Connect with us

ದಕ್ಷಿಣ ಕನ್ನಡ

Journalist Receives death Threat: ಪುತ್ತೂರಿನ ಪತ್ರಕರ್ತನಿಗೆ ಮಾಜಿ ರೌಡಿ ಶೀಟರ್‌ʼನಿಂದ ಜೀವ ಬೆದರಿಕೆ – ಪೊಲೀಸ್ ಇಲಾಖೆಯಿಂದಲೇ ಬಾಂಡ್ ರದ್ದುಗೊಂಡ ನವೀನ್‌ ಪನಡ್ಕ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ – ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕಾರಂಗಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ : ಪುತ್ತಿಲ ಪರಿವಾರ ಆಗ್ರಹ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ಪತ್ರಕರ್ತ, ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಪ್ರದೀಪ್ ಕುಮಾರ್ ಶೆಟ್ಟಿಯವರಿಗೆ ಮಾಜಿ ರೌಡಿ ಶೀಟರ್‌ ನವೀನ್ ರೈ ಪನಡ್ಕ ಕೈಕಾರ ಕೊಲೆ ಬೆದರಿಕೆ ಹಾಕಿರುವುದನ್ನು ಪುತ್ತೂರಿನ ಪ್ರಭಲ ರಾಜಕೀಯ ಶಕ್ತಿ ಹಾಗೂ ಸಾಮಾಜಿಕ ಹಾಗೂ ಧಾರ್ಮಿಕ ಸಂಘಟನೆ  ಪುತ್ತಿಲ ಪರಿವಾರ ಕಟು ಶಬ್ಧಗಳಿಂದ ಖಂಡಿಸಿದೆ.

Ad Widget

Ad Widget

Ad Widget

Ad Widget

 ಜ 26 ರಂದು ರಾತ್ರಿ ವರದಿಯೊಂದಕ್ಕೆ ಸಂಬಂಧಿಸಿ ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ನಿವಾಸಿ ನವೀನ್‌ ರೈ ಪನಡ್ಕ  ಪತ್ರಕರ್ತ ಪ್ರದೀಪ್‌ ಕುಮಾರ್‌ ಶೆಟ್ಟಿಯವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದು, ಈ ಕುರಿತು ಪ್ರದೀಪ್‌ ಶೆಟ್ಟಿವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಇದೀಗ ಈ ಘಟನೆಯನ್ನು ಪುತ್ತಿಲ ಪರಿವಾರ ತೀವ್ರವಾಗಿ ಖಂಡಿಸಿದೆ

Ad Widget

Ad Widget

Ad Widget alt="Ad Widget"/>

Ad Widget

ಪ್ರಕಟನೆಯಲ್ಲಿ ಏನಿದೆ ?

Ad Widget

Ad Widget <> Ad Widget

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಪ್ರದೀಪ್ ಕುಮಾರ್ ಶೆಟ್ಟಿ ಅವರಿಗೆ ರೌಡಿಶೀಟರ್ ಆಗಿರುವ ನವೀನ್ ರೈ ಪನಡ್ಕ ಕೈಕಾರ ಎಂಬಾತ ಜ.26ರ ರಾತ್ರಿ ವೇಳೆ ಸಂದೇಶ ಹಾಗೂ ಕರೆಗಳ ಮೂಲಕ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಇದರ ಜತೆಗೆ ಮಾಧ್ಯಮ ಪ್ರಕಟಣೆಯಲ್ಲಿ ಪತ್ನಿ ಮನೆಗೆ ಬರುವುದಾಗಿ ಬೆದರಿಕೆಯನ್ನು ಹಾಕಿದ್ದಾರೆ.



Ad Widget

ಈಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸ್ ಇಲಾಖೆಯಿಂದಲೇ ಬಾಂಡ್ ರದ್ದುಗೊಂಡ ಈತನ ವಿರುದ್ಧ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು.

Ad Widget

Ad Widget

ಇಲಾಖೆ ಸಂವಿಧಾನದ ನಾಲ್ಕನೇ ಅಂಗವಾದ  ಪತ್ರಿಕೋದ್ಯಮಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ನವೀನ್ ರೈ ಪನಡ್ಕನ ಈ ದುರ್ವರ್ತನೆಯನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು  ಮನವಿ  ಮಾಡುತ್ತಿರುವುದಾಗಿ ಪುತ್ತಿಲ ಪರಿವಾರ ಪ್ರಕಟನೆಯಲ್ಲಿ ತಿಳಿಸಿದೆ.

ಇದನ್ನು ಓದಿ : ಪದೆ ಪದೆ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿರುವ ನಟೋರಿಯಸ್ ಕ್ರಿಮಿನಲ್ ಮಾಜಿ ರೌಡಿ ಶೀಟರ್ ನವೀನ್ ಪನಡ್ಕನಿಗೆ ಶಾಕ್ ನೀಡಿದ ಪೊಲೀಸ್..! 50 ಸಾವಿರ ರೂ ಬಾಂಡ್ ಮೊತ್ತ ಮುಟ್ಟುಗೋಲಿಗೆ ಸರಕಾರಕ್ಕೆ ಶಿಫಾರಸ್ಸು – ಪೊಲೀಸರು ಹೀಗೆ ಮಾಡಿದ್ಯಾಕೆ ಗೊತ್ತೆ ?‌

ಇದನ್ನು ಓದಿ : Rowdy elements ಪುತ್ತೂರಿನಲ್ಲಿ ಮತ್ತೆ ರೌಡಿಗಳ ಅಟ್ಟಹಾಸ – ಪತ್ರಕರ್ತನಿಗೆ ಜೀವ ಬೆದರಿಕೆ ಒಡ್ಡಿದ್ದ ರೌಡಿ ನವೀನ್ ರೈ ಪನಡ್ಕ – ಬಾಂಡ್ ಹಣ ಮುಟ್ಟುಗೋಲಿಗೆ ಮನವಿ ಮಾಡಿದ ಕೆಲವೇ ದಿನದಲ್ಲಿ ಮತ್ತೆ ಅಪರಾಧ ಕೃತ್ಯ ಎಸಗಿ ಪೊಲೀಸ್ ಇಲಾಖೆಗೆ ಸವಾಲು ಎಸೆದ ಮಾಜಿ ರೌಡಿ ಶೀಟರ್

ಇದನ್ನು ಓದಿ : Shivananda Tagadooru ಮಾಜಿ ರೌಡಿ ಶೀಟರ್‌ʼನಿಂದ ಪುತ್ತೂರಿನ  ಪತ್ರಕರ್ತನಿಗೆ ಜೀವ ಬೆದರಿಕೆ –  ಕರ್ನಾಟಕ  ಕಾರ್ಯನಿರತ  ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಖಂಡನೆ

ಇದನ್ನು ಓದಿ : Journalist receives death Threats: ಪುತ್ತೂರಿನ ಪತ್ರಕರ್ತನಿಗೆ ಜೀವ ಬೆದರಿಕೆವೊಡ್ಡಿದ್ದ ಪ್ರಕರಣ – ಪೊಲೀಸ್ ಇಲಾಖೆಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು  :  ಪುತ್ತೂರು ಬ್ಲಾಕ್‌ ಕಾಂಗ್ರೆಸ್‌  ಆಗ್ರಹ

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ

Published

on



Ad Widget

Ad Widget

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.



Ad Widget

ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.

Ad Widget
Continue Reading

ಶಿಕ್ಷಣ

Vidyamata-ಕರಾವಳಿಯ ಯುವಜನತೆಯ ಉದ್ಯೋಗ ಸ್ವಪ್ನಕ್ಕೆ ‘ವಿದ್ಯಾಮಾತಾ’ ಆಸರೆ: ಬರಿ ಅಂಕಗಳಷ್ಟೇ ಅಲ್ಲ, ಬದುಕನ್ನು ಗೆಲ್ಲುವ ಕೌಶಲ್ಯವೇ ನಿಜವಾದ ಶಕ್ತಿ

