ಮಂಗಳೂರು
ಮಂಗಳೂರು : ಶ್ರೀರಾಮನ ಅವಹೇಳನ ಪ್ರಕರಣ : ಶಾಸಕ ಕಾಮತ್ ಭರತ್ ಶೆಟ್ಟಿ ಹಿಂದೂ ಪರ ಸಂಘಟನೆ ಹಾಗೂ ಪೋಷಕರ ಪ್ರತಿಭಟನೆಗೆ ಮಣಿದ ಸಂತ ಜೆರೋಸಾ ಶಿಕ್ಷಣ ಸಂಸ್ಥೆ – ಶಿಕ್ಷಕಿ ಸಿಸ್ಟರ್ ಪ್ರಭಾ ವಜಾ
ಮಂಗಳೂರು, ಫೆ.12: ಶ್ರೀರಾಮ ದೇವರಿಗೆ (Sri Ram)ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಸಂತ ಜೆರೋಸಾ ಶಾಲೆಯ (St Gerosa School) ಶಿಕ್ಷಕಿ ಸಿಸ್ಟರ್ ಪ್ರಭಾರವರು ಅವಮಾನಿಸಿದ್ದಾರೆಂದು ಆರೋಪಿಸಿ ಬಿಜೆಪಿ ಹಾಗೂ ಹಿಂದೂತ್ವಾದಿ ಸಂಘಟನೆಗಳು ನಡೆಸಿದ ಪ್ರತಿಭಟನೆಗೆ ಮಣಿದ ಶಾಲಾ ಆಡಳಿತ ಮಂಡಳಿ ಆ ಶಿಕ್ಷಕಿಯನ್ನು ವಜಾಗೊಳಿಸಿ ಆದೇಶಿಸಿದೆ.
ಕೆಲ ದಿನಗಳ ಹಿಂದೆ ಶಿಕ್ಷಕಿ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಮತ್ತು ಶ್ರೀರಾಮ ದೇವರ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಪೋಷಕರಲ್ಲಿ ತಿಳಿಸಿದ್ದರು. ನಂತರ ಇದು ವಿವಾದದ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳು, ರಾಜಕೀಯ ಮುಖಂಡರು, ಪೋಷಕರು ಆಕ್ರೋಶ ವ್ಯಕ್ತಪಡಿಸಿ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು
ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ (Vedavyas Kamath) ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ. ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ಅವರನ್ನು ವಜಾಗೊಳಿಸಬೇಕು ಎಂದುಸೋಮವಾರ ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡರು.
ಹಿಂದೂ ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಶಾಲೆಯ ಮುಂಭಾಗ ಜಮಾವಣೆಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಈ ವೇಳೆ ಶಾಸಕ ವೇದವ್ಯಾಸ ಕಾಮತ್ ಸ್ಥಳದಲ್ಲಿದ್ದ ಬಿಇಒ ಹಾಗೂ ಡಿಡಿಪಿಐ ಅವರನ್ನು ತರಾಟೆಗೆ ತೆಗೆದುಕೊಂಡರು. ಕಚೇರಿಗೆ ಕರೆಸಿ ತನಿಖೆ ಮಾಡುವುದು ಬಿಟ್ಟು ನೀವೇ ಶಾಲೆಗೆ ಬಂದು ತನಿಖೆ ಮಾಡೋದು ಸರಿಯಾ ಎಂದು ಆಕ್ಷೇಪಿಸಿದರು. ಬಳಿಕ ಶಾಲಾವರಣದ ಒಳಗೆ ತೆರಳಿದ ವೇದವ್ಯಾಸ ಕಾಮತ್, ಮುಖ್ಯ ಶಿಕ್ಷಕಿ ಮತ್ತು ಶಾಲಾಡಳಿತ ಪ್ರಮುಖರನ್ನು ತರಾಟೆಗೆ ತೆಗೆದುಕೊಂಡರು. ಗೇಟ್ ಮುರಿದು ಒಳ ಬರಲು ಜನರಿಗೆ ಎಷ್ಟು ಹೊತ್ತಿದೆ? ಎತ್ತಿದೆ? ಹಿಂದೂ 8 ಧರ್ಮ ಅವಹೇಳನ ಮಾಡುವುದು ಎಷ್ಟು ಸರಿ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದರು.
ಪ್ರತಿಭಟನೆ ತೀವ್ರತೆ ಪಡೆಯುತ್ತಿರುವುದನ್ನು ಮನಗಂಡ ಶಾಲಾಡಳಿತ ಮಂಡಳಿಯವರು ಏಳನೇ ತರಗತಿ ಶಿಕ್ಷಕಿ ಪ್ರಭಾ ಅವರನ್ನು ವಜಾಗೊಳಿಸಿ ಆದೇಶ ಹೊರಡಿಸಿದರು. ಆದೇಶಪತ್ರ ಹಿಡಿದು ಹೊರಬಂದ ಶಾಲೆಯಪ್ರಮುಖರು, ಪೋಷಕರ ಎದುರು ಅದನ್ನು ಓದಿಹೇಳಿದರು. ಆದರೆ ಆದೇಶದಲ್ಲಿ ತಪ್ಪು ಒಪ್ಪಿಕೊಂಡಿಲ್ಲ. ತಪ್ಪು ಒಪ್ಪಿಕೊಳ್ಳದಿದ್ದರೆ ಬಿಡಲ್ಲ ಎಂದು ಶಾಸಕ ಕಾಮತ್ ಎಚ್ಚರಿಕೆ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮತ್ತು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಥಳಕ್ಕಾಗಮಿಸಿ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
ಇದಕ್ಕೂ ಮೊದಲು, ವಜಾ ಆದೇಶ ಹೊರಡಿಸಿದ ಬಳಿಕ ಶಾಲೆ ವಿದ್ಯಾರ್ಥಿಗಳು, ಪೋಷಕರು ಶಾಲೆ ಎದುರು ಕುಣಿದು ಸಂಭ್ರಮಾಚರಣೆ ಮಾಡಿದರು. ಹಿಂದೂ ಸಂಘಟನೆ ಮುಖಂಡರು ಇದ್ದರು. ಈ ಪ್ರಕರಣದ ಕುರಿತು ಶಿಕ್ಷಣ ಇಲಾಖೆ ಆಂತರಿಕ ತನಿಖೆ ನಡೆಸಲಿದೆ. ಇದರ ವರದಿ ಆಧಾರದ ಮೇಲೆ ಪೊಲೀಸ್ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ.
ಡಿಡಿಪಿಐ ಕಚೇರಿಗೆ ಮುತ್ತಿಗೆ ಯತ್ನ
ಶಾಲೆ ಎದುರು ಪ್ರತಿಭಟನೆ ನಡೆಸುವ ಮೊದಲು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಪೋಷಕರು ಜಿಲ್ಲಾ ಪಂಚಾಯಾತ್ ನಲ್ಲಿರುವ ಡಿಡಿಪಿಐ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಮುಖ್ಯದ್ವಾರವನ್ನು ಬಂದ್ ಮಾಡಿ ಪ್ರತಿಭಟನಾಕಾರರನ್ನು ತಡೆದರು. ಧರ್ಮ ನಿಂದನೆ ಮಾಡಿದ ಶಿಕ್ಷಕಿಯನ್ನು ವಜಾಮಾಡಿ, ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು
. ಸ್ಥಳಕ್ಕಾಗಮಿಸಿದ ಬಿಜೆಪಿ ಶಾಸಕ ಭರತ್ ಶೆಟ್ಟಿ, ಜಿಪಂ ಗೇಟ್ ಬಳಿ ಆಗಮಿಸಿದ ಡಿಡಿಪಿಐ ದಯಾನಂದ ನಾಯ್ಕ ಅವರನ್ನು ತರಾಟೆಗೆ ತೆಗೆದುಕೊಂಡರು. ಮಂಗಳವಾರ ಸಂಜೆಯೊಳಗೆ ಕ್ರಮ ಕೈಗೊಳ್ಳದಿದ್ದರೆ ಬುಧವಾರ ಜಿಲ್ಲಾದ್ಯಂತ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು. ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸರ್ಕಾರ ಶಾಲೆ ಮತ್ತು ಶಿಕ್ಷಕಿಯನ್ನು ರಕ್ಷಿಸುವ ಕೆಲಸ ಮಾಡಿದರೆ ಹಿಂದೂ ಸಮಾಜ ತಿರುಗಿ ಬೀಳಲಿದೆ. ಮೊದಲು ವಜಾಗೊಳಿಸಿ ನಂತರ ತನಿಖೆ ಮಾಡಿ ಎಂದು ಆಗ್ರಹಿಸಿದರು. ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ಮತ್ತಿತರರು ಇದ್ದರು.
ಡಿಪಿಐಗೆ ಶಾಸಕ ಕಾಮತ್ ಕಿವಿಮಾತು
ಜೆರೋಸಾ ಶಾಲೆಯ ಗೇಟ್ ಬಳಿ ಶಾಸಕ ವೇದವ್ಯಾಸ ಕಾಮತ್ ಶಿಕ್ಷಣ ಇಲಾಖೆ ಡಿಡಿಪಿಐ ದಯಾನಂದ ನಾಯ್ಕ್ ಜತೆ ಮಾತನಾಡಿ, ಶಿಕ್ಷಕಿಯನ್ನು ರಕ್ಷಿಸುವ ಕೆಲಸ ಯಾರೂ ಮಾಡಬಾರದು. ಪ್ರಕರಣ ಇತ್ಯರ್ಥವಾಗುವ ತನಕ ಅಧಿವೇಶನಕ್ಕೆ ಹೋಗಲ್ಲ. ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟಕ್ಕೆ ಸಿದ್ದ. ಇದಕ್ಕೆಲ್ಲನೇರ ಹೊಣೆ ಶಿಕ್ಷಣ ಇಲಾಖೆ, ಪೋಲಿಸ್ ಇಲಾಖೆ ಎಂದರು.
ಡಿಡಿಪಿಐಗೆ ಶಾಸಕರ ಕ್ಲಾಸ್
ಶಾಸಕ ಡಾ. ವೈ. ಭರತ್ ಶೆಟ್ಟಿ ಮಾತನಾಡಿ, “ನಾನು ಕೂಡ ಕಾಲೇಜೊಂದರಲ್ಲಿ ಪ್ರಿನ್ಸಿಪಾಲ ಆಗಿದ್ದವ. ಸಣ್ಣ ಮಕ್ಕಳ ತಲೆ ಕೆಡಿಸುವ ಕೆಲಸ ಶಿಕ್ಷಕರು ಮಾಡಬಾರದು. ನಾನು ಶಾಸಕನಾಗಿ ಅಲ್ಲ, ಒಬ್ಬ ಹಿಂದೂವಾಗಿ ಈಪ್ರತಿಭಟನೆಯಲ್ಲಿ ಭಾಗಿಯಾಗಿದ್ದೇನೆ. ಬಾಬರಿ ಮಸೀದಿ, ರಾಮ ಮಂದಿರ ಬಗ್ಗೆ ಇವರಿಗೆ ಯಾಕೆ? ಈ ಶಿಕ್ಷಕರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ಶಾಲಾ ಆಡಳಿತ ಮಂಡಳಿ ಹೇಳಿದ್ದೇನು ?
“ನಮ್ಮ ಸಂಸ್ಥೆಯು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಈಗ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಸಿಸ್ಟರ್ ಪ್ರಭಾ ಅವರನ್ನು ಈ ಕ್ಷಣದಿಂದ ಸಂಸ್ಥೆಯಿಂದ ವಜಾಗೊಳಿಸಿ ಅವರ ಸ್ಥಾನಕ್ಕೆ ಮತ್ತೊಬ್ಬ ಶಿಕ್ಷಕರನ್ನು ನೇಮಕ ಮಾಡಲಾಗಿದೆ” ಎಂದು ಶಾಲೆಯ ಮುಖ್ಯ ಶಿಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಜಿಲ್ಲಾಮಟ್ಟದ ಅಧಿಕಾರಿಗಳಿಂದ ನಡೆಯುತ್ತಿರುವ ತನಿಖೆ ಪಾರದರ್ಶಕತೆಯಿಂದ ಕೂಡಿರಲು ನಮ್ಮ ಸಹಕಾರ ತೆಗೆದುಕೊಳ್ಳಲಾಗಿದೆ. ನಾವು ತನಿಖೆಯ ಅಂತಿಮ ಆದೇಶಕ್ಕೆ ಬದ್ಧರಾಗಿರುತ್ತೇವೆ ಮತ್ತು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರಿಂದ ಇದೇ ರೀತಿ ಸಹಕಾರ ನಿರೀಕ್ಷಿಸುತ್ತೇವೆ” ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
“60 ವರ್ಷಗಳ ಇತಿಹಾಸವಿರುವ ಶಾಲೆಯ ಈವರೆಗೆ ಇಂತಹ ಘಟನೆ ನಡೆದಿಲ್ಲ. ನಾವು ಸಾಂವಿಧಾನಿಕ ಸಿದ್ಧಾಂತಗಳಿಗೆ ಬೆಲೆ ಕೊಟ್ಟು ಮತ್ತು ಅವುಗಳಿಗೆ ಬದ್ಧರಾಗಿರುತ್ತೇವೆ. ಈ ದುರದೃಷ್ಟಕರ ಘಟನೆ ನಮ್ಮ ಮಧ್ಯೆ ತಾತ್ಕಾಲಿಕ ಅಪನಂಬಿಕೆಯನ್ನು ಸೃಷ್ಟಿಸಿದ್ದು, ನಮ್ಮ ಈ ನಡೆಯು ನಂಬಿಕೆಯ ಪುನಃನಿರ್ಮಿಸುವುದಕ್ಕೆ ಸಹಕಾರಿಯಾಗಲಿದೆ” ಎಂದು ಮುಖ್ಯ ಶಿಕ್ಷಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏನಿದು ಪ್ರಕರಣ?
ಮಂಗಳೂರಿನ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಮಕ್ಕಳಲ್ಲಿ ಶಿಕ್ಷಕಿ ಶಾಲಾ ಮಕ್ಕಳಿಗೆ ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನಕಾರಿ ಬೋಧನೆ ಮಾಡಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ಧರ್ಮ ವಿರೋಧಿ ಭಾವನೆಯನ್ನು ಮೂಡಿಸಲು ಯತ್ನ ಮಾಡಲಾಗಿದ್ದಾರೆ. ಅಲ್ಲದೆ ಅವಹೇಳನದ ವಿರುದ್ಧ ಧ್ವನಿ ಎತ್ತಿ ಪ್ರತಿಭಟಿಸಲು ನಿರ್ಧರಿಸಿದ್ದು, ಎಲ್ಲಾ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲಾ ಆವರಣದಲ್ಲಿ ಸೇರುವಂತೆ ಸಂದೇಶ ರವಾಸಿದ ಆಡಿಯೋ ವೈರಲ್ ಆಗಿತ್ತು.
ಅದರಂತೆ, ವಿದ್ಯಾರ್ಥಿಗಳ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲಾ ಆವರಣದಲ್ಲಿ ಜಮಾಯಿಸಿ ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ, ಆಡಳಿತ ಮಂಡಳಿ ಜೊತೆ ಮಾತನಾಡಿ ತೆರಳುವ ವೇಳೆ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಐವನ್ ಡಿಸೋಜಾ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು.
ವಿದ್ಯಾರ್ಥಿಗಳಿಗೆ ಹಿಂದೂ ದೇವರ ಮೇಲಿನ ನಂಬಿಕೆ ಹೋಗುವಂತೆ ಕ್ರೈಸ್ತ ಮತವನ್ನು ವೈಭವೀಕರಿಸಿ ಮತಾಂತರಕ್ಕೆ ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಸಿ ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ದ ವಿದ್ಯಾರ್ಥಿ ಪೋಷಕರಾದ ಶರತ್ ಕುಮಾರ್ ಎಂಬವವರು ಪಾಂಡೇಶ್ವರ ಪೊಲೀಸ್ ಠಾಣೆಗೆ ನಿನ್ನೆ ದೂರು ನೀಡಿದ್ದರು.
ಸಿಸ್ಟರ್ ಪ್ರಭಾ ಫೆ.8 ರಂದು ‘Work is worship’ ಎಂಬ ವಿಷಯ ಬಗ್ಗೆ ಪಾಠ ಮಾಡುತ್ತಿದ್ದರು. ಈ ವೇಳೆ ಹಿಂದೂ ಧರ್ಮದ ವಿರುದ್ಧ ಹಿಂದೂ ದೇವರುಗಳ ಬಗ್ಗೆ, ನಮ್ಮ ದೇಶದ ಪ್ರಧಾನಿಗಳ ಬಗ್ಗೆ ಹಾಗೂ ಹಿಂದೂ ಧರ್ಮದ ಅಸ್ತಿತ್ವದ ಬಗ್ಗೆ ಪ್ರಶ್ನಿಸಿ, ಹಿಂದೂ ಧರ್ಮವನ್ನು ನಿಂದಿಸಿ, ಹೀಯಾಳಿಸಿ, ತುಚ್ಛವಾಗಿ ಕೆಟ್ಟ ಶಬ್ದಗಳನ್ನು ಪ್ರಯೋಗಿಸಿದ್ದರು ಎಂದು ಆರೋಪಿಸಲಾಗಿದೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಮಂಗಳೂರು21 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ20 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು21 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ15 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ20 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
Uncategorized22 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು16 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















