Connect with us

ದಕ್ಷಿಣ ಕನ್ನಡ

UT Khadar ಪಣೋಲಿ ಬೈಲು ನೇಮದಲ್ಲಿ ಭಾಗವಹಿಸಿದ ಸ್ಪೀಕರ್ ; ಕೆಲ ಸ್ವಧರ್ಮಿಯರ ಆಕ್ಷೇಪ – ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ಕೊಟ್ಟ ಯುಟಿ ಖಾದರ್

Published

on



Ad Widget

Ad Widget

Ad Widget

Ad Widget

ತುಳುನಾಡಿನ ಕಾರಣಿಕ ಸ್ಥಾನ ಪಣೋಲಿಬೈಲು ಕ್ಷೇತ್ರದಲ್ಲಿ ಭಾನುವಾರ ರಾತ್ರಿ ನಡೆದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆಯ ಕೋಲದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಭಾಗವಹಿಸಿ ಪ್ರಸಾದ ಸ್ವೀಕರಿಸಿದ್ದಾರೆ. ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರು ಹೇಳಿಕೊಂಡಿದ್ದ ಹರಕೆಯ ಕೋಲ ಇದಾಗಿತ್ತು.

Ad Widget

Ad Widget

Ad Widget

Ad Widget

ತನ್ನ ಆಮಂತ್ರಣದ ಮೇರೆಗೆ ಸ್ಪೀಕರ್ ಖಾದರ್ ಕೋಲದಲ್ಲಿ ಭಾಗವಹಿಸಿದ್ದಾರೆ ಎಂದು ಪ್ರಶಾಂತ್ ಕಾಜವ ಅವರು ಕನ್ನಡ ದಿನ ಪತ್ರಿಕೆಯೂಂದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಹರಕೆ ಕೋಲದ ಫೊಟೋಗಳು ಸಾಮಾಜಿಕೆ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಖಾದರ್ ಅವರೇ ಹೇಳಿಕೊಂಡಿದ್ದ ಹರಕೆ ಎಂದು ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಆದರೆ ಇದು ಸತ್ಯಕ್ಕೆ ದೂರವಾದ ವಿಚಾರ. ನಾನು ಮನಸ್ಸಿನಲ್ಲಿ ಹೇಳಿಕೊಂಡಿದ್ದ ಹರಕೆಯನ್ನು ಈಡೇರಿಸದಿದ್ದರೇ ವೈಯಕ್ತಿಕ ನೆಲೆಯಲ್ಲಿ ಪಣೋಲಿಬೈಲಿನಲ್ಲಿ ಹರಕೆ ಕೋಲ ನೆರವೇರಿಸಿದ್ದೇನೆ ಎಂದು ಕಾಜವ ತಿಳಿಸಿದ್ದಾರೆ.

Ad Widget

Ad Widget <> Ad Widget

ಆದರೇ ಖಾದರ್ ಅವರೇ ಹರಕೆ ಕೋಲ ನೀಡಿದ್ದಾರೆ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು. ಇದು ಒಂದಷ್ಟ ಸ್ವ ಧರ್ಮಿಯರ ಆಕ್ರೋಶಕ್ಕೂ ಕಾರಣವಾಯಿತು. ಕೋಲ ನೀಡಿದನ್ನು ಖಂಡಿಸಿ ಫೈಜಿಯೂಬ್ಬರು ಖಾರವಾದ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು.



Ad Widget

ಪೋಸ್ಟ್ ನಲ್ಲಿ ಏನಿದೆ?

Ad Widget

Ad Widget

ಕೊರಗಜ್ಜನ ಭಕ್ತ ಯುಟಿ ಖಾದರ್ ನನ್ನು ಮುಸ್ಲಿಮರು ಕೇವಲ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ, ಉಲಮಾ , ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾದೀತು.

ಖಾದ‌ರ್ ಕೊರಗಜ್ಜನಿಗೋ, ಕಲ್ಲುರ್ಟಿ, ಪಂಜುರ್ಲಿಗೋ ಆರಾಧಿಸಲಿ, ಪ್ರಸಾದ ತೆಗೆದುಕೊಂಡು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವಾತಂತ್ರ್ಯ. ಅದು ಭಾರತದಲ್ಲಿರುವ ಎಲ್ಲರಿಗೂ ಇರುವ ಸಾಂವಿಧಾನಿಕ ಸ್ವಾತಂತ್ರ್ಯ. ಅದನ್ನು ತಡೆಯುವ ಹಕ್ಕು ನಮಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು ಮಾತ್ರ ನಾವು ಆತನ ಭೂತಾರಾಧನೆಯನ್ನು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ.- ಎಂದು ಸ್ಥಳೀಯ ಫೈಜಿ ಹೇಳಿದ್ದಾರೆ.

ಆಕ್ಷೇಪಕ್ಕೆ ಖಾದರ್‌ ಪ್ರತಿಕ್ರಿಯೆ

ಫೈಜಿ ಎತ್ತಿರುವ ಆಕ್ಷೇಪಕ್ಕೆ ಉತ್ತರ ನೀಡಿರುವ ‌ ಸ್ಪೀಕರ್‌ ಯು.ಟಿ. ಖಾದರ್‌ ಅವರು, ಸೋಷಿಯಲ್ ಮೀಡಿಯಾದಲ್ಲಿ ಗೀಚುವವರನ್ನು ಇತಿಹಾಸ ನೆನಪಿಟ್ಟುಕೊಳ್ಳಲ್ಲ. ಪ್ರಶ್ನೆ ಕೇಳುವವರನ್ನು ಇತಿಹಾಸ ನೆನಪಿಗೆ ಇಟ್ಟುಕೊಳ್ಳಲ್ಲ. ಯಾರು ಕೆಲ್ಸ ಮಾಡ್ತಾರೆ , ಯಾರು ಉತ್ತರ ಕೊಡ್ತಾರೆ ಅವರನ್ನು ಇತಿಹಾಸ ನೆನಪಿಟ್ಟುಕೊಳ್ಳುತ್ತದೆ ಎಂದಿದ್ದಾರೆ.

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget

Ad Widget

ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget alt="Ad Widget"/>

Ad Widget

“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.

Ad Widget

Ad Widget

ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ.  ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು

ಸ್ಪರ್ಧೆಯ ಫಲಿತಾಂಶ:

ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.

ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.

Ad Widget
Continue Reading

ಶಿಕ್ಷಣ

Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



Ad Widget
Ad Widget
Continue Reading

ಬಿಗ್ ನ್ಯೂಸ್

AYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ

Published

on



Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಡಾ. ಪ್ರದೀಪ್ ನಾವೂರು ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜದ ಆರೋಗ್ಯ ಮತ್ತು ಜಾಗೃತಿಯ ದೃಷ್ಟಿಯಿಂದ ಹಲವಾರು ಉಪನ್ಯಾಸ ಹಾಗೂ ಆರೋಗ್ಯ ಸಂಬಂಧಿತ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ದೇವಸ್ಥಾನ,ದೈವಸ್ಥಾನ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಮುಂಚೂಣಿ ವ್ಯಕ್ತಿಯಾಗಿದ್ದಾರೆ.

Ad Widget

Ad Widget <> Ad Widget

ಇಂತಹ ಸಮಾಜಮುಖಿ ಹಾಗೂ ಸೇವಾಮನೋಭಾವದ ವ್ಯಕ್ತಿಯ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಬೆಂಕಿ ಹಚ್ಚಿರುವುದು ಅತ್ಯಂತ ಕಳವಳಕಾರಿ ಹಾಗೂ ಖಂಡನೀಯ ಸಂಗತಿಯಾಗಿದೆ. ವೈದ್ಯರು ಸಮಾಜದ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದು ಅವರ ಸೇವಾಕೇಂದ್ರದ ಮೇಲೆಯೇ ಇಂತಹ ಕೃತ್ಯಕ್ಕೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.



Ad Widget

ಡಾ. ಪ್ರದೀಪ್ ನಾವೂರು ಅವರು ಕೇವಲ ವೈದ್ಯರಲ್ಲ, ಸಮಾಜದ ಪ್ರತಿಯೊಬ್ಬರಿಗೂ ಅಗತ್ಯವಿರುವ ಒಬ್ಬ ಉತ್ತಮ ವ್ಯಕ್ತಿತ್ವದ ಸಮಾಜಮುಖಿ ವ್ಯಕ್ತಿ. ಅವರ ಆರೋಗ್ಯ ಸೇವೆ ಹಾಗೂ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದೆ. ಇಂತಹ ವ್ಯಕ್ತಿಯ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವುದು ಅತ್ಯಂತ ಖಂಡನೀಯ.

Ad Widget

Ad Widget

ಇದು ಸಮಾಜ ಘಾತುಕ ಕೆಲಸ .ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಕೃತ್ಯದ ಹಿಂದಿರುವ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ಅಧ್ಯಕ್ಷ ಡಾ. ಹರಿಕೃಷ್ಣ ಪಾಣಾಜೆ ಒತ್ತಾಯಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading