ದಕ್ಷಿಣ ಕನ್ನಡ
Karnataka bank locker break case : ಅಡ್ಯನಡ್ಕ ಬ್ಯಾಂಕ್ ಲಾಕರ್ ಬ್ರೇಕ್ ಪ್ರಕರಣ : ಚುರುಗುಗೊಂಡ ತನಿಖೆ- ಇಬ್ಬರು ಪೊಲೀಸರ ವಶ ? ಸಿಸಿಟಿವಿ ದೃಶ್ಯ ವಿಧಿವಿಜ್ಞಾನ ಪ್ರಯೋಗಾಲಕ್ಕೆ ರವಾನೆ – ಕೋಟೆ ಕೊಳ್ಳೆ ಹೊಡೆದು ಹೋದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದ ಬ್ಯಾಂಕ್
ವಿಟ್ಲ: ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯ ಲಾಕರ್ ಬ್ರೇಕ್ ಪ್ರಕರಣದಲ್ಲಿ ಪೊಲೀಸರು ಸರಿಯಾದ ಸುಳಿವು ಸಿಗದೇ ಹರ ಸಾಹಸ ಪಡುತ್ತಿದ್ದು, ಎರಡು ತನಿಖಾ ತಂಡ ಕೇರಳಕ್ಕೆ ತೆರಳಿ ಕಳ್ಳರಿಗಾಗಿ ಹುಡುಕಾಟ ನಡೆಸುತ್ತಿದೆ. ಮೂಲಗಳಿಂದ ಲಭಿಸಿದ ಮಾಹಿತಿ ಪ್ರಕಾರ ಸ್ಥಳೀಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳ ಪಡಿಸಿದ್ದಾರೆ. ಅವರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರ ತಂಡ ಕೇರಳಕ್ಕೆ ತೆರಳಿದೆ ಎನ್ನಲಾಗಿದೆ. ಇನ್ನು ಪೊಲೀಸ್ ವಶದಲ್ಲಿರುವವರು ಕೃತ್ಯದಲ್ಲಿ ನೇರವಾಗಿ ಭಾಗಿಯಾದವರೇ? ಪರೋಕ್ಷವಾಗಿ ಭಾಗವಹಿಸಿದವರೇ ಅಥಾವ ಕಳ್ಳರ ಗ್ಯಾಂಗಿನ ಪರಿಚಿತರೇ ಎನ್ನುವುದು ಖಚಿತಗೊಂಡಿಲ್ಲ.
ದೊಡ್ಡ ಪ್ರಮಾಣದಲ್ಲಿ ನಗ ನಗದನ್ನು ಹೊಂದಿದ್ದ ಸಾರ್ವಜನಿಕ ಸಂಸ್ಥೆಯೊಂದರಲ್ಲಿ ಲಾಕರ್ ಬ್ರೇಕ್ ನಂತಹ ಗಂಭೀರ ಪ್ರಕರಣ ನಡೆದರೂ, ಬ್ಯಾಂಕ್ ಹಾಗೂ ಪೊಲೀಸ್ ಇಲಾಖೆ ಆ ಕುರಿತ ಅಗತ್ಯ ಮಾಹಿತಿಯನ್ನು ಬಹಿರಂಗ ಪಡಿಸದೇ ಗೌಪ್ಯವಾಗಿ ಇಟ್ಟಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಅನುಮಾನ ಮೂಡಿಸಿದೆ. ಬ್ಯಾಂಕ್ ಗೆ ಕನ್ನ ಹಾಕಿದ ಕಳ್ಳರ ಗ್ಯಾಂಗ್ ಅಂದಾಜು 50 ಲಕ್ಷದಷ್ಟು ನಗದು ಹಾಗೂ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ದೋಚಿದ್ದಾರೆ ಎಂಬ ಸುದ್ದಿ ಸಾರ್ವತ್ರಿಕವಾಗಿ ಹರಡಿದೆ.ಆದರೇ ಪೊಲೀಸ್ ಇಲಾಖೆಯಾಗಲಿ ಅಥಾವ ಬ್ಯಾಂಕ್ ಆಗಲಿ ಈ ಕುರಿತ ನಿಖರ ಅಂಕಿ ಅಂಶ ನೀಡಿಲ್ಲ .

