Connect with us

ಬೆಂಗಳೂರು

Soujanya Case ಕಾಲೇಜ್‌ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣ :‌ ನ್ಯಾಯಾಲಯದಲ್ಲಿ ಮಹತ್ವದ ಬೆಳವಣಿಗೆ : ರಾಜ್ಯ ಸರಕಾರ, ಸಿಬಿಐಗೆ ಹೈಕೋರ್ಟ್ʼನಿಂದ ನೋಟಿಸ್‌ ಜಾರಿ

Published

on

Ad Widget

Ad Widget

Ad Widget

Ad Widget

ಬೆಂಗಳೂರು, ಫೆ.20: ಧಮ೯ಸ್ಥಳದ ನಿವಾಸಿ, ವಿದ್ಯಾಥಿ೯ನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ಮಾಡಲು ಆದೇಶಿಸುವಂತೆ ಕೋರಿದ ಅಜಿ೯ ಸಂಬಂಧ, ಹೈಕೋಟ್‌೯ ಸಿಬಿಐ ಹಾಗೂ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮಣ್ಣ ಸಂಕ ಎಂಬಲ್ಲಿ ಉಜಿರೆ ಎಸ್‌ ಡಿ ಎಂ ಕಾಲೇಜ್‌ ವಿದ್ಯಾರ್ಥಿನಿ ಸೌಜನ್ಯಳ ಕೊಲೆ ಮತ್ತು ಅತ್ಯಾಚಾರ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಬೆಳ್ತಂಗಡಿ ಪೊಲೀಸರು, ಬಳಿಕ ಸಿಒಡಿ ಹಾಗೂ ಅಂತಿಮವಾಗಿ ಸಿಬಿಐ ನಡೆಸಿತ್ತು. ಕಾರ್ಕಳ ನಿವಾಸಿ ಸಂತೋಷ್‌ ರಾವ್‌ ಪ್ರಕರಣದ ಆರೋಪಿ ಎಂದು ಪರಿಗಣಿಸಿ ಸಿಬಿಐ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಆದರೇ 2023ರ ಜೂನ್‌ ನಲ್ಲಿ ಈ ಪ್ರಕರಣದಿಂದ ಸಂತೋಷ್‌ ರಾವ್‌ ನನ್ನು ಖುಲಾಸೆಗೊಳಿಸಿ ತೀರ್ಪು ನೀಡಿತ್ತು.

Ad Widget

Ad Widget alt="Ad Widget"/>

Ad Widget

ಇದಾದ ಬಳಿಕ ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ವಿಚಾರಣ ನ್ಯಾಯಾಲಯವು, ಪ್ರಕರಣದಿಂದ ಸಂತೋಷ್‌ ರಾವ್‌ರನ್ನು ಖುಲಾಸೆಗೊಳಿಸುವಂತೆ ನೀಡಿರುವ ತೀಪು೯ನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟಿನ ವಿಭಾಗಿಯ ನ್ಯಾಯಪೀಠದ ಮುಂದೆ ಕ್ರಿಮಿನಲ್‌ ಮೆಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯವು ಆರೋಪಿ ಸಂತೋಷ್‌ ರಾವ್‌ ಗೆ ನೊಟೀಸ್‌ ಜಾರಿ ಮಾಡಿತ್ತು . ಏತನ್ಮದ್ಯೆ ಸೌಜನ್ಯ ತಂದೆ ಚಂದಪ್ಪ ಗೌಡೆರವರು ಮಗಳ ಕೊಲೆ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ಸಮರ್ಪಕವಾಗಿ ಆಗಿಲ್ಲ . ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಕೋರಿ ಹೈಕೋರ್ಟಿಗೆ ರಿಟ್‌ ಪಿಟಿಷನ್‌ ಸಲ್ಲಿಸಿದ್ದರು.

Ad Widget

Ad Widget <> Ad Widget

ಇತ್ತೀಚೆಗೆ ಚಂದಪ್ಪ ಗೌಡರವರು ಸಲ್ಲಿಸಿದ್ದ ತಕರಾರು ಅಜಿ೯ಯು ನ್ಯಾI ಕೆ. ನಟರಾಜನ್‌ರವರ ನ್ಯಾಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಕೆಲ ಸಮಯ ಅಜಿ೯ದಾರರ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಪೀಠವು ಅಜಿ೯ಗೆ ಸಂಬಂಧಪಟ್ಟಂತೆ  ರಾಜ್ಯ ಪೊಲೀಸ್‌ ಮಹಾ ನಿದೇ೯ಶಕರು, ರಾಜ್ಯ ಗೃಹ ಇಲಾಖೆ ಕಾಯ೯ದಶಿ೯, ಸಿಐಡಿ ಎಡಿಜಿಪಿ, ಅಪರಾಧ ಹಾಗೂ ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.

