ದಕ್ಷಿಣ ಕನ್ನಡ
ಪುತ್ತೂರು ಮತ್ತು ಬೆಳ್ತಂಗಡಿ ಮುಳಿಯ ದಲ್ಲಿ ಕರಿಮಣಿ ಉತ್ಸವ – 1000 ಕ್ಕೂ ಅಧಿಕ ಕರಿಮಣಿ ಗಳ ಸಂಗ್ರಹ – 50 ಕ್ಕೂ ಅಧಿಕ ಆಕರ್ಷಕ ವಿನ್ಯಾಸ ಗಳ ಕರಿಮಣಿಗಳು
ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕೋರ್ಟ್‌ರಸ್ತೆ ಮುಳಿಯ ಜ್ಯುವೆಲ್ಸ್‌ನಲ್ಲಿ 15 ದಿನಗಳ ಕಾಲ ನಡೆಯಲಿರುವ `ಕರಿಮಣಿ ಉತ್ಸವ’ಕ್ಕೆ ಫೆ.15ರಂದು ಚಾಲನೆ ದೊರೆಯಿತು. ಇಲ್ಲಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯವರು ಕರಿಮಣಿ ಉತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, “ಮಾಂಗಲ್ಯದಲ್ಲಿ ಮಂಗಳ ಶಬ್ದವಿದೆ. ಮಂಗಳವನ್ನು ಕರುಣಿಸುವಂತ ದ್ರವ್ಯದಿಂದ ತಯಾರಿಸಲ್ಪಟ್ಟ ವಿಶೇಷವಾಗಿ ಚಿನ್ನದಿಂದ ತಯಾರಿಸಿದ ಕರಿಮಣಿ ಧಾರಣೆ ಮಾಡಿದರೆ ಸೌಭಾಗ್ಯ, ಸಮೃದ್ಧಿ ಪ್ರಾಪ್ತಿಯಾಗುತ್ತದೆ. ಮಂಗಳ ಸೂತ್ರವನ್ನು ಧರಿಸದಾಗಲೇ ಮುತ್ತೈದೆ ಭಾಗ್ಯದ ಜೊತೆಗೆ ಗೃಹಣಿಗೆ ಸಂಸ್ಕಾರ ದೊರೆಯುತ್ತದೆ. ಇಂತಹ ಕರಿಮಣಿಗಳು ಮುಳಿಯದಲ್ಲಿ 2 ಗ್ರಾಂನಿಂದ ಪ್ರಾರಂಭಿಸಿ ಅತ್ಯಧಿಕ ಚಿನ್ನದ ತನಕ ಗ್ರಾಹಕರಿಗೆ ದೊರೆಯಲಿದೆ. “ ಎಂದರು.
ಕನಿಷ್ಠ 2 ಗ್ರಾಂನ ಕರಿಮಣಿಯ ಮೂಲಕ ಬೆಳ್ಳಿಯ ಕರಿಮಣಿ ಧರಿಸುವ ಬಡವರಿಗೂ ಚಿನ್ನದ ಧರಿಸುವಂತ ಅವಕಾಶ ಮುಳಿಯ ಜ್ಯುವೆಲ್ಸ್ ಮೂಲಕ ದೊರೆಯಲಿದೆ. ಸಂಸ್ಥೆಯ ಶಾಖೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ . ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆಗಳು ದೊರೆಯಲಿ ಎಂದರು.

ಮುಳಿಯ ಜ್ಯುವೆಲ್ಸ್‌ನ , ಚೇರ್ಮೆನ್ ಮತ್ತು ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಮಾತನಾಡಿ, ” ಚಿನ್ನಾಭರಣಗಳ ಮಾರುಕಟ್ಟೆಯಲ್ಲಿ ಹಲವು ಹೊಸತನಗಳನ್ನು ಮುಳಿಯ ಜ್ಯುವೆಲ್ಸ್ ಸಂಸ್ಥೆ ಪರಿಚಯಿಸಿದೆ. 25 ವರ್ಷಗಳ ಹಿಂದೆ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಪ್ರಥಮ ಬಾರಿಗೆ ಪುತ್ತೂರಿನಲ್ಲಿ ಆಯೋಜಿಸಿದೆ. ಆಧುನಿಕತೆಯಲ್ಲಿ ಮಹಿಳೆಯರಿಗೆ ವಿವಿಧ ಕಾರ್ಯಕ್ರಗಳಿಗೆ ತಕ್ಕಂತೆ ಅವರವರ ಮನದಿಚ್ಚೆಯ ಕರಿಮಣಿಗಳನ್ನು ಧರಿಸಲು ಅವಕಾಶವಿದೆ ಎಂದರು.
ಸುಮಾರು 1000 ರಕ್ಕೂ ಅಧಿಕ ಕರಿಮಣಿ ಸರಗಳ ಸಂಗ್ರಹ ಈ ಸಂದರ್ಭದಲ್ಲಿ ಲಭ್ಯವಾಗಲಿದ್ದು 50 ಕ್ಕೂ ಅಧಿಕ ಆಕರ್ಷಣೀಯ ವಿನ್ಯಾಸಗಳ ಕರಿಮಣಿಗಳು ಲಭ್ಯವಿದೆ. ಇದಕ್ಕಾಗಿ ಕರಿಮಣಿ ಉತ್ಸವದ ಮೂಲಕ ಹೊಸ ಹೊಸ ಶೈಲಿಯ, ಆಕರ್ಷಕ ವಿನ್ಯಾಸದ ಕರಿಮಣಿ ಉತ್ಸವದಲ್ಲಿ ಲಭ್ಯವಿದ್ದು ಫೆ.15ರಿಂದ ಪ್ರಾರಂಭಗೊಂಡು ಫೆ.29ರ ತನಕ ನಡೆಯಲಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ವಿನಂತಿಸಿದರು.

ಮುಳಿಯ ಜ್ಯುವೆಲ್ಸ್‌ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಶೋರೂಂ ವ್ಯವಸ್ಥಾಪಕ ರಾಘವೇಂದ್ರ ಪಾಟೀಲ್, ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭವ್ಯಶ್ರೀ ಪ್ರಾರ್ಥಿಸಿದರು. ಯತೀಶ್ ಆಚಾರ್ಯ ಸ್ವಾಗತಿಸಿರು. ಆನಂದ ಕುಲಾಲ್ ವಂದಿಸಿದರು. ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.
ಫೆ.16ರಿಂದ ಪ್ರಾರಂಭಗೊಂಡಿರುವ ಕರಿಮಣಿ ಉತ್ಸವವು ಫೆ.29ರ ತನಕ ನಡೆಯಲಿದ್ದು ಇದರಲ್ಲಿ ನವನವೀನ ಮಾದರಿಯ, ವಿವಿಧ ವಿನ್ಯಾಸ ಕರಿಮಣಿ ಸರಗಳು ಅತೀ ಕಡಿಮೆ ಸುಮಾರು 2 ಗ್ರಾಂ ನಿಂದ ಪ್ರಾರಂಭಿಸಿ ಗ್ರಾಹಕರ ಆವಶ್ಯಕತೆಗೆ ತಕ್ಕಂತೆ ಎಲ್ಲಾ ರೀತಿಯ ಕರಿಮಣಿ ಸರಗಳು ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
-
Uncategorized15 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized17 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ19 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ21 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್20 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ20 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್20 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















