Connect with us

ದಕ್ಷಿಣ ಕನ್ನಡ

Belthangady ಬೆಳ್ತಂಗಡಿ : ಸುಡುಮದ್ದು ತಯಾರಿ ಘಟಕದಲ್ಲಿ ಸ್ಪೋಟ – ಮೂವರು ಮೃತ್ಯು | ಸ್ಥಳದಲ್ಲಿ ಪತ್ತೆಯಾಯಿತೇ ಶಂಕಾಸ್ಪದ ವಸ್ತುಗಳು ? NIA ತನಿಖೆಗೆ ಆಗ್ರಹಿಸಿದ ಸಂಸದ

Published

on



Ad Widget

Ad Widget

Ad Widget

Ad Widget

ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್‌ತ್ಯಾರು ಸಮೀಪಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ಕೆಲವರಿಗೆ ಗಾಯಗಳಾಗಿವೆ. ತಡರಾತ್ರಿ ತನಕ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.

Ad Widget

Ad Widget

Ad Widget

Ad Widget

ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಪೋಟಕ ತಯಾರಿಸುತ್ತಿದ್ದರು. ಈ ಪೈಕಿ ತ್ರಿಶೂರಿನ ವರ್ಗೀಸ್ (62), ಹಾಸನ ನಾಯಕನಹಳ್ಳಿ ಚೇತನ್ (24), ಕೇರಳದ ಸ್ವಾಮಿ (60) ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಉಳಿದಂತೆ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಕೇರಳ ಇಷ್ಟು ಮಂದಿ ಕೆಲಸ ನಿರ್ವಹಿಸುತ್ತಿದ್ದು ಇವರಿಗೆ ಗಾಯಗಳಾಗಿವೆ.

Ad Widget

Ad Widget

Ad Widget alt="Ad Widget"/>

Ad Widget

ಕುಟ್ಟೋಡಿ ಸಮೀಪದ ನಿವಾಸಿ ಬಶೀ‌ರ್ ಎಂಬವರ ಜಮೀನಿನಲ್ಲಿ ಸುಡುಮದ್ದು ತಯಾರಿ ನಡೆಸುತ್ತಿದ್ದರು. ಸಾಲಿಡ್ ಫೈಯರ್‌ವರ್ಕ್‌ ಎಂಬ ಘಟಕದಲ್ಲಿ ಘಟನೆ ನಡೆದಿದೆ. ಅಲ್ಲಿನ ಪರಿಸ್ಥಿತಿ ಭಯಾನಕವಾಗಿದ್ದು, ಸುಮಾರು 5 ಬಾರಿ ಸ್ಫೋಟ ಸಂಭವಿಸಿದೆ. ಸ್ಪೋಟಕ್ಕೆ ಕಾರಣ ತಿಳಿದುಬಂದಿಲ್ಲ, ತನಿಖೆ ನಡೆದಿದೆ.

Ad Widget

Ad Widget <> Ad Widget

ಮೃತದೇಹಗಳು ಚೆಲ್ಲಾಪಿಲ್ಲಿ: ಮೃತಪಟ್ಟ ಮೂವರು, ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಇಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ. ಮೃತದೇಹ ಪತ್ತೆಹಚ್ಚಲು ಪರದಾಡುವಂತಾಯಿತು. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ಒಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಬ್ಬರ ಮೃತದೇಹ ಸಂಜೆಯೇ ಪತ್ತೆಯಾಗಿದ್ದು, ಇನ್ನೊಂದು ಮೃತದೇಹ ರಾತ್ರಿಯಷ್ಟೇ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಯಿತು.



Ad Widget

ಮನೆ ಗಾಜು, ಶೀಟ್‌ ಧ್ವಂಸ

Ad Widget

Ad Widget

ಸುತ್ತಮುತ್ತ 200 ಮೀಟರ್‌ ವ್ಯಾಪ್ತಿಯೊಳಗಿನ ಜೋಸೆಫ್‌ ಮ್ಯಾಥ್ಯೂ ಅವರ ಮನೆಯ ಕಿಟಕಿ ಗಾಜು, ಅಡುಗೆ ಕೋಣೆಗೆ, ಕಮಲಾ ವೆಂಕಪ್ಪ ಅವರ ಮನೆ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಕಲ್ಮರೋಡಿಯ ಜಿನಚಂದ್ರ ಪಡಿವಾಳ್‌ ಅವರ ಮನೆ ಗೋಡೆ, ಲಿಂಗಪ್ಪ ನಾಯ್ಕ… ಬರಮೇಲು, ಪ್ರಸಾದ್‌ ಸಹಿತ ಅನೇಕರ ಮನೆಗಳಿಗೆ ಹಾನಿಯಾಗಿದೆ.

