ದಕ್ಷಿಣ ಕನ್ನಡ
Ramashva Yatre ಮೂರು ದಿನಗಳ ಕಾಲ ಪುತ್ತೂರಿನಲ್ಲಿ ನಡೆಯಿತು ರಾಮನ ದಿಗ್ವಿಜಯ ನೆನಪಿಸುವ ರಾಮಾಶ್ವ ಯಾತ್ರೆ – ಇಂದು ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ( ಜ 22) ರಾಮ ತಾರಕ ಯಜ್ಞ
ಪುತ್ತೂರು: ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀರಾಮ ಮಂದಿರದಲ್ಲಿ ಜ 22 ರಂದು ಶ್ರೀ ರಾಮಲಲ್ಲಾನ ಪ್ರತಿಷ್ಠಾಪನ ಕಾರ್ಯಕ್ರಮ ನಡೆಯಲಿದ್ದು, ಈ ಪ್ರಯುಕ್ತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮೂರು ದಿನಗಳ ಕಾಲ ಶ್ರೀ ರಾಮನ ದಿಗ್ವಿಜಯದ ಸಂಕೇತವಾಗಿ ಶ್ರೀ ರಾಮಶ್ವ ಯಾತ್ರೆ ನಡೆಯಿತು. ಜ.19ರಂದು ಬೆಳಿಗ್ಗೆ ದೇವಳದ ರಥ ಬೀದಿಯಲ್ಲಿ ಚಾಲನೆ ನೀಡಲಾಗಿತ್ತು. ಶ್ರೀ ರಾಮಶ್ವ ಯಾತ್ರೆಯು ಮೂರು ದಿನಗಳ ಕಾಲ ಪುತ್ತೂರು ತಾಲೂಕಿನ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿಂದ ಯಾಗದ ಸಮಿತ್ತನ್ನು ಸಂಗ್ರಹಿಸಿತ್ತು.

ರಾಮಲಲ್ಲಾನ ಪ್ರಾಣ ಪ್ರತಿಷ್ಟೆ ನಡೆಯುವ ಜ.22ರಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ರಾಮತಾರಕ ಯಜ್ಞ ನಡೆಯಲಿದೆ. ಈ ಯಾಗಕ್ಕೆ ಸಮಿತ್ತನ್ನು ತಾಲೂಕಿನ ಭಕ್ತರಿಂದ ಸಂಗ್ರಹಿಸುವ ಉದ್ದೇಶದಿಂದ . ಶ್ರೀ ರಾಮಶ್ವ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವಿಶೇಷ ಅಶ್ವವನ್ನು ಮೈಸೂರಿನಿಂದ ತರಲಾಗಿತ್ತು.

ಜ 19ರಂದು ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಪುಷ್ಪಾಲಂಕೃತಗೊಂಡ ಬಿಳಿ ಕುದುರೆಗೆ ತೀರ್ಥ ಸಂಪ್ರೋಕ್ಷಣೆ ಮಾಡಿ ಪವಿತ್ರಗೊಳಿಸಲಾಯಿತು. ಮಹಾಲಿಂಗೇಶ್ವರನ ಗಂಧ ಪ್ರಸಾದ ಹಣೆಗೆ ಹಚ್ಚಿ ಅಭಯ ಪ್ರದಾನ ಮಾಡಲಾಯಿತು. ಹೊಸ ಹುಮ್ಮಸ್ಸಿನಿಂದ ಹೊಸ ಜವಾಬ್ದಾರಿ ಧರಿಸಿಕೊಂಡ ಶ್ವೇತಾಶ್ವ ಲವಲವಿಕೆಯಿಂದ ಅಲಂಕೃತ ವಾಹನವನ್ನೇರಿ ಹೊರಟಿತ್ತು. ನಿರಂತರ 3 ದಿನ ಸೀಮೆ ವ್ಯಾಪ್ತಿಯ 22 ಗ್ರಾಮ ದೇವಸ್ಥಾನಗಳಿಗೆ ಪರ್ಯಟನೆ ಮಾಡಿದ ಕುದುರೆ, ಅಕ್ಷರಶಃ ಅಯೋಧ್ಯಾ ರಾಮನ ಪ್ರತಿನಿಧಿಯಾಗಿ ಪ್ರತೀ ಊರಿಗೂ ರಾಮತಾಕರ ಯಜ್ಞದ ಆಮಂತ್ರಣ ನೀಡಿ, ಯಜ್ಞಕ್ಕೆ ಬೇಕಾದ ಸಮಿತ್ತುಗಳನ್ನು ಸ್ವೀಕರಿಸಿಕೊಂಡು ಮರಳಿ ಬಂದಿದೆ.

