೆ.ಗಣಪತಿ ಭಟ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.   

Ad Widget

Ad Widget

ಯಾರು ಈ ಗಣಪತಿ ಭಟ್‌ ?

1978 ರಲ್ಲಿ ಜನಿಸಿದ ಡಾ.ಕೆ.ಗಣಪತಿ ಭಟ್ ಜಾಲ್ಸೂರು ಗ್ರಾಮದ ಕೆಮನಬಳ್ಳಿಯ ಸ.ಕಿ.ಪ್ರಾ. ಶಾಲೆಯಲ್ಲಿ  4ನೇ ತರಗತಿವರೆಗೆ, ಅಡ್ಕಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭ನೇ ತರಗತಿ ವರೆಗೆ ಶಿಕ್ಷಣ ಪೂರೈಸಿದರು. ಪ್ರೌಢ ಶಿಕ್ಷಣವನ್ನು ಪೆರ್ನಾಜೆಯ ಪ್ರೌಢಶಾಲೆಯಲ್ಲಿ ಪಡೆದರು. 1992 ರಲ್ಲಿ ಕಾಂಚಿ ಕಾಮಕೋಟಿ ವಿದ್ಯಾಪೀಠದಲ್ಲಿ ಋಗ್ವೇದದಲ್ಲಿ ಪದವಿ ಶಿಕ್ಷಣ ಪಡೆದರು.

ಸಂಸ್ಕೃತದಲ್ಲಿ ಪದವಿ ಶಿಕ್ಷಣದ ಬಳಿಕ ಮಂತ್ರಾಲಯ ಶ್ರೀ ರಾಘವೇಂದ್ರ ಮಠದಲ್ಲಿ ಶಾಸ್ತ್ರ ಆಧ್ಯಯನ ವಿಷಯದಲ್ಲಿ ಎಂ.ಎ. ಪದವಿ ಪಡೆದರು. ಬಳಿಕ ತಿರುಪತಿ ರಾಷ್ಟ್ರೀಯ ಸಂಸ್ಕೃತ ವಿ.ವಿ.ಯಲ್ಲಿ ಪಿ.ಎಚ್.ಡಿ ಪದವಿ, ಮದ್ರಾಸ್ ವಿ.ವಿ.ಯಲ್ಲಿ ಸಂಸ್ಕೃತ ವೇದಾಂತ ಮತ್ತು ನ್ಯಾಯಶಾಸ್ತ್ರ ವಿಷಯದಲ್ಲಿ ಮತ್ತೊಂದು ಎಂ.ಎ ಪದವಿಯನ್ನು ಚಿನ್ನದ ಪದಕದೊಂದಿಗೆ ಪಡೆದಿರುವ ಗಣಪತಿ ಭಟ್ ಭಾರತ ಸರಕಾರ ನಡೆಸಿದ ಯುಜಿಸಿ ಪರೀಕ್ಷೆಯಲ್ಲಿ ತೇರ್ಗಡೆಯಾದರು.

 ಶಿಕ್ಷಣದ ಮೂಲಕ ಸಂಸ್ಕೃತ ಪಾಂಡಿತ್ಯ ಸಂಪಾದಿಸಿದ ಡಾ. ಗಣಪತಿ ಭಟ್ ಕಾಲಡಿಯ ಶಂಕರಾಚಾರ್ಯ ವಿ.ವಿ.ಯಲ್ಲಿ 8 ವರ್ಷ ಉಪನ್ಯಾಸಕರಾಗಿ ಬೋಧನೆ, ತಿರುಪತಿ ರಾಷ್ಟ್ರೀಯ ಸಂಸ್ಕ್ರತ ವಿ.ವಿ.ಯಲ್ಲಿ ಪ್ರೊಫೆಸರ್ ಆಗಿ, ಪರೀಕ್ಷಾಂಗ ಕುಲಸಚಿವರಾಗಿ, ಪ್ರಸ್ತುತ ತಿರುಪತಿ ವಿ.ವಿ.ಯ ಪರಮಚಾರ್ಯ ಗುರುಕುಲದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

  ಡಾ.ಕೆ.ಗಣಪತಿ ಭಟ್ ಅವರು 40  ಮಂದಿಗೆ ಪಿ.ಎಚ್.ಡಿ. ಮಾರ್ಗದರ್ಶನ ಮತ್ತು ೨೦ ಮಂದಿಗೆ ಎಂ.ಫಿಲ್.ಗೆ ಮಾರ್ಗದರ್ಶನ ನೀಡಿದ್ದಾರೆ. ಕೇರಳ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಪರೀಕ್ಷಾಧಿಕಾರಿಯಾಗಿ, ದೇಶದ ವಿವಿಧ ೧೮ ವಿಶ್ವವಿದ್ಯಾಲಯಗಳ ಪಿ.ಎಚ್.ಡಿ ಮೌಲ್ಯಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading