Connect with us

ದಕ್ಷಿಣ ಕನ್ನಡ

Big Shocking : ವಿಟ್ಲ : ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ ಶಾಖೆಯಲ್ಲಿ ಭಾರೀ ಕಳ್ಳತನ ? -ಕೋಟ್ಯಾಂತರ ರೂ ಮೌಲ್ಯದ ನಗ ನಗದು ಕಳವು ಶಂಕೆ – ತಡ ರಾತ್ರಿ ಗ್ಯಾಸ್‌ ಕಟರ್‌ ಬಳಸಿ ಕೃತ್ಯ ; ಸಾರಡ್ಕ ಚೆಕ್‌ ಪೋಸ್ಟ್‌ ನ 1 ಕಿಮೀ ದೂರದಲ್ಲಿ ಕೃತ್ಯ

Published

on



Ad Widget

Ad Widget

Ad Widget

Ad Widget

ಕರ್ನಾಟಕ ಬ್ಯಾಂಕಿನ ವಿಟ್ಲ ಸಮೀಪದ ಅಡ್ಯನಡ್ಕ ಶಾಖೆಯಲ್ಲಿ ಗುರುವಾರ ನಸುಕಿನ ಜಾವ ಭಾರೀ ಕಳ್ಳತನ ನಡೆದಿದ್ದು ಕೋಟ್ಯಾಂತರ ರೂಪಾಯಿ ಮೌಲ್ಯದ ನಗ ಹಾಗೂ ನಗದನ್ನು ದೋಚಿದ್ದಾರೆ ಎನ್ನಲಾಗಿದೆ. ಅಂದಾಜು ಪ್ರಕಾರ ರೂ 2 ರಿಂದ 3 ಕೋಟಿಯಷ್ಟು ಹಣ ಮತ್ತು ಬಂಗಾರ ಕಳ್ಳರ ಪಾಲಾಗಿರುವುದಾಗಿ ಸುದ್ದಿ ಹಬ್ಬಿದ್ದು ಬ್ಯಾಂಕ್ ಹಾಗೂ ಪೊಲೀಸರು ಇದನ್ನು ಖಚಿತಪಡಿಸಿಲ್ಲ . ಸುಮಾರು ಒಂದು ಕೋಟಿ ರೂಪಾಯಿಯಷ್ಟು ನಗದು ಬ್ಯಾಂಕಿನಲ್ಲಿತ್ತು ಎನ್ನಲಾಗಿದೆ. ಅಂದಾಜು 1 ರಿಂದ 2 ಕೋಟಿಯಷ್ಟು ಚಿನ್ನಾಭರಣ ಕೂಡ ಅಲ್ಲಿದ್ದು ಅದೆಲ್ಲದಕ್ಕೆ ಕನ್ನ ಬಿದ್ದಿರುವುದಾಗಿ ಸ್ಥಳೀಯವಾಗಿ ಅಭಿಪ್ರಾಯ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

ಕೃತ್ಯವು ನಿನ್ನೆ ರಾತ್ರಿ 2.30ರಿಂದ ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕರ್ನಾಟಕ ಬ್ಯಾಂಕಿನ ಅಡ್ಯನಡ್ಕ ಶಾಖೆಯು ಕಲ್ಲಡ್ಕ ಕಾಂಜ್ಞಾಗಾಡ್‌ ಅಂತರಾಜ್ಯ ಹೆದ್ದಾರಿಯ ಅಂಚಿನಲ್ಲಿದೆ. ಇಲ್ಲಿಂದ ಒಂದು ಕಿಮೀ ದೂರದಲ್ಲಿ ಸಾರಡ್ಕ ಚೆಕ್‌ ಪೋಸ್ಟ್‌ ಇದೆ.

Ad Widget

Ad Widget

Ad Widget alt="Ad Widget"/>

Ad Widget


ಕಳ್ಳತನ ಹೇಗೆ ?
ಬ್ಯಾಂಕಿನ ಹಿಂಬಾಗಲಿನ ಕಿಟಕಿ ಮುರಿದು ಒಳ ನುಗ್ಗಿದ್ದ ಕಳ್ಳರು ಗ್ಯಾಸ್‌ ಕಟ್ಟರ್‌ ಬಳಸಿ ಸೇಫ್‌ ಲಾಕರ್‌ ನ ಬಾಗಿಲು ತುಂಡರಿಸಿ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದರೇ ಕಳ್ಳತನದ ವೇಳೆ ಬ್ಯಾಂಕಿಗೆ ಆಳವಡಿಸಿದ ಸೆಕ್ಯೂರಿಟಿ ಅಲಾರಂ ಸೈರನ್‌ ಮಾಡದಿರುವುದು ಕುತೂಹಲ ಮೂಡಿಸಿದೆ. ಬ್ಯಾಂಕಿನ ಹಿಂಬದಿಯಲ್ಲಿರುವ ಅಂಗಳದಲ್ಲಿ ವಾಹನ ನಿಲ್ಲಿಸಿಕೃತ್ಯ ಎಸಗಿ, ಬಳಿಕ ನಗ ನಗದಿನ ಜತೆ ಎಸ್ಕೆಪ್‌ ಆಗಿರಬಹುದು ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ .

Ad Widget

Ad Widget <> Ad Widget

ಇಂದು ಬೆಳಿಗ್ಗೆ 9.30 ರ ಸುಮಾರಿಗೆ ಬ್ಯಾಂಕ್‌ ಸಿಬ್ಬಂದಿಗಳು ಬ್ಯಾಂಕ್‌ ಗೆ ಬಂದ ವೇಳೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಸುಮಾರು 11 ಗಂಟೆ ಸುಮಾರಿಗೆ ವಿಟ್ಲ ಠಾಣಾ ಎಸೈ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಅದಕ್ಕೂ ಮೊದಲು ಪೊಲೀಸ್‌ ಇನ್ಸ್‌ ಪೆಕ್ಟರ್‌ ಹಾಗೂ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದರು . ಸದ್ಯ ಬ್ಯಾಂಕ್‌ ಮುಂಭಾಗ ಕುತೂಹಲಿಗಳ ಗುಂಪು ಸೇರಿದ್ದು ಬ್ಯಾಂಕ್‌ ಅವರಣವನ್ನು ಪೊಲೀಸರು ಸೀಲ್‌ ಮಾಡಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳ ಇನ್ನಷ್ಟೇ ಘಟನಾ ಸ್ಥಳಕ್ಕೆ ಬರಬೇಕಿದೆ.



Ad Widget


ಸಿಸಿಟಿವಿ
ಬ್ಯಾಂಕ್‌ ಒಳಗಡೆಯ ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದೆಯೇ ಎಂಬ ಮಾಹಿತಿ ಲಭಿಸಿಲ್ಲ . ಈಗಾಗಲೇ ಪೊಲೀಸರು ಅದನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಬ್ಯಾಂಕ್‌ ಮುಂಭಾಗ ಹಾಗೂ ಹಿಂಭಾಗ ಅಥಾವ ಹೆದ್ದಾರಿಯಲ್ಲಿ ಯಾವುದೇ ಸಿಸಿಟಿವಿ ಅಳವಡಿಸಿದಿರುವುದು ಪೊಲೀಸರ ತನಿಖೆಗೆ ತೊಡಕಾಗಿ ಪರಿಣಮಿಸಿದೆ. ಅಕ್ಕಪಕ್ಕದ ಅಂಗಡಿಗಳಲ್ಲಿ ಅಳವಡಿಸರುವ ಸಿಸಿಟಿವಿಯಲ್ಲಿ ವಾಹನದ ಚಲನವಲನದ ದೃಶ್ಯಗಳು ಸೆರೆಯಾಗಿರುವ ಸಾಧ್ಯತೆಯಿದ್ದೂ ಇದು ಪೊಲೀಸರ ತನಿಖೆಗೆ ಪ್ರಮುಖ ಸಾಕ್ಷಿಯಾಗುವ ಸಾಧ್ಯತೆಯಿದೆ.

Ad Widget

Ad Widget

ಕಳ್ಳತನ ಯತ್ನ ಮಾತ್ರ?

ಯಾವುದೇ ನಗದು ಅಥಾವ ಚಿನ್ನಾಭರಣ ಕಳ್ಳತನವಾಗಿಲ್ಲ ಎಂದು ಬ್ಯಾಂಕ್‌ ಸಿಬ್ಬಂದಿಗಳು ತಿಳಿಸಿರುವುದಾಗಿ ಕೆಲವು ಗ್ರಾಹಕರು ತಿಳಿಸಿದ್ದು ಹೀಗಾಗಿ ನಿಜವಾಗಿಯೂ ಹಣ ಮತ್ತು ನಗ ಕಳ್ಳತನವಾಗಿದೆಯೇ ? ಅಥಾವ ಕಳ್ಳರು ಕಳ್ಳತನಕ್ಕೆ ಯತ್ನಿಸಿ ವಿಫಲರಾದರೇ ಎನ್ನುವುದನ್ನು ಪೊಲೀಸ್‌ ಇಲಾಖೆ ಹಾಗೂ ಬ್ಯಾಂಕ್‌ ಖಚಿತಪಡಿಸಬೇಕಿದೆ.


ಸಾರಡ್ಕ ಚೆಕ್‌ ಪೋಸ್ಟ್‌ – ಊಟಕ್ಕಿಲ್ಲದ ಉಪ್ಪಿನಕಾಯಿ
ಕೇರಳದ ಕಾಸರಗೋಡು ಭಾಗದಿಂದ ಬಂದ ಕಳ್ಳರು ಕೃತ್ಯ ಎಸಗಿ ಪುನ: ಕೇರಳಕ್ಕೆ ಎಸ್ಕೆಪ್‌ ಆಗಿರಬಹುದೆಂಬ ದಟ್ಟ ವದಂತಿ ಸ್ಥಳೀಯವಾಗಿ ಹಬ್ಬಿದೆ. ಇದು ನಿಜವಾದರೇ , ಕಳ್ಳರು ಸಾರಡ್ಕ ಚೆಕ್‌ ಪೋಸ್ಟ್‌ ನ ಮೂಲಕವೇ ರಾಜರೋಷವಾಗಿ ಆಗಮಿಸಿ , ಅದೇ ಮಾರ್ಗದಲ್ಲಿ ನಿರ್ಭಿತಿಯಿಂದ ಪರಾರಿಯಾಗಿರುವ ಸಾಧ್ಯತೆಯೇ ಅಧಿಕ . ವರ್ಷಗಳ ಹಿಂದೆ ಇಲ್ಲಿಯೇ ಸಮೀಪದ ಕುದ್ದು ಪದವು ಪೆಟ್ರೋಲ್‌ ಬಂಕ್‌ ನಲ್ಲಿ ದರೋಡೆ ಕೃತ್ಯ ನಡೆದಿತ್ತು. ಆ ವೇಳೆಯೂ ಇದೇ ಸಾರಡ್ಕ ಚೆಕ್‌ ಫೋಸ್ಟ್‌ ನ ಮೂಲಕ ಬಂದ ದರೋಡೆಕೋರರು ಕೃತ ಎಸಗಿ ಅದೇ ಮಾರ್ಗದಲ್ಲಿ ಪರಾರಿಯಾಗಿದ್ದರು. ಆಗ ಪೊಲೀಸರು ದರೋಡೆಕೋರರು ಸಾರಡ್ಕ ಚೆಕ್‌ ಫೊಸ್ಟ್‌ ಮೂಲಕ ಬಂದಿಲ್ಲ ಎಂದು ವಾದಿಸಿದರಾದರೂ, ಬಳಿಕ ದೊರೆತ ಸಿಸಿಟಿವಿ ಫೋಟೇಜ್‌ ಸತ್ಯ ಹೊರಗೆಡವಿತ್ತು. ಸಾರಡ್ಕ ಚೆಕ್‌ ಫೋಸ್ಟ್‌ ನಲ್ಲಿ ರಾತ್ರಿ ವೇಳೆ ಸಮರ್ಪಕ ಗಸ್ತು ವ್ಯವಸ್ಥೆ ಇರುವುದಿಲ್ಲ ಎಂಬ ಆರೋಪ ಇಂದು ನಿನ್ನೆಯದಲ್ಲ. ಈ ಕುರಿತು ಹಲವು ಮಾದ್ಯಮ ವರದಿಗಳು ಪ್ರಕಟಗೊಂಡಿದ್ದರೂ ಹಿರಿಯ ಅಧಿಕಾರಿಗಳ ಅಸಡ್ಡೆ , ಇಂತಹ ಅಪರಾಧ ಕೃತಯಗಳಿಗೆ ಪ್ರೋತ್ಸಾಹ ಕೊಡುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Ad Widget
Click to comment

Leave a Reply

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Ad Widget

Ad Widget <> Ad Widget

ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.



Ad Widget

ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Continue Reading

ಅಪರಾಧ

Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.



Ad Widget

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.

ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading