ರಾಷ್ಟ್ರೀಯ
Bharat Rice: ಅಕ್ಕಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರಕಾರದಿಂದ ʼಭಾರತ್ ಅಕ್ಕಿʼ ಯೋಜನೆ – ಕೇವಲ 29 ರೂ ಸಿಗುವ ಈ ಅಕ್ಕಿ ಎಲ್ಲೆಲ್ಲಿ ಸಿಗುತ್ತೆ ಗೊತ್ತೆ ?
ನವದೆಹಲಿ: ಅಕ್ಕಿ ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಘೋಷಿಸಿರುವ ಭಾರತ್ ಅಕ್ಕಿ ಯೋಜನೆಗೆ ಮಂಗಳವಾರ ಚಾಲನೆ ಸಿಕ್ಕಿದೆ. ತಲಾ 5 ಮತ್ತು 10 ಕೆಜಿ ಬ್ಯಾಗ್‌ನಲ್ಲಿ ಮಾರಾಟಮಾಡುವ ಈ ಅಕ್ಕಿಗೆ ಪ್ರತಿ ಕೆಜಿಗೆ 29 ರು. ದರ ನಿಗದಿ ಪಡಿಸಲಾಗಿದೆ. ಭಾರತ್ ಬ್ರಾಂಡ್ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡಿ ಮಾತನಾಡಿದ ಯಡಿಯೂರಪ್ಪ ಅವರು, ನಮ್ಮ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. 29 ರೂಪಾಯಿಗೆ ಕೆ.ಜಿ ಅಕ್ಕಿ, ಗೋದಿ 50ರೂ, ಹೆಸರು ಕಾಳು 90, ತೊಗರಿ ಬೇಳೆ 60 ರೂ ಕೆಜಿಗೆ ಮಾರಾಟ ಮಾಡಲಾಗ್ತಿದೆ. ಭಾರತ್ ಬ್ರಾಂಡ್ ಹೆಸರಲ್ಲಿ ಪ್ರತಿ ಕೆ.ಜಿ ಅಕ್ಕಿ 29ರೂಗೆ ನೀಡಲು ಹಸಿರು ನಿಶಾನೆ ನೀಡಲಾಗಿದೆ. ಇಂತ ಒಳ್ಳೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಹೆಮ್ಮೆ ಇದೆ. NCCF ಅಧಿಕಾರಿ ವರ್ಗಕ್ಕೆ ಧನ್ಯವಾದಗಳು ಎಂದು ತಿಳಿಸಿದರು.
ನ್ಯಾಷನಲ್ ಅಗ್ರಿ ಕಲ್ಟರಲ್ಕೋಆಪರೇಟಿವ್ ಮಾರ್ಕೆಂಟಿಂಗ್ ಫೆಡರೇಷನ್ ಆಫ್ ಇಂಡಿಯಾ (ನಾಫೆಡ್), ನ್ಯಾಷನಲ್ ಕೋಅಪರೇಟಿವ್ ಕನ್‌ಪ್ಯೂಮರ್ಸ್ ಫೆಡರೇಷನ್ ಮತ್ತು ಇ ಕಾಮರ್ಸ್‌ಗಳ ತಾಣಗಳ ಮೂಲಕ ಅಕ್ಕಿ ಮಾರಾಟ ಮಾಡಲಾಗುವುದು. ರಿಲಯನ್ಸ್, ಫ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಅಷ್ಟೇ ಅಲ್ಲದೆ ಆನ್ಲೈನ್ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದುಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ಅಕ್ಕಿ ತಲುಪಿಸಲು ಸಿದ್ಧತೆ ನಡೆದಿದೆ.
ಮೊದಲ ಹಂತದಲ್ಲಿ ಈ ಯೋಜನೆಗಾಗಿ 5 ಲಕ್ಷ ಟನ್ ಅಕ್ಕಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರ ಈಗಾಗಲೇ ಭಾರತ್ ಆಟಾವನ್ನು ಪ್ರತಿ ಕೆ.ಜಿಗೆ 27.50 ರು.ನಂತೆ ಮತ್ತು ಭಾರತ್ ದಾಲ್ (ಕಡಲೆ)ಯನ್ನು ಕೆ.ಜಿಗೆ 60 ರು.ನಂತೆ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುತ್ತಿದೆ. ಕಳೆದ ವರ್ಷ ಟೊಮೆಟೋ ಹಾಗೂ ಈರುಳ್ಳಿ ಬೆಲೆ ಗಗನಕ್ಕೆ ಏರಿದಾಗ ಕೇಂದ್ರ ಸರ್ಕಾರ ಅಗ್ಗದ ದರದಲ್ಲಿ ಜನರಿಗೆ ವಿತರಿಸಿತ್ತು
ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ಜನ ಕಂಗೆಟ್ಟಿದ್ದಾರೆ. ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಇದರ ಭಾಗವಾಗಿ ಭಾರತ್ ಅಕ್ಕಿ ಮಾರಾಟ ಯೋಜನೆಯನ್ನು ಕೇಂದ್ರ ಸರಕಾರ ಕೈಗೆತ್ತಿಕೊಂಡಿದೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಈ ಯೋಜನೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿರುವುದು ಸ್ಪಷ್ಟ
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
ಬಿಗ್ ನ್ಯೂಸ್19 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ನಿಧನ ವಾರ್ತೆ24 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ24 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ23 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
Uncategorized20 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ19 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
ಅಂತರ ರಾಜ್ಯ23 hours agoYouTuber-89 ವರ್ಷದ ವೃದ್ಧನ 5 ಸವರನ್ ಚಿನ್ನದ ಸರ ಕಳವು ಆರೋಪ; 118 ಸವರನ್ ಚಿನ್ನ ಕಳವು ಪ್ರಕರಣದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು


















