ಸುಳ್ಯ
ಕೃಷಿಕರೇ ತಕ್ಷಣ ಸಮೀಪದ ಸಹಕಾರಿ ಸಂಘಕ್ಕೆ ಭೇಟಿ ಕೊಡಿ – ನಿಮಗಿದೆ 5 ಚಿನ್ನ, 25 ಬೆಳ್ಳಿ ನಾಣ್ಯ ಗೆಲ್ಲುವ ಸುವರ್ಣಾವಕಾಶ – 5 ತಾಲೂಕಿನ ರೈತರಿಗೆ ಪುತ್ತೂರಿನ ಆಕರ್ಷಣ್ ಇಂಡಸ್ಟ್ರಿಸ್‌ಯಿಂದ ಭರ್ಜರಿ ಕೊಡುಗೆ
ಪುತ್ತೂರು : ಫೆ 21: ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಕ್ಷೇತ್ರದಲ್ಲಿ, ಅದರಲ್ಲೂ ವಿಶೇಷವಾಗಿ ಕೃಷಿಕರಿಗೆ ಅತೀ ಅಗತ್ಯವಿರುವ ಉತ್ಪನಗಳ ತಯಾರಿಕೆಯಲ್ಲಿ ಕಳೆದ 28 ವಷ೯ಗಳಿಂದ ಉತ್ತಮ ಗುಣಮಟ್ಟದ ಉತ್ಪನ್ನಗಳು, ತಂತ್ರಜ್ಞಾನ ಹಾಗೂ ಸೇವೆಯ ಮೂಲಕ ತನ್ನದೇ ಆದ ಛಾಪನ್ನು ಒತ್ತಿ ಯಶಸ್ಸಿನ ಹೆಜ್ಜೆ ಇಡುತ್ತಿರುವ ಪುತ್ತೂರಿನ ಆಕಷ೯ಣ್ ಇಂಡಸ್ಟ್ರಿಸ್ ಈ ಬಾರಿ ಕೃಷಿಕರಿಗೆ ವಿಶೇಷ ಕೊಡುಗೆಯೊಂದನ್ನು ಘೋಷಿಸಿದೆ.
ಸಂಸ್ಥೆಯೂ ಪುತ್ತೂರು, ಸುಳ್ಯ , ಕಡಬ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಪ್ರತಿ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಲಕ್ಕಿ ಕೂಪನ್‌ಗಳನ್ನು ನೀಡಿದೆ. ಕೃಷಿಕರು ಈ ಕೂಪನ್‌ಗಳನ್ನು ಪಡೆದುಕೊಂಡು, ಮಾಹಿತಿಗಳನ್ನು ತುಂಬಿಸಿ ಹಿಂದಿರುಗಿಸಲು ಇಂದಿನಿಂದ ಫೆ. 29ರ ವರೆಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಮಾ. 4ರಂದು ಕೂಪನ್‌ನ ಲಕ್ಕಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಕೂಪನ್ ವಿಜೇತರಾದ ಕೃಷಿ ಮಿತ್ರರಿಗೆ 5 ಚಿನ್ನ ಹಾಗೂ 25 ಬೆಳ್ಳಿಯ ನಾಣ್ಯ ಗೆಲ್ಲುವ ಸುವಣಾ೯ವಕಾಶವನ್ನು ವಾಷಿ೯ಕೋತ್ಸವದ ಸಂಭ್ರಮದಲ್ಲಿರುವ ಸಂಸ್ಥೆಯು ಒದಗಿಸಿದೆ.
ಉಚಿತ ಡೆಲಿವರಿ
ಅಲ್ಲದೆ ಫೆ.21ರಿಂದ ಕೃಷಿಕರ ಅನುಕೂಲಕ್ಕಾಗಿ ವಿವಿಧ ಕೃಷಿ ಉಪಯೋಗಿ ಉತ್ಪನ್ನಗಳಾದ ಡ್ರ್ಯಾಗನ್ ಫ್ರುಟ್ ಸ್ಟ್ಯಾಂಡ್, ಬೇಲಿ ಕಂಬ, ವೈ ಪೋಲ್ ಅಲ್ಲದೆ ಕಾಳುಮೆಣಸು ಫಾಮ್‌೯ಗಳಲ್ಲಿ ಬಳಕೆಯಾಗುವ ವಿಯೆಟ್ನಾಮ್ ಮಾಡೆಲ್‌ನ ಕಾಂಕ್ರೀಟ್ ಪೋಲ್‌ಗಳನ್ನು ನಿಗದಿಪಡಿಸಿದ ಅವಧಿಯೊಳಗೆ, ನಿಗದಿತ ಸ್ಥಳಗಳಿಗೆ ಕೃಷಿಕರ ಮನೆ ಬಾಗಿಲಿಗೆ ಉಚಿತವಾಗಿ ಸಾಗಾಟ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಉಚಿತ ಡೆಲಿವರಿ ಕೆಲವು ದಿನಗಳವರೆಗೆ ಮಾತ್ರ ಇರಲಿದ್ದೂ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದೆ.

1996ರ ಅ.21 ರಂದು ಸಿಮೆಂಟ್ ಇಟ್ಟಿಗೆ ತಯಾರಿ ಹಾಗೂ ಮಾರಾಟದ ಮೂಲಕ ಉದ್ಯಮ ಜಗತ್ತಿಗೆ ಕಾಲಿಟ್ಟ ಸಂಸ್ಥೆಯು ಇದೀಗ ಹತ್ತು ಹಲವು ಉತ್ಪನ್ನಗಳ ಮೂಲಕ ಜಿಲ್ಲೆಯಾದ್ಯಂತ ಮನೆ ಮಾತಾಗಿದೆ. ಈ ಸಂಸ್ಥೆಯು ಹಲವು ಉತ್ಪನ್ನಗಳು ರಾಜ್ಯಾದ್ಯಂತ ಸರಬರಜಾಗುತ್ತಿದ್ದು, ಡೀಲರ್ ಗಳ ಮೆಚ್ಚಿನ ಸಂಸ್ಥೆಯಾಗಿಯೂ ಬೆಳೆದಿದೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
ಬಿಗ್ ನ್ಯೂಸ್21 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು23 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ22 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು22 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ24 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ24 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ4 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ


















