ಪುತ್ತೂರು
Sathyajith Surathkal | ಲೋಕಸಭಾ ಬಿಜೆಪಿ ಟಿಕೇಟ್ ಆಕಾಂಕ್ಷಿ ಸತ್ಯಜಿತ್ ಸುರತ್ಕಲ್ ರನ್ನು ಮನೆಗೆ ಕರೆದ ಡಾ.ಪ್ರಸಾದ್ ಭಂಡಾರಿ : ರಾಜಕೀಯ ಬೆಳವಣಿಗೆ ಚರ್ಚೆ
ಪುತ್ತೂರು : ಮಂಗಳೂರಿನ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಸತ್ಯಜಿತ್ ಸುರತ್ಕಲ್ (Sathyajith Surathkal) ಇಂದು ಪುತ್ತೂರಿನಲ್ಲಿ ಸಮಾಲೋಚನಾ ಸಭೆ ಕರೆದಿದ್ದರು.

ಪುತ್ತೂರಿನ ಮನೀಶ ಸಭಾಭವನದಲ್ಲಿ ಸಮಾಲೋಚನ ಸಭೆ ಸಂಜೆ ನಡೆಯಿತು. ಸಭೆಯ ನಂತರ ಪುತ್ತೂರಿನ ಹಿರಿಯ ಹಿಂದೂ ಮುಖಂಡ ಡಾ.ಪ್ರಸಾದ್ ಭಂಡಾರಿಯ ಕರೆಯ ಮೇರೆಗೆ ಅವರ ಮನೆಯಲ್ಲಿ ಮಾತುಕತೆ ನಡೆಸಿದರು ಎಂದು ಸುರತ್ಕಲ್ ಆಪ್ತ ವಲಯ ತಿಳಿಸಿದೆ.
ಪ್ರಸಾದ್ ಭಂಡಾರಿಯವರ ಕರೆಯ ಮೇರೆಗೆ ಅವರ ಭಂಡಾರಿಯವರ ಬೊಳುವಾರಿನ ಮನೆಗೆ ತೆರಳಿದ ಸತ್ಯಜಿತ್ ಸುರತ್ಕಲ್ ಮಾತುಕತೆ ನಡೆಸಿದರು. ಈ ಪೋಟೋ ವೈರಲ್ ಆಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಕಣ ರಂಗೇರುತ್ತಿರುವಾಗ ಈ ಭೇಟಿ ಬಾರಿ ಚರ್ಚೆಗೆ ಗ್ರಾಸವಾಗಿದೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
-
ಸ್ಥಳೀಯ7 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್7 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ7 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಅಪರಾಧ5 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸಿನೆಮಾ6 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್6 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಮಂಗಳೂರು23 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
-
ಮಂಗಳೂರು2 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು


















