Connect with us

ಪುತ್ತೂರು

ಸಂತ ಫಿಲೋಮಿನಾ ಪ.ಪೂ ಕಾಲೇಜು – ಮೆರುಗು ಪಡೆದ “ಫಿಲೋ ಚಿಯಾರಿಯೋ”-2024″ : ವಿದಾಯ ಸಮಾರಂಭ

Published

on

Ad Widget

Ad Widget

Ad Widget

Ad Widget

ಪುತ್ತೂರು : ಸಂತ ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ” ಫಿಲೋ ಚಿಯಾರಿಯೋ “-2024” ವಿದಾಯ ಕೂಟ ಸಮಾರಂಭವು ಫೆ .16 ರಂದು ಎಸ್ .ಜಿ .ಎಂ ಸಭಾಂಗಣದಲ್ಲಿ ಮೆರುಗನ್ನು ಪಡೆಯಿತು.

Ad Widget

Ad Widget

Ad Widget

Ad Widget


ಮುಖ್ಯ ಅತಿಥಿಯಾಗಿದ್ದ ಕಾಲೇಜಿನ ಕ್ಯಾಂಪಸ್
ನಿರ್ದೇಶಕರಾದ ರೆ .ಫಾ ಸ್ಟ್ಯಾನಿ ಪಿಂಟೋ ಮಾತನಾಡಿ ವಿದ್ಯಾರ್ಥಿಗಳು ಸದಾ ಗುರಿಯತ್ತ ತಮ್ಮ ಚಿತ್ತವನ್ನು ನೀಡಬೇಕು ಎಂದು ಕಿವಿ ಮಾತು ಹೇಳಿದರು. ಇದರ ಜತೆಗೆ ವಿದ್ಯಾರ್ಥಿಗಳು ಜೀವನದಲ್ಲಿ ಕಂಡುಕೊಳ್ಳಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಭವಿಷ್ಯದಲ್ಲಿ ಬೇಕಾದ ಎಲ್ಲಾ ರೀತಿಯ ಸೌಲಭ್ಯ ನೀಡಲು ಸಂಸ್ಥೆ ಸದಾ ಸಿದ್ಧವಾಗಿರುತ್ತದೆ ಎಂದು ಹೇಳಿದರು.

Ad Widget

Ad Widget alt="Ad Widget"/>

Ad Widget


ಅಧ್ಯಕ್ಷತೆಯನ್ನು ವಹಿಸಿದ್ದ ಪಿ .ಯು ಕಾಲೇಜಿನ ಪ್ರಾಚಾರ್ಯರಾದ ರೆ .ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ ವಿದ್ಯಾರ್ಥಿಗಳು ಬುದ್ದಿವಂತಿಕೆ ಹಾಗೂ ಕೌಶಲವನ್ನು ಹೆಚ್ಚಿಸಿ ಜೀವನದ ಹಾದಿಯಲ್ಲಿ ಸಾಗಬೇಕು. ಇದರೊಂದಿಗೆ ಪೋಷಕರು ಹಾಗೂ ಗುರು ಹಿರಿಯರಿಗೆ ಗೌರವವನ್ನು ನೀಡಬೇಕೆಂದು ಹೇಳಿದರು. ವಿದ್ಯಾರ್ಥಿಗಳ ಬೆಳವಣಿಗೆಗೆ ಪೋಷಕರ ಹಾಗೂ ಗುರುಗಳ ಸಹಕಾರ ಸದಾ ಇರುತ್ತದೆ. ಹಾಗಾಗಿ ಇವರಿಗೆ ಋುಣಿಯಾಗಿರುವುದು ಎಲ್ಲರ ಕರ್ತವ್ಯ. ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿರಲಿ ಎಂದು ಹರ್ಷ ವ್ಯಕ್ತಪಡಿಸಿದರು.

Ad Widget

Ad Widget <> Ad Widget


ಪಿ. ಯು ಕಾಲೇಜಿನ ವಾಣಿಜ್ಯ ವಿಭಾಗದ ಡೀನ್ ಗೋವಿಂದ ಪ್ರಕಾಶ್, ವಿಜ್ಞಾನ ವಿಭಾಗದ ಡೀನ್ ಯಶವಂತ ಎಂ . ಡಿ ಮತ್ತು ಕಲಾ ವಿಭಾಗದ ಡೀನ್ ಭರತ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.


ಈ ಸಂದರ್ಭ ಸಿ .ಎ ಫೌಂಡೇಶನ್ ಕೋರ್ಸಿನಲ್ಲಿ ಪಾಸಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಹಾಗೂ ತರಗತಿಯಲ್ಲಿ ಪೂರ್ಣ ಹಾಜರಾತಿ ಹೊಂದಿದ ವಿದ್ಯಾರ್ಥಿ -ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ವಿತರಿಸಲಾಯಿತು.

Ad Widget

Ad Widget


ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಅಶ್ವಿನ್ ಎಂ , ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವಿಂದ್ಯಶ್ರೀ ರೈ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸೃಜನ್ ಆಳ್ವ ಅನಿಸಿಕೆಯನ್ನು ವ್ಯಕ್ತಪಡಿಸಿದರು .
ಆಂಗ್ಲ ಭಾಷಾ ಉಪನ್ಯಾಸಕಿ ಸತ್ಯಲತಾ ರೈ ಕಾರ್ಯಕ್ರಮ ನಿರೂಪಿಸಿ , ಆಂಗ್ಲ ಭಾಷಾ ಉಪನ್ಯಾಸಕಿ ಸುಮಾ .ಪಿ.ಆರ್ ಸ್ವಾಗತಿಸಿದರು.ಇತಿಹಾಸ ಉಪನ್ಯಾಸಕ ಶರತ್ ಆಳ್ವ ಚನಿಲ ಮತ್ತು ಸಂಖ್ಯಾಶಾಸ್ತ್ರ ಉಪನ್ಯಾಸಕ ಭರತ್ ಜಿ.ಪೈ ಪ್ರಾರ್ಥಿಸಿದರು .


ಎಲೆಕ್ಟ್ರಾನಿಕ್ಸ್ ಉಪನ್ಯಾಸಕಿ ರೇಖಾ ವಂದಿಸಿದರು . ವಾಣಿಜ್ಯ ವಿಭಾಗದ ಉಪನ್ಯಾಸಕಿ ಫಿಲೋಮಿನಾ ಮೊಂತೇರೊ ಕಾರ್ಯಕ್ರಮ ಸಂಯೋಜಿಸಿದರು .
ಎಲ್ಲಾ ವಿಭಾಗದ ಉಪನ್ಯಾಸಕ ವೃಂದದವರು ವಿದಾಯ ಗೀತೆಯನ್ನು ಹಾಡುವ ಮೂಲಕ ವಿದ್ಯಾರ್ಥಿಗಳಿಗೆ ವಿದಾಯವನ್ನು ಕೋರಿದರು

Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!