Connect with us

ದಕ್ಷಿಣ ಕನ್ನಡ

ಪದೆ ಪದೆ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿರುವ ನಟೋರಿಯಸ್ ಕ್ರಿಮಿನಲ್ ಮಾಜಿ ರೌಡಿ ಶೀಟರ್ ನವೀನ್ ಪನಡ್ಕನಿಗೆ ಶಾಕ್ ನೀಡಿದ ಪೊಲೀಸ್..! 50 ಸಾವಿರ ರೂ ಬಾಂಡ್ ಮೊತ್ತ ಮುಟ್ಟುಗೋಲಿಗೆ ಸರಕಾರಕ್ಕೆ ಶಿಫಾರಸ್ಸು – ಪೊಲೀಸರು ಹೀಗೆ ಮಾಡಿದ್ಯಾಕೆ ಗೊತ್ತೆ ?

Published

on



Ad Widget

Ad Widget

Ad Widget

Ad Widget

ಪುತ್ತೂರು: ಭವಿಷ್ಯದಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದೇ ಸದ್ವರ್ತನೆ ತೋರುವುದಾಗಿ ಸರಕಾರಕ್ಕೆ ಮುಚ್ಚಳಿಕೆ ಬರೆದುಕೊಟ್ಟಿದ್ದ ಮಾಜಿ ರೌಡಿ ಶಿಟರ್ ಒಬ್ಬ ತನ್ನ ಹಳೇ ಚಾಳಿ ಮುಂದುವರಿಸಿ ಮತ್ತೆ ಸಮಾಜ ಘಾತುಕ ಕೃತ್ಯದಲ್ಲಿ ತೊಡಗಿಕೊಂಡ ಹಿನ್ನಲೆಯಲ್ಲಿ ಆತನ ಬಾಂಡ್ ಅನ್ನು ಮುಟ್ಟುಗೋಲು ಹಾಕುವಂತೆ ಪೊಲೀಸ್ ಇಲಾಖೆ ಸರಕಾರಕ್ಕೆ ಶಿಫಾರಸ್ಸು ಮಾಡಿದೆ.

Ad Widget

Ad Widget

Ad Widget

Ad Widget

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಒಳಮೊಗ್ರು ಗ್ರಾಮದ ಪನಡ್ಕ ಸುಂದರ ರೈ ಎಂಬವರ ಪುತ್ರ ಸಾಮಾಜಿಕ ಜಾಲತಾಣದಲ್ಲಿ ನಿತ್ಯ ನಿರಂತರವಾಗಿ ಶಾಂತಿ ಕದಡುತ್ತಿರುವ ಹಾಗೂ ಗಣ್ಯ ವ್ಯಕ್ತಿಗಳ ಅವಹೇಳನ ಮಾಡುತ್ತಿರುವ ನಟೋರಿಯಸ್ ಕ್ರಿಮಿನಲ್ ನರ್ವಂಟೆ ನವೀನ ಅಲಿಯಾಸ್ ನವೀನ್ ರೈ ಪನಡ್ಕ ಅಪರಾಧ ಕೃತ್ಯದಲ್ಲಿ ಭಾಗಿಯಾದ ಆರೋಪಿ ಈತನ ವಿರುದ್ದ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸದ್ವರ್ತನೆಗಾಗಿ ಪಿ.ಎ.ಆರ್ ನ್ನು 20-8-2022ರಂದು ದಾಖಲಿಸಲಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget

ಬಳಿಕ ಈ ಕ್ರಿಮಿನಲ್ ತಾನು ಮುಂದಿನ ದಿನಗಳಲ್ಲಿ ಯಾವುದೇ ಕ್ರಿಮಿನಲ್ ಕೃತ್ಯ ಎಸಗುವುದಿಲ್ಲವೆಂದು ಪುತ್ತೂರು ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಯವರಿಗೆ ಬಾಂಡ್ ಬರೆದುಕೊಟ್ಟಿದ್ದ. ಇದು ರೂ.50 ಸಾವಿರ ಮೊತ್ತದ ಜಾಮೀನು ಸಹಿತ ಮುಚ್ಚಳಿಕೆ ಪತ್ರವಾಗಿತ್ತು. ಒಂದು ವರ್ಷ ಅವಧಿಯ ಬಾಂಡ್ ಇದಾಗಿದ್ದು ದಿನಾಂಕ 2-11-2022ರಿಂದ 2-11-2023ರವರೆಗೆ ಇದು ಊರ್ಜಿತದಲ್ಲಿತ್ತು. ಆದರೇ ಆರೋಪಿಯು ಈ ಬಾಂಡ್ ಅವಧಿಯಲ್ಲೂ ತನ್ನ ಅಪರಾಧ ಮನೋಭಾವದಲ್ಲಿ ಯಾವುದೇ ಬದಲಾವಣೆ ತೋರಿಸದೆ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ.

Ad Widget

Ad Widget <> Ad Widget

ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭ ( ಮೇ 12 ರಂದು ರಾತ್ರಿ ) ಈ ಪಾಖಂಡಿ ನವೀನ ತನ್ನ ಮನೆ ಸಮೀಪ ಒಳಮೊಗ್ರು ಗ್ರಾಮದ ಕೈಕಾರ ಎಂಬಲ್ಲಿ ತಲ್ವಾರು ಹಿಡಿದು ಹುಚ್ಚು ಹುಚ್ಚಾಗಿ ವರ್ತಿಸಿ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಹಾಕಿಕೊಂಡಿದ್ದ. ಈ ಹಿನ್ನಲೆಯಲ್ಲಿ ಆತನ ವಿರುದ್ದ ಸಂಪ್ಯ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 43/2023ರಂತೆ ಐಪಿಸಿ ಕಲಂ 504, 160, 34, ಕಲಂ:25(1ಬಿ)(ಬಿ)ರಂತೆ ಪ್ರಕರಣ ದಾಖಲಾಗಿದೆ.



Ad Widget


ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಳೆ ದಾಳಿ ನಡೆಸುವ ಉದ್ದೇಶದಿಂದ ಈತ ತಲ್ವಾರು ಹಿಡಿದು ಬಂದ ಬಗ್ಗೆ ಆಗ ಆರೋಪ ಕೇಳಿ ಬಂದಿತ್ತು. ಇದೇ ಪ್ರಕರಣದ ಆಧಾರದಲ್ಲಿ ಸಂಪ್ಯ ಠಾಣೆ ಪೊಲೀಸರು ಈತನ ಬಾಂಡ್ ರದ್ದುಗೊಳಿಸುವಂತೆ ಹಣವನ್ನು ಮುಟ್ಟುಗೋಲು ಹಾಕುವಂತೆ ಇದೀಗ ಸರಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.

Ad Widget

Ad Widget


ಅದಕ್ಕೂ ಕೆಲ ತಿಂಗಳ ಹಿಂದೆ ಮನೆಗೆ ಬಂದ ಮಹಿಳೆಯೊಬ್ಬರ ಜತೆ ಅನುಚಿತವಾಗಿ ವರ್ತಿಸಿದ ಬಗ್ಗೆಯೂ ಈತನ ವಿರುದ್ದ ಪ್ರಕರಣ ದಾಖಲಾಗಿತ್ತು. ಆ ವೇಳೆ ಆ ಮಹಿಳೆ ಕಾಲಲ್ಲಿ ಇದ್ದದನ್ನು ಕೈಯಲ್ಲಿ ಹಿಡಿದುಕೊಂಡು , ಆತನನ್ನು ಮನೆಯಿಂದ ಮುಖ್ಯ ರಸ್ತೆಯವರೆಗೆ ಅಟ್ಟಾಡಿಸಿ ಕೊಂಡು ಹೋಗಿ ಮುಖ ಮೂತಿ ಎನ್ನದೇ ಹೊಡೆಯಬಾರದ ವಸ್ತುವಿನಲ್ಲಿ ಹೊಡೆದಿದ್ದರು ಎಂದು ಸ್ಥಳೀಯವಾಗಿ ಸುದ್ದಿ ಹಬ್ಬಿತ್ತು.

ಸಾಮಾನ್ಯವಾಗಿ ಆ ವಸ್ತುವಿನಲ್ಲಿ ಪೆಟ್ಟು ತಿಂದವರು ಬಳಿಕದ ದಿನಗಳಲ್ಲಿ ಸಾಮಾಜಿಕವಾಗಿ ಕಾಣಿಸಿಕೊಳ್ಳಲು ಮುಜುಗರ ಅನುಭವಿಸುತ್ತಾರೆ. ಆದರೇ ಈ ಕ್ರಿಮಿನಲ್ ಗೆ ಅದ್ಯಾವುದರ ಗೊಡವೆಯೂ ಇಲ್ಲದಿರುವುದರಿಂದ ಸಾಮಾಜಿಕ ಜಾಲತಾಣದಲ್ಲಿ ಸಿಲೆಬ್ರಿಟಿ ರೀತಿ ಈ ಗಳು ಪೋಸ್ ಕೊಡುತ್ತಿದ್ದಾನೆ.

Ad Widget

ಬಿಗ್ ನ್ಯೂಸ್

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.

Ad Widget

Ad Widget <> Ad Widget

ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.



Ad Widget

ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.

Continue Reading

ಉದ್ಯೋಗ

Puttur-Sales‌ನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening

Published

on



Ad Widget

Ad Widget

Ad Widget

Ad Widget

ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

Ad Widget

Ad Widget <> Ad Widget

ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ



Ad Widget

ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Ad Widget

Ad Widget

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ

ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ

ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.

PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!

ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.

ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.

📞 ಸಂಪರ್ಕ: +91 82965 79206

📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.

Ad Widget
Continue Reading

ಶಿಕ್ಷಣ

Vivekananda-ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೆ. ವಿ. ನಿಖಿಲ್ ಕುಮಾರ್, ನಿಹಾಲ್ ಸಿ. ರೈ. ದ್ವಿತೀಯ ಪಿಯುಸಿ ಅಭಿಲಾಷ್, ವಿಕ್ರಮ್ ಎ. ಜಿ ಹಾಗೂ ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ಆತ್ಮಿಕಾ, ಎಚ್. ಮನ್ಮಿತಾ, ಶರಣ್ಯಾ ಎಚ್. ಎನ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading