Connect with us

ಬಂಟ್ವಾಳ

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 15ರ ಗುರುವಾರ (ಇಂದು) ಬೆಳಿಗ್ಗೆ ಸುಮಾರು 6.20 ಕ್ಕೆ ನಡೆದಿದೆ.

Ad Widget

Ad Widget

Ad Widget

Ad Widget

ತುಮಕೂರು ಜಿಲ್ಲೆಯ ನಯನ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಅವರ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯನ್ನು ರೈಲ್ವೆ ಪೊಲೀಸರು ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ನೀಡಿದ್ದಾರೆ.
ಆಕೆಯ ಆಧಾರ್ ಕಾರ್ಡ್ ನಲ್ಲಿ ಕೇರ್‌/ಆಫ್‌ ಎಮ್.ಗೋವಿಂದರಾಜು ಪಡಸಾಲೆಹಟ್ಟಿ, ಮಿಡಿಗೇಶಿ, ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ.

Ad Widget

Ad Widget alt="Ad Widget"/>

Ad Widget


ನಯನ ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದು, ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

Ad Widget <> Ad Widget

ಆಕೆ ಕುಳಿತುಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ಮಾಹಿತಿ ನೀಡಿದ್ದಾರೆ. ನಯನ ಅವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಅವರ ವಿಳಾಸದ ವಿವರ ಸರಿಯಾಗಿ ಇನ್ನಷ್ಟೇ ತಿಳಿಯಬೇಕಿದೆ.

ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯ ಎ‌ಎಸ್.ಐ.ದೇವಪ್ಪ, ವಿಜಯ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Click to comment

Leave a Reply

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಆರೋಗ್ಯ

Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ

Published

on

Ad Widget

Ad Widget

Ad Widget

Ad Widget

ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.

Ad Widget

Ad Widget <> Ad Widget

ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.

ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.

Ad Widget

Ad Widget

ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್‌ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.

ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.

Ad Widget
Continue Reading

ಅಪರಾಧ

Bantwala-ಬಂಟ್ವಾಳ: ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ: ಮೂವರು ಅಂದರ್, ₹2.01 ಲಕ್ಷ ವಶ

Published

on

Ad Widget

Ad Widget

Ad Widget

Ad Widget

ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಬಂಧಿತ ಆರೋಪಿಗಳು.

Ad Widget

Ad Widget <> Ad Widget

ಮಂಗಳೂರಿನ ಕಣ್ಣೂರಿನಲ್ಲಿರುವ ಸಿಮೆಂಟ್ ಮತ್ತು ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಅವರು ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸುವ ಕೆಲಸ ನಿರ್ವಹಿಸುತ್ತಿದ್ದರು. ಅದರಂತೆ 2026ರ ಆಗಸ್ಟ್ 20ರಂದು ವಿವಿಧ ಅಂಗಡಿಗಳಿಂದ ಹಣ ಸಂಗ್ರಹಿಸಲು ಬೈಕ್‌ನಲ್ಲಿ ತೆರಳಿದ್ದರು.

ಹಲವು ಅಂಗಡಿಗಳಿಂದ ನಗದು ಸಂಗ್ರಹಿಸಿಕೊಂಡು ಬಂಟ್ವಾಳದ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ಘಟನೆ ನಡೆದಿದೆ.

Ad Widget

Ad Widget

ಈ ಸಂದರ್ಭದಲ್ಲಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಮಯ್ಯದಿ ಅವರಿಗೆ ತಲವಾರು ತೋರಿಸಿ ಬೆದರಿಸಿದ್ದಾರೆ. ಬಳಿಕ ಅವರ ಬಳಿಯಿದ್ದ ₹8,35,000 ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು. ಈ ಕುರಿತು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 115/2026ರ ಅಡಿಯಲ್ಲಿ ಬಿಎನ್‌ಎಸ್ ಕಲಂ 309(6) ಹಾಗೂ ಆರ್ಮ್ಸ್ ಆಕ್ಟ್ ಕಲಂ 25(1)(A)ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಎಂಬವರನ್ನು ನವೆಂಬರ್ 11ರಂದು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ಅವರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.

ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪ್ರಕರಣದ ವಿಚಾರಣೆಗಾಗಿ ನವೆಂಬರ್ 16ರವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳಿಂದ ₹2,01,000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವಿತ್ ರಾಜ್ ಶೆಟ್ಟಿ ಎಂಬಾತನ ಗುರುತು ಪತ್ತೆ ಪರೇಡ್ ಕೂಡ ನಡೆಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!