ವಿಚಾರಣ ನ್ಯಾಯಾಲಯವು, ಪ್ರಕರಣದಿಂದ ಸಂತೋಷ್‌ ರಾವ್‌ರನ್ನು ಖುಲಾಸೆಗೊಳಿಸುವಂತೆ ನೀಡಿರುವ ತೀಪು೯ನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಕ್ರಿಮಿನಲ್‌ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿ ಯಿದ್ದು, ಇದನ್ನು ಹಾಗೂ ತಾನೂ ಸಲ್ಲಿಸಿದ ಅರ್ಜಿಯನ್ನು ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಬೇಕೆಂದು ಚಂದಪ್ಪ ಗೌಡ ಪರ ವಕೀಲರು ಮನವಿ ಮಾಡಿದರು.

Ad Widget

Ad Widget

ಮನವಿಯನ್ನು ಪರಿಗಣಿಸಿರುವ ನ್ಯಾಯಪೀಠ ಈ ಅಜಿ೯ಯನ್ನು ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂತಿ೯ಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು. ಖುಲಾಸೆಗೊಂಡಿರುವ ಸಂತೋಷ್‌ ರಾವ್‌ರವರನ್ನೂ ಪ್ರತಿವಾದಿ ಮಾಡಲಾಗಿದೆ. ಹೀಗಾಗಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಹಾಗೂ ಚಂದಪ್ಪ ಗೌಡರವರು ಸಲ್ಲಿಸಿದ ಅರ್ಜಿ ಒಂದೇ ವಿಭಾಗಿಯ ಪೀಠದ ಮುಂದೆ ವಿಚಾರಣೆ ನಡೆಯಲಿದೆ.

Ad Widget
Click to comment

Leave a Reply

ರಾಜಕೀಯ

Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್

Published

on

Ad Widget

Ad Widget

Ad Widget

Ad Widget

ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.

ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್‌ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.

Ad Widget

Ad Widget

ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್‌ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.

ಎಫ್‌ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್‌ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget
Continue Reading

ಬಿಗ್ ನ್ಯೂಸ್

Rakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನವೆಂಬರ್ 20ರಂದು ಬೆಂಗಳೂರಿನ 66ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

Ad Widget

Ad Widget <> Ad Widget

ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿರುವುದು ಜಾಮೀನು ಪಡೆಯಬಹುದಾದ ಅಪರಾಧಗಳಾಗಿವೆ. ಒಂದು ವೇಳೆ ಬಂಧನಕ್ಕೊಳಗಾದರೂ ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಪಡೆಯಲು ಅವಕಾಶವಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಊರ್ಜಿತವಲ್ಲ ಎಂದು ಅಭಿಪ್ರಾಯಪಟ್ಟಿತು.

ಇದಕ್ಕೂ ಮುನ್ನ ರಾಕೇಶ್ ಶೆಟ್ಟಿ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧಗಳ ಆರೋಪ ಹೊರಿಸಲಾಗಿದೆ. ಆದ್ದರಿಂದ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದ್ದರು.

Ad Widget

Ad Widget

ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಪ್ರಕರಣದಲ್ಲಿ ಜಾಮೀನು ಪಡೆಯಬಹುದಾದ ಅಪರಾಧಗಳು ದಾಖಲಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವುದು ಕಾನೂನುಬದ್ಧವಾಗಿ ಊರ್ಜಿತವಲ್ಲ ಎಂದು ವಾದಿಸಿದರು.

ನ್ಯಾಯಪೀಠದ ಅಭಿಪ್ರಾಯದ ಬೆನ್ನಲ್ಲೇ ರಾಕೇಶ್ ಶೆಟ್ಟಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದುಕೊಂಡರು.

Ad Widget
Continue Reading

ರಾಜಕೀಯ

Rural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Ad Widget

Ad Widget alt="Ad Widget"/>

Ad Widget

ಹಲವು ವರ್ಷಗಳಿಂದ ಬಾಕಿ ಉಳಿದಿರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಪ್ರಕ್ರಿಯೆಗೆ ಇದರಿಂದ ಮತ್ತಷ್ಟು ವೇಗ ಸಿಕ್ಕಿದೆ. ಈ ಹಿಂದೆ ಅಕ್ಟೋಬರ್‌ನಲ್ಲಿ ಸರ್ಕಾರ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ 2,900ಕ್ಕೂ ಅಧಿಕ ಆಕ್ಷೇಪಣೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಇತ್ಯರ್ಥಪಡಿಸಿದ ಬಳಿಕ ಇದೀಗ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ.

Ad Widget

Ad Widget <> Ad Widget

ಮುಂದಿನ ಹಂತದಲ್ಲಿ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಬಳಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ಚುನಾವಣೆಗೆ ಅಗತ್ಯವಾದ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಡಿಸೆಂಬರ್ ಮಧ್ಯಭಾಗದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. 2027ರ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಇನ್ನೊಂದೆಡೆ, ಈ ಬಾರಿಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ರಾಜ್ಯ ಸಚಿವ ಸಂಪುಟ ಈಗಾಗಲೇ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಮುಂಬರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮತಪತ್ರಗಳ ಮೂಲಕ ನಡೆಯುವ ಸಾಧ್ಯತೆಯಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!