Published

on



Ad Widget

Ad Widget

Ad Widget

Ad Widget

ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಕರಾವಳಿ ಭಾಗದಲ್ಲಿ ಪದವೀಧರರ ಮಹಾಪೂರವಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಿವಿಲ್ ಸರ್ವೀಸಸ್ ಹಾಗೂ ರಕ್ಷಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಯುವಕರ ಭಾಗವಹಿಸುವಿಕೆ ಹಿಂದಿನಿಂದಲೂ ಕಡಿಮೆಯಿತ್ತು. ಹೆಚ್ಚಿನ ವಿದ್ಯಾರ್ಥಿಗಳು ಕೇವಲ ಸಾಂಪ್ರದಾಯಿಕ ಉದ್ಯೋಗಗಳು ಅಥವಾ ಗಲ್ಫ್ ದೇಶಗಳ ವಲಸೆಗೆ ಸೀಮಿತರಾಗಿದ್ದರು. ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಾಮಾನ್ಯವಾಗಿ ದೊಡ್ಡ ಮಟ್ಟದ ಕೋಚಿಂಗ್ ಸಂಸ್ಥೆಗಳು ನೂರರಲ್ಲಿ ಒಬ್ಬರು IAS ಅಥವಾ KAS ಅಧಿಕಾರಿಯಾದರೆ ಆ ಯಶಸ್ಸನ್ನು ಮಾತ್ರ ದೊಡ್ಡದಾಗಿ ಬಿಂಬಿಸುತ್ತವೆ. ಆದರೆ, ಆ ಪ್ರಕ್ರಿಯೆಯಲ್ಲಿ ಸ್ಪರ್ಧೆಗಿಳಿದು ಸೋತ ಉಳಿದ 99 ವಿದ್ಯಾರ್ಥಿಗಳ ಭವಿಷ್ಯದ ಕಥೆಯೇನು ಎಂಬ ಆಳವಾದ ಸಾಮಾಜಿಕ ಪ್ರಶ್ನೆಯನ್ನು ವಿದ್ಯಾಮಾತಾ ಅಕಾಡೆಮಿಯ ಮ್ಯಾನೇಜಿಂಗ್ ಡೈರೆಕ್ಟರ್ ಭಾಗ್ಯೇಶ್ ರೈ ಮುಂದಿಟ್ಟಿದ್ದಾರೆ. ಒಬ್ಬ ವಿಜೇತನನ್ನು ರೂಪಿಸುವಷ್ಟೇ ಗಂಭೀರವಾಗಿ, ಅಲ್ಲಿ ಹಿನ್ನಡೆ ಅನುಭವಿಸುವ ಉಳಿದ 99 ವಿದ್ಯಾರ್ಥಿಗಳ ಬದುಕಿಗೂ ಭದ್ರತೆ ಮತ್ತು ಆತ್ಮವಿಶ್ವಾಸ ನೀಡುವುದು ನಮ್ಮ ಜವಾಬ್ದಾರಿ ಎಂಬುದು ಸಂಸ್ಥೆಯ ಮೂಲ ಮಂತ್ರವಾಗಿದೆ.

Ad Widget

Ad Widget <> Ad Widget

ಇಂದಿನ ಶಿಕ್ಷಣ ಪದ್ಧತಿಯಲ್ಲಿ ಕೇವಲ ಅಂಕಗಳ ಬೆನ್ನೇರುವ ಯುವಜನತೆಗೆ ಪ್ರಾಯೋಗಿಕ ಕೌಶಲ್ಯ, ಸಂವಹನ ಕಲೆ ಹಾಗೂ ವಾಸ್ತವ ಜಗತ್ತಿನ ಸವಾಲುಗಳನ್ನು ಎದುರಿಸುವ ತಾಕತ್ತು ಕೊರತೆಯಿದೆ. ಸ್ನಾತಕೋತ್ತರ ಪದವಿ ಪಡೆದರೂ ಕನಿಷ್ಠ ಸ್ವ-ಪರಿಚಯ ಮಾಡಿಕೊಳ್ಳಲು ಅಥವಾ ಕಂಪ್ಯೂಟರ್ ನಿರ್ವಹಿಸಲು ಬಾರದ ಇಂದಿನ ಸ್ಥಿತಿಯನ್ನು ಬದಲಾಯಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸ್ವಾವಲಂಬನೆಯನ್ನು ತುಂಬುವ ಕೆಲಸ ಇಲ್ಲಿ ನಡೆಯುತ್ತಿದೆ.



Ad Widget

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಿರ್ಣಾಯಕ ಹಂತದಲ್ಲಿ ಸಮಯವನ್ನು ವ್ಯರ್ಥ ಮಾಡದಂತೆ ಸಂಸ್ಥೆಯು ‘ಕಲಿಕೆಯೊಂದಿಗೆ ಗಳಿಕೆ’ ಎನ್ನುವ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಪಿಯುಸಿ (PUC) ಮುಗಿದ ಕೂಡಲೇ ದೂರಶಿಕ್ಷಣದ ಮೂಲಕ ಡಿಗ್ರಿ (ಬಿ.ಎ, ಬಿ.ಕಾಮ್, ಬಿ.ಬಿ.ಎ) ವ್ಯಾಸಂಗಕ್ಕೆ ದಾಖಲಾಗಿ, ಅದೇ ಮೂರು ವರ್ಷಗಳ ಅವಧಿಯಲ್ಲಿ ಐಎಎಸ್, ಕೆಎಎಸ್, ಬ್ಯಾಂಕಿಂಗ್, ಪೊಲೀಸ್ ಹಾಗೂ ರರಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಾನಾಂತರ ತರಬೇತಿ ಪಡೆಯಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವಿದ್ಯಾರ್ಥಿಯು ಪದವಿ ಮುಗಿಸುವ ವೇಳೆಗೆ ಸರ್ಕಾರದ ಉದ್ಯೋಗ ಅಥವಾ ಉನ್ನತ ಖಾಸಗಿ ವಲಯದಲ್ಲಿ ನೆಲೆಗೊಳ್ಳಲು ಸಂಪೂರ್ಣ ಸಿದ್ಧನಾಗಿರುತ್ತಾನೆ.

Ad Widget

Ad Widget

ವಿಶೇಷವಾಗಿ ಭಾರತೀಯ ಭೂಸೇನೆ (Agniveer), ವಾಯುಸೇನೆ, ನೌಕಾಸೇನೆ, ಅರೆಮಿಲಿಟರಿ ಪಡೆಗಳು, ಕರ್ನಾಟಕ ಪೊಲೀಸ್ ಹಾಗೂ ಅರಣ್ಯ ಇಲಾಖೆಗಳ ನೇಮಕಾತಿಗಾಗಿ ಯುವಕರಿಗೆ 17ನೇ ವಯಸ್ಸಿನಿಂದಲೇ ಸುವರ್ಣ ಅವಕಾಶಗಳಿವೆ. ಈ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಲಿಖಿತ ಪರೀಕ್ಷೆಯಷ್ಟೇ ಅಲ್ಲದೆ, ನುರಿತ ತರಬೇತುದಾರರಿಂದ ಮೈದಾನದಲ್ಲಿ ದೈಹಿಕ ಕ್ಷಮತೆ ಮತ್ತು ಕಠಿಣ ತರಬೇತಿಯನ್ನು ನೀಡಲಾಗುತ್ತಿದೆ. ಇದರೊಂದಿಗೆ ನವೋದಯ, ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷೆಗಳು, KAR-TET, KSET, NET, HSTR, PSTR, GPSTR ನಂತಹ ಶೈಕ್ಷಣಿಕ ಹಾಗೂ ಬೋಧನಾ ಅರ್ಹತಾ ಪರೀಕ್ಷೆಗಳಿಗೂ ಇಲ್ಲಿ ಅತ್ಯುತ್ತಮ ತರಬೇತಿ ಲಭ್ಯವಿದೆ.

ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ ಅವರ ನೇತೃತ್ವದಲ್ಲಿ ಸಂಸ್ಥೆಯು ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ದಿನದ 24 ಗಂಟೆಯೂ ನಿರಾಳವಾಗಿ ಓದಲು ‘ದೇವಿದ್ಯಾ’ 24×7 ಸದಾಶಿವ ಅಧ್ಯಯನ ಗ್ರಂಥಾಲಯ ಹಾಗೂ AI ಚಾಲಿತ ಡಿಜಿಟಲ್ ಇಂಟರಾಕ್ಟಿವ್ ಪ್ಯಾನಲ್‌ಗಳನ್ನು ಹೊಂದಿರುವ ‘ಸ್ತುತ್ಯ’ ಸ್ಮಾರ್ಟ್ ಕ್ಲಾಸ್‌ರೂಮ್‌ಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ.

ಇದರೊಂದಿಗೆ ಟ್ಯಾಲಿ ಪ್ರೈಮ್, ಪ್ರಾಯೋಗಿಕ ಅಕೌಂಟಿಂಗ್, ಗಲ್ಫ್ ವ್ಯಾಟ್ (Gulf VAT), ಡೇಟಾ ಅನಾಲಿಟಿಕ್ಸ್, ಕೋಡ್-ಆರ್ಕಿಟೆಕ್ಟ್ ಪ್ರೋಗ್ರಾಮಿಂಗ್ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತಿಗಳನ್ನು ನೀಡುವುದರ ಮೂಲಕ ಕರಾವಳಿಯ ಯುವಜನತೆಯನ್ನು ಜಾಗತಿಕ ಮಟ್ಟದ ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ. ಬರಿ ಅಂಕಗಳ ಕಾರ್ಖಾನೆಯಾಗದೆ, ಬದುಕಿನ ಪ್ರತಿ ಹಂತದಲ್ಲೂ ವಿದ್ಯಾರ್ಥಿಗೆ ಭರವಸೆಯ ದಾರಿದೀಪವಾಗುವ ಮೂಲಕ ವಿದ್ಯಾಮಾತಾ ಅಕಾಡೆಮಿಯು ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ.

Ad Widget
Continue Reading

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading