ರಾಷ್ಟ್ರೀಯ
ಲೋಕಸಭಾ ಚುನಾವಣೆ ಹಿನ್ನಲೆ ನಾಳೆಯಿಂದ ಬಿಜೆಪಿ ನಡೆಸಲಿದೆ ಮಹತ್ವದ ಯಾತ್ರೆ -30 ದಿನ ಹಳ್ಳಿಗಳಲ್ಲಿ ಸಾಧನೆಗಳ ಪ್ರಚಾರ
ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ದೇಶಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಇದೇ 12ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿದ್ದಾರೆ.
ಶನಿವಾರಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ ಫೆ. 12ರಂದು ಉತ್ತರ ಪ್ರದೇಶದ ಹಳ್ಳಿ ಯೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಗ್ರಾಮ ಪರಿಕ್ರಮ ಯಾತ್ರೆ ಯನ್ನು ಉದ್ಘಾಟಿಸಲಿದ್ದಾರೆ.
ದೇಶದ ಎಲ್ಲ ಬಿಜೆಪಿ ಸಂಘಟನಾತ್ಮಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉದ್ಘಾಟನೆ ನೆರವೇರಲಿದೆ. ಎಲ್‌ಇಡಿ ಮೂಲಕ ರಾಷ್ಟ್ರೀಯ ಅಧ್ಯಕ್ಷರ ಉದ್ಘಾಟನೆ ಕಾರ್ಯಕ್ರಮದ ಪ್ರಸಾರ ಇರಲಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷರಾಜ್‌ಕುಮಾರ್
ಚಾಹರ್‌ಅವರು ಗ್ರಾಮ ಪರಿಕ್ರಮ ಯಾತ್ರೆ ಹಮ್ಮಿಕೊಳ್ಳಲು ತಿಳಿಸಿದ್ದು, ರಾಜ್ಯದ 4-5 ನಗರ ಪ್ರದೇಶ ಹೊರತುಪಡಿಸಿ ರಾಜ್ಯದ 32 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರೈತ ಮೋರ್ಚಾದ ಪದಾಧಿಕಾರಿಗಳು ಸೇರಿ ಎಲ್ಲ ಹಂತದ ಜನ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
30 ದಿನ ಹಳ್ಳಿಗಳಲ್ಲಿ ಸಾಧನೆಗಳ ಪ್ರಚಾರ
ಕಾರ್ಯಕ್ರಮ ಪ್ರಾರಂಭಕ್ಕೆ ಮೊದಲು ಗೋಪೂಜೆ ಮಾಡಲಾಗುವುದು. 30 ದಿನಗಳ ಕಾಲ ಪರಿಕ್ರಮ ಯಾತ್ರೆ ಇರುತ್ತದೆ. ಪ್ರತಿದಿನ ಪ್ರತಿ ಜಿಲ್ಲೆಯ 5 ಹಳ್ಳಿಗಳಿಗೆ ಪ್ರವಾಸ ಮಾಡಲಾ ಗುವುದು. ಭವಿಷ್ಯದಲ್ಲಿ ನಮ್ಮ ಸರ್ಕಾರದ ಯೋಜನೆ ಮತ್ತು ಪಕ್ಷದ ಪ್ರಣಾಳಿಕೆ ರೂಪಿಸು ವಲ್ಲಿ ರೈತರ ಸಲಹೆಗಳನ್ನು ಅಳವಡಿಸಿ ಕೊಳ್ಳುವುದೇ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ಈ ವೇಳೆ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷರುದ್ರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಾಷ್ಟ್ರೀಯ
Cancer-ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಶೇ.70ರಷ್ಟು ಇಳಿಕೆ ಸಾಧ್ಯತೆ..! MRP ಮೇಲಿನ ಲಾಭಾಂಶ ಮಿತಿಗೆ ಕೇಂದ್ರ ಚಿಂತನೆ
ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬ್ರಾಂಡೆಡ್, ಜೆನೆರಿಕ್ ಔಷಧಿಗಳಿಗೂ ಅನ್ವಯ
ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ (ನಾನ್-ಶೆಡ್ಯೂಲ್ಡ್) ಕ್ಯಾನ್ಸರ್ ಔಷಧಿಗಳಿಗೆ ಈ ಮಿತಿಯನ್ನು ಅನ್ವಯಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ಆಮದು ಮಾಡಿಕೊಳ್ಳುವ ಕ್ಯಾನ್ಸರ್ ಔಷಧಿಗಳೂ ಇದರ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.
ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿ, ಸಾಮಾನ್ಯ ಜನರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತಾವಿತ ಬೆಲೆ ನಿಯಂತ್ರಣ ಜಾರಿಯಾದರೆ ಕ್ಯಾನ್ಸರ್ ಔಷಧಿಗಳ ಗರಿಷ್ಠ ಮಾರಾಟ ದರದಲ್ಲಿ ಶೇ.70ರಷ್ಟು ಇಳಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಇದರಿಂದ ಗ್ರಾಹಕರಿಗೆ ಒಟ್ಟಾರೆ ಸುಮಾರು ₹2,500 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.
ಅಂತಿಮ ನಿರ್ಧಾರದ ನಿರೀಕ್ಷೆ
ಕ್ಯಾನ್ಸರ್ ಔಷಧಿಗಳ ಮಾರಾಟದ ಮೇಲಿನ ಲಾಭಾಂಶಕ್ಕೆ ಮಿತಿ ವಿಧಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು ಪರಿಶೀಲನೆ ನಡೆಸಲು ಕ್ಯಾನ್ಸರ್ ತಜ್ಞರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಮುಂದಿನ ದಿನಗಳಲ್ಲಿ ಈ ಬೆಲೆ ನಿಯಂತ್ರಣ ಕ್ರಮವನ್ನು ಇನ್ನಷ್ಟು ಕ್ಯಾನ್ಸರ್ ಔಷಧಿಗಳು ಹಾಗೂ ಇತರ ಔಷಧಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಸ್ತಾವನೆ ಜಾರಿಯಾದರೆ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಬಹುದು. ಆದರೆ ಬೆಲೆ ಇಳಿಕೆಯ ಪ್ರಮಾಣ ಹಾಗೂ ಕ್ರಮ ಜಾರಿಯಾಗುವ ದಿನಾಂಕದ ಕುರಿತು ಅಧಿಕೃತ ಘೋಷಣೆ ಹೊರಬಿದ್ದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
-
ಮಂಗಳೂರು10 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ14 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ16 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್16 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್8 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ9 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು9 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ16 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು


