ಜ 22 ರಂದು ತಾರಕ ಯಜ್ಞ ನಡೆಯುವ ವೇಳೆ ಈ ಕುದುರೆ ದೇಗುಲದಲ್ಲೆ ಇರಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಯಜ್ಞದ ಪೂರ್ಣಾಹುತಿ ನಡೆಯಲಿದೆ. .ವೈಯುಕ್ತಿಕ ಸಂಕಲ್ಪ ಮಾಡಲು ಅವಕಾಶ ಕಲ್ಪಿಸಲಾಗಿದೆ

ನಮ್ಮ ಕಾಲದಲ್ಲಿ ನಾವು ಕಂಡ ದೇವಾಲಯಗಳು ಬಹಳಷ್ಟು ಜೀರ್ಣೋದ್ದಾರಗೊಂಡಿದೆ. ಇವತ್ತು ಅಯೋಧ್ಯೆಯಲ್ಲಿ ಬೃಹತ್ ಮಂದಿರ ನಮ್ಮ ಜೀವಿತಾವಧಿಯಲ್ಲಿ ಆಗಿರುವುದು ನಮ್ಮ ಪುಣ್ಯ ಎಂದು ಹೇಳಬಹುದು. ಪುತ್ತೂರು ಸೀಮೆಯ ಎಲ್ಲಾ ದೇವಸ್ಥಾನವನ್ನು ಸೇರಿಸಿಕೊಂಡು ಯಾಗ ಸಮಿತ್ತು ಸಂಗ್ರಹದೊಂದಿಗೆ ಮುಂದೆ ಜ.22ರಂದು ದೇವಾಲಯದಲ್ಲಿ ರಾಮತಾರಕ ಯಜ್ಞ ನಡೆಯಲಿದೆ. ದೇವಸ್ಥಾನ ಸೀಮೆಯೊಂದಿಗಿದ್ದಾರೆ ಎಂಬ ಕಲ್ಪನೆಯ ಅಡಿಯಲ್ಲಿ ಯಾಗದ ಸಮಿತ್ತನ್ನು ಸಂಗ್ರಹಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ
ರಾಮಾಶ್ವ ಯಾತ್ರೆ ದೇಶದಲ್ಲೇ ಪ್ರಥಮ
ಅಯೋಧ್ಯೆ ಕರಸೇವಕ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು
ಅಯೋಧ್ಯೆಯ ಶ್ರೀ ರಾಮ ವಿಗ್ರಹದ ಪ್ರಾಣ ಪ್ರತಿಷ್ಠೆಯ ಸಂದರ್ಭ ಎಲ್ಲಾ ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮವಾಗಿ ರಾಮಾಶ್ವ ಯಾತ್ರೆ ಮಾಡಿರುವುದು ದೇಶದಲ್ಲೇ ಪುತ್ತೂರಿನಲ್ಲಿ ಪ್ರಥಮವಾಗಿ ನಡೆಯುತ್ತಿದೆ. ಇಂತಹ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಲಿ
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
ನಿಧನ ವಾರ್ತೆ24 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು19 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಮಂಗಳೂರು22 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ23 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ23 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ23 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ19 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ23 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ




















