ಪುತ್ತೂರು
ಬಾಡಿಗೆ ಮನೆಯಲ್ಲಿರುವ 1000 ಕುಟುಂಬಕ್ಕೆ ಸೈಟ್ ಭಾಗ್ಯ : ಜಾಗ ಗುರುತಿಸಲು ಕಂದಾಯ ಇಲಾಖೆಗೆ ಪುತ್ತೂರು ಶಾಸಕರ ಆದೇಶ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1000 ಮನೆ ಸೈಟ್ ಗೆ ಜಾಗ ಗುರುತಿಸುವಂತೆ ಕಂದಾಯ ಇಲಾಖೆಗೆ ಶಾಸಕರಾದ ಅಶೋಕ್ ರೈ ಸೂಚನೆ ನೀಡಿದರು.
ಕ್ಷೇತ್ರದಲ್ಲಿ ಮನೆ ಕಟ್ಟಲು ಜಾಗವಿಲ್ಲದೆ ನೂರಾರು ಕುಟುಂಬಗಳು ಬಾಡಿಗೆ ಮನೆಯಲ್ಲಿ ಇದ್ದಾರೆ. ಹಲವು ವರ್ಷದಿಂದ ಪ್ರಯತ್ನ ಮಾಡುತ್ತಿದ್ದರೂ ಒಂದು ಸೆಂಟ್ಸ್ ಜಾಗ ಖರೀದಿಮಾಡಲು ಅವರಿಂದ ಸಾಧ್ಯವಾಗಿಲ್ಲ.
ಎಲ್ಲಾ ಗ್ರಾಮಗಳಲ್ಲೂ ಸೈಟ್ ಗೆ ಜಾಗ ಗುರುತಿಸಿ ಅದನ್ನು ತಲಾ ಮೂರುಸೆಂಟ್ಸ್ ಜಾಗದಂತೆ ಮನೆಯೇ ಇಲ್ಲದ, ಜಾಗವೇ ಇಲ್ಲದ ಕಡುಬಡವರಿಗೆ ಹಂಚಿಕೆ ಮಾಡಬೇಕು. ವರ್ಷಕ್ಕೆ ಒಂದು ಸಾವಿರ ಸೈಟ್ ಗಳನ್ನು ಬಡವರಿಗೆ ಹಂಚುವ ಕೆಲಸ ಮಾಡಬೇಕು .
ಎಲ್ಲೆಲ್ಲಿ ಸರಕಾರಿ ಜಾಗ ಇದೆಯೋ ಅದೆಲ್ಲವನ್ನೂ ಸರ್ವೆ ನಡೆಸಿ ಸೈಟ್ ಮಾಡಿಅದನ್ನು ಹಂತ ಹಂತವಾಗಿ ಹಂಚಬೇಕುಎಂದು ಶಾಸಕರು ಸೂಚಿಸಿದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
-
ಮಂಗಳೂರು19 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ24 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಅಂತರ ರಾಜ್ಯ18 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ24 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ಕಾರ್ಯಕ್ರಮಗಳು19 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ13 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ18 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
Uncategorized20 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

