4 ಕಿ.ಮೀ. ದೂರಕ್ಕೆ ಸದ್ದು, ಕಂಪನ

ಸ್ಫೋಟದ ಸದ್ದು ಸುಮಾರು 4 ಕಿ.ಮೀ. ವ್ಯಾಪ್ತಿಯಷ್ಟು ದೂರಕ್ಕೆ ಕೇಳಿಸಿದೆ. ಸಮೀಪದ ಅಡಿಕೆ ಮರ, ರಬ್ಬರ ಗಿಡಗಳು ಕರಟಿವೆ. ಸ್ಥಳದಲ್ಲಿ ಅನುಮಾನಾಸ್ಪದ ಚಲನವಲನ ಇರುವ ಬಗ್ಗೆ ಗ್ರಾಮಸ್ಥರು ಈ ಹಿಂದೆಯೇ ದೂರು ನೀಡಿದ್ದರೂ ಎಸ್‌.ಪಿ. ಅವರಿಂದಲೇ ಸುಡುಮದ್ದು ತಯಾರಿ ಘಟಕಕ್ಕೆಂದು 2024ರ ವರೆಗೆ ಪರವಾನಿಗೆ ಪಡೆದಿದ್ದರಿಂದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ಸ್ಫೋಟದ ತೀವ್ರತೆ ಹಾಗೂ ಸ್ಥಳದಲ್ಲಿ ಸಿಕ್ಕಿದ ವಸ್ತುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿ ವರದಿ ಬಂದ ಬಳಿಕವೇ ಸ್ಫೋಟದ ಕಾರಣ ಹಾಗೂ ಹಿನ್ನೆಲೆಯ ಸಂಪೂರ್ಣ ಚಿತ್ರಣ ಸಿಗಲಿದೆ.

ಬೆಂಕಿ ನಂದಿಸಿದ ಅಗ್ನಿಶಾಮ ದಳ

ಮೂಡುಬಿದಿರೆ ಹಾಗೂ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕೆ ಧಾವಿಸಿ ಅಗ್ನಿ ಶಮನಗೊಳಿಸಿದರು. ಸ್ಫೋಟಕ ತಯಾರಿಸುತ್ತಿದ್ದ ಘಟಕ, ಸಮೀಪದ ಗೋಡೆ ಎಲ್ಲವೂ ನೆಲಸಮವಾಗಿವೆ. ಘಟನೆ ಸ್ಥಳದಲ್ಲಿ ಅನುಮಾನಾಸ್ಪದವಾದ ಬಾಂಬ್‌ ರೀತಿಯ ಸ್ಫೋಟಕಗಳು ದೊರೆತಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

4 ಕಿ.ಮೀ. ದೂರಕ್ಕೆ ಸದ್ದು, ಕಂಪನ

ಸ್ಫೋಟದ ಸದ್ದು ಸುಮಾರು 4 ಕಿ.ಮೀ. ವ್ಯಾಪ್ತಿಯಷ್ಟು ದೂರಕ್ಕೆ ಕೇಳಿಸಿದೆ. ಸಮೀಪದ ಅಡಿಕೆ ಮರ, ರಬ್ಬರ ಗಿಡಗಳು ಕರಟಿವೆ. ಸ್ಥಳದಲ್ಲಿ ಅನುಮಾನಾಸ್ಪದ ಚಲನವಲನ ಇರುವ ಬಗ್ಗೆ ಗ್ರಾಮಸ್ಥರು ಈ ಹಿಂದೆಯೇ ದೂರು ನೀಡಿದ್ದರೂ ಎಸ್‌.ಪಿ. ಅವರಿಂದಲೇ ಸುಡುಮದ್ದು ತಯಾರಿ ಘಟಕಕ್ಕೆಂದು 2024ರ ವರೆಗೆ ಪರವಾನಿಗೆ ಪಡೆದಿದ್ದರಿಂದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ಸ್ಫೋಟದ ತೀವ್ರತೆ ಹಾಗೂ ಸ್ಥಳದಲ್ಲಿ ಸಿಕ್ಕಿದ ವಸ್ತುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿ ವರದಿ ಬಂದ ಬಳಿಕವೇ ಸ್ಫೋಟದ ಕಾರಣ ಹಾಗೂ ಹಿನ್ನೆಲೆಯ ಸಂಪೂರ್ಣ ಚಿತ್ರಣ ಸಿಗಲಿದೆ..

    ಸ್ಥಳಕ್ಕೆ ಎಸ್.ಪಿ. ರಿಷ್ಯಂತ್, ತಹಸೀಲ್ದಾರ್, ಡಿವೈಎಸ್‌ಪಿ, ಶಾಸಕ ಹರೀಶ್ ಪೂಂಜ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ,  ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ಅನಿತಾ, ಸರ್ಕಲ್ ಇನ್‌ಸ್ಪೆಕ್ಟರ್‌ನಾಗೇಶ್ ಕದ್ರಿ ಭೇಟಿ ನೀಡಿದ್ದಾರೆ.

