ದಕ್ಷಿಣ ಕನ್ನಡ
Shivananda Tagadooru ಮಾಜಿ ರೌಡಿ ಶೀಟರ್ʼನಿಂದ ಪುತ್ತೂರಿನ ಪತ್ರಕರ್ತನಿಗೆ ಜೀವ ಬೆದರಿಕೆ – ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಖಂಡನೆ
ಪುತ್ತೂರಿನ ಪತ್ರಕರ್ತರೊಬ್ಬರ ಮೇಲೆ ಮಾಜಿ ರೌಡಿ ಶೀಟರೊಬ್ಬ ಅವಾಚ್ಯ ಶಬ್ಧಗಳಿಂದ ಖಂಡಿಸಿ ಜೀವ ಬೆದರಿಕೆ ಒಡ್ಡಿರುವುದನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತೀವ್ರವಾಗಿ ಖಂಡಿಸಿದ್ದಾರೆ.
ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪತ್ರಕರ್ತನಿಗೆ ಜೀವ ಬೆದರಿಕೆ ಒಡ್ಡಿದ ರೌಡಿಶೀಟರ್ ನವೀನ್ ರೈ ಪನಡ್ಕ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕೋದ್ಯಮಕ್ಕೆ ತೊಂದರೆಯಾಗದಂತೆ ಇಲಾಖೆ ನೋಡಿಕೊಳ್ಳಬೇಕಾಗಿದೆ ಎಂದು ಅವರು ಆಗ್ರಹಿಸಿದ್ದಾರೆ.
ವರದಿಯೊಂದಕ್ಕೆ ಸಂಬಂಧಿಸಿದಂತೆ ಮಾಜಿ ರೌಡಿ ಶೀಟರ್ ನವೀನ್ ರೈ ಎಂಬಾತ ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಪ್ರದೀಪ್ ಕುಮಾರ್ ಶೆಟ್ಟಿ ಎಂಬವರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದ. ಈ ಕುರಿತು ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಮಾಹಿತಿ ತನಗೆ ತಿಳಿಯುತ್ತಿದ್ದಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ರವರು ಇದೊಂದು ಖಂಡನೀಯ ಕೃತ್ಯ ಎಂದು ಅಘಾತ ವ್ಯಕ್ತಪಡಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಖೋ ಖೋ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಖೋ ಖೋ ಪಂದ್ಯಾಟವು ನರೇಂದ್ರ ಪದವಿಪೂರ್ವ ಕಾಲೇಜು ಪುತ್ತೂರು ಇವರ ಸಹಯೋಗದಲ್ಲಿ ತೆಂಕಿಲ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಹಾಗೂ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಖೋ ಖೋ ಪಂದ್ಯಾಟವು ನರೇಂದ್ರ ಪದವಿಪೂರ್ವ ಕಾಲೇಜು ಪುತ್ತೂರು ಇವರ ಸಹಯೋಗದಲ್ಲಿ ತೆಂಕಿಲ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಹಾಗೂ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಶಶಾಂಕ್, ಚಂದನ್, ದಿಶಾಲ್ ಎ , ಉದಯ್ ಎಸ್ , ಥುಷನ್ ಎ , ತರುಣ್ ಎ ರೈ , ಪ್ರದ್ವಿತ್ ರೈ ಎಮ್ , ಯಶ್ವಿನ್ ಬಿ , ಜೀವಿತ್,ಎಸ್. ಡಿ ಮಸಲಿ , ಪ್ರಿಥ್ವಿರಾಜ್ ಜಿ . ದ್ವಿತೀಯ ಪಿಯುಸಿ ತರುಣ್ ಕುಮಾರ್ ಬಿ . ಆರ್ ,ದೇಶ್ಚಿತ್ ಎಸ್ ,ಘನಶ್ಯಾಮ್ ,ಲಿಖಿತ್ ,ಕೀರ್ತನ್,ಸತ್ವಿಕ್ , ಮಾನ್ವಿತ್ , ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿನಿಯರಾದ ಸಂಗೀತ ಎಸ್. ಎಮ್ , ವಿನ್ಯಾ ರೈ , ಶ್ವೇತಶ್ರೀ, ಭೂಮಿಕಾ, ವೃಷ್ಟಿ ರೈ , ನಿದೀಕ್ಷ ಎ , ಪ್ರಣಿತಾ ಕೆ , ಹರ್ಷಿಣಿ , ವಿದ್ಯಾ ಎಮ್ , ಎಚ್ . ಡಿ ಹೇಮಾದ್ರಿ , ಸಾನ್ವಿ ಅಂಚನ ವೈ. ವೈ, ದ್ವಿತೀಯ ಪಿಯುಸಿ ವಿಂದ್ಯಾ ಎಮ್ ಆರ್, ನಳಿನ ಎ. ಬಿ , ಅನನ್ಯ ಗೌಡ ಭಾಗವಹಿಸಿರುತ್ತಾರೆ.
ವೈಯಕ್ತಿಕ ಪ್ರಶಸ್ತಿಗಳು ದ್ವಿತೀಯ ವಾಣಿಜ್ಯ ವಿಭಾಗದ ದೇಶ್ಚಿತ್ ಎಸ್( ಬೆಸ್ಟ್ ಡಿಫೆಂಡರ್) ,ಲಿಖಿತ್ (ಬೆಸ್ಟ್ ಆಲ್ ರೌಂಡರ್), ಪ್ರಥಮ ವಿಜ್ಞಾನ ವಿಭಾಗದ ವೃಷ್ಟಿ ರೈ ( ಬೆಸ್ಟ್ ಡಿಫೆಂಡರ್).
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಂತ್ರಜ್ಞಾನದ ಮಹಾಸಂಗಮ; IEEE ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಸಜ್ಜು; ಡಿಸ್ಕವರ್–2026: 1,071 ಪ್ರಬಂಧಗಳ ಪೈಕಿ 94ಕ್ಕೆ ಮಂಡನೆ ಅವಕಾಶ
ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.
ಪುತ್ತೂರು: ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, IEEE ಬೆಂಗಳೂರು ವಿಭಾಗ ಹಾಗೂ IEEE ಮಂಗಳೂರು ಉಪವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ಕಮ್ಯುನಿಕೇಶನ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್, ರೊಬೋಟಿಕ್ಸ್ ಹಾಗೂ ಹೆಲ್ತ್‌ಕೇರ್ ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ.
ದೇಶ-ವಿದೇಶಗಳಿಂದ 1,071 ಸಂಶೋಧನಾ ಪ್ರಬಂಧಗಳು ಸಲ್ಲಿಕೆಯಾಗಿದ್ದು, ಗುಣಮಟ್ಟದ ಪರಿಶೀಲನೆಯ ಬಳಿಕ 94 ಪ್ರಬಂಧಗಳನ್ನು ಮಂಡನೆಗೆ ಆಯ್ಕೆ ಮಾಡಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವಿಕೃಷ್ಣ ಡಿ. ಕಲ್ಲಾಜೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅ.9ರಂದು ಬೆಳಿಗ್ಗೆ 9.30ಕ್ಕೆ ಸಾವರ್ಕರ್ ಸಭಾಭವನದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಐಐಎಸ್‌ಸಿ ಸೆಂಟರ್ ಆಫ್ ನ್ಯಾನೋ ಸೈನ್ಸಸ್ ಎಂಡ್ ಇಂಜಿನಿಯರಿಂಗ್‌ನ ಪ್ರೊ. ಡಾ. ನವಕಾಂತ ಭಟ್ ಮುಖ್ಯ ಅತಿಥಿಯಾಗಿ, ಟಿಸಿಎಸ್ ಹಿರಿಯ ವಿಜ್ಞಾನಿ ಹಾಗೂ IEEE ಬೆಂಗಳೂರು ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಮಿಶ್ರ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರವಿಕೃಷ್ಣ ಡಿ. ಕಲ್ಲಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಿಂದ ವಿಚಾರ ಮಂಡನೆ
ಸಮ್ಮೇಳನದಲ್ಲಿ ಸೆಮಿಕಂಡಕ್ಟರ್ ವಿಎಲ್‌ಎಸ್‌ಐ ತಂತ್ರಜ್ಞಾನ, 6G ಸಂಪರ್ಕ ವ್ಯವಸ್ಥೆ ಹಾಗೂ ಎಐ ಆಧಾರಿತ ವಿಕೇಂದ್ರೀಕೃತ ಬುದ್ಧಿಮತ್ತೆ ಕುರಿತು ತಜ್ಞರಿಂದ ವಿಚಾರ ಮಂಡನೆ ನಡೆಯಲಿದೆ. ಡಾ. ನವಕಾಂತ ಭಟ್, ಸ್ಮಾರ್ಟ್‌ಬೀಮ್ ರೆಸೊನೆಟಿಕ್ಸ್‌ನ ಸಂಸ್ಥಾಪಕಿ ಡಾ. ಶ್ವೇತಾ ಅಮಿತ್ ಹಾಗೂ ಬ್ಲೂಟ್ ಟೆಕ್ನಾಲಜೀಸ್‌ನ ಸಂಸ್ಥಾಪಕ-ಸಿಟಿಒ ಸುದರ್ಶನ್ ಶೆನ್ವಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
‘ಸಂಶೋಧನೆ ಮತ್ತು ನಾವೀನ್ಯತೆ: ಗುಣಮಟ್ಟ, ಪ್ರಮಾಣ ಮತ್ತು ನೈತಿಕ ಆಯಾಮಗಳು’ ಕುರಿತು ವಿಶೇಷ ಚರ್ಚೆಯೂ ನಡೆಯಲಿದೆ. ಡಾ. ಪ್ರಶಾಂತ್ ಮಿಶ್ರ, ಡಾ. ನವಕಾಂತ ಭಟ್, ಡೆಲ್ ಟೆಕ್ನಾಲಜೀಸ್‌ನ ಡೇಟಾ ಸೈನ್ಸ್ ನಿರ್ದೇಶಕ ಪಂಡಿತ್ ಕುಲದೀಪ್ ಡೋಂಗ್ರೆ ಹಾಗೂ ಡಾ. ಅಂಬರ್ ಬಾಜ್‌ಪಾಯ್ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಡಾ. ಅಜಿತ್ ಹೆಬ್ಬಾರ್ ಹೊಸಮಠ ಸಮನ್ವಯಕಾರರಾಗಿರುತ್ತಾರೆ.

ಅ.10ರಂದು ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುದರ್ಶನ್ ಶೆನ್ವಿ ಮುಖ್ಯ ಅತಿಥಿಯಾಗಿ, IEEE ಬೆಂಗಳೂರು ವಿಭಾಗದ ಡಾ. ವಾಸುದೇವ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಸನ್ನ ದರ್ಬೆ ಅಧ್ಯಕ್ಷತೆ ವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ., ಡಾ. ಜೀವಿತಾ ಬಿ.ಕೆ., ಡಾ. ರಜನಿ ರೈ ಬಿ. ಹಾಗೂ ಡಾ. ಆಶ್ಲೆ ಡಿ. ಸೋಜ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
-
ಬಿಗ್ ನ್ಯೂಸ್20 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ23 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
Uncategorized21 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ19 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
ಅಂತರ ರಾಜ್ಯ23 hours agoYouTuber-89 ವರ್ಷದ ವೃದ್ಧನ 5 ಸವರನ್ ಚಿನ್ನದ ಸರ ಕಳವು ಆರೋಪ; 118 ಸವರನ್ ಚಿನ್ನ ಕಳವು ಪ್ರಕರಣದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು
-
Uncategorized20 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಸ್ಥಳೀಯ23 hours agoUT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ


















