ಬಿಗ್ ನ್ಯೂಸ್
Mangalore Congress Candidate | ಲೋಕಸಭೆಗೆ ಸಮಾವೇಶದ ಮೂಲಕ ಕಾಂಗ್ರೆಸ್ ತಯಾರಿ : ದಕ್ಷಿಣ ಕನ್ನಡದಲ್ಲಿ ಮೂವರ ಹೆಸರು ಬಹುತೇಕ ಅಂತಿಮ – 8 ವಿಧಾನ ಕ್ಷೇತ್ರದ ಬ್ಲಾಕ್ ಗಳಿಂದ ಶಿಪಾರಸ್ಸುಗೊಂಡ ರಮಾನಾಥ ರೈ ಫೈನಲ್..?
ಮುಂಬರುವ ಲೋಕಸಭಾ ಚುನಾವಣೆಗೆ ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯದಲ್ಲಿ ಸಜ್ಜಾಗುತ್ತಿದೆ. ಎಪ್ರಿಲ್ ಮಧ್ಯ ಭಾಗದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಇದಕ್ಕೆ ಸರಿಯಾಗಿ ಎರಡು ತಿಂಗಳು ಮೊದಲು ಕಾಂಗ್ರೆಸ್ ಪಕ್ಷ ಸಮಾವೇಶಗಳನ್ನು ಆಯೋಜಿಸುವ ಮೂಲಕ ಕಾರ್ಯಕರ್ತರ ಉತ್ಸಾಹ ಹೆಚ್ಚಿಸುವ ಕಾರ್ಯಕ್ಕೆ ಮುಂದಾಗಿದೆ (Mangalore Congress Candidate) .
ದೇಶದಲ್ಲಿ ಕೇವಲ ಮೂರು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಸ್ವಂತ ಬಲದಿಂದ ಆಡಳಿತ ನಡೆಸುತ್ತಿದ್ದೂ ಅದರಲ್ಲಿ ಕರ್ನಾಟಕ ಕೂಡ ಒಂದು . ಹೀಗಾಗಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಹುತೇಕ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮರಳಿ ಪುನರುತ್ಥಾನ ಹೊಂದಲು ಕಾಂಗ್ರೆಸ್ ಹವಣಿಸುತ್ತಿದೆ.
ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವು ಪಕ್ಷದ ಕೈ ತಪ್ಪಿ ಬೊರೋಬ್ಬರಿ 33 ವರ್ಷಗಳು ಸಂದಿವೆ. ಸತತ 8 ಚುನಾವಣೆಯಲ್ಲಿ ಕಾಂಗ್ರೆಸ್ ಇಲ್ಲಿ ಸೋಲಿನ ರುಚಿ ಉಂಡಿದೆ. ಅದಕ್ಕೆ ಮೊದಲು ನಡೆದ 8 ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿತ್ತು. ಹೀಗಾಗಿ ಬಿಜೆಪಿಯ ಗೆಲುವಿನ ನಾಗಲೋಟವನ್ನು ತುಂಡರಿಸಲೇಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಫೆ 17 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ.
ಇದರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸುರ್ಜೆವಾಲ ಭಾಗವಹಿಸಲಿದ್ದಾರೆ. ಈ ವೇಳೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮೂರು ಹೆಸರುಗಳು ಹೈಕಮಾಂಡ್ ಮುಂದಿದೆ ಎಂಬ ಮಾಹಿತಿ ಲಭಿಸಿದೆ. ಹಿರಿಯ ಮುಖಂಡರಾದ ಮಾಜಿ ಸಚಿವ ಬಿ ರಮಾನಾಥ ರೈ, ಯುವ ಮುಖಂಡರಾದ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ , ಯುವ ಕಾಂಗ್ರೆಸ್ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಕಿರಣ್ ಗೌಡ ಬುಡ್ಲೆಗುತ್ತು ಈ ಮೂರು ಹೆಸರಲ್ಲಿ ಒಂದು ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಖೈರುಗೊಳಿಸುವ ಸಾಧ್ಯತೆಯಿದೆ.
ಜಿಲ್ಲೆಯ 8 ವಿದಾನಸಭಾ ಕ್ಷೇತ್ರದ ಬ್ಲಾಕ್ ಗಳು ರಮಾನಾಥ ರೈ ಯವರ ಹೆಸರನ್ನು ಶಿಫಾರಸ್ಸು ಮಾಡಿ ಕೆಪಿಸಿಸಿಗೆ ಕಳುಹಿಸಿದೆ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ ಲೋಕಸಭಾ ಅಭ್ಯರ್ಥಿಯಾಗಿ ಅವರ ಹೆಸರು ಅಂತಿಮಗೊಳ್ಳುವ ಸಾಧ್ಯತೆಯೆ ಅಧಿಕ. ಸರಿ ಸುಮಾರು 4 ದಶಕಗಳಿಂದ ಚುನಾವಣಾ ರಾಜಕೀಯದಲ್ಲಿರುವ ರಮಾನಾಥ ರೈವರು ಮೂರು ಬಾರಿ ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು .
ಈ ವೇಳೆ ಜಿಲ್ಲೆಯಾದ್ಯಂತ ಓಡಾಟ ನಡೆಸಿರುವುದು, ಜತೆಗೆ ಜಿಲ್ಲೆಯ ಬಹುತೇಕ ಎಲ್ಲ ಬೂತ್ ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಪರಿಚಯ ಅವರಿಗಿದ್ದು, ಇದು ಅವರಿಗೆ ಪ್ಲಸ್ ಪಾಯಿಂಟ್ ಆಗಿ ಪರಿಣಮಿಸಿದೆ. ಜಿಲ್ಲೆಯ ಪ್ರತಿ ಬೂತ್ ನಲ್ಲಿ ಕನಿಷ್ಟ ಒಬ್ಬರಾದರೂ ಅವರಿಂದ ಉಪಕೃತರಾದವರು ಇರುವುದು ಅವರ ಉಮೇದುವಾರಿಕೆಗೆ ಹೆಚ್ಚಿನ ಬಲ ನೀಡಿದೆ. ಪಟ್ಟಿಯಲ್ಲಿರುವ ಇನ್ನಿಬ್ಬರು ಆಕಾಂಕ್ಷಿಗಳು ಚುನಾವಣಾ ರಾಜಕೀಯಕ್ಕೆ ಹೊಸಬರಾಗಿದ್ದು ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಹೆಚ್ಚು ಪರಿಚಿತರಲ್ಲದಿರವುದು ಅವರಿಬ್ಬರಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.
ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಸಂದರ್ಭ ಜಿಲ್ಲೆಯ ಬಹುತೇಕ ದೇವಸ್ಥಾನಗಳಿಗೆ ಧ್ವಜಸ್ಥಂಬಕ್ಕೆ ಅಗತ್ಯ ಮರಗಳನ್ನು ಸರಾಗವಾಗಿ ದೊರಕಿಸುವಂತೆ ಮಾಡಿದ್ದು ಕಾಂಗ್ರೆಸ್ಯೇತರರಲ್ಲೂ ಅವರ ಬಗ್ಗೆ ಒಳ್ಳೆ ಅಬಿಪ್ರಾಯ ಮೂಡುವಂತೆ ಮಾಡಿದೆ.
ಬಂಟ್ವಾಳದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಜಿಲ್ಲೆಯಾದ್ಯಂತ ನಡೆಸಿದ ಅಭಿವೃದ್ದಿ ಕಾರ್ಯಗಳು ಅವರೊಬ್ಬ ಉತ್ತಮ ಅಡಳಿತಗಾರ ಎಂಬುವುದನ್ನು ನಿರೂಪಿಸಿದೆ. ಚುನಾವಣೆಯಲ್ಲಿ ಸೋಲಲ್ಲಿ ಗೆಲ್ಲಲ್ಲಿ ನಿರಂತರವಾಗಿ ಜನ ಸಂಪರ್ಕದಲ್ಲಿರುವುದು, ಅವರ ಸಮಸ್ಯೆಗಳಿಗೆ ಸ್ಪಂದಿಸುವುದು ಅವರ ಹೆಚ್ಚುಗಾರಿಕೆ . ಪ್ರತಿ ನಿತ್ಯ ಅವರ ಮನೆ ಮುಂದೆ ಇರುವ ಜನ ಸಂದಣಿ ಅದಕ್ಕೆ ಉದಾಹರಣೆ . ಇದು ಕೂಡ ಅವರನ್ನು ಅಭ್ಯರ್ಥಿಯನ್ನಾಗಿಸುವುದಕ್ಕೆ ತನ್ನದೇ ಕೊಡುಗೆ ಕೊಡುವ ಸಾಧ್ಯತೆಯಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪ್ರಭಾವಿ ಬಿಲ್ಲವ ಮುಖಂಡ, ಮುಸ್ಲಿಂರನ್ನು ಹೊರತುಪಡಿಸಿ ಈ ಲೋಕಸಬಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾರರನ್ನು ಹೊಂದಿರುವ ಬಿಲ್ಲವ ಸಮುದಾಯಕ್ಕೆ ಈ ಬಾರಿ ಟಿಕೆಟ್ ನೀಡಬೇಕು ಎಂಬ ಕೂಗು ಒಂದು ವರ್ಗದಿಂದ ಕೇಳಿ ಬರುತ್ತಿದೆ. ಜನಾರ್ಧನ ಪೂಜಾರಿ ಬಳಿಕ ಈ ಕ್ಷೇತ್ರದಲ್ಲಿ ಬಿಲ್ಲವ ಸಮುದಾಯಕ್ಕೆ ಕಾಂಗ್ರೆಸ್ ನಿಂದ ಟಿಕೆಟ್ ಸಿಕ್ಕಿಲ್ಲ.
ಬಿಜೆಪಿಯ ಹಿಂದೂತ್ವ ರಾಜಕಾರಣಕ್ಕೆ ಕಾಂಗ್ರೆಸ್ ಜಾತಿ ಸಮೀಕರಣದ ಮೂಲಕ ಪ್ರತ್ಯುತ್ತರ ನೀಡಬೇಕು ಎಂಬ ಅಭಿಪ್ರಾಯ ಕಾಂಗ್ರೆಸ್ ಥಿಂಕ್ ಟ್ಯಾಂಕ್ ನಲ್ಲಿದೆ. ಹಾಗೊಮ್ಮೆ ಬಿಲ್ಲವ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲು ಮುಂದಾದರೇ ಆಗ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯವಾಗಿರುವ ಪದ್ಮರಾಜ್ ಆರ್ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ವೃತ್ತಿಯಲ್ಲಿ ವಕೀಲರು ಆಗಿರುವ ಪದ್ಮರಾಜ್ ಅತ್ಯುತ್ತಮ ಸಂಘಟಕ.
ಜತೆಗೆ ಜಿಲ್ಲೆಯ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಸಮರ್ಥವಾಗಿ ಮುಂದಿಡಬಲ್ಲ ಕೌಶಲ್ಯ ಅವರಿಗಿದೆ. ಜಿಲ್ಲೆಯಾದ್ಯಯಂತ ಸಕ್ರಿಯವಾಗಿರುವ ಯುವ ವಾಹಿನಿಯನ್ನು ಬಲಿಷ್ಟವಾಗಿ ಕಟ್ಟುವಲ್ಲಿ ಅವರ ಪಾತ್ರ ಹಿರಿದು. ಜತೆಗೆ ಗುರು ಬೆಳದಿಂಗಳು ಫೌಂಡೇಷನ್ ಮೂಲಕ ಅಶಕ್ತರಿಗೆ ನೆರವು ನೀಡುವ ಕಾರ್ಯವನ್ನು ಲಾಗಾಯ್ತಿನಿಂದ ಮಾಡುತ್ತಾ ಬರುತ್ತಿದ್ದಾರೆ. ಪದ್ಮರಾಜ್ ಆರ್ ಅವರು ಜಿಲ್ಲೆಯ ಪ್ರಾಮಾಣಿಕ ಹಾಗೂ ಮುತ್ಸದಿ ರಾಜಕಾರಣಿ, ಬಿಲ್ಲವ ಸಮುದಾಯದ ಪ್ರಶ್ನಾತಿತ ನಾಯಕ ಜನಾರ್ಧನ ಪೂಜಾರಿಯವರ ಪಟ್ಟ ಶಿಷ್ಯರಾಗಿರುವುದು ಅವರಿಗಿರುವ ಮತ್ತೊಂದು ಪ್ಲಸ್ ಪಾಯಿಂಟ್.
ಕಾಂಗ್ರೆಸ್ ನಲ್ಲಿರುವ ಇತರ ಬಿಲ್ಲವ ಮುಖಂಡರೆ ಅವರ ಅಭ್ಯರ್ಥಿತನಕ್ಕೆ ಅಡ್ಡಗಾಲು ಹಾಕುತ್ತಿರುವುದು ಅವರಿಗಿರುವ ದೊಡ್ಡ ಹಿನ್ನಡೆ.