ತನಿಖೆಯನ್ನು NIA ಗೆ ಒಪ್ಪಿಸಿ

ಸ್ಫೋಟದ ಗಂಭೀರತೆ ಬಗ್ಗೆ ಪರಿಶೀಲಿಸಿದ್ದೇನೆ. ಜೀವ ಹಾನಿ ಸಂಭವಿಸಿರುವುದು ಕಂಡಾಗ ಸ್ಫೋಟಕಕ್ಕೆ ಬಳಸಿರುವ ರಾಸಾಯನಿಕ ಏನು? ಯಾವ ಯಾವ ಇಲಾಖೆಗಳು ಪರವಾನಿಗೆ ನೀಡಿವು ಎಂಬುದರ ಸಂಪೂರ್ಣ ತನಿಖೆಯ ಆವಶ್ಯಕತೆಯಿರುವುದು ಕಾಣಿಸುತ್ತದೆ. ಪ್ರಕರಣವನ್ನು ತತ್‌ಕ್ಷಣ ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೆಕೆಂದು ನಾನು ಸರಕಾರವನ್ನು ಆಗ್ರಹಿಸುತ್ತಿರುವುದಾಗಿ ಸಂಸದ ನಳಿನ್‌ ಹೇಳಿದರು.

ಕಾರಣ ತಿಳಿಯಬೇಕಷ್ಟೆ: ಎಸ್ಪಿ

  ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ ಪ್ರಕರಣ ಭಾನುವಾರ ಸಂಜೆ 5.30ಕ್ಕೆ ನಡೆದಿದ್ದು, ದುರಂತಕ್ಕೆ ಕಾರಣ ತನಿಖೆ ಬಳಿಕ ತಿಳಿಯಬೇಕಷ್ಟೇ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ತಿಳಿಸಿದ್ದಾರೆ.  ಸಂಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಹೇಳಿಕೆ ನೀಡಿರುವ ಅವರು, ಇಲ್ಲಿನ 50 ಸೆಂಟ್ಸ್ ಜಾಗದಲ್ಲಿ ಸಯ್ಯದ್ ಬಷೀರ್‌ಎಂಬುವವರು ಪಟಾಕಿ ಮಾಡಲು ಲೈಸೆನ್ಸ್ ಪಡೆದಿದ್ದಾರೆ. ಇದಕ್ಕೋಸ್ಕರ 2011-12 ನಲ್ಲಿ ಪಡೆದಿರುವ ಪರವಾನಗಿ 2019 ನವೀಕರಣ ಆಗಿದೆ, 2024 ಮಾರ್ಚ್ ವರೆಗೂ ಪರವಾನಗಿ ಚಾಲ್ತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಇವರು ಬೇಡಿಕೆಗೆ ತಕ್ಕ ಹಾಗೆ ಇಲ್ಲಿ ಪಟಾಕಿ ತಯಾರಿಸುತ್ತಿದ್ದರು ಅನ್ನುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪಟಾಕಿ ಮಾಡುವಾಗ ಯಾವ ಕಾರಣಕ್ಕೆ ಸ್ಫೋಟವಾಗಿದೆ ಎಂಬುದು ಗೊತ್ತಾಗಿಲ್ಲ. ಸ್ಥಳಕ್ಕೆ ವಿಧಿವಿಜ್ಞಾನ ತಂಡ ಹಾಗೂ ಸ್ಫೋಟಕ ಪತ್ತೆ ಪರಿಣತರ ತಂಡ ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.

Ad Widget
Click to comment

Leave a Reply

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

Ad Widget

Ad Widget <> Ad Widget

ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.



Ad Widget

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

Ad Widget

Ad Widget

ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.

6ನೇ ತರಗತಿಯ ಆರಾಧ್ಯ ಸ್ವಾಗತಿಸಿದರು. 9ನೇ ತರಗತಿಯ ಮಾನ್ಯಲಕ್ಷೀ ಎನ್ ಪಿ ಯೋಧರ ಪರಿಚಯಗೈದರು. 9ನೇ ತರಗತಿಯ ಕುವೀರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿದ್ಯಾರ್ಥಿನಿ ದೀಪ್ತಿ ಬಿ ಪಿ ಸಹಕರಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.

Ad Widget

Ad Widget <> Ad Widget

ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.



Ad Widget

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget

Ad Widget

ಡಾಟಾಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಗಗನ್‌ದೀಪ್ ಸ್ವಾಗತಿಸಿ, ನಿಹಾರಿಕಾ ಅತಿಥಿಗಳನ್ನು ಪರಿಚಯಿಸಿದರು. ಆಶ್ಲೇಷ್ ವಂದನಾರ್ಪಣೆಗೈದರು. ಶ್ರೇಯಾ ಎಮ್. ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading