ದಕ್ಷಿಣ ಕನ್ನಡ
Stay on deportaion notice : ಪುತ್ತೂರು : ಹಿಂಜಾವೇ ಮುಖಂಡ ದಿನೇಶ್ ಪಂಜಿಗ ಮತ್ತು ಯಶೋಧರ ಗಡಿಪಾರು ನೋಟಿಸಿಗೆ ನ್ಯಾಯಾಲಯ ತಡೆ
ಪುತ್ತೂರು: ಹಿಂದೂ ಪರ ಸಂಘಟನೆಯಲ್ಲಿ ಸಕ್ರಿಯವಾಗಿರ ದಿನೇಶ್ ಪಂಜಿಗ ಹಾಗೂ ಯಶೋಧರ ಎಂಬವರನ್ನು ಗಡಿಪಾರು ಮಾಡುವ ಕುರಿತು ಪುತ್ತೂರು ಉಪವಿಭಾಗೀಯ ದಂಡಾಧಿಕಾರಿಗಳು ಹೊರಡಿಸಿದ ನೋಟಿಸ್‌ಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಹಿಂದೂ ಜಾಗರಣಾ ವೇದಿಕೆಯ ಮುಖಂಡರಾದ ಪುತ್ತೂರು ತಾಲೂಕಿನ ಶಾಂತಿಗೋಡು ನಿವಾಸಿ ದಿನೇಶ್ ಪಂಜಿಗ ಹಾಗೂ ಬೆಳ್ತಂಗಡಿಯ ಯಶೋಧರ ಅವರನ್ನು ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಉಪ ವಿಭಾಗೀಯ ದಂಡಾಧಿಕಾರಿಗಳು ಕೆಲ ದಿನಗಳ ಹಿಂದೆ ಅವರಿಗೆ. ನೊಟೀಸ್ ಜಾರಿಗೊಳಿಸಿದ್ದರು.
ಈ ಬಗ್ಗೆ ಸ್ವತಃ ನ್ಯಾಯವಾದಿಗಳ ಮೂಲಕ ಉಪ ವಿಭಾಗೀಯ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಿ ವಾದಿಸಲು ಸೂಚಿಸಲಾಗಿತ್ತು. ಇದನ್ನು ಪ್ರಶ್ನಿಸಿ ಆಪಾದಿತರಾದ ದಿನೇಶ್ ಪಂಜಿಗ ಮತ್ತು ಯಶೋಧರ ಅವರು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಇದೀಗ ನ್ಯಾಯಾಲಯ ಗಡಿಪಾರು ನೋಟಿಸ್ ಗೆ ತಡೆಯಾಜ್ಞೆ ನೀಡಿದೆ ಹಾಗೂ ಆರೋಪಿಗಳ ವಿರುದ್ಧ ದಾಖಲಿಸಿದ ಎಲ್ಲ ಕಡತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದೆ. ಅರ್ಜಿದಾರರ ಪರವಾಗಿ ಪುತ್ತೂರಿನ ನ್ಯಾಯವಾದಿ ಮಹೇಶ್ ಕಜೆ ವಾದಿಸಿದ್ದರು.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
-
Uncategorized18 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized20 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು23 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ22 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ23 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್22 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ23 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
Uncategorized6 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ


















