ದಕ್ಷಿಣ ಕನ್ನಡ
ನಳೀಲು ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ವೈಭವದ ಚಾಲನೆ
ಪುತ್ತೂರು : ಇಲ್ಲಿನ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಫೆ. 16ರಂದು ವೈಭವದ ಚಾಲನೆ ನೀಡಲಾಯಿತು. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸುವ ಏಕೈಕ ಕಾರಣಿಕ ಕ್ಷೇತ್ರ ಇದಾಗಿದೆ.
ಫೆ.೧೬ರಂದು ಬ್ರಹ್ಮಕಲಶೋತ್ಸವದ ಪೂವ೯ಭಾವಿಯಾಗಿ ಗೊನೆ ಮೂಹೂತ೯, ಸಾಮೂಹಿಕ ಪ್ರಾಥ೯ನೆ, ಉಗ್ರಾಣ ಮುಹೂತ೯, ಪಾಕಶಾಲೆ ಉದ್ಘಾಟನೆ ಮುಂತಾದ ಕಾಯ೯ಕ್ರಮಗಳು ನಡೆಯಿತು.
ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಬೆಳಗ್ಗೆ ಅಚ೯ಕರಾದ ಶ್ರೀನಿವಾಸ್‌ಹೆಬ್ಬಾರ್‌ಹಾಗೂ ಪ್ರವೀಣ್‌ಭಟ್‌ರವರ ನೇತೃತ್ವದಲ್ಲಿ ಸಾಮೂಹಿಕ ಪ್ರಾಥ೯ನೆ ನೆರವೇರಿತು. ಅನಂತರ ಪರುವಾಜೆ ಶ್ರೀ ಜಲದುಗಾ೯ ದೇವಿ ದೇವಸ್ಥಾನದ ಅಚ೯ಕರಾದ ಶ್ರೀನಿವಾಸ್‌ಹೆಬ್ಬಾರ್‌ಉಗ್ರಾಣ ಮುಹೂತ೯ದ ದೀಪ ಪ್ರಜ್ವಲನೆಯನ್ನು ನೆರವೇರಿಸಿದರು. ಮಾಜಿ ಪಟೇಲರಾದ ಪಾಲ್ತಾಡು ಕುಟುಂಬದ ಯಜಮಾನ ನಾರಾಯಣ ರೈ ಪಾಲ್ತಾಡು ಉದ್ಘಾಟಿಸಿದರು.

ಸುಬ್ರಹ್ಮಣ್ಯ ಪ್ರಸಾದ್‌ಅನಾ೯ಡಿಯವರು ಪಾಕಶಾಲೆಯನ್ನು ಉದ್ಘಾಟಿಸಿದರೆ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾದ ವಿಲಾಸ್‌ರೈ ಪಾಲ್ತಾಡುರವರು ಕಾಯಾ೯ಲಯವನ್ನು ಉದ್ಘಾಟಿಸಿದರು. ವಿನೋದ್‌ರೈ ಪಾಲ್ತಾಡು ದೀಪ ಪ್ರಜ್ವಲಿಸಿದರು. ವೈದಿಕ ಸಮಿತಿ ಸಂಚಾಲಕ ಹರಿಕೃಷ್ಣ ಭಟ್‌ಬರೆಮೇಲುರವರು ಭದ್ರತಾ ಕೋಶವನ್ನು ನೆರವೇರಿಸಿದರು. ತದನಂತರ ಜಾತ್ರೋತ್ಸವಕ್ಕೆ ಗೊನೆಮುಹೂತ೯ ನಡೆಯಿತು.

ಈ ಸಂದಭ೯ದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಸಂತೋಷ್‌ಕುಮಾರ್‌ರೈ ನಳೀಲು, ಪ್ರಧಾನ ಕಾಯ೯ದಶಿ೯ ಸುರೇಶಚಂದ್ರ ರೈ ಪಾಲ್ತಾಡಿ, ಕಾಯ೯ದಶಿ೯ ಪ್ರವೀಣ್‌ಕುಮಾರ್‌ರೈ ನಳೀಲು, ಉಪಾಧ್ಯಕ್ಷರಾದ ಕಿಶೋರ್‌ಕುಮಾರ್‌ರೈ ನಳೀಲು, ನಾರಾಯಣ ರೈ ಮೊದೆಲ್ಕಾಡಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾಯ೯ದಶಿ೯ ಸತೀಶ್‌ರೈ ನಳೀಲು, ಕೋಶಾಧಿಕಾರಿ ಮೋಹನ್‌ದಾಸ್‌ರೈ ನಳಿಲು, ಕಾಯಾ೯ಲಯ ಸಮಿತಿ ಸಂಚಾಲಕ ಸುರೇಶ್‌ರೈ ವಿಟ್ಲ ಕೊಲ್ಯ, ಸಹ ಸಂಚಾಲಕ ಆಶಿತ್‌ಶೆಟ್ಟಿ ಉಬರಡ್ಕ, ಸುಪ್ರಿತ್‌ರೈ ನಳೀಲು, ಉಗ್ರಾಣ ಸಮಿತಿ ಸಂಚಾಲಕ ಜಗನ್ನಾಥ ರೈ ಮಣಿಕ್ಕರ, ಸಹ ಸಂಚಾಲಕರಾದ ಉಮೇಶ್‌ನಾಯ್ಕ್‌ಮರವೇಲು, ರಮಾನಾಥ ಬೊಳಿಯಾಲ, ಕೊಳ್ತಿಗೆ ಗ್ರಾ.ಪಂ. ಸದಸ್ಯೆ ಶುಭಲತಾ ಜೆ. ರೈ ಮಣಿಕ್ಕರ, ವಿವಿಧ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಬಾತಿ೯ಕುಮೇರು, ಹರೀಶ್‌ನಾಯ್ಕ್‌ಅಜೇಯನಗರ, ಸುಜಯ ನಾಯ್ಕ್, ಪ್ರಚಾರ ಮತ್ತು ಮಾಧ್ಯಮ ಸಮಿತಿ ಸಂಚಾಲಕ ಸುಧಾಕರ್ ರೈ ಪಾಲ್ತಾಡಿ, ಸಹಸಂಚಾಲಕ ಪ್ರವೀಣ್ ಚೆನ್ನಾವರ, ಸಭಾ ಕಾಯ೯ಕ್ರಮ ಸಹಸಂಚಾಲಕ ಶಶಿ ಕುಮಾರ್‌ಬಿ.ಎನ್., ಅಲಂಕಾರ ಸಮಿತಿಯ ಸಹ ಸಂಚಾಲಕ ಜಯರಾಮ ರೈ ಬರೆಮನೆ, ವಿವಿಧ ಸಮಿತಿ ಸದಸ್ಯರಾದ ವಿಖ್ಯಾತ್‌ರೈ ನಳೀಲು, ವಿನೋದ್‌ಕುಮಾರ್‌ಕೆಯ್ಯೂರು, ವಿನೋದ್‌ರೈ, ಸುಬ್ರಾಯ ಗೌಡ ಪಾಲ್ತಾಡಿ, ನವೀನಾಥ ರೈ ನಡುಮನೆ, ವಸಂತ ರೈ ಮಾಡಾವು, ಸೇಸಪ್ಪ ರೈ ಮಣಿಕ್ಕರ ಸೇರಿದಂತೆ ಮಹಿಳಾ ಸಮಿತಿ ಸದಸ್ಯರು ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
ನಿಧನ ವಾರ್ತೆ10 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು8 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ10 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಮಂಗಳೂರು6 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ9 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ9 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ11 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
ಅಂತರ ರಾಜ್ಯ9 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ





















