ಮಂಗಳೂರು
Daivaradhane | ಊರೇ ಖಾಲಿಯಾದ ಮಂಗಳೂರಿನ ಕೈಗಾರಿಕಾ ಪ್ರದೇಶದಲ್ಲಿ ನಡೆದ ನೇಮದಲ್ಲಿ ಜಿಲ್ಲಾಧಿಕಾರಿಯ ಮೈ ನೇವರಿಸಿದ ಪಿಲಿಚಾಮುಂಡಿ ದೈವ..!
ಮಂಗಳೂರು: ಕೈಗಾರಿಕಾ ಪ್ರದೇಶಕ್ಕೆ ಊರೇ ಖಾಲಿಯಾದರೂ ದೈವಾರಾಧನೆ (Daivaradhane) ನಿಲ್ಲದ ಮಂಗಳೂರಿನ ಬೈಕಂಪಾಡಿಯ ಕುಡುಂಬೂರಿನ ನೇಮದಲ್ಲಿ ಪಾಲ್ಗೊಂಡಿದ್ದ ದ.ಕ ಜಿಲ್ಲಾಧಿಕಾರಿಯ ಮೈಯನ್ನು ಪಿಲಿ ಚಾಮುಂಡಿ ದೈವ ನೆವರಿಸಿದೆ.
ದೈವರಾಧನೆಯ ಬಗ್ಗೆ ಅಪಾರ ಆಸಕ್ತಿ ಹೊಂದಿರುವ ಜಿಲ್ಲಾಧಿಕಾರಿ ಮುಗಿಲನ್ ಕುಡುಂಬೂರು ಪಿಲಿಚಾಮುಂಡಿ ದೈವದ ನೇಮದಲ್ಲಿ ಭಾಗಿಯಾಗಿದ್ದರು.
ದೈವಾರಾಧನೆಯ ಪ್ರತಿ ಹಂತದ ಬಗ್ಗೆ ತುಳು ವಿದ್ವಾಂಸ ದಯಾನಂದ ಕತ್ತಲೆಸಾರ್ ಬಳಿ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಪಿಲಿಚಾಮುಂಡಿ ನೇಮದ ವೇಳೆಯಲ್ಲಿ ಪಿಲಿಚಾಮುಂಡಿ ದೈವ ಡಿಸಿ ಮೈ ನೇವರಿಸಿದೆ. ಸಾಮಾನ್ಯ ಭಕ್ತರಂತೇ ನೇಮದಲ್ಲಿ ಜಿಲ್ಲಾಧಿಕಾರಿ ಪಾಲ್ಗೊಂಡಿದ್ದರು.
ಸುಮಾರು ಎಂಟು ನೂರು ವರ್ಷಗಳ ಇತಿಹಾಸ ಹೊಂದಿರುವ ಕುಡುಂಬೂರಿನಲ್ಲೇ ನೆಲೆಯಾಗಿರುವ ಪಂಚ ದೈವಗಳಿಗೆ ಧರ್ಮನೇಮ ನಡೆದಿದೆ.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
-
Uncategorized20 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್14 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು18 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized19 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ18 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ19 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ18 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್19 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