ದಕ್ಷಿಣ ಕನ್ನಡ ಲೋಕಸಬಾ ವ್ಯಾಪ್ತಿಯಲ್ಲಿ ಮೂರನೇ ಅತೀ ದೊಡ್ಡ ಸಮುದಾಯ ಒಕ್ಕಲಿಗ ಗೌಡರದು. ಇಷ್ಟು ದೊಡ್ಡ ಪ್ರಮಾಣದಲ್ಲಿ ಒಕ್ಕಲಿಗ ಸಮುದಾಯದ ಮತದಾರರಿದ್ದು , ಲೋಕಸಭೆ ಅಥಾವ ವಿಧಾನಸಭೆಯಲ್ಲಿ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಪ್ರಾತಿನಿಧ್ಯವಿಲ್ಲ. ಈ ಕೊರಗು ಸಮುದಾಯದ ಮತದಾರರನ್ನು ಬಹಳವಾಗಿ ಕಾಡುತ್ತಿದೆ. 1990ಕ್ಕಿಂತ ಮೊದಲು ಗೌಡ ಸಮುದಾಯ ಸಾರಸಾಗಾಟಾಗಿ ಕಾಂಗ್ರೆಸ್ ಅನ್ನು ಬೆಂಬಲಿಸುತಿತ್ತು ಆದರೇ ರಾಮಮಂದಿರ ಹೋರಾಟ ಹಾಗೂ 1993 ರಲ್ಲಿ ಸುಳ್ಯದಲ್ಲಿ ಮಠಾದೀಶರೊಬ್ಬರ ಕಾರಿಗೆ ಕಲ್ಲು ಬಿದ್ದ ಪ್ರಕರಣದ ಬಳಿಕ ಗೌಡ ಸಮುದಾಯ ಕಾಂಗ್ರಸ್ ನಿಂದ ಬಿಜೆಪಿಯತ್ತ ವಾಲಿತ್ತು .
ಇದರ ಪರಿಣಾಮವೇ ಗೌಡ ಸಮುದಾಯದ ಬೆಲ್ಟ್ ನಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಮಟ್ಟದ ಲೀಡ್ ಪಡೆದುಕೊಳ್ಳಲು ಆರಂಭಿಸಿ ದಕ ಕ್ಷೇತ್ರವನ್ನು ತನ್ನ ಬುಟ್ಟಿಗೆ ಹಾಕಿಕೊಂಡಿತ್ತು. ಆದರೇ 8 ಬಾರಿ ಇಲ್ಲಿ ಗೆಲುವು ಸಾಧಿಸಿದರೂ ಒಂದು ಬಾರಿ ಮಾತ್ರ ಗೌಡ ಸಮುದಾಯ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸಿದೆ. ಇದು ಗೌಡ ಸಮುದಾಯದ ನಾಯಕರ ಅಸಹನೆಗೆ ಕಾರಣವಾಗಿದ್ದು, ಇದರ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಗೌಡ ಸಮುದಾಯದ ನಾಯಕರಿಗೆ ಟಿಕೆಟ್ ನೀಡುವ ಸಾಧ್ಯತೆಯೂ ಇದೆ.
ಆದರೇ ಕಾಂಗ್ರೆಸ್ ನಲ್ಲಿ ಗೌಡ ಸಮುದಾಯದ ನಾಯಕರ ಕೊರತೆಯಿದೆ. ಹೀಗಾಗಿ ಪಕ್ಷದಲ್ಲಿ ಸಕ್ರಿಯವಾಗಿರುವ ಹಾಗೂ ಒಕ್ಕಲಿಗ ಸಮುದಾಯದಲ್ಲಿ ಪ್ರಭಾವಿಯಾಗಿರುವ ಯುವ ನಾಯಕನೊಬ್ಬನ ಹುಡುಕಾಟಕ್ಕೆ ಕಾಂಗ್ರೆಸ್ ಮುಂದಾಗಿತ್ತು, ಪ್ರಭಾವಿ ಒಕ್ಕಲಿಗ ನಾಯಕ ಸುಳ್ಯದ ಕಿರಣ್ ಗೌಡ ಬುಡ್ಲೆಗುತ್ತು ಹೆಸರು ಮುಂಚೂಣಿಗೆ ಬಂದಿದೆ.ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ, ಒಕ್ಕಲಿಗ ಸಂಘ ಹಾಗೂ ಸಂಘಟನೆಯಲ್ಲಿ ಸಕ್ರಿಯವಾಗಿರುವ ಕಿರಣ್ ಗೌಡ ಬುಡ್ಲೆಗುತ್ತು 2018ರಲ್ಲಿ ಯುವ ಕಾಂಗ್ರೆಸ್ಸಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ನಿಧನ ವಾರ್ತೆ19 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು18 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು15 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ19 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ19 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ18 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ19 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ20 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















