Uncategorized
Arun Puttila joins bjp: ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ ; ಪುತ್ತಿಲ ಪರಿವಾರದ ಡೆಡ್ ಲೈನ್ ಅನ್ನು ಮಾನ್ಯ ಮಾಡುವುದೇ ಬಿಜೆಪಿ ಮತ್ತು ಅರ್ ಎಸ್ ಎಸ್ ?
ಪುತ್ತಿಲ ಪರಿವಾರದ ಸಮಾಲೋಚನಾ ಸಭೆಯ ಬಳಿಕ ಬಿಜೆಪಿ ಹಾಗೂ ಪುತ್ತಿಲ ಪರಿವಾರದ ಮಧ್ಯೆ ಇರುವ ಗೊಂದಲ ತಿಳಿಯಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಫೆ 5 ರಂದು ಕೊಟೇಚಾ ಹಾಲ್ ನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಪುತ್ತಿಲ ಪರಿವಾರವು 3 ನಿರ್ಣಯಗಳನ್ನು ಘೋಷಿಸಿದ್ದು, ಇದು ಮುಂದಿನ ದಿನಗಳಲ್ಲಿ ಎರಡು ತಂಡಗಳು ಮತ್ತೆ ಜತೆಯಾಗುವ ಸಾಧ್ಯತೆಯನ್ನು ಕ್ಷೀಣಿಸುವಂತೆ ಮಾಡಿದೆ. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರುರವರು ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲರವರು ಬಿಜೆಪಿ ಸೇರ್ಪಡೆಗೆ ನಿಗದಿಪಡಿಸಿದ 3 ಷರತ್ತುಗಳಿಗೆ ಉತ್ತರ ನೀಡುವುದೆ ಸಮಾಲೋಚಾನ ಸಭೆಯ ಪ್ರಮುಖ ಅಜೆಂಡಾ ಆಗಿತ್ತು.
ಅಧ್ಯಕ್ಷತೆ ವಹಿಸಿದ್ದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ ಸಭೆಯಲ್ಲಿ ಮೂರು ನಿರ್ಣಯಗಳನ್ನು ಮಂಡಿಸಿ ಬಿಜೆಪಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು. ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಜವಾಬ್ದಾರಿಯುತ ಸ್ಥಾನ ನೀಡಿದಲ್ಲಿ ಪುತ್ತಿಲ ಪರಿವಾರ ಮಾತೃ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗಲಿದೆ. ಪುತ್ತಿಲರಿಗೆ ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷತೆ ನೀಡದಿದ್ದಲ್ಲಿ ಮುಂದೆ ಜಿಲ್ಲೆಯಲ್ಲಿ ಮಹಾ ರಾಜಕೀಯ ವಿಪ್ಲವ ನಡೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
3 ನಿರ್ಣಯಗಳು
- ಮಾತೃ ಪಕ್ಷ ಬಿಜೆಪಿಯ ನಾಯಕರು, ಹಿರಿಯರು ಅಥವಾ ಸಂಘ ಪರಿವಾರದವರಿಗೆ ಅಗೌರವ ಉಂಟಾಗುವ ಯಾವುದೇ ಹೇಳಿಕೆ, ಮಾತುಗಳನ್ನು ಪುತ್ತಿಲ ಪರಿವಾರ ಅಥವಾ ಅರುಣ್ ಕುಮಾರ್ ಪುತ್ತಿಲ ಆಡದೇ ಇರುವುದರಿಂದ ಯಾರಲ್ಲಿಯೂ ಕ್ಷಮೆ ಕೇಳುವ ಪ್ರಶ್ನೆಯೇ ಬರುವುದಿಲ್ಲ.
- ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಸ್ಥಾನವನ್ನು ಬಿಜೆಪಿಯ ಜವಾಬ್ದಾರಿಯುತ ವ್ಯಕ್ತಿ ಗೌರವಯುತವಾಗಿ ನೀಡಿದರೆ ಪುತ್ತಿಲ ಪರಿವಾರವನ್ನು ಬಿಜೆಪಿ ಜತೆ ವಿಲೀನಗೊಳಿಸಲಾಗುವುದು.
- ಪುತ್ತೂರು ಬಿಜೆಪಿ ಅಧ್ಯಕ್ಷ ಸ್ಥಾನವನ್ನು ನೀಡದಿದ್ದರೆ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರದಿಂದ ಜಿಲ್ಲೆಯಾದ್ಯಂತ ಸ್ಪರ್ಧೆ ನಡೆಸಲಾಗುವುದು.
ಈ ಮೂರು ನಿರ್ಣಾಯಗಳು ಸದ್ಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಬಾರಿ ಚರ್ಚೆಗೆ ಕಾರಣವಾಗುತ್ತಿದೆ ಇದರ ಜತೆಗೆ ಮುಂದಿನ 3 ದಿನದೊಳಗಡೆ ಅರುಣ್ ಅವರಿಗೆ ಬಿಜೆಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನ ಕೊಡಬೇಕು ಡೆಡ್ ಲೈನ್ ಅನ್ನು ವಿಧಿಸಲಾಗಿದೆ. ಅಲ್ಲದೇ ಹುದ್ದೆ ನೀಡದಿದ್ದಲ್ಲಿ ಮುಂದೆ ನಡೆಯುವ ಎಲ್ಲ ಚುನಾವಣೆಗಳಲ್ಲಿ ಜಿಲ್ಲೆಯಾದ್ಯಂತ ಸ್ಪರ್ಧಿಸುವ ಎಚ್ಚರಿಕೆಯ ಸಂದೇಶವನ್ನು ಸಮಾಲೋಚನ ಸಭೆಯ ವೇದಿಕೆಯಿಂದ ರವಾನಿಸಲಾಗಿದೆ. ಇದರಲ್ಲಿ ಲೋಕಸಭಾ ಚುನಾವಣೆಯು ಸೇರಲಿದೆಯೇ ಎಂಬುದು ಖಚಿತಗೊಂಡಿಲ್ಲ . ಸಭೆಯಲ್ಲಿ ಕಾರ್ಯಕರ್ತರೊಬ್ಬರ ಲೋಕಸಬಾ ಚುನಾವಣೆ ಸ್ಪರ್ಧೆ ಕುರಿತ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಪುತ್ತಿಲ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಎದುಕೊಳ್ಳಲಾಗುವುದು ಎಂದು ಉತ್ತರಿಸಿದ್ದಾರೆ
ಪುತ್ತಿಲ ಪರಿವಾರದ ಈ ಹೇಳಿಕೆ ಹಾಗೂ ನಿರ್ಣಯದ ಬಳಿಕವು ಬಿಜೆಪಿ ಅರುಣ್ ಪುತ್ತಿಲರನ್ನು ಅವರು ಆಪೇಕ್ಷಿಸಿದ ಹುದ್ದೆ ನೀಡಿ ಬಿಜೆಪಿಗೆ ಸೇರಿಸಿಕೊಳ್ಳುವುದೇ ? ಎನ್ನುವುದು ಸದ್ಯ ಚರ್ಚೆಯಾಗುತ್ತಿರುವ ವಿಷಯ. ಜಿಲ್ಲಾ ಬಿಜೆಪಿಯ ಈ ಹಿಂದಿನ ಟ್ರ್ಯಾಕ್ ರೆಕಾರ್ಡ್ ಗಮನಿಸಿದರೇ ಇದು ದೂರದ ಮಾತು ಎನಿಸುತ್ತಿದೆ. ಅಲ್ಲದೇ ಜಿಲ್ಲೆಯಲ್ಲಿ ಪಕ್ಷದ ಮೇಲೆ ಅರ್ ಎಸ್ ಎಸ್ ಗೆ ವಿಪರೀತವಾದ ಹಿಡಿತವಿದೆ. ಆರ್ ಎಸ್ ಎಸ್ ವ್ಯಕ್ತಿಗಿಂತ ಸಂಘಟನೆಗೆ ಹೆಚ್ಚು ಮಹತ್ವ ಕೊಡುವುದರಿಂದ ಹಾಗೂ ಜಿಲ್ಲೆಯ ಆರ್ ಎಸ್ ಎಸ್ ನಾಯಕರು, ಪುತ್ತಿಲ ತಗ್ಗಿ ಬಗ್ಗಿ ಪಕ್ಷಕ್ಕೆ ಬರಬೇಕು ಎಂಬ ನಿಲುವು ಹೊಂದಿರುವುದರಿಂದ ಪುತ್ತಿಲ ಪರಿವಾರ ಒಡ್ಡಿರುವ ಷರತ್ತುಗಳಿಗೆ ಭಾಗುವ ಸಾಧ್ಯತೆ ಇಲ್ಲ ಎಂದೆ ರಾಜಕೀಯ ವಲಯದಲ್ಲಿ ವಿಶ್ಲೇಸಿಸಲಾಗುತ್ತಿದೆ
ಆದರೇ ಇದೆ ವೇಳೆ ಜಿಲ್ಲೆಯ ಇನ್ನೆರಡು ಕ್ಷೇತ್ರಗಳಲ್ಲೂ ಬಿಜೆಪಿ ಬಂಡಾಯದ ಬಿಸಿಯನ್ನು ಎದುರಿಸುತ್ತಿದ್ದು, ಹೀಗಾಗಿ ಸದ್ಯ ಜಿಲ್ಲಾ ಬಿಜೆಪಿ ಏಕಾಏಕಿ ಅಗ್ರೇಸಿವ್ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ. ಅದು ಕೂಡ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದಕ್ಕಿಂತ, ಕಾದು ನೋಡುವ ತಂತ್ರಕ್ಕೆ ಮುಂದಾಗುವ ಸಾಧ್ಯತೆಯೇ ಅಧಿಕ . ಹೀಗಾಗಿ ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೇ ಉಳಿದಿರುವ ಒಂದು ಜಿಲ್ಲಾ ಉಪಾಧ್ಯಕ್ಷ ಹುದ್ದೆಯನ್ನು ಭರ್ತಿ ಮಾಡಿ, ಲೋಕಸಭಾ ಚುನಾವಣೆಯವರೆಗೆ ಪುತ್ತೂರು ಮಂಡಲಕ್ಕೆ ಹೊಸ ಅಧ್ಯಕ್ಷರ ನೇಮಕಾತಿ ಮಾಡದೇ ಯಥಾಸ್ಥಿತಿ ಮುಂದುವರಿಸುವ ಸಾಧ್ಯತೆಯೇ ಅಧಿಕ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆಯ ಬಳಿಕ ಪರಿಸ್ಥಿತಿಯನ್ನು ಅವಲೋಕಿಸಿ ಪಕ್ಷ ಪುತ್ತೂರು ಮಂಡಲದ ನೇಮಕಾತಿ ಮಾಡುವ ಸಾಧ್ಯತೆಯೇ ಅಧಿಕ
Uncategorized
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ

ಪುತ್ತೂರು, ಅ.5: ಪರವಾನಿಗೆ ಇಲ್ಲದೆ 11 ಜಾನುವಾರುಗಳನ್ನು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇರೆಗೆ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅ.5ರಂದು ಬೆಳಗಿನ ಜಾವ ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಕೇರಳದ ಕಡೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ಗ್ರಾಮಾಂತರ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರಿಗೆ ದೊರೆತಿತ್ತು. ಅದರಂತೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದರು.
ಈ ವೇಳೆ ವಾಹನದಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾರೆ. ವಾಹನ ಪರಿಶೀಲಿಸಿದಾಗ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಪತ್ತೆಯಾಗಿದೆ. ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾಂಸಕ್ಕಾಗಿ ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 6, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(d) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತನಿಖೆ ಮುಂದುವರಿಸಿದ ಪೊಲೀಸರು, ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾರಾಟ ಮಾಡಿದ್ದ ಆರೋಪದ ಮೇರೆಗೆ ಶಿವಪ್ರಸಾದ್‌ನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಪರಾರಿಯಾಗಿರುವ ವಾಹನ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Uncategorized
Mangalore-ಮಂಗಳೂರು ವಿ.ವಿ ಮಹಿಳೆಯರ ಕಬಡ್ಡಿ; ವಿವೇಕಾನಂದ ಕಾಲೇಜಿನ ಉತ್ತಮ ಸಾಧನೆ
ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಪುತ್ತೂರು: ಕಳೆದ ಸೆಪ್ಟೆಂಬರ್ 29 ಮತ್ತು 30ರಂದು ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.
ಸುಮಾರು 30 ಕಾಲೇಜುಗಳು ಭಾಗವಹಿಸಿದಂತಹ ಈ ಪಂದ್ಯಾಟದ ಪೂರ್ವಭಾವಿಯಾಗಿ ನಡೆದಂತಹ ಪ್ರಿಲಿಮಿನರಿ ಹಂತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನ ಪಡೆದುಕೊಂಡಿದ್ದಾರೆ. ಕು ತೃಶಾ.- ದ್ವಿತೀಯ ಬಿ ಕಾಂ, ಉತ್ತಮ ರೈಡರ್ ಪ್ರಶಸ್ತಿಯನ್ನು ಗಳಿಸಿದ್ದಾರೆ. ತಂಡವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು, ಅನ್ನಪೂರ್ಣ ರೈ – ತೃತೀಯ ಬಿಬಿಎ, ಭೂಮಿಕಾ – ತೃತೀಯ ಬಿಎ, ಹೇಮಲತಾ – ತೃತೀಯ ಬಿಎ, ರಶ್ಮಿತ. ಎನ್ – ತೃತೀಯ ಬಿಸಿಎ, ನಿಕ್ಷಿತ – ದ್ವಿತೀಯ ಬಿಕಾಂ, ಅಮೂಲ್ಯ ಪಿ ಆರ್ – ದ್ವಿತೀಯ ಬಿಕಾಂ, ವರ್ಷಿತ ಹೆಚ್ ವಿ – ದ್ವಿತೀಯ ಬಿ ಸಿ ಎ , ಆದ್ಯ ಬಿ ಆರ್ – ಪ್ರಥಮ ಬಿಕಾಂ, ಸೋನಾಲಿ ಎಸ್ಎನ್ – ಪ್ರಥಮ ಬಿಬಿಎ. ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಯತೀಶ್ ಕುಮಾರ್ ಹಾಗೂ ಡಾ. ಜ್ಯೋತಿ ಇವರು ತರಬೇತಿ ನೀಡಿದ್ದಾರೆ.
ತಂಡದ ಈ ಸಾಧನೆಯಿಂದಾಗಿ ಕಾಲೇಜು ಮುಂದಿನ ವರ್ಷ ನಡೆಯುವ ಪಂದ್ಯಾಟದಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್ ಹಂತದಲ್ಲಿ ಸ್ಪರ್ಧಿಸುವ ಅರ್ಹತೆಯನ್ನು ಗಳಿಸಿದೆ. ವಿದ್ಯಾರ್ಥಿನಿಯರ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
Uncategorized
Vivekananda-ವಿವೇಕಾನಂದ ಕಾಲೇಜಿನಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರಿʼ ಕಾರ್ಯಗಾರ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರಿ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಪುತ್ತೂರು: ವಿದ್ಯಾರ್ಥಿಗಳು ಉದ್ಯೋಗ ಸಂದರ್ಶನಗಳಿಗೆ ಸರಿಯಾದ ತಯಾರಿ ನಡೆಸಬೇಕು. ಪ್ರಮುಖವಾಗಿ ಮಾತುಗಳನ್ನು ಆಲಿಸುವ ಹಾಗೂ ಸಂವಹನ ಸಾಮರ್ಥ್ಯವನ್ನು ಹೊಂದಿರಬೇಕು. ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನದ ಜೊತೆಗೆ ಸಂವಹನ ಕೌಶಲ್ಯ, ಪ್ರೋಬ್ಲಮ್ ಸಾಲ್ವಿಂಗ್, ಟೀಮ್ ವರ್ಕ್, ಹೊಂದಿಕೊಳ್ಳುವಿಕೆ ಮತ್ತು ಉತ್ತಮ ಮನೋಭಾವ ಮೊದಲಾದ ಕೌಶಲ್ಯಗಳು ಉತ್ತಮ ಉದ್ಯೋಗ ಮತ್ತು ಯಶಸ್ವಿ ವೃತ್ತಿ ಜೀವನಕ್ಕೆ ಸಹಾಯಕವಾಗುತ್ತವೆ ಎಂದು ಭಾರತೀಯ ರಾಸಾಯನಿಕ ಮಂಡಳಿ (ಐಸಿಸಿ)ಯ ರೆಸ್ಪಾಂಸಿಬಲ್ ಕೇರ್‌ನ ಲೆಕ್ಕಪರಿಶೋಧಕ ರಾಜಶೇಖರ ಭಟ್ ಹೇಳಿದರು.
ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರಿ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಎಸ್. ಅಧ್ಯಕ್ಷೀಯ ನುಡಿಗಳನ್ನಾಡಿ, ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯವಿರುವ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ತರಗತಿಯಲ್ಲಿ ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ಅನ್ವಯಿಸುವ ಜೊತೆಗೆ, ಉದ್ಯೋಗ ಕ್ಷೇತ್ರಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಸೈದ್ಧಾಂತಿಕ ಜ್ಞಾನ ಮತ್ತು ಪ್ರಾಯೋಗಿಕ ಅನುಭವದ ಮೂಲಕ ವಿದ್ಯಾರ್ಥಿಗಳನ್ನು ಉದ್ಯೋಗ ಕ್ಷೇತ್ರಕ್ಕೆ ಸಜ್ಜುಗೊಳಿಸುವುದು ಇಂತಹ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಮಾತನಾಡಿದರು. ಕಾರ್ಯಕ್ರಮದಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವಪ್ರಸಾದ್ ಕೆ. ಉಪಸ್ಥಿತರಿದ್ದರು.
-
Uncategorized24 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ಬಿಗ್ ನ್ಯೂಸ್12 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ನಿಧನ ವಾರ್ತೆ7 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಅಪರಾಧ12 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ11 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ12 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ10 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ12 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ


