ಬ್ಯಾಂಕಿನ ಪ್ರತಿಷ್ಠೆಗೆ ಪೆಟ್ಟು
ಸಾಮಾನ್ಯವಾಗಿ ಈ ರೀತಿಯ ವಿಚಾರಗಳು ದೂರಿನ ಪ್ರತಿಯಲ್ಲಿ ಅಥಾವ FIR ನಲ್ಲಿ ನಮೊದಿಸುವುದು ವಾಡಿಕೆ . ಆದರೇ ದೂರು ನೀಡಿದ ಶಾಖಾ ಪ್ರಭಂದಕರು ಪರಿಶೀಲನೆ ಬಳಿಕ ಮಾಹಿತಿ ಒದಗಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ಬ್ಯಾಂಕ್ ನ ತಿಜೋರಿಯಲ್ಲಿ ಗ್ರಾಹಕರ ವ್ಯಯುಕ್ತಿಕ ಲಾಕರ್ ಗಳಲ್ಲಿದ್ದ ಚಿನ್ನಾಭರಣಕ್ಕೆ ಕನ್ನ ಬಿದ್ದಿದೆ ಹಾಗೂ ಬ್ಯಾಂಕಿನಲ್ಲಿ ಗ್ರಾಹಕರು ಅಡಮಾನವಿರಿಸಿದ ಚಿನ್ನವನ್ನು ದೋಚಲಾಗಿದೆ ಎಂಬ ಪುಕಾರು ಹಬ್ಬಿದೆ. ಸಾರ್ವಜನಿಕರ ಅನುಮಾನ ನಿವಾರಿಸುವ ಕಾರ್ಯವನ್ನು ಬ್ಯಾಂಕ್ ಅಥಾವ ಪೊಲೀಸರು ಮಾಡಬೇಕಿದೆ. ಇನ್ನೂ ಬ್ಯಾಂಕ್ ಶಾಖೆಯಲ್ಲಿದ್ದ ಸಾರಡ್ಕ ರಾಮ ಭಟ್, ನೆಗಳಗುಳಿ ಶ್ರೀಪತಿ ಭಟ್ ಅವರ ವೈಯಕ್ತಿಕ ಲಾಕರ್ ಗಳು ತೆರೆಯಲ್ಪಟ್ಟಿದೆ ಎಂದು ತಿಳಿದು ಬಂದಿದೆ. ವೈಯುಕ್ತಿಕ ಲಾಕರ್ ಗೆ ಕನ್ನ ಬಿದ್ದಿರುವುದು ಬ್ಯಾಂಕಿನ ಪ್ರತಿಷ್ಠೆಗೆ ಪೆಟ್ಟು ಬಿದ್ದಿದೆ.

ಕೋಟೆ ಕೊಳ್ಳೆ ಹೊಡೆದು ಹೋದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದ ಬ್ಯಾಂಕ್

ಕೋಟೆ ಕೊಳ್ಳೆ ಹೊಡೆದು ಹೋದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು ಎಂಬಂತೆ ಕಳ್ಳರು ಕೋಟ್ಯಾಂತರ ರೂಪಾಯಿ ದೋಚಿದ ಬಳಿಕ ಎಚ್ಚೆತ್ತುಕೊಂಡಿರುವ ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯನ್ನು ಸದೃಢಗೊಳಿಸುವ ಕಾರ್ಯದಲ್ಲಿ ತೊಡಗಿದ್ದು. ರಜಾ ದಿನವಾದ ಶನಿವಾರ ಹಾಗೂ ಭಾನುವಾರವು ನಡೆಯುತ್ತಿದೆ. ಕಳ್ಳರು ನುಗ್ಗಿದ ಬ್ಯಾಂಕ್ ಹಿಬ್ಬಂದಿಯಲ್ಲಿದ್ದ ಕಿಟಕಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಬಟ್ಟೆ ಮುಚ್ಚಿ ಸ್ಥಳಾಂತರ
ಗುರುವಾರ ( ಫೆ 8) ಬೆಳಿಗ್ಗೆ ಕಳ್ಳತನ ಕೃತ್ಯ ಬೆಳಕಿಗೆ ಬಂದಿದ್ದು, ಅದಾದ ಕೆಲ ಗಂಟೆಗಳ ಕಾಲ ವಿಧಿವಿಜ್ಞಾನ ತಜ್ಞರು ಬೆರಳಚ್ಚು ಸಹಿತ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿದರು. ಬಳಿಕ ಪೊಲೀಸರು ಸ್ಥಳ ಮಹಜರು ನಡೆಸಿದರು. ಇದಾದ ಬಳಿಕ ಸಂಜೆ ಹೊತ್ತಿಗೆ ಕಳ್ಳರು ಹಾನಿ ಮಾಡಿದ ಸ್ಟ್ರಾಂಗ್ ಹಾಗೂ ಸೇಫ್ ಲಾಕರು ಹಾಗೂ ಬೀರುಗಳನ್ನು ಸ್ಥಳಾಂತರಿಸುವ ಕಾರ್ಯ ತಡ ರಾತ್ರಿಯವರೆಗೆ ನಡೆಯಿತು. ಈ ವೇಳೆ ಕಳ್ಳರು ಬ್ಯಾಂಕ್ ಲಾಕರ್ ಅನ್ನು ಛೇಧಿಸಿದ್ದು ಸಾರ್ವಜನಿಕರ ಗಮನಕ್ಕೆ ಬಾರದಂತೆ, ಲಾಕರ್ ನ್ನು ಹಾನಿಯಾದ ಜಾಗಕ್ಕೆ ಬಟ್ಟೆ ಮುಚ್ಚಿ ರಾತ್ರೋರಾತ್ರಿ ಸ್ಥಳಾಂತರಿಸಲಾಗಿದೆ. ಈ ಹಾನಿಯಾದ ಲಾಕರ್ ಹಾಗೂ ಸ್ಟ್ರಾಂಗ್ ರೂಂ ಬಾಗಿಲುಗಳನ್ನು ಪೊಲೀಸರು ಮುಂದಿನ ದಿನಗಳಲ್ಲಿ ಪ್ರಮುಖ ಸಾಕ್ಷಿಯಾಗಿ ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆಯಿದೆ.

ಸಿಸಿಟಿವಿ ದೃಶ್ಯ ವಿಧಿವಿಜ್ಞಾನ ಪ್ರಯೋಗಾಲಕ್ಕೆ
ಕಳ್ಳರ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಂದ ನಿಯೋಜಿಸಲ್ಪಟ್ಟ ವಿಶೇಷ ತನಿಖಾ ತಂಡ ಪರಿಸರದಲ್ಲಿರುವ ಎಲ್ಲಾ ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು ಸಂಗ್ರಹಿಸಿದೆ . ಕತ್ತಲಿನಲ್ಲಿ ಚಿತ್ರಿಕರಣವಾದ ಹಿನ್ನಲೆಯಲ್ಲಿ ದೃಶ್ಯವಾಳಿಗಳು ಅಸ್ಪಷ್ಟವಾಗಿದ್ದು, ಹೀಗಾಗಿ ಶಂಕಿತ ವಾಹನದ ಚಿತ್ರವನ್ನು ಇನ್ನಷ್ಟು ಸ್ಪಷ್ಟವಾಗಿ ಪಡೆಯಲು ಪೊಲೀಸ್ ಇಲಾಖೆ ವಿಧಿವಿಜ್ಞಾನ ಪ್ರಯೋಗಾಲಯದ ಮೊರೆ ಹೋಗಿದೆ ಎಂದು ಮೂಲಗಳು ತಿಳಿಸಿವೆ.
ಮಾಹಿತಿ ಸಂಗ್ರಹ
ಬ್ಯಾಂಕ್ ನ ಹಿಂಭಾಗದಲ್ಲಿ ಕಿಟಕಿ ಇರುವುದು ಮೇಲ್ನೋಟಕ್ಕೆ ಗೋಚರವಾಗುವುದಿಲ್ಲ. ಹಳೆಯ ಆರೋಗ್ಯ ಕೇಂದ್ರದ ಕಟ್ಟಡದ ಬದಿಯಿಂದ ಅಡ್ಯನಡ್ಕ ಪೇಟೆಯಿಂದ ಉಳಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಕಾಲು ದಾರಿಯಿದೆ., ಕಳ್ಳರು ಈ ದಾರಿಯಲ್ಲಿ ಓಡಾಡಿ ಬ್ಯಾಂಕ್ ನ ಸಮಗ್ರ ಮಾಹಿತಿಯನ್ನು ಕಲೆ ಹಾಕಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕಳೆದ ಒಂದು ತಿಂಗಳಿನಿಂದ ಈ ಪರಿಸರದಲ್ಲಿ ಅನುಮಾನಸ್ಪದವಾಗಿ ಓಡಾಟ ನಡೆಸಿದವರ ಮಾಹಿತಿ ಕಲೆ ಹಾಕುವ ಕಾರ್ಯವನ್ನು ಪೊಲೀಸರ ತಂಡ ಮಾಡುತ್ತಿದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
-
Uncategorized18 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized20 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು23 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ22 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ23 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್22 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ22 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
Uncategorized6 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ


















