ಪುತ್ತೂರು
Political Update: ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ: ರಾಜ್ಯ ನಾಯಕರ ನೇತ್ರತ್ವದಲ್ಲಿ ಪುತ್ತೂರಿನಲ್ಲಿ ಪಕ್ಷದ ಮುಖಂಡರ ಆಂತರಿಕ ಸಭೆ – ಹುದ್ದೆಯಿಲ್ಲದೆ ಪಕ್ಷಕ್ಕೆ ಬರಲಿ ಕೆಲವರ ಆಗ್ರಹ – ಮೂಡದ ಒಮ್ಮತ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಪ್ರಭಾವಿ ಹಿಂದೂ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಕ್ಕೆ ಪುತ್ತೂರಿನ ಕೆಲ ನಾಯಕರ ವಿರೋಧ ಇರುವುದನ್ನು ಮನಗಂಡಿರುವ ಬಿಜೆಪಿ ಹೈಕಮಾಂಡ್ ಮಂಗಳವಾರ ಪುತ್ತೂರಿನ ಮುಖಂಡರ ಜತೆ ಆಂತರಿಕ ಸಂವಾದ ನಡೆಸಿದೆ. ಪುತ್ತೂರಿನ ಹೊರವಲಯದ ಮುರದ ಸಮುದಾಯ ಭವನವೊಂದರಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಂಟಾದ ಸೋಲಿನ ಪರಾಮರ್ಶೆ ಹಾಗೂ ಅರುಣ್ ಪುತ್ತಿಲ ಸೇರ್ಪಡೆ ಕುರಿತು ಹಲವು ಗಂಟೆಗಳ ಕಾಲ ಈ ಸಭೆಯಲ್ಲಿ ಚರ್ಚೆ ನಡೆಯಿತು. ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿ ನೇತ್ರತ್ವದಲ್ಲಿ ನಡೆದ ಈ ಸಭೆಯಲ್ಲಿ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷ ಸತೀಶ್ ಕುಂಪಳ ಹಾಗೂ ನಿರ್ಗಮಿತ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಹಾಜರಿದ್ದರು.
ಪುತ್ತೂರು ಬಿಜೆಪಿಯ ವಿವಿಧ ಪದಾದಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಶಕ್ತಿ ಕೆಂದ್ರ ಮಟ್ಟಕ್ಕಿಂತ ಮೇಲಿನ ಪಕ್ಷದ ಜವಬ್ದಾರಿ ಹೊತ್ತವರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಹಲವು ಗಂಟೆಗಳ ಕಾಲ ಸಭೆ ನಡೆದರೂ ಯಾವುದೇ ಅಂತಿಮ ತಿರ್ಮಾನಕ್ಕೆ ಬಂದಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ. ಲಭ್ಯ ಮಾಹಿತಿ ಪ್ರಕಾರ ಸಭೆಯಲ್ಲಿ ಹಾಜರಿದ್ದವರ ಪೈಕಿ ಕೇವಲ ಮೂವರು ಮಾತ್ರ ಅರುಣ್ ಪುತ್ತಿಲರಿಗೆ ಬಿಜೆಪಿ ಯಾವುದೇ ಹುದ್ದೆ ನೀಡದೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು . ಉಳಿದ ಮುಖಂಡರು ಪುತ್ತಿಲರು ಬಿಜೆಪಿ ಸೇರುವುದಕ್ಕೆ ಅಥಾವ ಸ್ಥಾನಮಾನ ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿಲ್ಲ ಎನ್ನಲಾಗಿದೆ.
ಹುದ್ದೆ ನೀಡಿ ಪುತ್ತಿಲರನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳುವುದಕ್ಕೆ ಮೂವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಯಾವುದೇ ಹುದ್ದೆ ಇಲ್ಲದೆ ಪುತ್ತಿಲ ಕೆಲ ವರ್ಷಗಲ ಕಾಲ ಪಕ್ಷಕ್ಕಾಗಿ ದುಡಿಯಬೇಕು. ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಅಥಾವ ಕಾರ್ಯದರ್ಶಿ ಆಗುವವರಿಗೆ ಪಕ್ಷದ ಆಗು ಹೋಗುಗಳ ಸಂಪೂರ್ಣ ಅರಿವು ಇರಬೇಕು . ಆಗ ಮಾತ್ರ ಆತನೂ ಬೆಳೆಯುತ್ತಾನೆ ಪಕ್ಷವು ಬೆಳೆಯುತ್ತಾನೆ ಎಂದಿದ್ದಾರೆ. ಆಗ ಪ್ರತಿಕ್ರಿಯಿಸಿದ ರಾಜ್ಯ ಮುಖಂಡರೊಬ್ಬರು, ನಿಮ್ಮನ್ನು ಛೂ ಬಿಡುತ್ತಿರುವುದು ಯಾರು ಎನ್ನವುದು ಗೊತ್ತಿದೆ, ಆ ಮಾಜಿ ಜನಪ್ರತಿನಿಧಿಯ ಹಣೆ ಬರಹ ಎಲ್ಲ ನನ್ನಲ್ಲಿದೆ ಎಂದು ಖಾರವಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯನಾಯಕರಿಗೆ ಇರಿಸುಮುರಿಸು
ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಅಭ್ಯರ್ಥಿಯ ಆಯ್ಕೆ ಪ್ರತಿಯೊಬ್ಬರಿಂದ ಅಭಿಪ್ರಾಯ ಸಂಗ್ರಹಿಸಿ, ಘೋಷಣೆಯ ಸಂದರ್ಭ ಪಟ್ಟಿಯಲ್ಲೇ ಇಲ್ಲದ ಅಭ್ಯರ್ಥಿಯನ್ನು ಹೇಗೆ ಘೋಷಣೆ ಮಾಡಿದ್ದೀರಿ ಎಂದು ಶಕ್ತಿ ಕೇಂದ್ರದ ಮುಖಂಡರೊಬ್ಬರು ಪ್ರಶ್ನಿಸಿ ರಾಜ್ಯ ಮುಖಂಡರನ್ನು ಇರಿಸು ಮುರಿಸುಗೊಳಿಸಿದರು. ಕಳೆದ ಬಾರಿ ಪುತ್ತೂರಿನ ಅಭ್ಯರ್ಥಿ ಆಯ್ಕೆಯಲ್ಲಿ ಈ ನಾಯಕ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ.
ಪುತ್ತೂರು ಬಿಜೆಪಿ ನಾಯಕರಿಗೆ ಪಾಠ
ಮೂಲಗಳ ಪ್ರಕಾರ, ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಮುಖಂಡರೊಬ್ಬರು “ ಕಳೆದ 15 ವರ್ಷದಲ್ಲಿ ಪುತ್ತೂರು ಬಿಜೆಪಿ ಒಬ್ಬನೇ ಒಬ್ಬ ಹೊಸ ಯುವ ನಾಯಕನನ್ನು ಬೆಳೆಸಿಲ್ಲ. ಅದೆ ಹಳೇ ಮುಖಗಳು ಪಕ್ಷದ ಅಯಕಟ್ಟಿನ ಜಾಗದಲ್ಲಿ ಕೂತಿದ್ದಾರೆ ಎಂದರು. ಮುಂದುವರಿದು ಮಾಜಿ ಜನಪ್ರತಿನಿಧಿಯ ಹೆಸರನ್ನು ಉಲ್ಲೇಖಿಸಿ “ ನೀವು ಬೆಳೆಸಿದ ಒಬ್ಬ ಹೊಸ ಮುಖಂಡನನ್ನು ತೋರಿಸಿ ಎಂದು ಹೇಳಿದರು. ನಾಯಕರ ಈ ದೋರಣೆಯಿಂದಲೆ ಪಕ್ಷಕ್ಕೆ ಇಲ್ಲಿ ಸೋಲಾಗಿದೆ ಎಂದು ಅವರು ವಿವರಿಸಿದರು.
