Connect with us

ದಕ್ಷಿಣ ಕನ್ನಡ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ  ನಳೀಲು ಕ್ಷೇತ್ರ ಅದ್ಭುತವಾಗಿ ಬೆಳೆದಿದೆ-ಸುಬ್ರಹ್ಮಣ್ಯ ಶ್ರೀ

Published

on



Ad Widget

Ad Widget

Ad Widget

Ad Widget

ಪುತ್ತೂರು :  ನಮ್ಮ ಹಿರಿಯರು ಹಾಕಿಕೊಟ್ಟ ಜೀವನ ಪದ್ದತಿಯನ್ನು ನಾವು ಪಾಲಿಸಬೇಕು. ಕಣ್ಣಿಗೆ ಕಾಣದ ಶಕ್ತಿಗಳು ನಮ್ಮನ್ನು ರಕ್ಷಿಸುತ್ತದೆ ಎಂದು ನಂಬಿಕೊಂಡು ಪರೋಪಕರಿಯಾಗಿ ನಿಸ್ವಾರ್ಥತೆಯಿಂದ ಬದುಕುವುದರ ಮೂಲಕ ಧರ್ಮವನ್ನು ಗಟ್ಟಿಗೊಳಿಸಬೇಕು ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ  ಶ್ರೀ ವಿದಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

Ad Widget

Ad Widget

Ad Widget

Ad Widget

ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ರವಿವಾರ ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ನಳೀಲು ಕ್ಷೇತ್ರದಲ್ಲಿ 20 ವರ್ಷಗಳ ಹಿಂದೆ ನಡೆದ ಬ್ರಹ್ಮಕಲಶೋತ್ಸವದ ಗೌರವಾಧ್ಯಕ್ಷನಾಗುವ ಅವಕಾಶವನ್ನು ಸಂತೋಷ್ ಕುಮಾರ್ ರೈ ಅವರು ನೀಡಿದ್ದರು. ಅಂದಿನಿಂದ ಇಂದಿನವರೆಗೆ ಅವಲೋಕಿಸಿದರೆ ಶ್ರೀ ಕ್ಷೇತ್ರವು ಅದ್ಭುತವಾಗಿ ಬೆಳಗಿದೆ.

Ad Widget

Ad Widget <> Ad Widget

ನಮಗೆ ನಮ್ಮ ಜೀವನದ ಮೇಲೆ ನಂಬಿಕೆ ಬೇಕು, ಇನ್ನಿತರರು ನಮ್ಮಂತೆ ಜೀವನ ನಡೆಸುತ್ತಾರೆ ಎನ್ನುವ ಭಾವನೆ ಪ್ರತಿಯೊಬ್ಬರಲ್ಲಿ ಇರಬೇಕು, ಸತ್ಯ ನ್ಯಾಯ ಪಾಲಿಸಿಕೊಂಡು ಜೀವನ ನಡೆಸುವುದೇ ನಿಜವಾದ ಧರ್ಮ ಉಳಿಸಿದಂತೆ.ದೇವಾಲಯಗಳ ಅಭಿವೃದ್ದಿಯಾದರೆ  ಊರು ಉದ್ದಾರವಾಗುತ್ತದೆ ಎಂಬ ನಂಬಿಕೆ ಸರ್ವಕಾಲಿಕ ಸತ್ಯ   ಎಂದರು.



Ad Widget

ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಒಳ್ಳೆಯ ಕೆಲಸ ಮಾಡುವವರನ್ನು ದೇವರು ಅನುಗ್ರಹಿಸುತ್ತಾನೆ. ಈ ದೇವಾಲಯದ  ಅಭಿವೃದ್ದಿಯಿಂದ ಈ ಊರಿನ ಜನರ ಕಷ್ಟಗಳು ದೂರವಾಗಿ ನೆಮ್ಮದಿಯ ಬದುಕು ನಿಮ್ಮದಾಗಲಿದೆ ಎಂದರು.

Ad Widget

Ad Widget

ಕಾರ್ಯಾಲಯ ಸಮಿತಿ ಸಂಚಾಲಕ ಸುರೇಶ್ ರೈ ಕೊಲ್ಯ ಮಾತಾನಾಡಿ, ನಳೀಲು ಶ್ರೀ ಕ್ಷೇತ್ರದ ಬೆಳವಣಿಗೆಯಲ್ಲಿ ಸಂತೋಷ್ ಕುಮಾರ್ ರೈ ಅವರ ಶ್ರಮ ಮಹತ್ವದ್ದು.ಎಲ್ಲರನ್ನೂ ಜತೆಯಾಗಿ ಸೇರಿಸಿಕೊಂಡು ಮುನ್ನಡೆಯುವ ಮೂಲಕ ಮಾದರಿಯಾಗಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಗತಿಪರ ಕೃಷಿಕ  ಕಡಮಜಲು ಸುಭಾಷ್ ರೈ ಮಾತಾನಾಡಿ, ನಳೀಲು ಕ್ಷೇತ್ರದ ಕಾರಣಿಕತೆ ವಿಶೇವಾದದ್ದು,ಕ್ಷೇತ್ರದ ಮಹಿಮೆ ಜಗತ್ತಿಗೆ ಪಸರಿಸುತ್ತಿದ್ದು, ಇಲ್ಲಿ ದೇವರನ್ನು ನಾಗನರೂಪದಲ್ಲಿ ಪ್ರತ್ಯಕ್ಷವಾಗಿ ಕಾಣಬಹುದು ಎಂದರು.

ಕೊಳ್ತಿಗೆ ಸಿ ಎ ಬ್ಯಾಂಕ್ ಅಧ್ಯಕ್ಷ ವೆಂಕಟ್ರಮಣ ಕೆ ಎಸ್, ನಿವೃತ್ತ ಉಪನ್ಯಾಸಕ ನಾರಾಯಣ ರೈ ಕುಕ್ಕುವಳ್ಳಿ, ಕೊಳ್ತಿಗೆ ಗ್ರಾ.ಪಂ ಉಪಾಧ್ಯಕ್ಷ ಪ್ರಮೋದ್ ಕೆ.ಎಸ್. ಅವರು ಮಾತನಾಡಿದರು.

ಡಾ.ಧೀರಜ್ ಕಲ್ಲಿಮಾರು, ಹಿರಿಯ ಸಹಕಾರಿ ಧುರಿಣ ಕಳಂಜ ವಿಶ್ವನಾಥ ರೈ, , ಸ್ವಾಗತ ಸಮಿತಿ ಸಂಚಾಲಕ ಸುನಿಲ್ ರೈ ಪಾಲ್ತಾಡು, ಕೊಳ್ತಿಗೆ ಗ್ರಾ.ಪಂ ಅಧ್ಯಕ್ಷೆ ಅಕ್ಕಮ್ಮ, ಸದಸ್ಯರಾದ ಶುಭಲತಾ ಜೆ. ರೈ, ಪಿ.ಬಿ. ಸುಂದರ, ಪ್ರಗತಿ ಪರ ಕೃಷಿಕ ಎಂ ಬಿ ವಿಶ್ವನಾಥ ರೈ ಉಪಸ್ಥಿತರಿದ್ದರು. 

ಮಂಜುಳಾ ಕಿಶೋರ್ ಕುಮಾರ್ ರೈ ನಳೀಲು ದಂಪತಿಗಳು ಸ್ವಾಮೀಜಿಯವರನ್ನು ಗೌರವಿಸಿದರು.ಸುಬ್ರಾಯ ಗೌಡ ಪಾಲ್ತಾಡಿ, ವಸಂತ ರೈ ಮಾಡಾವು ಅತಿಥಿಗಳನ್ನು ಗೌರವಿಸಿದರು. ಕ್ಷೇತ್ರದ ಹಿರಿಯ ಗೌರವ ಮಾರ್ಗದರ್ಶಕಿ ಎನ್. ಗಿರಿಜಾ  ರೈ ನಳೀಲು, ಅರ್ಚಕ ಶ್ರೀನಿವಾಸ ಹೆಬ್ಬಾರ್, ಪಾಕತಜ್ಞ ಸುಬ್ರಹ್ಮಣ್ಯ ಪ್ರಸಾದ್ ಅರ್ನಾಡಿ ,ಡಾ.ಧೀರಜ್ ಕಲ್ಲಿಮಾರು ಅವರನ್ನು ಸ್ವಾಮೀಜಿಯವರು  ಸನ್ಮಾನಿಸಿದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ  ಸಂತೋಷ್ ಕುಮಾರ್ ರೈ ಸ್ವಾಗತಿಸಿದರು. ಶಶಿಕುಮಾರ್ ಬಿ ಎನ್ ವಂದಿಸಿದರು. ಕೆಯ್ಯೂರು ಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ ಎಸ್ ನಿರೂಪಿಸಿದರು.ಗಣೇಶ್ ಕೆ.ವಿ. ,ಚಂದ್ರಾವತಿ ರೈ ಸಾಂಸ್ಕೃತಿಕ ಕಾರ್ಯಕ್ರಮ ವಿಭಾಗ ಸಂಚಾಲಕಿ ಡಾ.ವೀಣಾ ಸಂತೋಷ್ ರೈ ,ಸಹ ಸಂಚಾಲಕಿ ನಿರೀಕ್ಷಾ ಜೆ.ಶೆಟ್ಟಿ ಸಹಕರಿಸಿದರು.

ಫೆ.19ರಂದು ಬೆಳಿಗ್ಗೆ ಉಷೆ ಪೂಜೆ,ಮಹಾಗಣಪತಿ ಪೂಜೆ, ಅಂಕುರಪೂಜೆ,ಸ್ವಶಾಂತಿ ,ಅದ್ಭುತ. ಶಾಂತಿ, ಚೋರ ಶಾಂತಿ, ಹೋಮಾದಿಗಳು, ಮಧ್ಯಾಹ್ನ ಹೋಮಗಳ ಕಲಶಾಭಿಷೇಕ,ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ದೀಪಾರಾಧನೆ,ಅಂಕುರ ಪೂಜೆ,ಕುಂಡ ಶುದ್ದಿ,ಮಹಾಪೂಜೆ ,ಪ್ರಸಾದ ವಿತರಣೆ ನಡೆಯಿತು.

 ಸಾಂಸ್ಕೃತಿಕ ಕಾರ್ಯಕ್ರಮ

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಧ್ಯಾಹ್ನ ಧೀಶಕ್ತಿ ಮಹಿಳಾ  ಯಕ್ಷಬಳಗ ತೆಂಕಿಲ ಪುತ್ತೂರು ಇವರಿಂದ ಯಕ್ಷಗಾನ ತಾಳಮದ್ದಳೆ ,ಮಣಿಕ್ಕರ ಸ.ಹಿ.ಪ್ರಾ.ಶಾಲೆ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ,ಸಂಜೆ ಸುಸ್ವರ ಮೆಲೋಡಿಯಸ್ ಉಪ್ಪಿನಂಗಡಿ ಇವರಿಂದ ಭಕ್ತಿ-ಭಾವ-ಸಂಗಮ ,ರಾತ್ರಿ ಸಂಗಮ‌ ಕಲಾವಿದರಿಂದ ಶಿವಧೂತೆ ಗುಳಿಗೆ ನಾಟಕ ಪ್ರದರ್ಶನ ನಡೆಯಿತು.

 5 ಸಾವಿರ ಜನರಿಂದ ಅನ್ನಪ್ರಸಾದ ಸ್ವೀಕಾರ

ಫೆ.18ರಂದು ಸುಮಾರು 5 ಸಾವಿರ ಜನರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ಅನ್ನಪ್ರಸಾದ ಸ್ವೀಕರಿಸಿದರು. ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಶಾಲು ಹೊದೆಸಿ ದೇವರ ಪ್ರಸಾದ ನೀಡಲಾಯಿತು.

ಫೆ. 20ರಂದು ದೇವಸ್ಥಾನದಲ್ಲಿ

ಫೆ. 20ರಂದು ಬೆಳಿಗ್ಗೆ ಉಷೆಪೂಜೆ, ಅಂಕುರ ಪೂಜೆ,ಮಹಾಗಣಪತಿ ಹೋಮ,ತ್ರಿಕಾಲ ಪೂಜೆ,ಸೃಷ್ಟಿ ತತ್ವ ಹೋಮ,ತತ್ವಕಲಶಪೂಜೆ,ತತ್ವ ಕಲಶಾಭಿಷೇಕ, ಅನುಜ್ಞಾ ಕಲಶಾಭಿಷೇಕ,ಶ್ರೀ ಭಕ್ತಿ ಸ್ವರ ಮಹಿಳಾ ಭಜನಾ ಮಂಡಳಿ ಬೊಳಿಕ್ಕಳ ಹಾಗೂ  ಮಹಾವಿಷ್ಣು ಭಜನಾ ಮಂಡಳಿ ಮೊಗರು ಸವಣೂರು ಇವರಿಂದ ಭಜನೆ, ಮಧ್ಯಾಹ್ನ ಮಹಾಪೂಜೆ ,ಅನ್ನ ಸಂತರ್ಪಣೆ, ಸಂಜೆ ದೀಪಾರಾಧನೆ ,ತ್ರಿಕಾಲ ಪೂಜೆ,ಮಹಾಪೂಜೆ , ದೈವಸ್ಥಾನದಲ್ಲಿ ಪ್ರಾಸಾದ ಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ,  ಪ್ರಾಕಾರ ಬಲಿ, ಪ್ರಸಾದ ವಿತರಣೆ ನಡೆಯಲಿದೆ.

ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು.ಉದ್ಯಮಿ ಗಿರಿಧರ ಶೆಟ್ಟಿ ಅಧ್ಯಕ್ಷತೆ ವಹಿಸುವರು.

ಬಾಯಂಬಾಡಿಯಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ

ಬೆಳಿಗ್ಗೆ 10.30ಕ್ಕೆ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ ಆರಂಭವಾಗಲಿದೆ.ತಾ.ಪಂ.ಮಾಜಿ ಸದಸ್ಯ ಗಂಗಾಧರ ಗೌಡ ಚಾಲನೆ ನೀಡುವರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಪರಾಹ್ನ ಶ್ರವಣರಂಗ ಪ್ರತಿಷ್ಠಾನದಿಂದ ಯಕ್ಷಗಾನ ತಾಳಮದ್ದಳೆ ಗಾಂಗೇಯ ಪ್ರತಾಪ ,ಮಣಿಕ್ಕರ ಸರಕಾರಿ ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ಜಾಝ್ & ಮ್ಯೂಸಿಕ್ ಪಾಲ್ತಾಡು ಇವರಿಂದ ಸಂಗೀತ ರಸಮಂಜರಿ ,ರಾತ್ರಿ ಮಯೂರ ಪ್ರತಿಷ್ಠಾನ ಮಂಗಳೂರು ಇವರಿಂದ ಶರಣ ಸೇವಾರತ್ನ ಶ್ರೀನಿವಾಸ ಕಲ್ಯಾಣ ಯಕ್ಷಗಾನ ಬಯಲಾಟ ನಡೆಯಲಿದೆ.

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget

Ad Widget

ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget alt="Ad Widget"/>

Ad Widget

“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.

Ad Widget

Ad Widget

ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ.  ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು

ಸ್ಪರ್ಧೆಯ ಫಲಿತಾಂಶ:

ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.

ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.

Ad Widget
Continue Reading

ಶಿಕ್ಷಣ

Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



Ad Widget
Ad Widget
Continue Reading

ಬಿಗ್ ನ್ಯೂಸ್

AYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ

Published

on



Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಡಾ. ಪ್ರದೀಪ್ ನಾವೂರು ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜದ ಆರೋಗ್ಯ ಮತ್ತು ಜಾಗೃತಿಯ ದೃಷ್ಟಿಯಿಂದ ಹಲವಾರು ಉಪನ್ಯಾಸ ಹಾಗೂ ಆರೋಗ್ಯ ಸಂಬಂಧಿತ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ದೇವಸ್ಥಾನ,ದೈವಸ್ಥಾನ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಮುಂಚೂಣಿ ವ್ಯಕ್ತಿಯಾಗಿದ್ದಾರೆ.

Ad Widget

Ad Widget <> Ad Widget

ಇಂತಹ ಸಮಾಜಮುಖಿ ಹಾಗೂ ಸೇವಾಮನೋಭಾವದ ವ್ಯಕ್ತಿಯ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಬೆಂಕಿ ಹಚ್ಚಿರುವುದು ಅತ್ಯಂತ ಕಳವಳಕಾರಿ ಹಾಗೂ ಖಂಡನೀಯ ಸಂಗತಿಯಾಗಿದೆ. ವೈದ್ಯರು ಸಮಾಜದ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದು ಅವರ ಸೇವಾಕೇಂದ್ರದ ಮೇಲೆಯೇ ಇಂತಹ ಕೃತ್ಯಕ್ಕೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.



Ad Widget

ಡಾ. ಪ್ರದೀಪ್ ನಾವೂರು ಅವರು ಕೇವಲ ವೈದ್ಯರಲ್ಲ, ಸಮಾಜದ ಪ್ರತಿಯೊಬ್ಬರಿಗೂ ಅಗತ್ಯವಿರುವ ಒಬ್ಬ ಉತ್ತಮ ವ್ಯಕ್ತಿತ್ವದ ಸಮಾಜಮುಖಿ ವ್ಯಕ್ತಿ. ಅವರ ಆರೋಗ್ಯ ಸೇವೆ ಹಾಗೂ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದೆ. ಇಂತಹ ವ್ಯಕ್ತಿಯ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವುದು ಅತ್ಯಂತ ಖಂಡನೀಯ.

Ad Widget

Ad Widget

ಇದು ಸಮಾಜ ಘಾತುಕ ಕೆಲಸ .ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಕೃತ್ಯದ ಹಿಂದಿರುವ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ಅಧ್ಯಕ್ಷ ಡಾ. ಹರಿಕೃಷ್ಣ ಪಾಣಾಜೆ ಒತ್ತಾಯಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading