ವಿಟ್ಲ
ಯಕ್ಷಗಾನದಲ್ಲಿ ‘ಪೆರುವಾಯಿ ಶೈಲಿ’ ಎನ್ನುವ ಹೊಸ ಪಥ ರಚಿಸಿದ ಖ್ಯಾತ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ
ಮಂಗಳೂರು: ಹೆಸರಾಂತ ಯಕ್ಷಗಾನ ಕಲಾವಿದ “ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು.
ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, ಕುಂಟಾರು, ಕಟೀಲು ಹೀಗೆ ವಿವಿಧ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ಮಾಡಿದ ಪೆರುವಾಯಿ ನಾರಾಯಣ ಶೆಟ್ಟಿ ಅವರದು ಬಹುದೊಡ್ಡ ಸಾಧನೆ. ಅವರು ಸುಮಾರು 52 ವರ್ಷ ಗಳ ಕಾಲ ನಿರಂತರ ತಿರುಗಾಟ ನಡೆಸಿದ್ದರು.
ಬಳಿಕ ಅನಾರೋಗ್ಯದಿಂದಾಗಿ ಯಕ್ಷರಂಗದಿಂದ ನಿವೃತ್ತಪಡೆದಿದ್ದರು.ಕಟೀಲುಮೇಳದ ಕಲಾವಿದರಾಗಿದ್ದ ಅವರು ನಿರ್ವಹಿಸುತ್ತಿದ್ದಾಗ ರಕ್ತಬೀಜ, ಹಿರಣ್ಯಕಷ್ಯಪು, ಕಂಸ, ಸುಂದರರಾವಣ, ಋತುಪರ್ಣ, ಹನೂಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಹಲವು ಪಾತ್ರಗಳನ್ನು ಬಹಳ ಪರಿಣಾಮಕಾರಿಯಾಗಿ ರಂಗದಲ್ಲಿ ಬಿಂಬಿಸಿ ಖ್ಯಾತರಾದವರು.
ಕೋಟಿ ಚೆನ್ನಯದ ಕೋಟಿ ಮೊದಲಾದ ವೇಷಗಳ ನಿರ್ವಹಣೆಯಲ್ಲಿ “ಪೆರುವಾಯಿ ಶೈಲಿ’ ಎಂಬ ಹೊಸ ಹಾದಿಯನ್ನು ನಿರ್ಮಿಸಿದ ಕೀರ್ತಿವಂತ. ತುಳು ಪ್ರಸಂಗಗಳ ಪಾತ್ರನಿರ್ವಹಣೆಯಲ್ಲೂ ವೈಶಿಷ್ಟ್ಯತೆಯನ್ನು ಮೆರೆದವರು. ಇವರ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳು ಬಹಳ ಪ್ರಸಿದ್ಧ ಪಡೆದಿತ್ತು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
ಅಪರಾಧ
Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅಪರಾಧ
Vitla-ವಿಟ್ಲ: ಅಕ್ರಮ ಜಾನುವಾರು ಸಾಗಾಟ: ಪಿಕಪ್ ವಾಹನ ವಶಕ್ಕೆ, ನಾಲ್ವರ ವಿರುದ್ಧ ಕೇಸ್
ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ .ಪಿ. ಅಬ್ದುಲ್ಲಾ, ಸುಬ್ರಹ್ಮಣ್ಯ, ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಟ್ಲ: ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ.
ವಿಟ್ಲ ಪೊಲೀಸರು ಪಾದೆಕಲ್ಲು ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆ ಮಾರ್ಗವಾಗಿ ಬಂದ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.
ವಾಹನದ ಚಾಲಕ ಬಂಟ್ವಾಳ ತಾಲೂಕಿನ ಕರೋಪಾಡಿ ನಿವಾಸಿ ಒ.ಪಿ. ಅಬ್ದುಲ್ಲಾ ಹಾಗೂ ವಾಹನದಲ್ಲಿದ್ದ ಸುಬ್ರಹ್ಮಣ್ಯ ಅವರನ್ನು ವಿಚಾರಿಸಿದಾಗ, ಜಾನುವಾರು ಸಾಗಾಟಕ್ಕೆ ಯಾವುದೇ ಪರವಾನಗಿ ಪಡೆದಿರಲಿಲ್ಲ ಎಂಬುದು ತಿಳಿದುಬಂದಿದೆ.
ಇದೇ ವೇಳೆ ಕಾರಿನಲ್ಲಿ ಸ್ಥಳಕ್ಕೆ ಆಗಮಿಸಿದ್ದ ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ಅವರ ಸೂಚನೆಯ ಮೇರೆಗೆ ಜಾನುವಾರುಗಳನ್ನು ಸಾಗಿಸುತ್ತಿರುವುದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

