ಕೆಲ ಗಂಟೆಗಳ ಚರ್ಚೆಯ ಬಳಿಕವು ಪುತ್ತಿಲರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ಹಾಗೂ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಸಭೆಯಲ್ಲಿ ಒಮ್ಮತ ಮೂಡಲಿಲ್ಲ. ಸದ್ಯ ಪುತ್ತೂರಿನ ಗೊಂದಲವನ್ನು ಪರಿಹಾರಿಸುವ ಹೊಣೆಗಾರಿಕೆಯನ್ನು ರಾಜ್ಯ ಹೈಕಮಾಂಡ್ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿಯವರಿಗೆ ನೀಡಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಸಭೆಯಲ್ಲಿ ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಮಾಜಿ ಶಾಸಕ ಸಂಜೀವ ಮಠಂದೂರು, ಮುಖಂಡ ರಾಮದಾಸ ಬಂಟ್ವಾಳ, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.
ಆಂತರಿಕ ಸಭೆಯ ಬಳಿಕ ಮತ್ತೆ ರಾಜೇಶ್ ಕೆವಿಯವರು ಪುತ್ತೂರು ಬಿಜೆಪಿಯ ಉನ್ನತ ನಾಯಕರು, ಪುತ್ತೂರಿನ ಸಂಘದ ಪ್ರಮುಖರ ಜತೆ ಪುತ್ತಿಲ ಪಕ್ಷ ಸೇರ್ಪಡೆ ಬಗ್ಗೆ ಪಂಚವಟಿಯಲ್ಲಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದರಲ್ಲಿ ಯಾವುದೇ ಹುದ್ದೆ ನೀಡದೆ ಪುತ್ತಿಲರನ್ನು ಬಿಜೆಪಿಗೆ ಸೇರಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಸಭೆಯಲ್ಲಿ ಭಾಗವಹಿಸದವರೊಬ್ಬರು ನಿಖರ ನ್ಯೂಸಿಗೆ ತಿಳಿಸಿದ್ದಾರೆ.
ಇನ್ನು ಇಂದು ಸಂಜೆ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ದಕ ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಭೆಯಲ್ಲಿ ದ. ಕ. ಜಿಲ್ಲಾ ಬಿಜೆಪಿ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಹರಿದಾಡುತಿತ್ತಾದರೂ ಅದು ಕೇವಲ ವದಂತಿಗೆ ಸೀಮಿತವಾಗಿದೆ.
ಕೈಕೊಟ್ಟ ಬಿಜೆಪಿ!
ಬಿಜೆಪಿಗೆ ಪುತ್ತಿಲ ಪರಿವಾರ ವಿಧಾನಸಭೆಯ ಬಳಿಕದ ಎಲ್ಲಾ ಚುನಾವಣೆಗಳು ಸಮಸ್ಯೆಯಾಗಿ ಪರಿಣಮಿಸಲು ಪ್ರಾರಂಭವಾಗುತ್ತಿದ್ದುದರಿಂದ ಸಹಕಾರಿ ನಿರ್ದೆಶಕ ಶಶಿಕುಮಾರ್ ಬಾಲ್ಯೊಟ್ಟು, ವೈದ್ಯ ಡಾ. ಸುರೇಶ್ ಪುತ್ತೂರಾಯ ಎರಡು ಪಕ್ಷಗಳ ಸಮನ್ವಯಕಾರರಾಗಿ ಕಾರ್ಯನಿರ್ವಹಿಸಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅರುಣ್ ಕುಮಾರ್ ಪುತ್ತಿಲ ನಡುವೆ ನಡೆದ ಮಾತುಕತೆಯಲ್ಲಿ ಪುತ್ತಿಲರಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಥಾವ ಪುತ್ತೂರು ತಾಲೂಕು ಗ್ರಾಮಾಂತರ ಅಧ್ಯಕ್ಷ ಪದವಿ ನೀಡುವ ಬಗ್ಗೆ ಒಮ್ಮತಕ್ಕೆ ಬರಲಾಗಿತ್ತು. ಇದಕ್ಕೆ ಪುತ್ತಿಲ ಪರಿವಾರ ಒಪ್ಪಿಗೆ ಸೂಚಿಸಿತ್ತು. ಆ ಬಳಿಕ ಮತ್ತೆ ರಾಗಾ ಬದಲಿಸಿದ ಬಿಜೆಪಿ ಸ್ಥಾನಮಾನದ ನಿರೀಕ್ಷೆಯನ್ನು ಇಟ್ಟುಕೊಳ್ಳದೆ ಪಕ್ಷದೊಳಗೆ ಬರಬೇಕೆಂಬ ಹೊಸ ವರಸೆಯನ್ನು ಹಿಂದಿನ ರೀತಿಯಲ್ಲೇ ಪ್ರಾರಂಭಿಸಿ ಸೇರ್ಪಡೆಗೆ ಕೈಕೊಟ್ಟಿತ್ತು.
ದಕ್ಷಿಣ ಕನ್ನಡ
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ

ಪುತ್ತೂರು: ದೀಪಾವಳಿಯ ಸಂಭ್ರಮವನ್ನು ಜನಸಾಮಾನ್ಯರೊಂದಿಗೆ ಹಂಚಿಕೊಳ್ಳುವ ಮೂಲಕ ಸೇವೆ, ಸಹಕಾರ ಹಾಗೂ ಮಾನವೀಯತೆಯ ಸಂದೇಶ ಸಾರುತ್ತಿರುವ ಪುತ್ತೂರಿನ ಹೆಮ್ಮೆಯ ‘ಅಶೋಕ ಜನಮನ-2026’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ಈ ಬೃಹತ್ ಜನಸೇವಾ ಕಾರ್ಯಕ್ರಮ ನ.22ರಂದು (ರವಿವಾರ) ಬೆಳಿಗ್ಗೆ 9 ಗಂಟೆಯಿಂದ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.
ಸುಮಾರು ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಿಸುವ ಬೃಹತ್ ಸಂಕಲ್ಪದೊಂದಿಗೆ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ ಸುಮಾರು ₹4 ಕೋಟಿ ವೆಚ್ಚ ಮಾಡಲಾಗುತ್ತಿದೆ. ಉಡುಗೊರೆ ವಿತರಣೆ ಮಾತ್ರವಲ್ಲದೆ, ಬೃಹತ್ ಅನ್ನದಾನ, ದೋಸೆ ಮೇಳ ಸೇರಿದಂತೆ ಹಲವು ವಿಶೇಷ ವ್ಯವಸ್ಥೆಗಳು ಈ ಬಾರಿಯ ಜನಮನದ ಆಕರ್ಷಣೆಯಾಗಲಿವೆ. ಪುತ್ತೂರು ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದಲೂ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿದ್ದು, ಕೊಂಬೆಟ್ಟು ಕ್ರೀಡಾಂಗಣ ಜನಸಾಗರಕ್ಕೆ ಸಾಕ್ಷಿಯಾಗಲಿದೆ.
14 ವರ್ಷಗಳ ಜನಸೇವೆಯ ಪಯಣ; ಜನಮನದಲ್ಲಿ ವಿಶೇಷ ಸ್ಥಾನ!
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಮಾಜದ ಬಡವರು, ಮಧ್ಯಮ ವರ್ಗದವರು ಸೇರಿದಂತೆ ಎಲ್ಲ ವರ್ಗದ ಜನರೊಂದಿಗೆ ಹಬ್ಬದ ಸಂತೋಷ ಹಂಚಿಕೊಳ್ಳುವ ಆಶಯದೊಂದಿಗೆ ಆರಂಭಗೊಂಡ ‘ಅಶೋಕ ಜನಮನ’ ಇಂದು ಪುತ್ತೂರಿನ ಪ್ರಮುಖ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.
ಕಳೆದ 14 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಕ್ರಮ ವರ್ಷದಿಂದ ವರ್ಷಕ್ಕೆ ತನ್ನ ವ್ಯಾಪ್ತಿ ಹಾಗೂ ಜನಪ್ರಿಯತೆಯನ್ನು ವಿಸ್ತರಿಸಿಕೊಂಡಿದೆ. ರಾಜಕೀಯ, ಜಾತಿ, ಧರ್ಮದ ಭೇದವಿಲ್ಲದೆ ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಡುಗೊರೆ ಪಡೆದುಕೊಳ್ಳುವ ಮುಕ್ತ ಅವಕಾಶ ಇದರ ವಿಶೇಷತೆಯಾಗಿದೆ.
ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಉದ್ಯಮದ ಮೂಲಕ ಗಳಿಸಿದ ಸಂಪನ್ಮೂಲದ ಒಂದು ಭಾಗವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುವ ಉದ್ದೇಶದಿಂದ ಈ ಸೇವಾ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಹೀಗಾಗಿ ಅಶೋಕ ಜನಮನ ಕೇವಲ ಉಡುಗೊರೆ ವಿತರಣಾ ಕಾರ್ಯಕ್ರಮವಾಗಿ ಉಳಿಯದೆ, ಜನರೊಂದಿಗೆ ಬೆರೆಯುವ ಮತ್ತು ಹಬ್ಬದ ಸಂತೋಷವನ್ನು ಹಂಚಿಕೊಳ್ಳುವ ಬೃಹತ್ ವೇದಿಕೆಯಾಗಿ ರೂಪುಗೊಂಡಿದೆ.
ಒಂದು ಲಕ್ಷ ಮಂದಿಗೆ ಉಡುಗೊರೆ; ಮನೆಮಂದಿಗೆಲ್ಲ ದೀಪಾವಳಿ ಕೊಡುಗೆ!
ಈ ಬಾರಿಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆ ಬೃಹತ್ ಉಡುಗೊರೆ ವಿತರಣೆಯಾಗಿದೆ. ಸುಮಾರು ಒಂದು ಲಕ್ಷ ಮಂದಿಗೆ ಉಡುಗೊರೆ ತಲುಪಿಸುವ ಗುರಿ ಹೊಂದಲಾಗಿದ್ದು, ಸಾರ್ವಜನಿಕರಿಗಾಗಿ ವಿವಿಧ ಅಗತ್ಯ ವಸ್ತುಗಳನ್ನು ಸಿದ್ಧಪಡಿಸಲಾಗಿದೆ.
ಸೀರೆ, ಬೆಡ್ಶೀಟ್, ಬಾತ್ ಟವೆಲ್, ತಟ್ಟೆ, ಬಟ್ಟಲು, ಗ್ಲಾಸ್ ಸೇರಿದಂತೆ ವಿವಿಧ ವಸ್ತುಗಳನ್ನು ಉಡುಗೊರೆಯಾಗಿ ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಹಬ್ಬದ ಸಂದರ್ಭದಲ್ಲಿ ಮನೆಮಂದಿಗೆ ಉಪಯುಕ್ತವಾಗುವ ವಸ್ತುಗಳನ್ನು ನೀಡುವ ಮೂಲಕ ಪ್ರತಿಯೊಂದು ಕುಟುಂಬದಲ್ಲೂ ದೀಪಾವಳಿಯ ಸಂತೋಷ ಮೂಡಿಸುವ ಪ್ರಯತ್ನ ಇದಾಗಿದೆ.
ಉಡುಗೊರೆ ವಿತರಣೆಗೆ ಪ್ರತ್ಯೇಕ ಕೌಂಟರ್ಗಳು ಹಾಗೂ ವ್ಯವಸ್ಥಿತ ನಿರ್ವಹಣೆಗೆ ವಿಶೇಷ ತಂಡಗಳನ್ನು ನಿಯೋಜಿಸುವ ಮೂಲಕ ಜನದಟ್ಟಣೆಯನ್ನು ನಿಯಂತ್ರಿಸಲು ಸಿದ್ಧತೆ ಮಾಡಲಾಗಿದೆ.
ಒಂದು ಲಕ್ಷ ದೋಸೆ; 60 ಸಾವಿರಕ್ಕೂ ಅಧಿಕ ಮಂದಿಗೆ ಭರ್ಜರಿ ಅನ್ನದಾನ!
ಅಶೋಕ ಜನಮನದ ಮತ್ತೊಂದು ವಿಶೇಷ ಆಕರ್ಷಣೆ ಬೃಹತ್ ದೋಸೆ ಮೇಳ. ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಬೆಳಗ್ಗಿನಿಂದಲೇ ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಮಾರು ಒಂದು ಲಕ್ಷ ದೋಸೆಗಳನ್ನು ತಯಾರಿಸಿ ವಿತರಿಸುವ ಗುರಿ ಹೊಂದಲಾಗಿದೆ.
ಇದರೊಂದಿಗೆ ಮಧ್ಯಾಹ್ನ ಸುಮಾರು 60 ಸಾವಿರಕ್ಕೂ ಅಧಿಕ ಮಂದಿಗೆ ಅನ್ನದಾನ ಆಯೋಜಿಸಲಾಗಿದೆ. ಸಾವಿರಾರು ಜನರು ಏಕಕಾಲದಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಆಹಾರ ವಿತರಣೆ ಹಾಗೂ ಜನರ ಸಂಚಾರಕ್ಕೆ ಅಗತ್ಯ ವ್ಯವಸ್ಥೆಗಳನ್ನು ರೂಪಿಸಲಾಗಿದೆ. ಬೆಳಗ್ಗಿನಿಂದ ಸಂಜೆಯವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿರುವುದು ವಿಶೇಷವಾಗಿದೆ.
ರಾಜಕೀಯ ನಾಯಕರ ದಂಡು; ಸಚಿವರು, ಮಾಜಿ ಸಚಿವರ ಉಪಸ್ಥಿತಿ
ಕಾರ್ಯಕ್ರಮಕ್ಕೆ ರಾಜ್ಯಮಟ್ಟದ ರಾಜಕೀಯ ನಾಯಕರು, ಸಚಿವರು, ಮಾಜಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಕರ್ನಾಟಕ ಸರಕಾರದ ಆರೋಗ್ಯ ಸಚಿವ ಯು.ಟಿ. ಖಾದರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿ’ಸೋಜಾ, ಪಿ.ವಿ. ಮೋಹನ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಹರೀಶ್ ಕುಮಾರ್, ಜಿ.ಆರ್. ಲೋಬೊ, ಗಫೂರ್, ಲಾವಣ್ಯ ಬಲ್ಲಾಳ್, ಟಿ.ಎಂ. ಶಹೀದ್, ಶಾಲೆಟ್ ಪಿಂಟೋ, ಮಹಮ್ಮದ್ ಆಲಿ, ಮಹಮ್ಮದ್ ಬಡಗನ್ನೂರು, ಚಂದ್ರಹಾಸ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ಎಂ.ಬಿ. ವಿಶ್ವನಾಥ ರೈ, ಪಝಲ್ ರಹೀಂ, ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ರಾಜಾರಾಮ್, ಕೃಷ್ಣಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ ಆಳ್ಕೆ, ಯು.ಟಿ. ತೌಸಿಫ್, ಜೋಕಿಂ ಡಿಸೋಜಾ, ಉಷಾ ಅಂಚನ್, ದಿವಾಕರ ದಾಸ್ ನೇರ್ಲಾಜೆ ಹಾಗೂ ಪ್ರಸನ್ನ ಕುಮಾರ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ.
ಇದಲ್ಲದೆ ಸಂತೋಷ್ ಕುಮಾರ್ ಶೆಟ್ಟಿ, ಪದ್ಮರಾಜ್ ಆರ್. ಪೂಜಾರಿ, ಎಂ.ಎಸ್. ಮಹಮ್ಮದ್, ರಕ್ಷಿತ್ ಶಿವರಾಮ್, ಮಿಥುನ್ ರೈ, ಇನಾಯತ್ ಆಲಿ, ಹೇಮನಾಥ ಶೆಟ್ಟಿ ಕಾವು, ದುರ್ಗಾಪ್ರಸಾದ್ ರೈ ಕುಂಬ್ರ, ಉಮಾನಾಥ ಶೆಟ್ಟಿ, ಅಮಲ ರಾಮಚಂದ್ರ, ಮಲ್ಲಿಕಾ ಪಕ್ಕಳ, ಕೃಷ್ಣಪ್ಪ ಸುಳ್ಯ, ರಘು ಬೆಳ್ಳಿಪ್ಪಾಡಿ, ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ರಾಧಾಕೃಷ್ಣ ನಾಯಕ್ ಉಪ್ಪಿನಂಗಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಯತಿವರ್ಯರಿಂದ ಧಾರ್ಮಿಕ ಆಶೀರ್ವಚನ
ಕಾರ್ಯಕ್ರಮಕ್ಕೆ ಧಾರ್ಮಿಕ ಮೆರುಗು ನೀಡಲು ಹಿಂದೂ ಸಮಾಜದ ಯತಿವರ್ಯರು ಆಗಮಿಸಲಿದ್ದಾರೆ. ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ಈಶ ವಿಠಲದಾಸ ಸ್ವಾಮೀಜಿ ಹಾಗೂ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಧಾರ್ಮಿಕ ಆಶೀರ್ವಚನ ನೀಡಲಿದ್ದಾರೆ.
ಮಳೆ ಕಾರಣದಿಂದ ಮುಂದೂಡಿಕೆಯಾಗಿದ್ದ ಕಾರ್ಯಕ್ರಮ
ನವೆಂಬರ್ 8ರಂದು ನಡೆಯಬೇಕಿದ್ದ ಅಶೋಕ ಜನಮನ ಕಾರ್ಯಕ್ರಮವನ್ನು ನಿರಂತರ ಮಳೆ ಹಾಗೂ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನವೆಂಬರ್ 22ಕ್ಕೆ ಮುಂದೂಡಲಾಗಿತ್ತು. ಇದೀಗ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಆಯೋಜಿಸಲು ಟ್ರಸ್ಟ್ ಮುಂದಾಗಿದೆ.
ಹಬ್ಬದ ಸಂಭ್ರಮಕ್ಕೆ ಜನಮನದ ಸ್ಪರ್ಶ
ಒಂದು ಕಡೆ ಬೃಹತ್ ಉಡುಗೊರೆ ವಿತರಣೆ, ಮತ್ತೊಂದೆಡೆ ಅನ್ನದಾನ ಹಾಗೂ ದೋಸೆ ಮೇಳ, ಇನ್ನೊಂದೆಡೆ ರಾಜಕೀಯ ಮತ್ತು ಧಾರ್ಮಿಕ ಗಣ್ಯರ ಸಮಾಗಮ. ಹೀಗೆ ಹಲವು ವಿಶೇಷತೆಗಳನ್ನು ಒಳಗೊಂಡಿರುವ ಅಶೋಕ ಜನಮನ-2026 ಪುತ್ತೂರಿನಲ್ಲಿ ಮತ್ತೊಂದು ಬೃಹತ್ ಜನಸಂಗಮಕ್ಕೆ ವೇದಿಕೆಯಾಗಲಿದೆ.
ದೀಪಾವಳಿ ಎಂದರೆ ಕೇವಲ ಬೆಳಕಿನ ಹಬ್ಬವಲ್ಲ, ಸಂತೋಷವನ್ನು ಹಂಚಿಕೊಳ್ಳುವ ಹಬ್ಬವೂ ಹೌದು ಎಂಬ ಆಶಯದೊಂದಿಗೆ ರೂಪುಗೊಂಡಿರುವ ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಜನರು ಪಕ್ಷಾತೀತವಾಗಿ ಭಾಗವಹಿಸಿ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಅಶೋಕ್ ಕುಮಾರ್ ರೈ ಹಾಗೂ ರೈ ಎಸ್ಟೇಟ್ ಟ್ರಸ್ಟ್ನ ಸಂಘಟಕರು ಮನವಿ ಮಾಡಿದ್ದಾರೆ.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.
-
ಅಪರಾಧ19 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ19 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್18 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ24 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ನಿಧನ ವಾರ್ತೆ18 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ16 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ17 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್22 hours agoMuraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ















